Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ED) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಕೌಟುಂಬಿಕ ಗಲಾಟೆ ಹಿನ್ನೆಲೆ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ತಾಲೂಕಿನ ಜಕ್ಕೆನಹಳ್ಳಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ದುರ್ಗದಹಳ್ಳಿ ಗ್ರಾಮದ ತಿಮ್ಮರಾಜು ಆತ್ಮಹತ್ಯೆಗೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಜಕ್ಕೆನಹಳ್ಳಿ ಗ್ರಾಮದ ಹೆಂಡತಿ ಮನೆಗೆ ತಿಮ್ಮರಾಜು ಬಂದಿದ್ದರು. ಮೊನ್ನೆ ರಾತ್ರಿ ಗಂಡ ಹೆಂಡತಿ ಗಲಾಟೆಯಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಹೆಚ್.ಡಿ.ಕೋಟೆ: ಭತ್ತದ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಭತ್ತದ ಹುಲ್ಲಿನ ಮೆದೆಗೆ ಭಸ್ಮವಾದ ಘಟನೆ ತಾಲೂಕಿನ ಹೆಚ್.ಮಟಕೆರೆಯಲ್ಲಿ ನಡೆದಿದೆ. ಜನವರಿ 26ರಂದು ಈ ಘಟನೆ ನಡೆದಿದೆ. ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ಹೆಚ್. ಮಟಕೆರೆ ಗ್ರಾಮದ ರಾಮನಾಯಕ್ ಕೋಂ ಲೇಟ್ ಮರಿ ನಾಯಕ್ ರವರಿಗೆ ಸೇರಿದ ಎರಡು ದೊಡ್ಡದಾದ ಭತ್ತದ ಹುಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಬೂದಿಯಾಗಿ ಹೋಗಿರುತ್ತದೆ. ಜೆಸಿಬಿ ವಾಹನವನ್ನು ಕರೆಸಿ ಸತತ ಆರು ಗಂಟೆಗಳ ಕಾಲ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟು ಬೆಂಕಿ ನಂದಿಸಿದರು. ಹುಲ್ಲಿನ ಮೆದೆ ಕಳೆದುಕೊಂಡ ರೈತನ ಕಣ್ಣೀರು ಕೋಡಿಯಾಗಿ ಹರಿಯುವುದನ್ನು ಕಂಡು ಜನರೂ ಸಂಕಟ ಪಟ್ಟರು. ಹುಲ್ಲನ್ನು ಕಳೆದುಕೊಂಡ ರೈತನಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಆತ ಚೇತರಿಸಿಕೊಳ್ಳಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಚರಣೆಯಲ್ಲಿ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾದ ಎಂ.ಜಿ.ಸೋಮಣ್ಣ, ಸಿಬ್ಬಂದಿಯವರಾದ ಅಶೋಕ್, ರವಿಪ್ರಸಾದ್, ಮುನಿಸಿದ್ದ ನಾಯಕ, ಸಂಗಮೇಶ್ ಭಾಗಿಯಾಗಿದ್ದರು. ವರದಿ: ಮಲಾರ…
ನೈಜೀರಿಯಾ: ತೈಲ ಟ್ಯಾಂಕರ್ ಸ್ಫೋಟಗೊಂಡು 18 ಮಂದಿ ಸಾವನ್ನಪ್ಪಿರುವ ಆಫ್ರಿಕನ್ ದೇಶ ನೈಜೀರಿಯಾದಲ್ಲಿ ನಡೆದಿದೆ. ಘಟನೆಯ ಪರಿಣಾಮ 17 ವಾಹನಗಳು ಸುಟ್ಟು ಭಸ್ಮವಾಗಿವೆ. ಟ್ಯಾಂಕರ್ ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಆಗ್ನೇಯ ರಾಜ್ಯವಾದ ಎನುಗುದಲ್ಲಿನ ಎನುಗು–ಒನಿತ್ಶಾ ಎಕ್ಸ್ ಪ್ರೆಸ್ ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 10 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಅಂಗುಲ್: ಒಡಿಶಾದ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಭಾನುವಾರ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ವೇಳೆ ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 