Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ತುಮಕೂರು: ನಗರದ ಕನ್ನಡ ಭವನದಲ್ಲಿ 76ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ನೆರವೇರಿಸಿ, “ನಮ್ಮ ಸಂವಿಧಾನ- – ನಮ್ಮ ಶಕ್ತಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾಗಿ ಅನುಷ್ಠಾನಗೊಂಡಿರುವ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನ” ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ತಿಳಿಸಿದರು. ಸಂವಿಧಾನದ ಆಶಯ ಸಮಾನತೆ–ಐಕ್ಯತೆ–ಭ್ರಾತೃತ್ವ ಬಲಿಷ್ಠ ಭಾರತದ ಪ್ರಗತಿಯೇ ಆಗಿದೆ. ದೇಶ 75 ವರ್ಷಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದರೂ ಸಾಧಿಸಬೇಕಾದದ್ದು ಇನ್ನೂ ಇದೆ. ವಿಜ್ಞಾನ ತಂತ್ರಜ್ಞಾನ, ಆರ್ಥಿಕತೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಸಾಧಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಸ್ಥಾನವನ್ನು ಪಡೆಯುತ್ತಿದೆ. ಭಾರತೀಯರಾದ ನಾವು ಸಮಾನತೆ–ಸರಳತೆ–ಐಕ್ಯತೆಗಾಗಿ ಶ್ರಮಿಸೋಣ ಎಂದು ತಿಳಿಸಿದರು. ಚಿತ್ರದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಜಿಲ್ಲಾ ಸಂಚಾಲಕ ಜಿ.ಹೆಚ್.ಮಹದೇವಪ್ಪ, ತಾಲ್ಲೂಕು ಕಸಾಪ ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ಪದಾಧಿಕಾರಿಗಳಾದ ಚಾಂದು ಮುಂತಾದವರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಹಾಗೂ 195ನೇ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಹುತಾತ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮುಖೇನ ಗೌರವ ಸಮರ್ಪಿಸಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಶುಭಕಲ್ಯಾಣ್, ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು, ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಮೋಹನ್ ಕುಮಾರ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ರಾಜಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೇಲ್ವಿಚಾರಕರಾದ ಡಿ.ವಿ. ಸುರೇಶ್ಕುಮಾರ್, ಕುರುಬ ಸಮುದಾಯದ ಮುಖಂಡರಾದ ಕೆಂಪರಾಜು, ಅನಿಲ್ ಮೊದಲಾದವರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಭಾರತದ ಸಂವಿಧಾನ ಜಗತ್ತಿನಲ್ಲೇ ಏಕೈಕ ಮಾನವೀಯ, ಸಮೃದ್ಧ, ಅಪ್ರತಿಮ ಸಂವಿಧಾನವಾಗಿದೆ. ಸಂವಿಧಾನದ ಮುಖ್ಯಧ್ಯೇಯೋದ್ದೇಶ ನ್ಯಾಯ, ಸ್ವಾತಂತ್ರ‍್ಯ, ಸಮಾನತೆಯನ್ನು ಪ್ರತಿಯೊಬ್ಬ ಭಾರತೀಯ ನಾಗರಿಕನಿಗೆ ದೊರೆಯುವಂತೆ ಮಾಡುವುದಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಾ. ಹೆಚ್.ಬಿ.ಪ್ರಭಾಕರ ಶಾಸ್ತ್ರಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ದೇಶದ ಸರ್ವೋತಮುಖ ಅಭಿವೃದ್ಧಿಯಲ್ಲಿ ಸಂವಿಧಾನದ ಪಾತ್ರ ಮಹತ್ವದ್ದು. ಸರ್ವರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ನೀಡುವ ಆಶಯ ಹೊಂದಿದ ಸಂವಿಧಾನವನ್ನು ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲಾಗುತ್ತಿದೆ. ಹೋರಾಟಗಳು, ಚಳುವಳಿಗಳು ಮೌಲ್ಯಯುತವಾಗಿರಬೇಕೆ ವಿನಾ ದಿಕ್ಕು ತಪ್ಪಬಾರದು ಎಂದರು. ಶಿಕ್ಷಣದಲ್ಲಿ ಅಸಮಾನತೆ ಹೆಚ್ಚಿದೆ. ಪೇಪರ್ ಹಾಕುವ ಹುಡುಗ, ಕೂಲಿಕಾರರ ಮತ್ತು ಬಡಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಶಿಕ್ಷಣಕ್ಕೆ ಸಮಾನತೆ ತರಬೇಕಿದೆ. ಶಿಕ್ಷಣದಲ್ಲಿ ಸಮಾನತೆ ಎಲ್ಲಿದೆ ಎಂದು ಪ್ರಶ್ನಿಸಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿದೇಶಿಗರಿಗೆ ಭಾರತದ ಕುರಿತು ಒಲವು ಇದೆ. ನಮ್ಮ ಬದಲಾವಣೆ ದೇಶದ ಸುಧಾರಣೆಯಾಗಿದೆ. ಭಾರತದ ಕುರಿತು…
ತುಮಕೂರು: ಸಿದ್ಧಾರ್ಥ ಸಮೂಹ ಸಂಸ್ಥೆಗಳಾದ ಮೆಡಿಕಲ್, ಇಂಜಿನಿಯರಿಂಗ್ ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಕ್ಯಾಂಪಸ್ ನಲ್ಲಿ 76ನೇ ಗಣರಾಜ್ಯೋತ್ಸವನ್ನು ಸರಳ ಮತ್ತುಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತುಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಗೃಹ ಸಚಿವರು ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಜಿಪರಮೇಶ್ವರ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಾಹೇ ವಿವಿಯ ಕಾಲೇಜುಗಳ ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಪೀಠಿಕೆಯ ಪ್ರಮಾಣವಚನ ಭೋಧಿಸಿದರು. ನಂತರ ಮಾತನಾಡಿದ ಅವರು,ಭಾರತದ ಸಂವಿಧಾನಜಾರಿಗೆ ಬಂದು ಇಂದಿಗೆ 76 ವರ್ಷಕಳೆದಿದ್ದು, ಸರ್ವರಿಗೂ ಸಮನಾದ ಹಕ್ಕು ಬಾಧ್ಯತೆಗಳನ್ನು ಕಲ್ಪಿಸಿರುವ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದೆ. ನಾವೆಲ್ಲರು ಸಂವಿಧಾನದಡಿಯಲ್ಲಿ ಜೀವನ ಸಾಗಿಸುತ್ತಿದ್ದು, ಅದರ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತುಅದರ ಮೂಲ ಉದ್ದೇಶಗಳನ್ನು ಅರಿತು ಮುನ್ನಡೆಯಬೇಕಿದೆ ಎಂದು ಕರೆ ನೀಡಿದರು. ಆರ್ಥಿಕತೆ ಮತ್ತುತಾಂತ್ರಿಕ ಪ್ರಗತಿ ಸಾಧನೆಯಲ್ಲಿ ಭಾರತ ಪ್ರಪಂಚದಲ್ಲಿಯೇ 3ನೇ ಸ್ಥಾನ ಪಡೆದಿದೆ. ಮುಂದೆ ಇದೇ ರೀತಿ ಅಭಿವೃದ್ದಿ ಸಾಧಿಸಲು ಯುವ ಸಮದಾಯ ಕ್ರಿಯಾತ್ಮಕ ಕೆಲಸಗಳತ್ತ…
