Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ಶಿರಾ: ತಾಲ್ಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿಯಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಬುಧವಾರ ಗ್ರಾಮಸ್ಥರು ಕೊಳವೆಬಾವಿ ಕೊರೆಯುವ ವಾಹನವನ್ನು ತಡೆದು ಪ್ರತಿಭಟನೆ ನಡೆಸಿದರು. ಹೊನ್ನೇನಹಳ್ಳಿಯಲ್ಲಿ ಕಳೆದ ಎರಡು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಗ್ರಾಮಸ್ಥರು ಈ ಬಗ್ಗೆ ಹಲವು ಬಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಯುಗಾದಿ ಹಬ್ಬದ ಸಂದರ್ಭದಲ್ಲೂ ನೀರಿಲ್ಲದೆ ಪರದಾಡುವಂತಾಗಿತ್ತು. ಗ್ರಾಮಸ್ಥರು ಅನಿವಾರ್ಯವಾಗಿ ಖಾಸಗಿ ವ್ಯಕ್ತಿಗಳ ಜಮೀನುಗಳಿಗೆ ತೆರಳಿ ನೀರು ತರುತ್ತಿದ್ದರು. ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಇತ್ತೀಚೆಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಇದರ ಫಲವಾಗಿ ಬುಧವಾರ ಹೊಸ ಕೊಳವೆಬಾವಿ ಕೊರೆಸಲು ಅಧಿಕಾರಿಗಳು ವಾಹನವನ್ನು ಕಳುಹಿಸಿಕೊಟ್ಟಿದ್ದರು. ಸುಮಾರು 1,100 ಅಡಿಗಳಷ್ಟು ಆಳಕ್ಕೆ ಕೊಳವೆಬಾವಿ ಕೊರೆದರೂ ನೀರು ಸಿಗದ ಕಾರಣ, ಅಧಿಕಾರಿಗಳು ವಾಹನವನ್ನು ವಾಪಸ್ ಕಳುಹಿಸಲು ಮುಂದಾದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ವಾಹನವನ್ನು ತಡೆದು ನಿಲ್ಲಿಸಿದರು. “ನಮಗೆ ಕುಡಿಯುವ ನೀರು ಅತ್ಯಗತ್ಯವಾಗಿದ್ದು, ಮತ್ತೊಂದು…
ಪಾವಗಡ: ಶ್ರೀ ರಾಮಕೃಷ್ಣ ಸೇವಾಶ್ರಮದಿಂದ ಬುಧವಾರ ಸುಮಾರು 220ಕ್ಕೂ ಮೇಲ್ಪಟ್ಟ ಗೋಪಾಲಕರಿಗೆ, ರೈತಾಪಿ ಜನರಿಗೆ ಮೇವು ವಿತರಿಸಲಾಯಿತು. ದೂರದ ಪಳವಳ್ಳಿ, ಗೋರಸಮಾವು, ವಡ್ರೇವು, ರೊಪ್ಪ, ಕಣಿವೆನಹಳ್ಳಿ ಮುಂತಾದ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಗೋಪಾಲಕರು ಬಂದು ಮೇವನ್ನು ಪಡೆದರು. ಬಹುಶಃ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತಾಪಿ ಜನರು ಬಂದು ಮೇವು ಪಡೆಯುವುದರಲ್ಲಿ ಸಂದೇಹವಿಲ್ಲ. ಕಾರಣ, ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚುತ್ತಲಿದ್ದು, ಮೇವು ದೊರೆಯುವುದು ಕಷ್ಟಕರ ಆಗಿದೆ. ಮೇವು ಆಂಧ್ರಪ್ರದೇಶಗಳಲ್ಲಿ ದೊರೆಯುವುದು ಕಡಿಮೆಯಾಗುತ್ತಿದ್ದು, ಬಹುಶಃ ಮುಂದಿನ ದಿನಗಳಲ್ಲಿ ಮಂಡ್ಯ ಅಥವಾ ದಾವಣಗೆರೆಯಿಂದ ಮೇವನ್ನು ಖರೀದಿಸಬೇಕಾಗಬಹುದು ಎಂದು ಯೋಜನೆಯ ರೂವಾರಿ ಸ್ವಾಮಿ ಜಪಾನಂದಜೀ ಮಹಾರಾಜ್ ತಿಳಿಸಿದರು. ಪ್ರತಿ ದಿನವೂ ಸುಮಾರು 8 ರಿಂದ 10 ಲೋಡು ಮೇವನ್ನು ಚಳ್ಳಕೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ನೀಡಬೇಕಾಗಿದೆ. ಆದ್ದರಿಂದ ಮೇವಿನ ಕೊರತೆ ಎದುರಿಸಬೇಕಾಗಬಹುದು ಎಂದು ಪೂಜ್ಯರು ತಿಳಿಸಿದರು. ಇದೇ ಸಂದರ್ಭದಲ್ಲಿ ನಾನಾ ಭಾಗಗಳಿಂದ ರೈತಾಪಿ ಮುಖಂಡರುಗಳು ಹಾಗೂ ಕಿಲಾರಿಗಳು, ಗೋಪಾಲಕರು ಮನವಿ ನೀಡುತ್ತಲೇ ಬರುತ್ತಿದ್ದಾರೆ.…
