Author: admin

ಬೀದರ್: ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಆವರಣದಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಗೌರವ ನಮನ ಸಲ್ಲಿಸಿ ಧ್ವಜರೋಹಣೆ ಮಾಡುವ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. 1950 ಜನವರಿ 26 ರಂದು ಸಂವಿಧಾನವನ್ನು ನಮ್ಮನ್ನು ನಾವು ಅರ್ಪಿಸಿಕೊಂಡು ಅಂಗೀಕರಿಸಿ ಶಾಸನವಾಗಿ ವಿಧಿಸಿಕೊಂಡಿರುತ್ತೇವೆ. ಈ ಸವಿ ನೆನಪಿನಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು , ಸಂವಿಧಾನವು ಪ್ರಜೆಗಳಿಗೆ ಅತಿಮೂಲ್ಯವಾದ ಮೂಲಭೂತ ಹಕ್ಕುಗಳನ್ನು ನೀಡಿದ್ದು, ಅದರ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಸಂದೇಶ ನೀಡಲಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವ ಹಿನ್ನೆಲೆ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್ ಆರಂಭವಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದ ವತಿಯಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ನಡೆಯಿತು. ಪ್ರೊ. ಬಿ.ಪಿ.ಮಲ್ಲಿಕಾರ್ಜುನ ಸ್ವಾಮಿ, ಸಂಯೋಜಕರು, ತಿಪಟೂರು ಸ್ನಾತಕೋತ್ತರ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ ಮತ್ತು ಒಂಬುಡ್ಸಮನ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತೀಯ ಸಂವಿಧಾನ ಸಭೆಯು 26 ನವೆಂಬರ್ 1949ರಂದು ಅಂಗೀಕರಿಸಿತು ಮತ್ತು 26 ಜನವರಿ 1950ರಂದು ಜಾರಿಗೆ ಬಂದಿತು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತಿದೆ. ಭಾರತವು ಭಾರತೀಯ ಸಂವಿಧಾನ ಅಂಗೀಕಾರದೊಂದಿಗೆ ತನ್ನನ್ನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿತು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು., ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು, ತುಮಕೂರಿನ ಟೂಡಾ ಲೇಔಟ್,ರಾಜೀವ್ ಗಾಂಧಿನಗರ, ಹೇಮಾವತಿ ಬಡಾವಣೆಯ “ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ…

