Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಮಧುಗಿರಿ: ಇಂದು ಸಂವಿಧಾನ ಜಾರಿಗೆ ಬಂದ ದಿನ, ಸಂವಿಧಾನದಿಂದ ಸಾಮಾನ್ಯ ಜನತೆಗೆ ಮೂಲಭೂತ ಹಕ್ಕುಗಳನ್ನು ಮೀಸಲಾತಿಯ ಮೂಲಕ, ಸಾಮಾಜಿಕ ನ್ಯಾಯವನ್ನು ಡಾ.ಬಿ.ಆರ್. ಅಂಬೇಡ್ಕರ್ ನೀಡಿದರು ಎಂದು ಮಧುಗಿರಿ ತಾಲ್ಲೂಕ್ ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜುನ್ ಹೇಳಿದರು. ಗಣರಾಜ್ಯೋತ್ಸವ ಅಂಗವಾಗಿ ಶಾಲೆಯಲ್ಲಿ ಏರ್ಪಡಿಸಿದ್ದ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಬರಹಗಾರರಾದ ಎನ್.ಎಸ್.ಈಶ್ವರ್ ಪ್ರಸಾದ್ ಮಾತನಾಡಿ, ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳಲ್ಲಿ ಸಮಾನತೆ ನೀಡಿದರು. ಶಿಕ್ಷಣ ವ್ಯವಸ್ಥೆಯಲ್ಲಿ ಅಸಮಾನತೆ ಕಂಡುಬರುತ್ತದೆ. ಉಳ್ಳವರಿಗೆ ಖಾಸಗಿ ಆಂಗ್ಲ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡಿದರೆ, ಸರ್ಕಾರಿ ಶಾಲೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳು ವ್ಯಾಸಂಗ ಮಾಡುವ ಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಗ್ರಾಮಗಳ ಗಣ್ಯ ವ್ಯಕ್ತಿಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುವುದರಿಂದ ಸರ್ಕಾರಿ ಶಾಲೆಗಳ ಕಡೆ ಗಮನ ಹರಿಸದೆ ಇರುವುದು, ಸರ್ಕಾರಿ ಶಾಲೆಗಳು ಹಿಂದುಳಿಯನ್ನು ಕಾರಣವಾಗಿದೆ. ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತೆ ಆಗಿದೆ. ಶಿಕ್ಷಣದಲ್ಲಿ ಸಮಾನತೆ ಶಿಕ್ಷಣ ನೀಡಲು…
ಬೆಳಕೋಣಿ (ಚೌಧರಿ): ಸರಕಾರಿ ಪ್ರೌಢ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು. 76ನೇ ಗಣರಾಜ್ಯೋತ್ಸವ ಹಿನ್ನೆಲೆ 10 ನೇ ತರಗತಿ ವಿದ್ಯಾರ್ಥಿಗಳು ‘ತಾಯಿ ಮಹತ್ವ ಏನು?’ ಎಂದು ನಾಟಕರೂಪದಿಂದ ತಿಳಿಸಿಕೊಟ್ಟರು. ಪ್ರಾಂಶುಪಾಲರಾದ ಉಮಾಕಾಂತ ಚೋಪಡೇ ಮಾತನಾಡಿ, 26ನೇ ಜನವರಿ 1950 ಸಂವಿಧಾನವನ್ನು ಅಂಗೀಕರಿಸಿ, ಶಾಸನವನ್ನಾಗಿ ಒಪ್ಪಿಕೊಂಡ ದಿನ. ನಮ್ಮ ಸಂವಿಧಾನವನ್ನು ಗೌರವಿಸುವುದು, ಆಶಯಗಳನ್ನು ಪಾಲಿಸುವುದು ನಮ್ಮ ಜವಾಬ್ದಾರಿ ಎಂದರು. ಭಾರತದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಎಲ್ಲ ಮಹನೀಯರನ್ನು ಹಾಗೂ ವಿಶ್ವಕ್ಕೆ ಮಾದರಿ ಸ್ವರೂಪದ ಸಂವಿಧಾನವನ್ನು ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸಿದರು. ಶಾಲೆಯ ಹಿರಿಯ ಶಿಕ್ಷಕರಾದ ನವನಾಥ ವಡಗಾವೇ, ಶಿಕ್ಷಕರಾದ ಸಂಜೀವ ಕುಮಾರ್ ಬಿರಾದಾರ, ರವೀಂದ್ರ ರೆಡ್ಡಿ, ಅಶೋಕ್ ಜಾಧವ, ಜೀವನ ಬೆಂದ್ರೇ. ರಂಜನಾ ಗೈಕ್ವಾಡ, ಮಮತಾ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಎಂ.ಡಿ.ನಯೂಮ್ , ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಶ್ರಾಫೋದಿನ ಸೌದಾಗಾರ, ಮನೋಜ ರೆಡ್ಡಿ, ಮೋಹಮ್ಮದ ಷಾ, ಪತ್ರಕರ್ತರಾದ ಅರವಿಂದ ಮಲ್ಲಿಗೆ ಮುಖ್ಯ…
ಪಾವಗಡ: ವಾರದ ಎರಡು ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವುದರ ಜೊತೆಗೆ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಸೂಚಿಸಿದ್ದಾರೆ. ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನಂತರ ಮಾತನಾಡಿದ ಅವರು ದೀನ ದಲಿತರು ಇಂದು ಉನ್ನತ ಸ್ಥಾನಗಳಲ್ಲಿ ಇರಲು ಸಂವಿಧಾನ ಅಡಿಪಾಯವಾಗಿರುತ್ತದೆ, ಇಂತಹ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಜಾಗೃತಿಯನ್ನು ಹೊಂದಿರಬೇಕು, ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರತಿವಾರ ಎರಡು ದಿನಗಳ ಕಾಲ ಅರಿವು ಮೂಡಿಸುವಂತಹ ಕಾರ್ಯಕ್ರಮಕ್ಕೆ ಮುಂದಾಗ ಬೇಕೆಂದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದ ತಹಶೀಲ್ದಾರ್ ಡಿ.ಎನ್.ವರದರಾಜು , ಭಾರತ ದೇಶ ಅನೇಕ ವರ್ಷಗಳ ಕಾಲ ಬೇರೆಯವರ ಕಪಿಮುಷ್ಠಿಯಲ್ಲಿದ್ದು ಸ್ವಾತಂತ್ರ್ಯ ಪಡೆದುಕೊಂಡ ಬಳಿಕ, ದೇಶದ ಜನರ ರಕ್ಷಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರೂಪಿಸಿದ್ದು ನಮ್ಮೆಲ್ಲರ ಏಳಿಗೆ ಕಾರಣವಾಗಿದೆ, ಸದ್ಯ ಪಾವಗಡ ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಮುಂದಿನ…
ಬೆಂಗಳೂರು: ನ್ಯಾಯಾಂಗ ಬಡಾವಣೆ, ಯಲಹಂಕ ಬೆಂಗಳೂರು , ನ್ಯಾಯಾಂಗ ಇಲಾಖೆಯ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಬಿವೃದ್ದಿ ಸಂಘ ಇವರು ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನಿಸಿ ಅವರ ಭಾವಚಿತ್ರವನ್ನು ಇಡದೆ ನ್ಯಾಯಮೂರ್ತಿ ಮತ್ತು ನ್ಯಾಯಾಧೀಶರನ್ನೊಳಗೊಡಂತೆ ಸಭೇಯಲ್ಲಿ ಭಾಗವಹಿಸಿದ ಎಲ್ಲರೂ ಡಾ.