Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ತುಮಕೂರು: ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರಿನ ಹೊರವಲಯದ ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅಂತಸರಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವಂತ ಪರಿಮಳ ಆಗ್ರೋ ಫುಡ್ ಇಂಡಸ್ಟ್ರೀಸ್ ನಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ಮಿಕ ಚಂದನ್ ಮತ್ತು ಶರ್ಮ ಮೃತರು. ಭತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವ ಫ್ಯಾಕ್ಟರಿ ಇದಾಗಿದ್ದು, ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಆಗ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಕಾರ್ಮಿಕರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ತುಮಕೂರು ಎಸ್ಪಿ ಅಶೋಕ್ ಕೆ. ವೆಂಕಟ್ ಮಾತನಾಡಿ, ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪರಿಮಾಳ ರೈಸ್ ಬ್ರಾಯಿನ್ ಆಯಿಲ್…
ಖಾರ್ಗೋನ್: ಇಂಟರ್ನೆಟ್ ಸ್ಟಾರ್ ಮೋನಾಲಿಸಾಳ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಮಾಲೆ ಮಾರುವ ಬಿಸಿನೆಸ್ ಸಂಪೂರ್ಣವಾಗಿ ನಷ್ಟದಲ್ಲಿದೆಯಂತೆ. ಒಂದೆಡೆ ಜನಪ್ರಿಯತೆ ದೇಶಾದ್ಯಂತ ಮನೆ ಮಾಡಿದ್ರೆ, ಇನ್ನೊಂದೆಡೆ ಅದೇ ಜನಪ್ರಿಯತೆ ತನ್ನ ವ್ಯಾಪಾರಕ್ಕೆ ಮುಳುವಾಗಿದೆ ಎಂದು ಆಕೆ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ನೋವು ತೋಡಿಕೊಂಡಿದ್ದಾಳೆಡ. ಮಹಾಕುಂಭದಲ್ಲಿ ಮಾಲೆ ಮಾರುವ ಬಿಸಿನೆಸ್ ಚೆನ್ನಾಗಿ ನಡೆಯಲಿಲ್ಲ. 35,000 ರೂಪಾಯಿ ಸಾಲ ಮಾಡಿ ವಾಪಸ್ ಬರಬೇಕಾಯ್ತು ಎಂದು ಆಕೆ ಹೇಳಿದ್ದಾರೆ. ಮಹಾಕುಂಭದಲ್ಲಿ ಮೀಡಿಯಾ ಮತ್ತು ಭಕ್ತರಿಂದ ತುಂಬಾ ಕಿರಿಕಿರಿಯಾಯಿತು, ಅದಕ್ಕೆ ವಾಪಸ್ ಬರಬೇಕಾಯ್ತು ಎಂದೂ ಹೇಳಿದರು ಸೋಮವಾರ ಮೀಡಿಯಾ ಮುಂದೆ ಮಾತನಾಡಿದ ಅವರು, ಪ್ರಯಾಗ್ ರಾಜ್ ನಲ್ಲಿ ಚೆನ್ನಾಗಿತ್ತು, ಆದರೆ ನಿರಂತರ ಕಿರಿಕಿರಿ ಮತ್ತು ಅನಾರೋಗ್ಯದಿಂದ ವಾಪಸ್ ಬರಬೇಕಾಯ್ತು ಎಂದು ಹೇಳಿದರು. ಸಿನಿಮಾದಲ್ಲಿ ನಟಿಸುವ ಬಗ್ಗೆ ಮೋನಾಲಿಸಾ, ಅಮ್ಮ–ಅಪ್ಪ ಅನುಮತಿ ಕೊಟ್ಟರೆ ನಟಿಸುತ್ತೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ದೆಹಲಿಯಲ್ಲಿ ಜನವರಿ 26ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ದೆಹಲಿಯ ಪಥಸಂಚಲನದಲ್ಲಿ ಭಾಗವಹಿಸಿದ್ದು, ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್‌ಲೈನ್, ಇ–ಮೇಲ್ ಮತ್ತು ಎಸ್ ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗಧಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ. ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31, 2025 ರಿಂದ ಪ್ರಾರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಜನವರಿ 31 ರಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು 31 ಜನವರಿ 2025 ರಂದು ಪ್ರಾರಂಭವಾಗಿ ಫೆಬ್ರವರಿ 13 ರಂದು ಕೊನೆಗೊಳ್ಳುತ್ತದೆ. ಅಧಿವೇಶನದ ಎರಡನೇ ಭಾಗವು 10 ಮಾರ್ಚ್ 2025 ರಂದು ಪ್ರಾರಂಭವಾಗುತ್ತದೆ ಮತ್ತು 4 ಏಪ್ರಿಲ್ 2025 ರವರೆಗೆ ಮುಂದುವರೆಯುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಅರಣ್ಯವಾಸಿಗಳನ್ನು ಯಾವುದೇ ಕಾರಣಕ್ಕೂ ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾತನಾಡಿದ ಅವರು, ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಜೊತೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅವರು ಸೂಚನೆ ನೀಡಿದರು. ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸಿಎಂ ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ವಯನಾಡು: ಮಹಿಳೆಯೊಬ್ಬರನ್ನು ಕೊಂದು ತಿಂದಿದ್ದ ನರಭಕ್ಷಕ ಹುಲಿಯೊಂದರ ಹೊಟ್ಟೆಯಲ್ಲಿ ಕಿವಿಯೋಲೆ, ಕೂದಲು, ಬಟ್ಟೆ ಪತ್ತೆಯಾಗಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಕೇರಳದ ವಯನಾಡಿನ ಪಿಲಕಾವುವಿನ ಜನನಿಬಿಡ ಪ್ರದೇಶದ ಮನೆಯೊಂದರ ಹಿಂದೆ ಸತ್ತು ಬಿದ್ದಿದ್ದ ಹುಲಿಯ ಹೊಟ್ಟೆಯಲ್ಲಿ ಮಹಿಳೆಯೊಬ್ಬರ ಕಿವಿಯೋಲೆ, ಕೂದಲು ಮತ್ತು ಬಟ್ಟೆ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹುಲಿ ಕಳೆದ ಎರಡು ದಿನಗಳ ಹಿಂದೆ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ರಾಧಾ ಎಂಬ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿ, ಕೊಂದು ಹಾಕಿ ಎಳೆದೊಯ್ದಿತ್ತು. ಇದೀಗ ಹುಲಿ ಸಾವಿಗೀಡಾಗಿದ್ದು, ಇದೀಗ ಹುಲಿಯ ಹೊಟ್ಟೆಯಲ್ಲಿ ಮಹಿಳೆ ದೇಹದ ಭಾಗಗಳು ಪತ್ತೆಯಾಗಿದೆ. ಸುಮಾರು ನಾಲ್ಕರಿಂದ ಐದು ವರ್ಷ ವಯಸ್ಸಿನ ಹೆಣ್ಣು ಹುಲಿಯನ್ನು ಸೋಮವಾರ ಬೆಳಗ್ಗೆ ವನ್ಯಜೀವಿ ಸಿಬ್ಬಂದಿಯ ತಂಡ ಗುರುತಿಸಿ ಬೆನ್ನಟ್ಟಿದ್ದರು. ನಂತರ ಪಿಲಕಾವುವಿನ ಜನನಿಬಿಡ ಪ್ರದೇಶದ ಮನೆಯೊಂದರ ಹಿಂದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಹುಲಿ ಸಾವಿಗೀಡಾಗಿದೆ ಎಂದು ಖಚಿತ ಪಡಿಸಿಕೊಂಡ ಅಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು. ಈ…
ತುಮಕೂರು: ಮೈಕ್ರೋ ಫೈನಾನ್ಸ್ ನಲ್ಲಿ ಹಣಕೊಡಿಸೋದಾಗಿ ನಂಬಿಸಿ 50 ಲಕ್ಷಕ್ಕೂ ಅಧಿಕ ಹಣ ಡ್ರಾ ಮಾಡಿ ದಂಪತಿ ಪರಾರಿಯಾಗಿರುವ ಘಟನೆ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಕಳೆದ 12 ವರ್ಷಗಳಿಂದ ವಾಸವಿದ್ದ ದಂಪತಿ, 10ಕ್ಕೂ ಅಧಿಕ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಗ್ರಾಮಸ್ಥರ ಹೆಸರಿನಲ್ಲಿ ಸಾಲ ತೆಗೆದಿದ್ದರು. ಸಾಲ ಪಡೆದು ಮರಳಿಸದೆ ಹಣದ ಸಮೇತ ದಂಪತಿಗಳು ಪರಾರಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿ ಜತೆಗೆ ದಂಪತಿಗಳಿಗೆ ಒಡನಾಟವಿದ್ದು, ಗ್ರಾಮದ 35 ಮಂದಿಗೆ ಸಾಲ ಕೊಡಿಸಿ ಪ್ರತಿ ತಿಂಗಳು ನಾವೇ ಹಿಂತಿರುಗಿಸೋದಾಗಿ ಹೇಳಿದ್ದರು ಎನ್ನಲಾಗಿದೆ. ಸದ್ಯ 50 ಲಕ್ಷಕ್ಕೂ ಹೆಚ್ಚು ಹಣ ಪಡೆದು ದಂಪತಿ ಪರಾರಿಯಾಗಿದ್ದಾರೆ. ಸಾಲ ಮರು ಪಾವತಿ ಮಾಡುವಂತೆ ಇದೀಗ ಮೈಕ್ರೋ ಫೈನಾನ್ಸ್ ಕಂಪನಿ ಗ್ರಾಮಸ್ಥರಿಗೆ ನೋಟಿಸ್ ನೀಡಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ತೋಟಗಾರಿಕಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆ ತುಮಕೂರು ನಗರದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಸರ್ವ ಧರ್ಮ ಗುರುಪರಂಪರೆಯನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ . ಫಲಪುಷ್ಪ ಪ್ರದಶನದಲ್ಲಿ ಗುರುಪರಂಪರೆಯನ್ನು ಪರಿಚಯಿಸುವ ಪ್ರಯತ್ನ ನಡೆದಿದಿದ್ದು, ತುಮಕೂರಿನ ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ನೆನಪಿಸಿಕೊಳ್ಳಲಾಗಿದ್ದು. ಅವರ ಭಾವಚಿತ್ರವನ್ನು ಸುಂದರವಾದ ತೆಂಗಿನ ಗರಿಗಳ ಕಲಾಕೃತಿಯೊಳಗೆ ಇರಿಸಿ ಪ್ರದರ್ಶಿಸಲಾಗಿದೆ. ಅದೇ ರೀತಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರುಗಳ ಸಮಾಜಸೇವೆಯನ್ನು ಬಿದಿರಿನ ಸುಂದರವಾದ ಕಲಾಕೃತಿಯಲ್ಲಿ ಇರಿಸಲಾಗಿದ್ದು ಅವರನ್ನು ನೆನಪಿಸುವ ಪ್ರಯತ್ನ ಮಾಡಲಾಗಿದೆ. ಒಟ್ಟಾರೆ ಫಲಪುಷ್ಪ ಪ್ರದಶನದಲ್ಲಿ ಜೈನ ಧಮದ ಶ್ರೀ ಶಾಂತಿಸಾಗರ ಮುನಿಗಳ ಗುರುಪರಂಪರೆಯನ್ನು ಮತ್ತು ದಿವ್ಯಾಕಾಶ ಸಮವಸರಣವನ್ನು ನೆನಪಿಸುವ ಜಿಲ್ಲಾಢಳಿತದ ಪ್ರಯತ್ನ ಶ್ಲಾಘನೆಗೆ ಪಾತ್ರವಾಗಿದೆ. ತುಮಕೂರಿನ ಹೊರವಲಯದಲ್ಲಿರುವ ಮಂದಾರಗಿರಿಯ ಪಿಂಚಿ ಮಂದಿರ ಮತ್ತು ದಿವ್ಯಾಕಾಶ ಸಮವರಣದ ಬೃಹತ್ ಪ್ರತಿಕೃತಿಗಳು ಜನರಲ್ಲಿ ಭಕ್ತಿಭಾವವನ್ನು ಇಮ್ಮಡಿಗೊಳಿಸುತ್ತಿವೆ. ಈ ಮೂಲ್ಕ ತುಮಕೂರು ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಜೈನ ಧಮದ ಕುರುಹುಗಳನ್ನು ಪರಿಚಯಿಸಿದೆ.…
ಮಂಡ್ಯ: ಮಕ್ಕಳ ಜೊತೆಗೆ ತಾಯಿಯೊಬ್ಬಳು ನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಧನಂಜಯ್ ಅವರ ಪತ್ನಿ ವಿದ್ಯಾ ಪಾಂಡವಪುರ ಪಟ್ಟಣದ ಹಾರೋಹಳ್ಳಿ ಗ್ರಾಮದವರಾಗಿದ್ದು, ಅವರ ಮಕ್ಕಳಾದ ಲಿತಿಶಾ (8) ಮತ್ತು ಕಿಶನ್ (2) ಅವರೊಂದಿಗೆ ವಿಶ್ವೇಶ್ವರಯ್ಯ ಕಾಲುವೆಗೆ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.30 ರವರೆಗೆ ಹುಡುಕಾಟ ನಡೆಸಲಾಗಿದ್ದರೂ, ಮಕ್ಕಳ ಶವಗಳು ಪತ್ತೆಯಾಗಿಲ್ಲ. ಆದರೆ, ಪ್ರಾಣಾಪಾಯದಿಂದ ಪಾರಾದ ವಿದ್ಯಾ, ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಮತೋಲನ ತಪ್ಪಿ ಕಾಲುವೆಗೆ ಬಿದ್ದಿದ್ದೇವೆ ಎಂದು ಹೇಳಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲಿಗೆ ಹಾರಿದ್ದಾಳೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಮಹಿಳೆಯನ್ನು ರಕ್ಷಣೆ ಮಾಡಿದ್ದು ದುರಾದೃಷ್ಟ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ…
ಬೆಂಗಳೂರು: ಬೆಂಗಳೂರು ಕರಗ ಮಹೋತ್ಸವ ಏ.4ರಿಂದ 14ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 15ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ. ಫೆ.27ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4