Author: admin

ಬೆಳಗಾವಿ : ಖ್ಯಾತ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೊಡ್ಡಣ್ಣವರ್ ಬ್ರದರ್ಸ್​ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿಗೆ ದೊಡ್ಡಣ್ಣವರ್ ಕುಟುಂಬಸ್ಥರನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಮನೆ, ಕಚೇರಿ ಮೇಲೆ, ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಉದ್ಯಮಿ ಅಜಿತ್ ಪಟೇಲ, ಗಣೇಶ ಪುರದಲ್ಲಿರುವ ಅಶೋಕ ಐರಾನ್ ಕಂಪನಿ ಮಾಲೀಕ ಅಶೋಕ ಹುಂಬರವಾಡಿ ಮನೆ ಮೇಲೂ ದಾಳಿ ನಡೆದಿದೆ. ದೊಡ್ಡಣ್ಣವರ ಕುಟುಂಬದವರು ಎರಡು ಸಕ್ಕರೆ ಕಾರ್ಖಾನೆ, ಐರನ್ ಹಾಗೂ ಗ್ರೈನೆಟ್ ಉದ್ಯಮದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ‌. ಅವರ ಉತ್ಪನ್ನಗಳು ವಿದೇಶಗಳಿಗೂ ರಫ್ತಾಗುತ್ತವೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳ ತಂಡ ದಾಖಲೆಗಳು, ಆಸ್ತಿಪಾಸ್ತಿ ಪರಿಶೀಲನೆ‌ ಶುರು ಮಾಡಿದ್ದಾರೆ. ನಮ್ಮತುಮಕೂರಿನ…

Read More

ವಾಷ್ಟಿಂಗನ್: ಹೊರ ದೇಶಗಳ ಮೇಲೆ ಸುಂಕವನ್ನು ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಚೀನಾ, ಭಾರತ ಮತ್ತು ಬ್ರೆಜಿಲ್‌ ದೇಶಕ್ಕೆ ಹೆಚ್ಚು ಸುಂಕ ವಿಧಿಸಲು ಅಮೆರಿಕ ಮುಂದಾಗಿದೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾದ ಬಳಿಕ ಸೋಮವಾರ ಫ್ಲೋರಿಡಾದ ರಿಟ್ರೀಟ್ ನಲ್ಲಿ ರಿಪಬ್ಲಿಕನ್ನರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ನಮಗೆ ನಿಜವಾಗಿಯೂ ಹಾನಿಕಾರವಾಗಿರುವ ಹೊರಗಿನ ದೇಶಗಳು ಮತ್ತು ಜನರ ಮೇಲೆ ಸುಂಕವನ್ನು ಹಾಕಲಿದ್ದೇವೆ ಎಂದಿದ್ದಾರೆ. ಇತರ ರಾಷ್ಟ್ರಗಳು ಏನು ಮಾಡುತ್ತಾರೆ ಎಂಬುದನ್ನು ನೋಡಿ. ಚೀನಾ ಮೊದಲ ಸುಂಕ ಹೆಚ್ಚಳದ ರಾಷ್ಟ್ರವಾಗಿದೆ. ನಂತರ ಭಾರತ, ಬ್ರೆಜಿಲ್ ಸೇರಿದಂತೆ ಇತರ ಹಲವು ದೇಶಗಳಿವೆ. ನಮಗೆ ಅಮೆರಿಕ ಮೊದಲ ಆದ್ಯತೆಯಾಗಿರುವುದರಿಂದ ಅಂತಹ ದೇಶಗಳ ಮೇಲೆ ಸುಂಕವನ್ನು ವಿಧಿಸಲಾಗುವುದು. ಇದರಿಂದ ನಮ್ಮ ಬೊಕ್ಕಸಕ್ಕೆ ಹಣ ಬರಲಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನರಾಗಿದ್ದಾರೆ ಎಂದು ಮಂಗಳವಾರ ತಿಳಿದುಬಂದಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ತಡರಾತ್ರಿ ವಿಧಿವಶರಾಗಿದ್ದಾರೆ. ದೇವಸ್ಥಾನವೊಂದರ ಮುಂದೆ ಅಂಧ ಸಹೋದರಿಯರಾದ ಮಂಜಮ್ಮ-–ರತ್ನಮ್ಮ ಅವರು ಹಾಡುತ್ತಿದ್ದರು. ಬಳಿಕ ʼಸರಿಗಮಪʼ ಶೋನಲ್ಲಿ ಭಾಗಿಯಾದ ಬಳಿಕ ಇಬ್ಬರೂ ಜನಪ್ರಿಯತೆ ಪಡೆದುಕೊಂಡಿದ್ದರು. ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ. ಇಬ್ಬರೂ ಅಕ್ಕ-ತಂಗಿ. ಹುಟ್ಟಿನಿಂದ ಇಬ್ಬರಿಗೂ ಕಣ್ಣಿಲ್ಲ. ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಂಗೀತ ಕಲಿತಿಲ್ಲ. ಹೊಟ್ಟೆಪಾಡಿಗಾಗಿ ಹಾಡಲು ಆರಂಭಿಸಿದವರಾಗಿದ್ದರು.  ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ರತ್ನಮ್ಮರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಮತ್ತು ಪಾಕ್ಷಿಕ ಆಚರಣೆ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಜನವರಿ 30ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿ ನೀಡಲು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳು ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು, ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಯನ್ನು ನೀಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಪೂರಕ ದಾಖಲಾತಿಗಳೊಂದಿಗೆ ಜನವರಿ 6ರೊಳಗಾಗಿ ನೇರವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2956624ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ಜಿಲ್ಲೆ ಪಾವಗಡ ತಾಲ್ಲೂಕಿನ ತಿರುಮಣಿ ಸಮೀಪ ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ಬಂಡೆ ಬ್ಲಾಸ್ಟ್ ದುರಂತ ಸೋಮವಾರ ಸಂಜೆ 4 ಗಂಟೆಯಲ್ಲಿ ಸಂಭವಿಸಿದೆ. ಈ ಘಟನೆದಲ್ಲಿ ರಾಯಚೂರು ಮೂಲದ ಬಸವರಾಜು ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಮತ್ತು ಅಚ್ಚಮ್ಮನಹಳ್ಳಿಯ ಶಿವಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ವಿವರ: KSPDCL ನಿಂದ 1002 ಎಕರೆ ಪ್ರದೇಶವನ್ನು  ಸೋಲಾರ್ ಪಾರ್ಕ್ ನಿರ್ಮಾಣಕ್ಕೆ JSW ಕಂಪನಿಗೆ ನೀಡಲಾಗಿತ್ತು,  ಪಾರ್ಕ್‌ ನಿರ್ಮಾಣಕ್ಕಾಗಿ ಬಂಡೆ ಬ್ಲಾಸ್ಟ್ ಮಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಸಮೀಪದಲ್ಲಿ ಇದ್ದ ಬಸವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದು ಕಾರ್ಮಿಕ ಶಿವಯ್ಯ ಗಂಭೀರ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ, ಇದರಿಂದಾಗಿ ಅಕ್ಕಪಕ್ಕದ ಜಾಗದಲ್ಲಿ ಹಾಗೂ ಬೆಟ್ಟಕ್ಕೂ ಬೆಂಕಿ ಹಬ್ಬಿದ್ದು, ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಆದರೆ ಪೊಲೀಸರು ಸ್ಥಳೀಯರನ್ನು ಸ್ಥಳಕ್ಕೆ ಬರದಂತೆ ತಡೆದಿದ್ದು, ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನ ಬ್ಲಾಸ್ಟ್ ಮಾಡುವ ವೇಳೆ ಬಳಸಿರುವುದರಿಂದ ದುರಂತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ KSPSCL Aee Mahesh ಗ್ರಾಮಾಂತರ ಸಿಪಿಐ ಗಿರೀಶ್ ಬೇಟೆಯಾಡಿ…