ಅಂಬೇಡ್ಕರ್ ರವರ ಹೆಸರನ್ನು ಪ್ರಸ್ಥಾಪಿಸದೆ ಅವಮಾನಿಸಿರುವ ಆರೋಪ ಕೇಳಿ ಬಂದಿದೆ. ಘಟನೆಯನ್ನು ಖಂಡಿಸಿದ ನಿವೃತ್ತ ಜಂಟಿ ನಿರ್ದೇಶಕರು, ಭೂದಾಖಲೆ ಇಲಾಖೆ ಮತ್ತು ಕರ್ನಾಟಕದ ಉಚ್ಚ ನ್ಯಾಯಾಲಯದ ವಕೀಲರು ಮುದ್ದುರಂಗಪ್ಪ, ನಿವೃತ್ತ ಸಹಾಯಕ ನಿಯಂತ್ರಕರು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಜಿ.ಎನ್.ನರಸಿಂಹಮೂರ್ತಿ, ಡಾ.ಬಾಬಾ ಸಾಹೇಬರ್ ಅಂಬೇಡ್ಕರ್ ರವರು ಭಾರತಕ್ಕೆ ನೀಡಿದ ಸಂವಿಧಾನದ ಭಿಕ್ಷೆಯಿಂದ ನ್ಯಾಯಾಂಗದ ಉನ್ನತ ಹುದ್ದೆಯನ್ನು ಅಲಂಕರಿಸಿದ ನ್ಯಾಯಾಮೂರ್ತಿ, ನ್ಯಾಯಾದೀಶರುಗಳಿಂದಲೇ ಡಾ.ಅಂಬೇಡ್ಕರ್ ರವರಿಗೆ ಅವಮಾನವಾಗಿರುವುದು ಹಾಗೂ ಸಭೆಯಲ್ಲಿ ಜೈ ಶ್ರೀ ರಾಮ್ ಘೋಷಣೆಯನ್ನು ಮೊಳಗಿಸಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಈ ಘಟನೆಯನ್ನು ತೀವ್ರವಾಗಿ ನಾವು ಖಂಡಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮಧುಗಿರಿ: ತಾಲೂಕಿನ ಮಾಡ್ಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಗೆ ಹೆಸರಾಂತ ಇಂಡಿಗೋ ಪೇಂಟ್ಸ್ ಲಿಮಿಟೆಡ್ ಹಾಗೂ ಸುರಭಿ ಪೇಂಟ್ಸ್ ಹಾರ್ಡ್ವೇರ್ಸ್ ನ ವತಿಯಿಂದ ಇಂಡಿಗೋ ಸೇವಾ ಉತ್ಸವ ಎಂಬ ಕಾರ್ಯಕ್ರಮದಡಿ ಸರ್ಕಾರಿ ಶಾಲೆಯ ಕೊಠಡಿಗಳಿಗೆ ಉಚಿತವಾಗಿ ಸುಮಾರು 30 ರಿಂದ 40 ಸಾವಿರದ ವೆಚ್ಚದಲ್ಲಿ ಉಚಿತವಾಗಿ ಪೇಂಟ್ಸ್ ನೀಡಿ ಶಾಲಾ ಕೊಠಡಿಗಳಿಗೆ ಕಲರ್ ಫುಲ್ ಪೇಂಟ್ಸ್ ಮಾಡಿಸಲಾಗಿದೆ. ಶಾಲೆಯ ಮಕ್ಕಳಲ್ಲಿ ಉತ್ಸಾಹ ತುಂಬಲು ಕ್ರೀಡೆಗಳನ್ನು ಆಯೋಜಿಸಿ ಬಹುಮಾನವನ್ನು ಸಹ ವಿತರಿಸುವುದರ ಜೊತೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು. ಸರ್ಕಾರಿ ಶಾಲಾ ಕೊಠಡಿಗಳಿಗೆ ಪೇಂಟ್ಸ್ ಮಾಡಿಸುವ ಕಾರ್ಯಕ್ರಮಕ್ಕೆ ಸುರಭಿ ಪೇಂಟ್ಸ್ ಶಾಪ್ ಸತೀಶ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀರಂಗಪ್ಪ, ಅಲ್ಲಿನ ಮುಖ್ಯೋಪಾಧ್ಯಾಯಣಿ ರಾಧಾ ಸಹ ಶಿಕ್ಷಕಿ ಮಂಜುಳಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮವನ್ನು ಇಂಡಿಗೋ ಪೇಂಟ್ಸ್ ಲಿಮಿಟೆಡ್ ಬ್ರಾಂಚ್ ಮ್ಯಾನೇಜರ್ ಸಜ್ಜೀವ್ ಏನ್ ನಾಯರ ಹಾಗೂ ಚಿನಕವಜ್ರ ಕ್ಲಸ್ಟರ್ CRP ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ…
