Subscribe to Updates
Get the latest creative news from FooBar about art, design and business.
- ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
- ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
- ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
- ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
- ತುಮಕೂರಿನಲ್ಲಿ ಡ್ರೀಮ್ ಡೀಲ್ ಲಕ್ಕಿ ಡ್ರಾ: 53 ಜನರಿಗೆ ಭರ್ಜರಿ ಬಹುಮಾನ
- ನಟರಾಜು ಜಿ.ಎಲ್. ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ: ಸಮಾಜಮುಖಿ ಹೋರಾಟಕ್ಕೆ ಮನ್ನಣೆ
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
Author: admin
ತಿಪಟೂರು: ನಗರದಲ್ಲಿ ಯುಜಿಡಿ ಅವ್ಯವಸ್ಥೆ ಹಾಗೂ ತಿಪಟೂರು ಮತ್ತು ಈಚನೂರು ಕೆರೆಗೆ ನೀರು ತುಂಬಿಸಲು ಒತ್ತಾಯಿಸಿ ನಗರದ ಕೆಂಪಮ್ಮದೇವಿ ದೇವಸ್ಥಾನದಿಂದ ಸಿಂಗೀ ನಂಜಪ್ಪ ವೃತ್ತದವರೆಗೆ ಸೋಮವಾರ ಪಾದಯಾತ್ರೆ ನಡೆಸಿ ಪ್ರತಿಭಟಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ತಾಲ್ಲೂಕಿನ ಜನರಿಗೆ ಕಂಟಕವಾಗಿರುವ ಯುಜಿಡಿ ಕೊಳಚೆ ನೀರಿನಿಂದ ಈಚನೂರು ಕೆರೆ ಕಲುಷಿತವಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ತಿಪಟೂರು ಅಮಾನಿಕೆರೆಗೆ ನೀರು ತುಂಬದ ಕಾರಣ ಕುಡಿಯುವ ನೀರಿಗೆ ಹೆಚ್ಚಿನ ಸಮಸ್ಯೆ ಉಂಟಾಗಿದೆ. ತಾಲ್ಲೂಕು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಜಿಡಿ ಕೊಳಚೆ ನೀರಿನಿಂದ ನಗರ ರಾಜ್ಯದಾದ್ಯಂತ ಅಪಖ್ಯಾತಿ ಪಡೆಯುತ್ತಿದೆ. ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈಡೇನಹಳ್ಳಿ ವೆಟ್ ವೆಲ್ ಹಾಗೂ ಗೊರಗೊಂಡನಹಳ್ಳಿ ವೆಟ್‌ವೆಲ್ ಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಕಾರಣ ಕೋಡಿಸರ್ಕಲ್ ಬಳಿ ಯುಜಿಡಿ ನೀರು ಉಕ್ಕಿಹರಿಯುತ್ತಿದೆ. ಜನಸಾಮಾನ್ಯರು ಸಂಚಾರ ಕಷ್ಟಕರವಾಗಿದೆ. ಕೊಳಚೆ ನೀರು ಹಳ್ಳಗಳ ಮೂಲಕ ಹಿಂಡಿಸ್ಕೆರೆ ನಂತರ ಈಚನೂರು ಕೆರೆ ಸೇರುತ್ತದೆ. ನಗರದ…