50 ರಿಂದ 60 ಮಂದಿಯ ಪೈಕಿ ಇಬ್ಬರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ಜಂಟಿ ಕಾರ್ಯಾಚರಣೆ ನಡೆಸಿ ಗಂಭೀರವಾಗಿ ಗಾಯಗೊಂಡಿರುವ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪುಣೆ: ಗುಯಿಲಿನ್–ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಒಳಗಾದ ಶಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರದಲ್ಲಿ ಈ ಸೋಂಕಿಗೆ ಬಹುಶಃ ಮೊದಲ ಸಾವು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಪುಣೆಯಲ್ಲಿ ನರ ಅಸ್ವಸ್ಥತೆ ರೋಗಿಗಳ ಸಂಖ್ಯೆ 100 ದಾಟಿದೆ. ಸೋಲಾಪುರದ ಮೂಲದ ವ್ಯಕ್ತಿ ಪುಣೆಗೆ ಬಂದಿದ್ದರು. ಅಲ್ಲಿ ಅವರಿಗೆ ಈ ಕಾಯಿಲೆ ತಗುಲಿದೆ ಎಂದು ಶಂಕಿಸಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚಿನ ವಿವರಗಳನ್ನುನೀಡಿಲ್ಲ ಪುಣೆಯಲ್ಲಿ ಪ್ರಸ್ತುತ ಜಿಬಿಎಸ್ ಪ್ರಕರಣಗಳ ಸಂಖ್ಯೆ 101 ಕ್ಕೆ ಏರಿದೆ, ಇದರಲ್ಲಿ 68 ಪುರುಷರು ಮತ್ತು 33 ಮಹಿಳೆಯರು ಇದ್ದಾರೆ. ಈ ಪೈಕಿ 16 ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಹೆಬ್ಬೂರು: ವಿಶ್ವಜ್ಞಾನಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ & ಶ್ರೇಷ್ಟ ದಾರ್ಶನಿಕರಾದ ಮಹರ್ಷಿ ವಾಲ್ಮೀಕಿ ರವರ ಕಂಚಿನ ಪುತ್ಥಳಿ ನಿರ್ಮಾಣದ ಭೂಮಿ ಪೂಜಾ ಕಾರ್ಯಕ್ರಮ ಹೆಬ್ಬೂರಿನಲ್ಲಿ ನಡೆಯಿತು. ಭೂಮಿ ಪೂಜೆ ಕಾರ್ಯಕ್ರಮಕ್ಕೆ ವಾಲ್ಮೀಕಿ ಮಹಾಸಂಸ್ಥಾನ ಮಠ ಸುಕ್ಷೇತ್ರ ಶಿಡ್ಲೆಕೋಣದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಶ್ರೀ ಸಂಜಯಕುಮಾರನಂದ ಸ್ವಾಮೀಜಿ, ಇಸ್ಲಾಂ ಸಮುದಾಯದ ಧರ್ಮಗುರುಗಳು ಹಾಗೂ ವೆಂಕಟಹನುಮಯ್ಯ ನವರು ಹಾಗೂ ಇನ್ನು ಹಲವಾರು ಗಣ್ಯರು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹರ್ಷಿ ವಾಲ್ಮೀಕಿ ರವರ ಪುತ್ಥಳಿಯ ಗುದ್ದಲಿ ಪೂಜೆಯನ್ನು ಮಾಡಬಾರದು ಎಂದು ತುಮಕೂರು ತಾಲೂಕಿನ EO ಹರ್ಷರವರು ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿ ಸುಮಾರು 3/4 ಗಂಟೆಗಳ ಕಾಲ ಅಡಚಣೆ ಮಾಡಿರುತ್ತಾರೆ, ಆದರೂ ಸಹ ಇಂತಹ ಬೆದರಿಕೆಗಳಿಗೆಲ್ಲ ಬೆದರುವುದಿಲ್ಲ ಎಂದ ಹೋರಾಟಗಾರರು ಗುದ್ದಲಿ ಪೂಜೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿಕೊಟ್ಟಿದ್ದ ಹಳ್ಳಿ ಹೈದ ಹನುಮಂತ ಬಿಗ್ ಬಾಸ್ ಟ್ರೋಫಿ ವಿಜೇತರಾಗಿದ್ದು, ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಟಾಪ್ ಐವರ ಪೈಕಿ ಮೊದಲಿಗೆ ಉಗ್ರಂ ಮಂಜು ಹೊರಹೋಗಿದ್ದರು. ಬಿಗ್ ಬಾಸ್ ಆರಂಭದಲ್ಲಿ ಉಗ್ರಂ ಮಂಜು ಉತ್ತಮವಾಗಿ ಆಡುತ್ತಿದ್ದು ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಮತ್ತು ರಜತ್ ಎಂಟ್ರಿ ನಂತರ ಮಂಜು ಉತ್ಸಾಹ ಕಳೆದುಕೊಂಡಿದ್ದರು. ಬರಬರುತ್ತಾ ಅವರ ಆಟ ಮಂಕಾಯಿತು. ಇನ್ನು ಟಾಪ್ ನಾಲ್ಕರಲ್ಲಿ ಹನುಮಂತ, ರಜತ್, ತ್ರಿವಿಕ್ರಮ್ ಮತ್ತು ಮೋಕ್ಷಿತ ಇದ್ದರು. ಈ ಪೈಕಿ ಮೋಕ್ಷಿತ ಹೊರಬಂದರು. ಇನ್ನು ಟಾಪ್ ಮೂವರಲ್ಲಿ ಘಟಾನುಘಟಿಗಳೇ ಇದ್ದರು. ಆದರೆ ರಜತ್ 2ನೇ ರನ್ನರ್ ಅಪ್ ಆಗಿ ಹೊರಬಂದರು. ಅಂತಿಮವಾಗಿ ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಅವರು ಹನುಮಂತ ಮತ್ತು ತ್ರಿವಿಕ್ರಮ್ ಅವರ ಕೈಗಳನ್ನು ಹಿಡಿದು ಹನುಮಂತನ ಕೈ ಅನ್ನು ಎತ್ತುವ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರನ್ನು…
ತುಮಕೂರು: ಮೈಕ್ರೋ ಫೈನಾನ್ಸ್ ಗಳಿಂದ ಜನರಿಗೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರೂಪಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂತಹ ಕಿರುಕುಳ ಬೆಳಕಿಗೆ ಬಂದ ಸಂದರ್ಭದಲ್ಲಿ ಪೊಲೀಸರಿಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳುವ ಕುರಿತಂತೆ ಅಧಿಕಾರವನ್ನು ನೀಡುವ ಅವಶ್ಯಕತೆ ಇದ್ದು, ಈ ಬಗ್ಗೆ ಕೂಡ ಹೆಚ್ಚಿನ ಅಧಿಕಾರ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಸಿಎಂ ನಾವು ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಇರುವ ಕಾನೂನನ್ನ ಭದ್ರ ಮಾಡುವಂತದ್ದು, ಮತ್ತೊಂದು ರಿಕವರಿ ಮಾಡುವವರು ಸಂಜೆ ನಂತರ ದಾಳಿ ಮಾಡೋದು, ಅವಾಚ್ಯ ಶಬ್ದ ಬಳಕೆಯಿಂದ ಕಿರುಕುಳಕ್ಕೆ ಕಡಿವಾಣ ಹಾಕಬೇಕಿದೆ ಎಂದರು. ಪೊಲೀಸರಿಗೆ ಎಕ್ಟ್ರಾ ಪವರ್ ಕೊಡೋಕೆ ರೆಡಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಈ ಕಾನೂನನ್ನ ತರಬೇಕು ಅಂತಾ ಒತ್ತಾಯ ಮಾಡ್ತೇವೆ. ಮುಖ್ಯಮಂತ್ರಿಗಳು ಸಹ ಪ್ರಧಾನಿಗಳಿಗೆ ಪತ್ರ ಬರೆಯುತ್ತೀನಿ ಅಂದಿದ್ದಾರೆ…
ತುಮಕೂರು: ತುಮಕೂರಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ಆಚರಣೆ ಮಾಡಿದ್ದೇವೆ. ಜಿಲ್ಲಾಡಳಿತ ಸೇರಿದಂತೆ ಎಲ್ಲರಿಗೂ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ರಾಜ್ಯದಲ್ಲಿ ಪ್ರತಿಷ್ಟಿತವಾದ ಜಿಲ್ಲೆ. ವಿಸ್ತೀರ್ಣದಲ್ಲಿ ತುಮಕೂರು ಮೂರನೇ ಸ್ಥಾನ ಪಡೆದುಕೊಂಡಿದೆ. 11 ವಿಧಾನಸಭಾ ಕ್ಷೇತ್ರಗಳು ತುಮಕೂರಿಗೆ ಬರುತ್ತೆ. 3 ಕ್ಷೇತ್ರಗಳಲ್ಲಿ ಸಂಸತ್ತು ಪ್ರಾತಿನಿಧ್ಯ ಪಡೆದುಕೊಂಡಿದೆ. ಬೆಂಗಳೂರಿಗೆ ಹತ್ತಿರವಿರುವ ವೇಗವಾಗಿ ಬೆಳೆಯುವ ಪಟ್ಟಣ ತುಮಕೂರು. ಮುಂದಿನ 10 ವರ್ಷದಲ್ಲಿ ಬೆಂಗಳೂರು ತುಮಕೂರಿಗೆ ಯಾವುದೇ ವ್ಯತ್ಯಾಸವಿರೋಲ್ಲ ಎಂದರು. ನಾವು ಸರ್ಕಾರಲದಲ್ಲಿ ಆ ಕೆಲಸ ಮಾಡ್ತಾ ಇದ್ದೇವೆ. ಬೇರೆ ಬೇರೆ ದೇಶಗಳಲ್ಲಿ 100 ಕಿಮೀ ಅಂತರದ ಪರಿಮಿತಿ ಇಟ್ಟುಕೊಂಡಿದ್ದಾವೆ. ವಿಮಾನ ನಿಲ್ದಾಣಗಳು 70 ಕಿಮೀ ಅಂತರದಲ್ಲಿ ಪರಿಮಿತಿ ಇರುತ್ತೆ. ತುಮಕೂರು ಸಹ ಬೆಂಗಳೂರಿಗೆ ಹೊಂದುಕೊಂಡಂತೆ ಬೆಳವಣೆಗೆ ಆಗುತ್ತೆ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡ್ತಾ ಇದೆ. ಈಗಾಗಲೇ ನಾನು ಮನವಿ ಮಾಡಿದ್ದೇನೆ ವಿಮಾನ ನಿಲ್ದಾಣವನ್ನ ತುಮಕೂರಿನ ಆಸುಪಾಸಿನಲ್ಲಿ ಮಂಜೂರು ಮಾಡಲು ಕೇಳಿದ್ದೇನೆ.…