Read More

ತುಮಕೂರು:   ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರರೂ ನೈತಿಕ ಮತದಾನದ ದೃಢಸಂಕಲ್ಪ ಹೊಂದಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಕರೆ ನೀಡಿದರು. ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆ ದೇಶದ ಸುವ್ಯವಸ್ಥೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹೊಂದಬೇಕು. ಚುನಾವಣೆಯಲ್ಲಿ ನ್ಯಾಯಸಮ್ಮತವಾಗಿ, ಪ್ರಾಮಾಣಿಕವಾಗಿ ಮತ ಚಲಾಯಿಸುವ ಮೂಲಕ ದೇಶದ ಭದ್ರತೆಗೆ ಕಾರಣಕರ್ತರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ರಾಷ್ಟ್ರದ ಮುನ್ನಡೆಗೆ ಮತದಾನದ ಹಕ್ಕು ಅತ್ಯವಶ್ಯ:  ಡೀಸಿ ಶುಭ ಯಾವುದೇ ರಾಷ್ಟ್ರವನ್ನು ಮುನ್ನಡೆಸಲು ಪ್ರತಿಯೊಬ್ಬ ಪ್ರಜೆಯೂ ಮತದಾನದ ಹಕ್ಕು ಹೊಂದುವುದು ಅತ್ಯಾವಶ್ಯವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಲ್ಲಿ 18 ವರ್ಷ ತುಂಬಿದ…