ಬೀದರ್ : ಔರಾದ್ ತಾಲೂಕಿನ ನಾಗೂರ್ (ಬಿ) ಗ್ರಾಮದಲ್ಲಿ ರೈತರೊಬ್ಬರು ತಮ್ಮ ಹೊಲದಲ್ಲಿ ಸೋಯಾ ಬೆಳೆ ಕಟಾವು ಮಾಡಿ ರಾಶಿ ಮಾಡುವುದಕ್ಕಾಗಿ ಬಣವೆ ಹಾಕಿ ಕೂಡಿಟ್ಟಿದ್ದರು. ಆ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸಂಪೂರ್ಣವಾಗಿ ಸೋಯಾಬಿನ್ ಸುಟ್ಟು ಹೋಗಿದೆ. ನಾಗೂರ್ (ಬಿ) ಗ್ರಾಮದ ನಿವಾಸಿಯಾದ ಶಿವಕುಮಾರ್ ಎನ್ನುವ ರೈತರಿಗೆ ಈ ಸೋಯಾ ಬೆಳೆ ಸೇರಿದೆ. ಸುಮಾರು 3.25 ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾ ಸಂಗ್ರಹಿಸಿಡಲು ರಾಶಿ ಹಾಕಿದ್ದರು. ಈ ಬಣವೆಗೆ ರವಿವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದರಿಂದ ಸುಮಾರು 1 ಲಕ್ಷ ದಿಂದ 1.50 ಲಕ್ಷ ರೂ. ಮೌಲ್ಯದ ಸುಮಾರು 30 ಕ್ವಿಂಟಲ್ ಗಳಿಗೂ ಹೆಚ್ಚಿನ ಸೋಯಾಬೀನ್ ಬೆಳೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅ.23 ರಂದು ಔರಾದ್ ತಾಲೂಕಿನ ಜೋಜನಾ ಗ್ರಾಮದ ರೈತ ಹನುಮಂತ್ ಅವರಿಗೆ ಸೇರಿದ ಸೋಯಾ ಬಣವೆಗೂ ಕೂಡ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಅದಾದ ಕೆಲ ದಿನಗಳ ನಂತರ ರವಿವಾರ ನಾಗೂರ್ (ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ.…
ಕೊರಟಗೆರೆ: ಡಾ.ಜಿ.ಪರಮೇಶ್ವರ್ ರವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಬರಲಿದ್ದು, ರಾಜ್ಯದ ಹಲವರ ಆಶಯದಂತೆ ಹಾಗೂ ತುಮಕೂರು ಜಿಲ್ಲೆಯ ಹಲವು ದಶಕಗಳ ಕನಸಿನಂತೆ ಅವರು ಮುಖ್ಯಮಂತ್ರಿಯಾಗಲಿ ಎನ್ನುವುದು ನಮ್ಮೆಲ್ಲರ ಹಲವು ವರ್ಷಗಳ ಬೇಡಿಕೆಯಾಗಿದೆ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಟ್ಟೆನಹಳ್ಳಿ ಗ್ರಾಮದಲ್ಲಿ ಶ್ರೀ ಗಂಗಮಾಳಮ್ಮ ಮತ್ತು ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯದ ಪ್ರಾಣ ಮತ್ತು ಕಳಸ ಪ್ರತಿಷ್ಠಾಪನೆ, ಹಾಗೂ ದೇವಾಲಯ ಜೀರ್ಣೋದ್ದಾರ ಧಾರ್ಮಿಕ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ನಾವು ಇತ್ತೀಚೆಗೆ ಪತ್ರಿಕೆಗಳಲ್ಲಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಚರ್ಚೆಗಳನ್ನು ನೋಡುತ್ತಿದ್ದೇವೆ ನಮ್ಮಗಳ ಹಾಗೂ ತುಮಕೂರು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಂತೆ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾದಲ್ಲಿ ಅದು ಈಡೇರಲಿದೆ ಎಂದರು. ಈ ರಾಜ್ಯ ಕಂಡಂತಹ ಸಜ್ಜನರು, ಸಂಸ್ಕಾರವಂತರು, ವಿದ್ಯಾವಂತರು ಹಾಗೂ ರಾಜಕೀಯ ಜೀವನದಲ್ಲಿ ಅಗಾಧವಾದ ಅನುಭವವನ್ನು ಹೊಂದಿರುವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಯಾದರೆ ರಾಜ್ಯದಲ್ಲಿನ ಹಲವರ ದಶಕಗಳ ಕನಸು ನೆರವೇರಲಿದೆ, ಅದೇ ರೀತಿಯಾಗಿ ತುಮಕೂರು ಜಿಲ್ಲೆಯ…