ಗಣರಾಜ್ಯೋತ್ಸವ ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನ. ಎಲ್ಲ ಭಾರತೀಯರನ್ನು ಭಾವನಾತ್ಮಕವಾಗಿ, ಭಾಷಿಕವಾಗಿ, ಭೌಗೋಳಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಬೆಸುಗೆ ಹಾಕಿದ ದಿನ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬ್ರಿಟೀಷರ ಆಳ್ವಿಕೆಗೆ ಒಳಪಟ್ಟಿದ್ದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನೇಕ ಮಹನೀಯರುಗಳು, ಮಹಾತ್ಮ ಗಾಂಧೀಜಿ, ಬಾಲಗಂಗಾಧರನಾಥ ತಿಲಕ್, ಗೋಪಾಲಕೃಷ್ಣ ಗೋಖಲೆ, ಲಾಲ ಲಜಪತರಾಯ್, ಜವಹಾರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್ ಮುಂತಾದವರ ನೇತೃತ್ವದಲ್ಲಿ ನಡೆಸಿದ ಸ್ವಾತಂತ್ರ್ಯ ಹೋರಾಟಗಾರರ, ತ್ಯಾಗ–ಬಲಿದಾನ ಫಲವಾಗಿ 1947 ಆಗಸ್ಟ್ 15 ರಂದು ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿತು ಎಂದರು. ಸ್ವಾತಂತ್ರ್ಯಗೊಂಡ ನಂತರ, ಇಡೀ ದೇಶವನ್ನು ಭೌಗೋಳಿಕವಾಗಿ, ಭಾಷಿಕವಾಗಿ ಒಗ್ಗೂಡಿಸುವ ಅನಿವಾರ್ಯತೆ ಉದ್ಭವಿಸಿತು. ಜೊತೆಗೆ ಏಕರೂಪದ ಕಾನೂನು ಹಾಗೂ ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ದೇಶದ ಏಕತೆಯನ್ನು ಬಲಪಡಿಸಲು ಡಾ. ಬಾಬಾ…
ಮುಂಬೈ: ನಟ ಸೈಫ್ ಅಲಿಖಾನ್ ಅವರ ಮೇಲೆ ಚಾಕು ದಾಳಿ ಹಾಗೂ ಕಳ್ಳತನ ಯತ್ನ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಸೈಫ್ ನಿವಾಸದಿಂದ ಸಂಗ್ರಹಿಸಲಾದ 19 ಸೆಟ್ ಬೆರಳಚ್ಚುಗಳು ಆರೋಪಿ ಶರೀಫುಲ್ ಇಸ್ಲಾಂನ ಬೆರಳಚ್ಚುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಮುಂಬೈ ಪೊಲೀಸರು ಖಾನ್ ಅವರ ಮನೆಯಲ್ಲಿ ಪತ್ತೆಯಾದ ಬೆರಳಚ್ಚುಗಳನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಫಿಂಗರ್ಪ್ರಿಂಟ್ ಬ್ಯೂರೋಗೆ ಕಳುಹಿಸಿದ್ದಾರೆ. ಸಿಸ್ಟಮ್–ರಚಿಸಿದ ವರದಿಯು ಷರೀಫುಲ್ ಅವರ ಮುದ್ರಣಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ತಿಳಿದುಬಂದಿದೆ. ಪರೀಕ್ಷೆಯ ಫಲಿತಾಂಶ ನೆಗೆಟಿವ್ ಎಂದು ಮುಂಬೈ ಪೊಲೀಸರಿಗೆ ಸಿಐಡಿ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಮುಂಬೈ ಪೊಲೀಸರು ಹೆಚ್ಚಿನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗೆ ಕಳುಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 76 ನೇ ಗಣರಾಜ್ಯೋತ್ಸವದಂದು ರಾಷ್ಟ್ರಕ್ಕೆ ನೀಡಿದ ಸಂದೇಶದಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧಾರ್ಮಿಕ ಮೂಲಭೂತವಾದದಲ್ಲಿ ಮುಳುಗಿರುವ ದ್ವೇಷಪೂರಿತ ಅಜೆಂಡಾವು ಕಳೆದ 10 ವರ್ಷಗಳಿಂದ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಮತ್ತು