Read More

ತುಮಕೂರು: ಲೋಕಚರಿತ ರಂಗಕೇಂದ್ರ (ರಿ) ಚಿಕ್ಕದಾಳವಟ್ಟ ಮತ್ತು ಸಮ್ಮತ ಥೀಯೇಟರ್ (ರಿ) ಆಯೋಜಿಸುವ ನಾಟಕ ‘ತಿಂಡಿಗೆ ಬಂದ ತುಂಡೇರಾಯ ‘ ಜನವರಿ 28ರಂದು ತುಮಕೂರಿನ ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ  6 ಗಂಟೆಗೆ ನಡೆಯಲಿದೆ. ಬರ್ಟೋಲ್ಟ್ ಬ್ರೆಕ್ಟ್ ರಚನೆಯ ಈ ನಾಟಕವನ್ನು ಶಕೀಲ್ ಅಹಮ್ಮದ್ ನಿರ್ದೇಶಿಸಿದ್ದಾರೆ. ಅನುಷ್ ಶೆಟ್ಟಿ, ಮುನ್ನ ಮೈಸೂರು ಸಂಗೀತ ನೀಡಿದ್ದಾರೆ. ರಂಗ ವಿನ್ಯಾಸ / ವಸ್ತ್ರ ವಿನ್ಯಾಸವನ್ನು ಶ್ವೇತಾ ರಾಣಿ ಎಚ್. ಕೆ. ಮಾಡಲಿದ್ದಾರೆ. ಶಕೀಲ್ ಅಹ್ಮದ್ : ಲೋಣಿ ಬಿ.ಕೆ. (ಬಿಜಾಪೂರ) ಊರಿನವರಾದ ಶಕೀಲ್ ಅಹ್ಮದ್, ಸಾಂಪ್ರದಾಯಿಕ ಮತ್ತು ಸಮಕಾಲೀನ ರಂಗಭೂಮಿಯ ತಂತ್ರಗಳನ್ನು ಬೆಸೆಯುವುದರ ಮೂಲಕ ತಮ್ಮದೇ ಆದ ರಂಗ ತರಬೇತಿಯನ್ನು ಸೃಷ್ಟಿಸಿದ್ದಾರೆ. ನೀನಾಸಂ ಹಾಗೂ ಸಿಂಗಾಪೂರಿನ ಇಂಟರ್ ಕಲ್ಟರ್ ಥಿಯೇಟರ್ ಇನ್ಸಿಟ್ಯೂಟ್ (ಐ.ಟಿ.ಐ) ನಲ್ಲಿ ಅಭಿನಯ ಕುರಿತು ತರಬೇತಿ ಪಡೆದಿರುತ್ತಾರೆ. “ಜನಮನದಾಟ” ತಂಡದಲ್ಲಿ ನಟರಾಗಿ, ಕರ್ನಾಟಕದ ಹಲವು ತಂಡಗಳಲ್ಲಿ ನಟ ಹಾಗೂ ತರಬೇತುದಾರರಾಗಿ ಮತ್ತು ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಇವರ ನಿರ್ದೇಶನದ ನಾಟಕಗಳು-ಉಳಿದ ದೇಹಗಳು, ರೇಖೆಗಳು, ಮದುವೆ…

Read More

ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಉದ್ಯೋಗ ಮೇಳದಲ್ಲಿ ಆಯ್ಕೆಯಾದ 150ಕ್ಕೂ ಹೆಚ್ಚು ನಿರುದ್ಯೋಗಿ ಯುವಕರಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ವಿತರಣೆ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಎಂಪ್ರೆಸ್ ಬಾಲಕಿಯರ ಕಾಲೇಜಿನಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಭೂ ಮಂಜೂರಾತಿ ಪೋಡಿ ದುರಸ್ತಿ ದಾಖಲೆ ಮತ್ತು ಪಹಣಿ ವಿತರಣೆ, ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ದಿಬ್ಬೂರು ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಕಳೆದ ಜನವರಿ 9ರಂದು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಆಯ್ಕೆಯಾದ ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ವಿತರಣೆ ಮಾಡಿದ ನಂತರ ಮಾತನಾಡಿದ ಅವರು, ಪ್ರತಿ ವರ್ಷ ಲಕ್ಷಾಂತರ ಯುವಕರು ಪದವಿ ಪೂರ್ಣಗೊಳಿಸುತ್ತಿದ್ದಾರೆ. ಅಂಥವರಿಗೆ ಉದ್ಯೋಗ ಸಿಗುತ್ತಿಲ್ಲ. ಬಿ.ಎ.ಪದವಿ ಮಾಡಿದವರಿಗೆ ತಾಂತ್ರಿಕ ಉದ್ಯೋಗ ದೊರೆಯುವುದಿಲ್ಲ. ಇದು…

Read More

ವಿಶೇಷ ವರದಿ/ ತುಮಕೂರು: ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26ರ ಭಾನುವಾರ ನಡೆದ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪಥ ಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯ ಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು. ನಿಗಧಿತ ರೂಪು–ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ…

Read More