ತುಮಕೂರು: ತುಮಕೂರಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ತುಮಕೂರು ನಗರದಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 4ರವರೆಗೆ ಹಮ್ಮಿಕೊಂಡಿರುವ ಸಾಬೂನು ಮೇಳಕ್ಕೆ ಚಿಲುಮೆ ಸಮುದಾಯ ಭವನದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳವರ ಅಮೃತ ಹಸ್ತದಿಂದ ಚಾಲನೆ ನೀಡಲಾಯಿತು. ಪೂಜ್ಯರು ಮೈಸೂರು ಸ್ಯಾಂಡಲ್ ಸೋಪು ಮತ್ತು ಕೆಎಸ್ ಡಿಎಲ್ ಉತ್ಪನ್ನಗಳು ಗ್ರಾಹಕರ ಮನ್ನಣೆ ಗಳಿಸಿವೆ. ಯಾವ ಉತ್ಪನ್ನಗಳು ಗುಣಮಟ್ಟದಿಂದ ಕೂಡಿರುತ್ತವೆಯೋ ಅವುಗಳನ್ನು ಗ್ರಾಹಕರು ಕೊಳ್ಳುತ್ತಾರೆ ಎಂದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದಿಂದ ಸ್ಥಾಪಿತವಾದ ಈ ಸಂಸ್ಥೆ 100 ವರ್ಷಗಳ ಭವ್ಯ ಪರಂಪರೆಯನ್ನು ಹೊಂದಿದೆ. ಅಂದಿನಿಂದ ಇಂದಿನ ತನಕ ಸಂಸ್ಥೆಯು ಗುಣಮಟ್ಟ ಕಾಪಾಡಿಕೊಂಡು ಬಂದಿದೆ. ವಿಶೇಷತೆ ಎಂದರೆ, ವರ್ಷದಿಂದ ವರ್ಷಕ್ಕೆ ಈ ಸಂಸ್ಥೆ ಲಾಭದಾಯಕದತ್ತ ಮುನ್ನಡೆಯುತ್ತಿದೆ. ಸರ್ಕಾರಕ್ಕೆ ಡಿವಿಡೆಂಡ್ ಪಾವತಿಸಿದೆ. ಇವೆಲ್ಲವನ್ನೂ ಗಮನಿಸಿದರೆ ಗ್ರಾಹಕರು ಈ ಉತ್ಪನ್ನಗಳ ಬಗ್ಗೆ ಆಕರ್ಷಣೆ ಗೊಂಡಿದ್ದಾರೆ ಎಂಬುದನ್ನು ತಿಳಿಯಬಹುದು ಎಂದರು. ಕೆ.ಎಸ್.ಡಿ.ಎಲ್. ಸಂಸ್ಥೆಯು ಪರೋಕ್ಷವಾಗಿ ರೈತರಿಗೂ ಸಹಕಾರಿಯಾಗಿದೆ. ಶ್ರೀಗಂಧ ಮರ ಬೆಳೆಯಲು ಪ್ರೋತ್ಸಾ ಹಿಸುವುದು,…
ಸರಗೂರು: ಕಾಡಾನೆ ದಾಳಿಯಿಂದಾಗಿ ಸುಮಾರು 2 ಎಕರೆ ಬಾಳೆ ಕೃಷಿ ಸಂಪೂರ್ಣ ನಾಶಗೊಂಡ ಘಟನೆ ಹೂವಿನಕೊಳದಲ್ಲಿ ಭಾನುವಾರ ರಾತ್ರಿ ನಡೆದಿದೆ. ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೊಳ ಗ್ರಾಮದ ರೈತ ನಾಗೇಂದ್ರ ಎಚ್.ಎನ್. ಅವರಿಗೆ ಸೇರಿದ ಬಾಳೆ ತೋಟ ನಾಶವಾಗಿದೆ. ಸುಮಾರು 2 ಎಕರೆ ಜಮೀನಿನಲ್ಲಿ 2 ಸಾವಿರ ಬಾಳೆ ಬೆಳೆದಿದ್ದರು. ಕಾಡಾನೆಗಳ ದಾಳಿಗೆ ಸುಮಾರು 500 ಬಾಳೆ ಗಿಡಗಳು ನಾಶವಾಗಿದ್ದು, ₹ 5 ಲಕ್ಷ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಒಂದು ಬಾಳೆ ಸಸಿಗೆ ₹ 25 ಕೊಟ್ಟು