ತುಮಕೂರು: ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸ ಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯಇದೆಯೋ ಅದನ್ನು ಕಂಡುಕೊಂಡು ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ. ಯಾವ ದೇಶದಲ್ಲಿಯೂ ಸರ್ಕಾರವೇ ಎಲ್ಲರಿಗೂ ಉದ್ಯೋಗ ಕೊಡುತ್ತಿಲ್ಲ ಎಂದು ಇನ್ಫೋಸಿಸ್ ಸಂಸ್ಥೆಯ ಸಹಸಂಸ್ಥಾಪಕಎನ್. ಆರ್.ನಾರಾಯಣ ಮೂರ್ತಿಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯವು ಶನಿವಾರ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ನಾಯಕತ್ವ ಗುಣವುಳ್ಳವನನ್ನು ಸಮಾಜ ಗೌರವಿಸುತ್ತದೆ. ಉತ್ತಮ ಮೌಲ್ಯಗಳು, ಪ್ರಾಮಾಣಿಕತೆಯುಳ್ಳ ಶಿಕ್ಷಣವು ನಿಮ್ಮನ್ನು ಉತ್ತಮ ನಾಯಕನನ್ನಾಗಿಸುತ್ತದೆ. ಆ ನಾಯಕತ್ವವು ಉದ್ಯೋಗವನ್ನು ಕಲ್ಪಿಸುತ್ತದೆ.ಆಹಾರ, ವಸತಿ, ಶಿಕ್ಷಣ ಇವುಗಳ ಅಭಿವೃದ್ಧಿಯಾಗದ ಹೊರತು ದೇಶವು ಅಭಿವೃದ್ಧಿಯಾಗದು ಎಂದರು. ಖಾಸಗಿ ವಲಯ ಬಡತನವನ್ನುದೂರ ಮಾಡುವಲ್ಲಿ ತಕ್ಕಮಟ್ಟಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತೀಯ ಜನಸಂಖ್ಯೆಯಲ್ಲಿ ಇಂದಿಗೂ ಶೇ.60ರಷ್ಟು ಜನರಲ್ಲಿ ಬಡತನಕಾಡುತ್ತಿದ್ದುಅದನ್ನು ದೂರ ಮಾಡಲು ಸಾಧ್ಯವಾಗಿಲ್ಲಎಂದರು. ನಾವು ವರ್ತಮಾನದ ತಂತ್ರಜ್ಞಾನವನ್ನುಅರಿಯುವ ಪ್ರಯತ್ನ ಮಾಡಬೇಕು. ಸಮಯದ ಸದುಪಯೋಗ, ನಾಳೆಗೆ ನಮ್ಮನ್ನುಉತ್ತಮ ಪಡಿಸಿಕೊಳ್ಳುವತ್ತ ಗಮನವಹಿಸಬೇಕು. ಸರ್ಕಾರದ ಕೆಲಸ ಉದ್ಯೋಗವನ್ನು ಸೃಷ್ಟಿ ಮಾಡುವುದರ ಜೊತೆಗೆ ಉತ್ತಮ ಉದ್ಯೋಗದ…
ಹುಬ್ಬಳ್ಳಿ: ಪತ್ನಿ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಪೀಟರ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿರುವ ಪೀಟರ್ ಹೆಂಡತಿ ಟಾರ್ಚರ್ ನಿಂದ ನಾನು ಸಾಯುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಅಲ್ಲದೇ ತನ್ನ ಶವ ಪೆಟ್ಟಿಗೆಯಲ್ಲಿ ಹೆಂಡತಿ ಕಾಟ ತಾಳಲಾರದೆ ಸತ್ತನು ಎಂದು ಬರೆಯಲು ಡೆತ್ ನೋಟ್ ನಲ್ಲಿ ತಿಳಿಸಿದ್ದು, ಅಂತೆಯೇ ಕುಟುಂಬಸ್ಥರು ಶವ ಪೆಟ್ಟಿಗೆಯಲ್ಲಿ ಬರೆಸಿದ್ದಾರೆ. ಪೀಟರ್ ಹಾಗೂ ಪತ್ನಿ ಪಿಂಕಿ ದೂರವಾಗಿದ್ದರು. ಇವರು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು ಎನ್ನಲಾಗಿದೆ. ಪತ್ನಿ ಪಿಂಕಿ ವಿಚ್ಛೇದನಕ್ಕೆ 20 ಲಕ್ಷ ರೂಪಾಯಿ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಪ್ರಯಾಗ್ ರಾಜ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹಾ ಕುಂಭಮೇಳದಲ್ಲಿ ಸಾಧುಗಳ ಜೊತೆಗೆ ಪವಿತ್ರ ಸ್ನಾನ ಮಾಡಿದರು. ತ್ರಿವೇಣಿ ಸಂಗಮದಲ್ಲಿಪವಿತ್ರ ಸ್ನಾನ ಮಾಡಿದ ನಂತರ ಶಾ ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್ ಗೆ ಭೇಟಿ ನೀಡಿದರು. