Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಕೊರಟಗೆರೆ, ಗುಬ್ಬಿ, ಶಿರಾ ಹಾಗೂ ಮಧುಗಿರಿ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗಾಗಿ ಜನವರಿ 30 ರಿಂದ ಫೆಬ್ರವರಿ 4ರವರೆಗೆ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರವು ಜನವರಿ 30ರಂದು ಕೊರಟಗೆರೆ ತಾಲ್ಲೂಕು ಎಲೆರಾಂಪುರ ಶ್ರೀ ನರಸಿಂಹಗಿರಿ ಸುಕ್ಷೇತ್ರದ ಶ್ರೀ ಕುಂಚಿಟಿಗರ ಮಹಾ ಸಂಸ್ಥಾನ ಮಠ, ಜನವರಿ 31ರಂದು ಗುಬ್ಬಿ ತಾಲ್ಲೂಕು ತ್ಯಾಗಟೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 9:30 ಗಂಟೆಯಿಂದ ಹಾಗೂ ಫೆಬ್ರವರಿ 3ರಂದು ಶಿರಾ ತಾಲ್ಲೂಕು ತಾವರೆಕೆರೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಫೆಬ್ರವರಿ 4ರಂದು ಮಧುಗಿರಿ ತಾಲ್ಲೂಕು ಮಿಡಿಗೇಶಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ. ಹಿರಿಯ ನಾಗರಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 29ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಜನವರಿ 29ರ ರಾತ್ರಿ 11.59 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಫೆಬ್ರವರಿ 15ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024–25ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರು, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರು, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ…
ತುಮಕೂರು: ಜಿಲ್ಲಾಡಳಿತ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಎನ್ ಸಿಸಿ ತಂಡವು ಪ್ರಥಮ ಬಹುಮಾನ ಪಡೆದುಕೊಂಡಿದೆ. ಕ್ಯಾಪ್ಟನ್ ತಿರುಮಲೇಶ್ ಯಾದವ್ ತಂಡವನ್ನು ಮುನ್ನಡೆಸಿದ್ದರು. ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಪ್ರಸನ್ನಕುಮಾರ್, ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಹಿರಿಯ ಪ್ರಾಧ್ಯಾಪಕ ಪ್ರೊ. ಪಿ. ಪರಮಶಿವಯ್ಯ, ಎನ್‌ಸಿ.ಸಿ. ಅಧಿಕಾರಿ ವಾಸುದೇವ ತಂಡವನ್ನು ಅಭಿನಂದಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ದೀಪ ಚೋಳನ್ ಅವರು ಎಲ್ಲಾ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲಿಂಕ್ ಡಾಕ್ಯುಮೆಂಟ್, ರಾಜ್ಯ ಹಾಗೂ ಕೇಂದ್ರದಿಂದ ಯಾವುದೇ ಕಾಮಗಾರಿ/ಕಾರ್ಯಕ್ರಮ/ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ರದ್ದಾಗದಂತೆ ಈ ಆರ್ಥಿಕ ವರ್ಷದೊಳಗಾಗಿ ಖರ್ಚು ಮಾಡಬೇಕು ಎಂದು ನಿರ್ದೇಶನ ನೀಡಿದರು. ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವುದರಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿರಬೇಕು. ಯಾವುದೇ ಕಾಮಗಾರಿಗಳನ್ನು ಬಾಕಿ ಉಳಿಸಿಕೊಳ್ಳಬಾರದು ಎಂದು ತಿಳಿಸಿದರಲ್ಲದೆ, ಮಳೆಯಿಂದ ಶಿಥಿಲವಾದ ಶಾಲಾ ಕೊಠಡಿಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ಕಾಲ ಕಾಲಕ್ಕೆ ದುರಸ್ತಿ ಕೈಗೊಂಡಲ್ಲಿ ಮಕ್ಕಳಿಗೆ ತರಗತಿ ನಡೆಸಲು ಕೊಠಡಿಗಳ ಕೊರತೆ ಉಂಟಾಗದು ಎಂದು ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು ಅಂಕಿ–ಅಂಶಗಳ ಪ್ರಕಾರ ಸರ್ಕಾರದಿಂದ…
ಯಾದಗಿರಿ: ಕರ್ನಾಟಕ ರಾಜ್ಯವು ಪ್ರತಿ ಕ್ಷೇತ್ರದಲ್ಲಿ ಅಭೂತಪೂರ್ವ ಪ್ರಗತಿಯನ್ನು ಕಾಣುತ್ತಿದ್ದು, 2024 –25 ನೇ ಸಾಲಿಗೆ 7,560 ಕೋ.ರೂ. ಗಳನ್ನು ರೈಲ್ವೆ ಆಯವ್ಯಯ ಅನುದಾನ ಸಹ ಒದಗಿಸಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಹೇಳಿದರು. ಹಜರತ್ ನಿಜಾಮುದ್ದೀನ್ -ಕೆಎಸ್ಆರ್ ಬೆಂಗಳೂರು ರಾಜಧಾನಿ ಎಕ್ಸ್ಪ್ರೆಸ್ ರೈಲು , ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ನಿಲುಗಡೆ ಕಾರ್ಯಕ್ರಮದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿ ಚಾಲನೆ ನೀಡುವ ಮೂಲಕ ಅವರು ಮಾತನಾಡಿದರು. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಘನ ನೇತೃತ್ವದಲ್ಲಿ ಕರ್ನಾಟಕ ರಾಜ್ಯವು ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣುತ್ತಿದೆ. ವಿಶೇಷವಾಗಿ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ 2024– 25 ನೇ ಸಾಲಿಗೆ 7,560 ಕೋ. ರೂ.ಗಳನ್ನು ಒದಗಿಸಿದ್ದು, ಕಳೆದ ನಾಲ್ಕು- ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ ರೈಲ್ವೆಜಾಲ ಗಣನೀಯ ಪ್ರಗತಿ ಕಂಡಿದೆ. ಹೊಸ ರೈಲ್ವೆ ಲೈನ್, ವಿದ್ಯುದ್ದೀಕರಣ ಹಾಗೂ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದೆ ಎಂದು ಹೇಳಿದರು. ಯಾದಗಿರಿಯಲ್ಲಿ ರಾಜಧಾನಿ ಎಕ್ಸ್ಪ್ರೆಸ್…