ನರ್ಸರಿಯಿಂದ ತಂದು ಬೇಸಾಯ ಮಾಡಲಾಗಿದೆ. ಒಂದು ಗಿಡ ಬಾಳೆ ಬೆಳೆಯಲು ಸುಮಾರು ₹ 400 ಖರ್ಚಾಗಿದ್ದು, ಉತ್ತಮ ಫಸಲು ಬಂದಿದ್ದರಿಂದ ಒಂದು ಗೊನೆಗೆ ₹ 1,000 ಸಿಗುತ್ತಿತ್ತು. ಒಂದು ತಿಂಗಳ ಹಿಂದೆ ಇದೇ ಬಾಳೆ ತೊಟಕ್ಕೆ ಆನೆಗಳು ನುಗ್ಗಿ ಸ್ವಲ್ಪ ಬೆಳೆಯನ್ನು ನಾಶ ಮಾಡಿದ್ದವು. ಈಗ ಎರಡನೇ ಬಾರಿಗೆ ಮತ್ತೆ ದಾಳಿ ನಡೆಸಿವೆ. ಮುಂದೆಯೂ ಆನೆಗಳು ದಾಳಿ ಇಡುವ ಸಾಧ್ಯತೆಯಿದೆ…
ಸರಗೂರು: ತಾಲ್ಲೂಕಿನ ಹಲಸೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ ಮತ್ತು ದೇವರ ಪ್ರತಿಷ್ಠಾಪನೆ ಕಾರ್ಯಕ್ರಮವು ಶುಕ್ರವಾರದಿಂದ ಭಾನುವಾರವರಗೂ ಹಮ್ಮಿಕೊಳ್ಳಲಾಯಿತು. 100 ವರ್ಷಗಳಷ್ಟು ಹಳೆಯದಾದ ಮಾರಮ್ಮ ದೇವಿಯ ದೇವಾಲಯವು ಶಿಥಿಲವಾಗಿತ್ತು. ಗ್ರಾಮಸ್ಥರ ಕೋರಿಕೆ ಮೇರೆಗೆ ಶಾಸಕ ಅನಿಲ್ ಚಿಕ್ಕಮಾದು, ದಾನಿಗಳ ನೆರವು ಮತ್ತು ಗ್ರಾಮಸ್ಥರ ಸಹಕಾರದಿಂದ ದೇವಸ್ಥಾನ ನಿರ್ಮಾಣವಾಗಿದೆ. ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಗ್ರಾಮಸ್ಥರ ಕೋರಿಕೆಯಂತೆ ದೇವಾಲಯ ನಿರ್ಮಿಸಲಾಗಿದ್ದು, ಎಲ್ಲರೂ ಸಹಬಾಳ್ವೆ, ಒಗ್ಗಟ್ಟಿನಿಂದ ಜಾತ್ರೆ ಮತ್ತು ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಹೋಗುವಂತೆ’ ಸಲಹೆ ನೀಡಿದರು. ಪಡುವಲು ವೀರಕ್ತ ಮಠದ ಮಹದೇವಸ್ವಾಮಿಗಳು.ಶಾಸಕರ ಅನೀಲ್ ಚಿಕ್ಕಮಾದು.ಜೆಡಿಎಸ್ ಪಕ್ಷದ ಮುಖಂಡ ಕೆ ಎಂ ಕೃಷ್ಣನಾಯಕ.ಜಯಪ್ರಕಾಶ್.ರವರು ತಾಯಿಯ ದರ್ಶನ ಪಡೆದು ಪುನೀತದರು. ಗ್ರಾಮದ ಎಲ್ಲಾ ಸಮುದಾಯದ ಮುಖಂಡರ ನೇತೃತ್ವದಲ್ಲಿ ಗ್ರಾಮಸ್ಥರು ಧಾರ್ಮಿಕ ಆಚರಣೆ ಮತ್ತು ಪೂಜೆ ಪುನಸ್ಕಾರಗಳನ್ನು ನೆರವೇರಿಸಿದರು. ಶುಕ್ರವಾರದಿಂದ ಭಾನುವಾರವರೆಗೂ ನಡೆದ ಉದ್ಘಾಟನೆ ಮತ್ತು ದೇವರ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮೂರು ದಿನಗಳ ಕಾಲ ಅನ್ನದಾಸೋಹ ನಡೆಯುತ್ತು.ಗ್ರಾಮದ ಗ್ರಾಮಸ್ಥರು ಹಾಗೂ ಸುತ್ತ…
ಸರಗೂರು: ಸಮಾಜದ ಅಭಿವೃದ್ಧಿಗೆ ಮಠ, ಮಾನ್ಯಗಳ ಕೊಡುಗೆ ಅಪಾರವಾಗಿದ್ದು, ಬಸವಾದಿ ಶರಣರ ಆದರ್ಶದಂತೆ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ನೀಡಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ಪಟ್ಟಣದ ಜೆಎಸ್ ಎಸ್ ಕಾಲೇಜಿನ ಆವರಣದಲ್ಲಿ ಭಾನುವಾರ ಮೈಸೂರು–ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ಮಠಾಧಿಪತಿಗಳ ಗೋಷ್ಠಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ, ಶ್ರೀ ರಾಜೇಂದ್ರ ಸ್ವಾಮಿಗಳವರ ಭಕ್ತ ಬಳಗ, ಮೈಸೂರಿನ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವ ದೀಕ್ಷಾ ಸಂಸ್ಕಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ನವ ಭಾರತ ನಿರ್ಮಾಣದಲ್ಲಿ ಮಠ, ಮಾನ್ಯಗಳು ಸೇವೆ ಪ್ರಮುಖವಾಗಿದ್ದು, ಇಡೀ ವಿಶ್ವಕ್ಕೆ ಜ್ಞಾನ ಬೆಳಕು ನೀಡಿದ ಸುತ್ತೂರು ಗುರುಪರಂಪರೆ ಸೇವೆ ಕೊಡುಗೆ ಅವರು ನೀಡಿರುವ ತತ್ವ ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದೆ. ಇಂತಹ ಮಹನೀಯರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಅರ್ಥ ಪೂರ್ಣವಾಗಿ ಆಚರಣೆ ಮಾಡುವ ಮೂಲಕ ಅವರ ಕೃಪೆಗೆ…
ಸರಗೂರು: ಸರಗೂರು ವಲಯ ವ್ಯಾಪ್ತಿಯ ಹಲಸೂರು ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಹುಲಿ ಏಕಾಏಕಿ ದಾಳಿ ನಡೆಸಿ ಬಲಿ ತೆಗೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಗ್ರಾಮದ ಸೋಮಣ್ಣ ನಾಯಕ ಎಂಬುವರು ಜಮೀನಿನಲ್ಲಿ ಭಾನುವಾರ ಮೇಕೆಗಳನ್ನು ಮೇಯಿಸುತ್ತಿದ್ದಾಗ ನುಗು ಜಲಾಶಯದ ಕಾಡಿನಿಂದ ಹೊರಬಂದ ಹುಲಿ ಜಮೀನಿನಲ್ಲಿದ್ದ ಮೇಕೆಗಳ ಮೇಲೆ ಏಕಾಏಕಿ ದಾಳಿ ನಡೆಸಿದ ವೇಳೆ ಮೇಕೆ ಮೃತಪಟ್ಟಿವೆ. ಇದರಲ್ಲಿ ಮೇಕೆಯೊಂದನ್ನು ಅರ್ಥ ಭಾಗವನ್ನು ತಿಂದು, ಕಾಡಿನೊಳಗೆ ಎಳೆದುಕೊಂಡು ಹೋಗುವ ಸಂದರ್ಭದಲ್ಲಿ ಮೇಕೆಯನ್ನು ಮೇಯಿಸುತ್ತಿದ್ದ ರೈತರು ಕೂಗಾಡಿದ್ದಾರೆ. ಈ ವೇಳೆ ಮೇಕೆಯನ್ನು ಅಲ್ಲೇ ಬಿಟ್ಟು ಹೋಗಿದೆ ಎಂದು ರೈತ ಸೋಮಣ್ಣ ನಾಯಕ ತಿಳಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಹಲಸೂರು ಟಿ.ಕುಮಾರ್ ಮಾತನಾಡಿ, ಮೇಕೆಗಳನ್ನು ಸಾಕಿ ಜೀವನ ನಡೆಸುತ್ತಿದ್ದ ಸೋಮಣ್ಣ ನಾಯಕ ಅವರಿಗೆ ಸುಮಾರು 60 ಸಾವಿರ ರೂ.ಗೂ ಅಧಿಕ ನಷ್ಟವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಲು ಕರೆ ಮಾಡಿದರೆ…