ತುಮಕೂರು: ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿ ಮತ್ತು ಅಮೃತೂರು ಹೋಬಳಿಯ ವ್ಯಾಪ್ತಿಯ ದಲಿತರ ಕುಂದುಕೊರತೆಗಳ ಸಭೆಯನ್ನು ಇತ್ತೀಚೆಗೆ ಅಮೃತೂರು ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು. ಈ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಸೌಲಭ್ಯಗಳ ಬಗ್ಗೆ, ಸಮಸ್ಯೆಗಳ ಬಗ್ಗೆ ಹಲವು ಮುಖಂಡರು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಹಂಚಿಕೊಂಡರು. ಈ ಸಭೆಯಲ್ಲಿ ಮಾತನಾಡಿದ ಹೆಚ್.ಬಿ.ಪುಟ್ಟಬೋರಯ್ಯ ಅವರು, ಡಿ.ಹೊಸಹಳ್ಳಿ ಮಾರ್ಗದ ನಮ್ಮ ಗ್ರಾಮದ ಬಳಿ ಈ ಹಿಂದೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಒತ್ತಾಯಿಸಲಾಗಿತ್ತು. ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಅಂತಿಮವಾಗಿ ಬಸ್ ನಿಲುಗಡೆಗೆ ವರ್ಷದ ಹಿಂದೆಯೇ ಆದೇಶವಾಗಿದೆ. ಇಷ್ಟಾದರೂ ಸಹ ಕೆಲವು ಬಸ್ ಗಳು ಇಲ್ಲಿ ನಿಲುಗಡೆಯಾಗುತ್ತಿಲ್ಲ. ಇದರಿಂದ ಈ ಭಾಗದಲ್ಲಿ ಓಡಾಡುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕರಾದ ನವೀನ್ ಗೌಡ ಅವರು ಕೆಎಸ್ ಆರ್ ಟಿಸಿ ವ್ಯವಸ್ಥಾಪಕರೊಂದಿಗೆ…
ಶಿರಾ : ನಗರದ ಸಪ್ತಗಿರಿ ಬಡಾವಣೆಯ ನಿವಾಸಿಗಳು ಶಿಥಿಲಗೊಂಡಿರುವ ವಿದ್ಯುತ್ ಕಂಬದ ಭಯದಲ್ಲೇ ಕಾಲ ಕಳೆಯುವಂತಾಗಿದೆ. ಇಲ್ಲಿನ ಎಂ.ಜಿ.ಎಂ ಶಾಲೆ ರಸ್ತೆಯಲ್ಲಿರುವ ವಿದ್ಯುತ್ ಕಂಬವು ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಭೀತಿ ಎದುರಾಗಿದೆ. ಬಡಾವಣೆಯ 31ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎಂ.ಜಿ.ಎಂ ಶಾಲೆ ರಸ್ತೆಯ ಈ ವಿದ್ಯುತ್ ಕಂಬದ ತಳಭಾಗದಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡಿವೆ. ಈ ಕಂಬವು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸ್ಥಿತಿಯಲ್ಲಿದೆ. ಈ ರಸ್ತೆಯು ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಮತ್ತು ವಾಹನಗಳ ಸಂಚಾರದಿಂದ ಸದಾ ಜನನಿಬಿಡವಾಗಿರುತ್ತದೆ. ಒಂದು ವೇಳೆ ಕಂಬ ಮುರಿದು ಬಿದ್ದರೆ ದೊಡ್ಡ ಮಟ್ಟದ ಪ್ರಾಣಾಪಾಯ ಅಥವಾ ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕಂಬದ ಸ್ಥಿತಿಯ ಬಗ್ಗೆ ಸ್ಥಳೀಯ ನಿವಾಸಿಗಳು ಈಗಾಗಲೇ ಹಲವು ಬಾರಿ ನಗರಸಭೆ ಮತ್ತು ಬೆಸ್ಕಾಂ (BESCOM) ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ, ಈವರೆಗೆ ಯಾವುದೇ ಇಲಾಖೆಯೂ ಇದನ್ನು ಬದಲಿಸುವ ಅಥವಾ ದುರಸ್ತಿ ಮಾಡುವ ಕೆಲಸಕ್ಕೆ…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್.