ಪ್ರತಿ ಪವಿತ್ರ ಸಂವಿಧಾನದ ತತ್ವವನ್ನು ಸರ್ವಾಧಿಕಾರಿ ಆಡಳಿತದಿಂದ ತುಂಡುಗಳಾಗಿ ಚೂರುಚೂರು ಮಾಡಲಾಗುತ್ತಿದೆ ಎಂದಿದ್ದಾರೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಿಂದುಳಿದ ಯುವಕರನ್ನು ರಾಷ್ಟ್ರೀಯತೆ ಮತ್ತು ಧಾರ್ಮಿಕ ಪಾರಮ್ಯದ ಧ್ವಜವನ್ನು ಹಿಡಿಯುವಂತೆ ಮಾಡುವ ಮೂಲಕ ಹುಸಿ-ರಾಷ್ಟ್ರೀಯತೆಯನ್ನು ಅಭ್ಯಾಸ ಮಾಡಿಸುತ್ತಿದೆ, ಆದರೆ ಅವರಿಗೆ ಉದ್ಯೋಗವನ್ನು ಪಡೆಯಲು ಏನನ್ನೂ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ. 76 ನೇ ಗಣರಾಜ್ಯೋತ್ಸವದಂದು ರಾಷ್ಟ್ರಕ್ಕೆ ನೀಡಿದ ಸಂದೇಶದಲ್ಲಿ, ಖರ್ಗೆ ಅವರು ಸಂವಿಧಾನದ ವಿಚಾರಗಳು ಮತ್ತು ಆದರ್ಶಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತತ್ವವನ್ನು ಜನರು ಸಂರಕ್ಷಿಸಲು ಮತ್ತು ರಕ್ಷಿಸಲು ಇದು ಸುಸಮಯವಾಗಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ವೇಳೆ ಕಳೆದ 13 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಕೃತಜ್ಞತೆ ಸಲ್ಲಿಸಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ ಬಂದಿದ್ದೇನೆ. ಇದು ಪುನರ್ಜನ್ಮ ಅನಿಸುತ್ತೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಶ್ರೇಷ್ಟ ಸಂವಿಧಾನದ ಫಲವಾಗಿ ಭಾರತವು ವಿಶ್ವದಲ್ಲಿ 4ನೇ ಆರ್ಥಿಕ ದೇಶವಾಗಿ ಬೆಳೆದಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದು ಪ್ರಸಾದ ಸೇವಿಸಿದರು. ಬಳಿಕ ಮಠದ ಆವರಣದಲ್ಲಿ ಧ್ವಜಾರೋಹಣಾ ನೆರವೇರಿಸಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ಹೇಳಿದರು. 76 ವರ್ಷಗಳಲ್ಲಿ ಭಾರತ ಅನೇಕ ಸಾಧನೆಗಳನ್ನು ಮಾಡಿದೆ. ಬಡತನ, ಹಸಿವು, ಅನಕ್ಷರತೆಯಿಂದ ಬಳಲುತ್ತಿದ್ದ ಅಂದಿನ ಭಾರತ, ಬಲಿಷ್ಟ ಭಾರತವಾಗಿ ಬೆಳೆದಿದೆ. ಪ್ರಪಂಚದಲ್ಲಿ 4ನೇ ಆರ್ಥಿಕತೆಯ ದೇಶವಾಗಿದೆ. ಇದರಲ್ಲಿ ಪ್ರತಿಯೊಬ್ಬ ಭಾರತೀಯನ ಶ್ರಮವಿದೆ. ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ಸಿಗಲಿ ಎಂದು ಆಶಿಸಿದರು. ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರು ಇಡೀ ದೇಶದಲ್ಲಿ ಯಾವುದೇ ಒಂದು ಧಾರ್ಮಿಕ ಸಂಸ್ಥೆ ನೀಡದಂತಹ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕೋಟ್ಯಂತರ ಬಡ ಮಕ್ಕಳಿಗೆ…