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶ್ರೀರಾಮುಲು ನಂತರ ಇದೀಗ ಹಾಲಿ ಸಂಸದ ಡಾ. ಕೆ. ಸುಧಾಕರ್ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸುಧಾಕರ್ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ಜಿಲ್ಲಾಧ್ಯಕ್ಷರ ನೇಮಕದಲ್ಲಿ ವಿಜಯೇಂದ್ರ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿದ ಸುಧಾಕರ್, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಒಂದು ಸೀಟು ಗೆಲ್ಲಿ ನೋಡೋಣ ಎಂದು ಕೆ. ಸುಧಾಕರ್ ಅವರು ವಿಜಯೇಂದ್ರ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ತಮಗೆ ಬೇಕಾದವರಿಗೆ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರನ್ನು ಮಾಡಿಕೊಂಡಿದ್ದಾರೆ. ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಅಸಮಾಧಾನ ಹೊರಹಾಕಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಯುವತಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ನಿವಾಸಿ ಮೋನಿಕಾ(20) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಬಿಎಂಟಿಸಿ ಬಸ್ ಹತ್ತಲು ಮುಂದಾಗುತ್ತಿದ್ದಂತೆ ಯುವತಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಆಕೆಯ ಮೇಲೆ ಬಸ್ ಹರಿದಿದೆ. ಯುವತಿ ನಗರದ ಕತ್ರಿಗುಪ್ಪೆಯಲ್ಲಿ ಮೋನಿಕಾ ವಾಸವಾಗಿದ್ದು ಕೊಂಡು ಬೊಮ್ಮನಹಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ 8ಗಂಟೆ ಸುಮಾರಿನಲ್ಲಿ ದೇವೇಗೌಡ ಪೆಟ್ರೋಲ್ ಬಂಕ್,ಚಿನ್ನಮ ಜಂಕ್ಷನ್ ಸಮೀಪ ಮೋನಿಕಾ ಅವರು ಬಿಎಂಟಿಸಿ ಬಸ್ ಹತ್ತಲು ಹೋದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಆವೇಳೆ ಮೋನಿಕಾ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 15ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕದಿಂದ ಕುಂಭ ಮೇಳಕ್ಕೆ ತೆರಳಿದ್ದ ಬೆಳಗಾವಿಯ ತಾಯಿ, ಮಗಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ(50) ಮತ್ತು ಅವರ ಮಗಳು ಮೇಘಾ(18) ಹತ್ತರವಾಠ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಮತ್ತೋರ್ವ ವ್ಯಕ್ತಿ ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಪವಿತ್ರ ಸ್ನಾನದಲ್ಲಿ ಪಾಲ್ಕೊಳ್ಳಲೆಂದು ಕರ್ನಾಟದ ಬೆಳಗಾವಿಯಿಂದ ಸುಮಾರು 60 ಜನರ ತಂಡ ಎರಡು ಬಸ್ಗಳಲ್ಲಿ ತೆರಳಿದ್ದರು. ಇದರಲ್ಲಿ ನಮ್ಮ ಜೊತೆಗೆ 9 ಜನರು ಇದ್ದರು. ಅದರಲ್ಲಿ ನಾಲ್ಕೈದು ಜನ ಕಾಣಿಸುತ್ತಿಲ್ಲ ಎಂದು ಸ್ಥಳದಲ್ಲಿದ್ದ ಮಹಿಳೆಯೊಬ್ಬರು ಪ್ರತಿಕ್ರಿಯೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಮೈಸೂರು: ಉತ್ತರಪ್ರದೇಶದ ಮಿರ್ಜಾಪುರ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಕರ್ನಾಟಕ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನ ಕೆಆರ್ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತಪಟ್ಟವರು. ಪ್ರಯಾಗ್ ರಾಜ್ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದಾಗ ಉತ್ತರಪ್ರದೇಶದ ಮಿರ್ಜಾಪುರ ಬಳಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಯುವಕರು ಎರಡು ಕಾರುಗಳಲ್ಲಿ ಪ್ರಯಾಗ್ರಾಜ್ ಯಾತ್ರೆಗೆ ಹೋಗಿದ್ದರು. ಅಪಘಾತದದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ರಾಮಕೃಷ್ಣ ಶರ್ಮಾ ಮತ್ತು ಅರುಣ್ ಶಾಸ್ತ್ರಿ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4