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಿದರು. ಮಹಾ ಕುಂಭಮೇಳದಲ್ಲಿ ಹಲವಾರು ಗಣ್ಯರು ಪವಿತ್ರಾ ಸ್ನಾನ ಮಾಡಲಿದ್ದಾರೆ. ಫೆಬ್ರವರಿ 5 ರಂದು ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೈಸೂರು: SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ದೀಪಿಕಾ (15) ಮೃತ ವಿದ್ಯಾರ್ಥಿನಿಯಾಗಿದ್ದು, ಈಕೆ ನಾಗರಾಜ್, ವಸಂತ ದಂಪತಿ ಪುತ್ರಿಯಾಗಿದ್ದಾರೆ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಅನಾರೋಗ್ಯ ನಿಮಿತ್ತ ವಿದೇಶದಲ್ಲಿ ಶಸ್ತ್ರಚಿಕಿತ್ಸೆಗೆ ಪಡೆದು ಗುಣಮುಖರಾಗಿ ಬಂದಿರುವ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. ಭೇಟಿ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಶಿವರಾಜ್ ಕುಮಾರ್ ಅವರು ಮತ್ತೆ ಹಿಂದಿನಂತೆ ಕ್ರಿಯಾಶೀಲರಾಗಿರುವುದು ಕಂಡು ಖುಷಿಯಾಯಿತು ಎಂದು ಹೇಳಿದ್ದಾರೆ. ಅಭಿಮಾನಿಗಳ ಹರಕೆ — ಹಾರೈಕೆ, ಆತ್ಮಬಲದಿಂದ ಅನಾರೋಗ್ಯವನ್ನು ಗೆದ್ದು ಬಂದಿರುವ ಶಿವರಾಜ್ ಕುಮಾರ್ ಅವರ ಮುಂದಿನ ಜೀವನ ಸುಖ — ಶಾಂತಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬಿಗ್ ಬಾಸ್ ತೊರೆಯುವ ಬಗ್ಗೆ ಕಿಚ್ಚ ಸುದೀಪ್ ಎರಡು ಬಾರಿ ಟ್ವೀಟ್ ಮಾಡಿದ್ದರು. ಹೀಗಾಗಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಗ್ರ್ಯಾಂಡ್ ಫಿನಾಲೆ ವೇದಿಕೆಯ ಮೇಲೆ ತಮ್ಮ ವಿದಾಯವನ್ನು ಅವರು ಹೇಳುತ್ತಾರೆ ಎಂದು ಜನ ನಿರೀಕ್ಷಿಸಿದ್ದರು. ಆದರೆ ಬಿಗ್ ಬಾಸ್ ವೇದಿಕೆಯಲ್ಲಿ ಕಿಚ್ಚ ಸುದೀಪ್ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ, ಆದರೆ, ಕಲರ್ಸ್ ಕನ್ನಡಕ್ಕೆ ಹಾಗೂ ಮುಂದೆ ಬರುವ ಬಿಗ್ ಬಾಸ್ ಸೀಸನ್ ಗಳನ್ನು ಬೆಂಬಲಿಸುವಂತೆ ಕಿಚ್ಚ ಸುದೀಪ್ ಕೋರಿದ್ದಾರೆ. ಸುದೀಪ್ ಅವರು ಬಿಗ್ ಬಾಸ್ ಪೂರ್ಣಗೊಳ್ಳುವಾಗ ಎಲ್ಲರಿಗೂ ಧನ್ಯಾವಾದ ಹೇಳಿದ್ದಾರೆ. ತಮ್ಮ ಸಹಾಯಕ್ಕೆ ನಿಂತವರಿಗೆ ಹಾಗೂ ಶೋನ ಉತ್ತಮವಾಗಿ ಮೂಡಿ ಬರಲು ಕಾರಣ ಆದವರಿಗೆ ಸುದೀಪ್ ಧನ್ಯವಾದ ಹೇಳಿದರು. 119 ದಿನಗಳ ಜರ್ನಿಗೆ ಪೂರ್ಣ ವಿರಾಮ ಹಾಕುವ ಸಮಯ. ನನ್ನ ಸ್ಟಾಫ್ ಗೆ ಧನ್ಯವಾದ. ಡಿಸೈನರ್ ಸಾಗರ್ ಗೆ ಥ್ಯಾಂಕ್ಸ್ ಎಂದು ಕಿಚ್ಚ ಹೇಳಿದರು. ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಬಿಟ್ಟರೆ ಬೇರೆ ಯಾರೂ ಸೂಕ್ತವಾಗಲು…