ಬೈರಾಪುರ ಗ್ರಾಮದಲ್ಲಿ ಗ್ರಾಮದೇವತೆಗಳಾದ ಕರಿಯಮ್ಮದೇವಿ ಹಾಗೂ ಪ್ಲೇಗಿನಮ್ಮ ದೇವಿ ಜಾತ್ರಾ ಮಹೋತ್ಸವ ಮತ್ತು ರಥೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಸತತ ಐದು ದಿನಗಳ ಕಾಲ ನಡೆದ ಈ ಧಾರ್ಮಿಕ ಉತ್ಸವಕ್ಕೆ ಭವ್ಯ ರಥೋತ್ಸವ ಮತ್ತು ಸಿಡಿ ಉತ್ಸವದೊಂದಿಗೆ ತೆರೆಬಿದ್ದಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಐದು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮೊದಲ ದಿನ ಮೂಲಸ್ಥಾನದಲ್ಲಿ ದೇವರಿಗೆ ಹೂವಿನ ಅಲಂಕಾರ, ಮಧುವಣಗಿತ್ತಿ ಕಾರ್ಯಕ್ರಮ ಹಾಗೂ ಮದ್ದಿನ ಪ್ರದರ್ಶನ ಆಯೋಜಿಸಲಾಗಿತ್ತು. ನಂತರದ ದಿನಗಳಲ್ಲಿ ಕಂಕಣಧಾರಣೆ, ಆರತಿಬಾನ, ಪುಷ್ಪಾಲಂಕಾರ ಹಾಗೂ ಗಂಗಾಸ್ನಾನದಂತಹ ವಿಧಿವಿಧಾನಗಳು ನೆರವೇರಿದವು. ರಥೋತ್ಸವದ ದಿನದಂದು ಬೆಳಿಗ್ಗೆ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ, ಹೂವು ಹಾಗೂ ಬಣ್ಣಬಣ್ಣದ ಬಾವುಟಗಳಿಂದ ರಥವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಜಾನಪದ ಕಲಾತಂಡಗಳಾದ ಚಿಟ್ಟಿಮೇಳ, ನಾಸಿಕ್ ಡೋಲ್ ಮತ್ತು ಮಾರಮ್ಮನ ಕುಣಿತದೊಂದಿಗೆ ದೇವಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಯಿತು. ಸಾವಿರಾರು ಭಕ್ತರು ‘ಜೈಕಾರ’ ಹಾಕುತ್ತಾ ಭಕ್ತಿಯಿಂದ ರಥವನ್ನು…
ತುಮಕೂರು: ಜಿಲ್ಲಾಡಳಿತವು ನಗರದ ಗ್ರಂಥಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ‘ಜನತಾ ದರ್ಶನ’ ಕಾರ್ಯಕ್ರಮವು ತೀವ್ರ ಅವ್ಯವಸ್ಥೆಯಿಂದ ಕೂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಅಹವಾಲು ಸಲ್ಲಿಸಲು ಬಂದ ಸಾರ್ವಜನಿಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಣ್ಣ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದ ತೀವ್ರ ಗೊಂದಲ ಉಂಟಾಯಿತು. ದೂರದ ಊರುಗಳಿಂದ ಆಶಾಭಾವನೆಯಿಂದ ಬಂದ ಜನರು ಮೂಲಸೌಕರ್ಯಗಳ ಕೊರತೆಯಿಂದ ಹೈರಾಣಾದರು. ಸಚಿವರು ಮತ್ತು ಅಧಿಕಾರಿಗಳ ಮುಂದೆ ತಮ್ಮ ಅಳಲು ತೋಡಿಕೊಳ್ಳಲು ಪೊಲೀಸರು ಸಾರ್ವಜನಿಕರಿಗೆ ಸೂಕ್ತ ಕಾಲಾವಕಾಶ ನೀಡದೆ ತರಾತುರಿ ಮಾಡಿದರು ಎಂದು ಜನರು ದೂರಿದ್ದಾರೆ. ವಸತಿ ಸೌಲಭ್ಯ, ನಿವೇಶನ ಹಂಚಿಕೆ, ಪೋಡಿ ಸಮಸ್ಯೆ, ಭೂಸ್ವಾಧೀನ ಪರಿಹಾರ ವಿಳಂಬ ಮತ್ತು ಬಿಪಿಎಲ್ ಕಾರ್ಡ್‌ಗಳ ರದ್ದತಿ ಕುರಿತು ಅತಿ ಹೆಚ್ಚು ದೂರುಗಳು ಕೇಳಿಬಂದವು. ಹೇಮಾವತಿ ನಾಲೆಗಾಗಿ ಭೂಮಿ ಕಳೆದುಕೊಂಡು 12 ವರ್ಷಗಳಾದರೂ ಪರಿಹಾರ ಸಿಗದ ರೈತನ ಅಳಲನ್ನು ಆಲಿಸಿದ ಸಚಿವರು, ಮುಂದಿನ 10 ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಅಧಿಕಾರಿಗಳ…
ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿ, ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಬೆಂಗಳೂರು ಮೂಲದ ಮಹಿಳೆ ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ. ಈ ಪ್ರಕರಣವು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಪಂಚಮಸಾಲಿ ಸಮುದಾಯದ 2A ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಜಯಮೃತ್ಯುಂಜಯ ಸ್ವಾಮೀಜಿ ಅವರು ತಮಗೆ ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದಾರೆ ಮತ್ತು ಪ್ರತಿದಿನ ರಾತ್ರಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಅಲ್ಲದೆ, ಸ್ವಾಮೀಜಿ ತಮ್ಮ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿರುವ ಜಯಮೃತ್ಯುಂಜಯ ಸ್ವಾಮೀಜಿ ಅವರು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಹಿಳೆಯ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. “ಸದರಿ ಮಹಿಳೆಯು ತಾನು ಅನಾಥಾಶ್ರಮ ನಡೆಸುತ್ತಿರುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದಳು. ಈಗ ನನ್ನ ತೇಜೋವಧೆ ಮಾಡುವ ಸಂಚು ರೂಪಿಸಿ, ಬ್ಲ್ಯಾಕ್‌ಮೇಲ್ ಮಾಡುವ…
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದ ಸಿದ್ದೇಶ್ವರ ಜಾತ್ರೆಯ ಸಂದರ್ಭದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಂಗನಗೌಡ ಪಾಟೀಲ್ (50) ಕೊಲೆಯಾದ ದುರ್ದೈವಿ. ಕೊಲೆಯಾದ ಸಂಗನಗೌಡ ಮತ್ತು ಆರೋಪಿಗಳ ಕುಟುಂಬಗಳ ನಡುವೆ ಕಳೆದ ಕೆಲವು ವರ್ಷಗಳಿಂದ ರಾಜಕೀಯ ಹಾಗೂ ವೈಯಕ್ತಿಕ ವೈಷಮ್ಯವಿತ್ತು. ಸಿದ್ದೇಶ್ವರ ಜಾತ್ರೆಯ ಮೆರವಣಿಗೆಯ ಸಮಯದಲ್ಲಿ ಸಂಗನಗೌಡ ತನ್ನ ವಿರೋಧಿಗಳ ಮನೆಯ ಮುಂದೆ ಕುಣಿಯುತ್ತಿದ್ದರು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಎದುರಾಳಿ ಗುಂಪು, “ನಮ್ಮ ಮನೆಯ ಮುಂದೆ ಕುಣಿಯಬೇಡ” ಎಂದು ತಗಾದೆ ತೆಗೆದಿದೆ. ಈ ವೇಳೆ ಮಾತಿನ ಚಕಮಕಿ ನಡೆದು ಗಲಾಟೆ ವಿಕೋಪಕ್ಕೆ ಹೋಗಿದೆ. ಸಿಟ್ಟಿಗೆದ್ದ ಆರೋಪಿಗಳು ಕುಡಗೋಲು, ಕೊಡಲಿ ಮತ್ತು ಕಬ್ಬಿಣದ ರಾಡ್‌ಗಳಿಂದ ಸಂಗನಗೌಡ ಅವರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಎಂಟು…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲು ಸಜ್ಜಾಗಿದೆ. ಏಪ್ರಿಲ್ 9ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರಬೀಳಲಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್‌ಗಳ ಜೊತೆಗೆ ಈಗ ಡಿಜಿಲಾಕರ್ (DigiLocker) ಮೂಲಕವೂ ತಮ್ಮ ಅಧಿಕೃತ ಅಂಕಪಟ್ಟಿಯನ್ನು ಸುಲಭವಾಗಿ ಪಡೆಯಬಹುದಾಗಿದೆ. ಆನ್ ಲೈನ್ ನಲ್ಲಿ ಲಭ್ಯವಾಗುವ ಫಲಿತಾಂಶವು ತಾತ್ಕಾಲಿಕವಾಗಿದ್ದು, ಉನ್ನತ ಶಿಕ್ಷಣದ ಪ್ರವೇಶಾತಿಗಾಗಿ ಡಿಜಿಲಾಕರ್‌ನಲ್ಲಿ ಲಭ್ಯವಿರುವ ಡಿಜಿಟಲ್ ಅಂಕಪಟ್ಟಿ ಅಧಿಕೃತ ದಾಖಲೆಯಾಗಿ ಕಾರ್ಯನಿರ್ವಹಿಸಲಿದೆ. ಡಿಜಿಲಾಕರ್ ಮೂಲಕ ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ?ವಿದ್ಯಾರ್ಥಿಗಳು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಅಂಕಪಟ್ಟಿಯನ್ನು ಪಡೆಯಬಹುದು: ಮೊಬೈಲ್ ಆ್ಯಪ್ ಅಥವಾ ವೆಬ್‌ಸೈಟ್: ಮೊದಲು ನಿಮ್ಮ ಮೊಬೈಲ್‌ನಲ್ಲಿ ‘DigiLocker’ ಆ್ಯಪ್ ಡೌನ್‌ಲೋಡ್ ಮಾಡಿ ಅಥವಾ digilocker.gov.in ವೆಬ್ ಸೈಟ್ ಗೆ ಭೇಟಿ ನೀಡಿ. ನಿಮ್ಮ ಆಧಾರ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ಬಳಸಿ ಲಾಗಿನ್ ಆಗಿ. ಖಾತೆ ಇಲ್ಲದಿದ್ದರೆ ಹೊಸದಾಗಿ ನೋಂದಣಿ…
ತುಮಕೂರು: ನಗರದ ದಿಬ್ಬೂರು ಸರ್ಕಲ್ ನಿಂದ ಶಿರಾ ಗೇಟ್ ಕಡೆಗೆ 80 ಅಡಿ ರಸ್ತೆಯಲ್ಲಿ ವೀಲಿಂಗ್ ಮಾಡಿಕೊಂಡು ಬರುತ್ತಿದ್ದ ಯುವಕನನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿರಾ ಗೇಟ್ ಎಸ್.ಎನ್.ಪಾಳ್ಯದ ಮೊಹಮ್ಮದ್ ಸಲೀಂ (17) ಎಂಬಾತ ಏ.4ರಂದು ಬೆಳಗ್ಗೆ 10:30ರ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಡಿಯೋ ಬೈಕ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ. ಬೀಟ್ ಪೊಲೀಸ್ ಅಧಿಕಾರಿಗಳ ದೂರಿನ ಅನ್ವಯ ಅಪ್ರಾಪ್ತನಾಗಿದ್ದರೂ ವಾಹನ ಚಾಲನೆ ಮಾಡಿದರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕನಿಗೆ ಚಾಲನೆ ಮಾಡಲು ಬೈಕ್ ನೀಡಿದ್ದ ಕಾರಣಕ್ಕೆ ಸವಾರನ ತಂದೆ ಸಾದಿಕ್ ಪಾಷಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರತ್ಯೇಕ ಪ್ರಕರಣ: ಹೊನ್ನೇನಹಳ್ಳಿ ಕಡೆಯಿಂದ ರಿಂಗ್ ರಸ್ತೆಯಲ್ಲಿ ಡಿಯೋ ಬೈಕ್ ನಲ್ಲಿ ತಿಕ್ಕತೊಟ್ಲುಕೆರೆಯ ಮುಬಾರಕ್ ಪಾಷ (19) ಎಂಬಾತ ಸೋಮವಾರ ಮಧ್ಯಾಹ್ನ 2:15ರ ಹೊತ್ತಿನಲ್ಲಿ ವೀಲಿಂಗ್ ಮಾಡಿಕೊಂಡು ವಾಹನ ಚಾಲನೆ ಮಾಡುತ್ತಿದ್ದು, ಆತನನ್ನು ಬೆನ್ನಟ್ಟಿದ ಬೀಟ್ ಪೊಲೀಸ್ ಅಧಿಕಾರಿಗಳಾದ ಶಾಂತಕುಮಾರ್ ಹಾಗೂ ಹರೀಶ್ ಗುಬ್ಬಿ ಗೇಟ್ ಜಂಕ್ಷನ್ ಬಳಿ ವಶಕ್ಕೆ…