ಕೊರಟಗೆರೆ: ಮಧುಗಿರಿ ಹಾಗೂ ಕೊರಟಗೆರೆ ಕ್ಷೇತ್ರ ನನ್ನನ್ನು ಉನ್ನತ ಮಟ್ಟಕ್ಕೆ ಬೆಳೆಸಿದೆ. ಮಧುಗಿರಿ ಕ್ಷೇತ್ರದ ಜನತೆ ಗಿಡನೆಟ್ಟು ಪೋಷಿಸಿದರು. ಹಣ್ಣು ಬಿಡುವ ಹೊತ್ತಿಗೆ ಕೊರಟಗೆರೆ ಕ್ಷೇತ್ರಕ್ಕೆ ಕಳಿಸಿದರು. ಈ ಕ್ಷೇತ್ರದ ಜನ ನನ್ನನ್ನು ಉನ್ನತ ಹುದ್ದೆ ಏರಲು ಆಶೀರ್ವದಿಸಿದರು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ತಾಲ್ಲೂಕಿನ ಚಟೇನಹಳ್ಳಿ ಗ್ರಾಮದ ಗಂಗಮಾಳಮ್ಮ, ಮೈಲಾರಲಿಂಗೇಶ್ವರ ನೂತನ ದೇವಾಲಯದ ಪ್ರಾಣ, ಕಳಶ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಮಾತನಾಡಿದರು. ಪೋಷಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ಒಂದು ಮಗು ವಿದ್ಯಾವಂತವಾದರೆ ಇಡೀ ಕುಟುಂಬದ ಅಭಿವೃದ್ಧಿಗೆ ಸಹಕಾರವಾಗುತ್ತದೆ. ಬಡತನ ನಿವಾರಣೆಗೆ ಶಿಕ್ಷಣವೇ ಉತ್ತಮ ಮಾರ್ಗ. ಇದರಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಪರಮೇಶ್ವರ ಅವರಿಗೆ ಕಂಬಳಿ ಹೊದಿಸಿ, ಜೋಡಿ ಕುರಿಗಳನ್ನು ನೀಡಿದರು. ಇದಕ್ಕೂ ಮುನ್ನ ತಾಲ್ಲೂಕಿನ ಶಾಂತಲಿಂಗಯ್ಯನಪಾಳ್ಯ ರಸ್ತೆ, ಮುದ್ದನಹಳ್ಳಿ ರಸ್ತೆ ಹಾಗೂ ಬಿಳೇಕಲ್ಲಹಳ್ಳಿ– ಬಿಡಿ ಪುರ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್…
ತುಮಕೂರು: ಈಡಿಗರಲ್ಲಿ ನಾವೆಲ್ಲ ಒಂದು ಎಂಬ ಏಕತಾ ಮನೋಭಾವ ಮೂಡಬೇಕು. ಒಳ ಪಂಗಡದ ಹೆಸರಿನಲ್ಲಿ ವಿಘಟನೆಯಾಗಬಾರದು ಎಂದು ಸೋಲೂರಿನ ಆರ್ಯ ಈಡಿಗರ ಮಹಾಸಂಸ್ಥಾನ ಮಠದ ವಿಖ್ಯಾತನಂದ ಸ್ವಾಮೀಜಿ ಸಲಹೆ ಮಾಡಿದರು. ನಗರದಲ್ಲಿ ಭಾನುವಾರ ಜಿಲ್ಲಾ ಆರ್ಯ ಈಡಿಗರ ಸಂಘ, ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವ ಸಮಿತಿ, ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ, ನಾರಾಯಣ ಗುರು ಸಮಾಜ ಟ್ರಸ್ಟ್, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಿದ್ದ ನಾರಾಯಣ ಗುರು ಜಯಂತಿ, ಪ್ರತಿಭಾ ಪುರಸ್ಕಾರ ವಿತರಣೆ, ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ನಮ್ಮಲ್ಲಿ ಸಂಕುಚಿತ ಮನೋಭಾವ ಬಿಟ್ಟು ಹೋದರೆ ಮಾತ್ರ ಸದೃಢ ಸಮಾಜ ಕಟ್ಟಲು ಸಾಧ್ಯ. ಎಲ್ಲರು ಸ್ವಾವಲಂಬಿ, ಸುಸಂಸ್ಕೃತರಾಗಬೇಕು ಎಂಬುವುದು ನಾರಾಯಣ ಗುರು ಆಶಯವಾಗಿತ್ತು. ಅವರ ವಿಚಾರ ಎಷ್ಟು ಅಳವಡಿಸಿಕೊಂಡಿದ್ದೇವೆ ಎಂಬುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿ ‘ನಾವೆಲ್ಲ ಒಳ ಪಂಗಡಗಳ ಜತೆಗೆ ಹೋರಾಟ ಮಾಡದೆ, ಒಗ್ಗಟ್ಟಾಗಿರಬೇಕು. ಎಲ್ಲರನ್ನು ಜತೆಯಲ್ಲಿ ಕರೆದುಕೊಂಡು ಹೋದರೆ ಮುಂದುವರಿಯಲು ಸಾಧ್ಯ. ಈಗಾಗಲೇ ನಮ್ಮ…