Read More

ತುಮಕೂರು:  76 ನೇ ಗಣರಾಜ್ಯೋತ್ಸವ ಹಿನ್ನೆಲೆ, ತುಮಕೂರು ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಿಂದ ಧ್ವಜಾರೋಹಣ ನಡೆಯಿತು. ತುಮಕೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಧ್ವಜರೋಹಣ ನಡೆಸಲಾಯ್ತು. ಶಾಸಕರಾದ ಜ್ಯೋತಿಗಣೇಶ್, ಸುರೇಶ ಗೌಡ,  ಪರಿಷತ್ ಸದಸ್ಯ ರಾಜೇಂದ್ರ, ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು. ಪೊಲೀಸ್, ರಕ್ಷಣಾಪಡೆ, ಮಾಜಿ ಸೈನಿಕರು ಮತ್ತು ಮಕ್ಕಳಿಂದ ಪಥಸಂಚಲನ ನಡೆಯಿತು. ತುಮಕೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅದ್ದೂರಿ ಪಥಸಂಚಲನ‌ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ.  ಐಪಿಎಸ್ ರವರು ಧ್ವಜಾರೋಹಣ  ನೆರವೇರಿಸಿದರು. ಈ ಸಂಧರ್ಭದಲ್ಲಿ ಹೆಚ್ಚುವರಿ ಜಿಲ್ಲಾ  ಪೊಲೀಸ್ ಅಧೀಕ್ಷಕರುಗಳಾದ  ವಿ.ಮರಿಯಪ್ಪ, ಅಬ್ದುಲ್ ಖಾದರ್, ಕೆಎಸ್ಪಿಎಸ್, ಡಿಎಆರ್ ಡಿಎಸ್ಪಿ ಪರಮೇಶ್ ಹಾಗೂ  ನಗರದ ಪೊಲೀಸ್ ಅಧಿಕಾರಿಗಳು ಮತ್ತು  ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ ಸಿಬ್ಬಂದಿಗಳು,  ಉಪಸ್ಥಿತರಿದ್ದು. ಧ್ವಜಕ್ಕೆ ಗೌರವ ಸೂಚಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ, ಅಪರೂಪದ ಶೋಲಾ ಕಾಡು ಸುಟ್ಟು ಕರಕಲಾಗಿದೆ. ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಅರಣ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದೆ. ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಕಳೆದ ವಾರವಷ್ಟೇ ಚಾರ್ಮಾಡಿ ಘಾಟಿಯ ಬಿದಿರುತಳ ತಪ್ಪಲಿನ ಕಾಡಿನಲ್ಲಿ ಕಾಡ್ಗಿಚ್ಚಿಗೆ ಅರಣ್ಯ ಹಾಗೂ ಪ್ರಾಣಿ ಸಂಕುಲ ನಾಶವಾಗಿತ್ತು. ಕಳೆದ ರಾತ್ರಿ ಮತ್ತೆ ಚಾರ್ಮಾಡಿ ತಪ್ಪಲಿನ ಅರಣ್ಯಕ್ಕೆ ಬೆಂಕಿ ಬಿದ್ದು ಮತ್ತೆ ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ರಸ್ತೆ ಬದಿ ಇದ್ದ ಬೆಂಕಿಯನ್ನು ನಂದಿಸಿದ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಗುಡ್ಡ ಏರಿ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ 2 ಸಾವಿರ ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತಿರುವ ರಾಜ್ಯ ಸರಕಾರ, ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಉತ್ತಮ ಆಡಳಿತಕ್ಕೆ ರಾಜ್ಯ ಮಾದರಿಯಾಗಿತ್ತು. ಅದನ್ನು ನಾಶ ಮಾಡಲು ಇವರು ಹೊರಟಿದ್ದಾರೆ. ರೈತ ಮಹಿಳೆಯರು ಮತ್ತು ಬಡ ಮಹಿಳೆಯರೇ ಹೆಚ್ಚಾಗಿ ಮೈಕ್ರೋ ಫೈನಾನ್ಸ್ ಗಳಿಗೆ ಗುರಿಯಾಗುತ್ತಿದ್ದು ಇವರೆಲ್ಲರೂ ತಮ್ಮ ಮನೆ ಊರುಗಳನ್ನು ಬಿಟ್ಟು ಹೋಗುತ್ತಿದ್ದಾರೆ ಎಂದು ದೂರಿದ್ದಾರೆ. ಮಂಡ್ಯ ಜಿಲ್ಲೆ ಒಂದರಲ್ಲಿಯೇ 60 ಮೈಕ್ರೋ ಫೈನಾನ್ಸ್ ಗಳಿವೆ. ಅದರಲ್ಲಿ 14-15 ಫೈನಾನ್ಸ್ ಗಳು ಪರವಾನಗಿ ಪಡೆದಿವೆ. ಉಳಿದವು ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುತ್ತಾ ಜನರಿಗೆ ತೊಂದರೆ ಕೊಡುತ್ತಿವೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಪ್ರಯಾಗ್ ರಾಜ್: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಶುಕ್ರವಾರ ಕುಂಭ ಮೇಳಕ್ಕೆ ಭೇಟಿ ನೀಡಿದ್ದು, ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಚರ್ಚೆ ನಡೆಸಿದರು. ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುವ ಯು.ಟಿ.ಖಾದರ್ ಸಾಧುಗಳೊಂದಿಗೆ ಬೆರೆತರು. ದಕ್ಷಿಣ ಕನ್ನಡದ ಆಪ್ತ ಸ್ನೇಹಿತರ ಜೊತೆಗೂಡಿ ಕುಂಭಮೇಳದ ಮಹಾನುಭವವನ್ನು ಪಡೆದರು. ಎಲ್ಲರಲ್ಲೂ ಬೆರೆಯುವ ಮತ್ತು ಪರಸ್ಪರ ಧರ್ಮಗಳನ್ನು ಗೌರವಿಸುವ ಖಾದರ್ ಅವರ ನಿದರ್ಶನ ಇದೇ ಮೊದಲಲ್ಲ. ಮಂಗಳೂರಿನಲ್ಲಿ ಹಿಂದೂ ದೇವಾಲಯಗಳು, ಕ್ರಿಶ್ಚಿಯನ್ ಚರ್ಚ್ಗಳು ಮತ್ತು ಜೈನ ಆರಾಧನಾ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬಳ್ಳಾರಿ : ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯರೊಬ್ಬರನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅಪಹರಣಕ್ಕೊಳಗಾದವರಾಗಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಅಪಹರಿಸಿದ್ದಾರೆ. ಈ ಘಟನೆ ನಗರದ ಸತ್ಯನಾರಾಯಣ ಪೇಟೆ ಬಳಿ ನಡೆದಿದೆ. ಅಪಹರಣದ ಬಳಿಕ ಸುನೀಲ್ ಮೊಬೈಲ್ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 3 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ವಿಜಯಪುರ: ನಗರದ ಹೊರವಲಯದಲ್ಲಿರುವ ಇಟ್ಟಿಗೆ ಭಟ್ಟಿಯ ಮಾಲೀಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೋಷಿತ ಸಮುದಾಯದ ಕೂಲಿ ಕಾರ್ಮಿಕರನ್ನು ಮಾಜಿ ಸಚಿವ, ಶೋಷಿತರ ಗಟ್ಟಿ ಧ್ವನಿ ಹೆಚ್.ಆಂಜನೇಯ ಅವರು ಇಂದು ಭೇಟಿಯಾಗಿ, ವೈಯಕ್ತಿಕ ಧನಸಹಾಯ ಮಾಡಿ, ಸಾಂತ್ವನ ಹೇಳಿದರು. ಇತ್ತೀಚೆಗೆ ನಡೆದ ಈ ಅಮಾನವೀಯ ಘಟನೆಯ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು, ಈ ಘಟನೆಯಿಂದ ಇಡೀ ಮನುಕುಲವೇ ಬೆಚ್ಚಿಬೀಳುವ ಜೊತೆಗೆ ಮಮ್ಮಲ ಮರುಗಿ ಹಲ್ಲೆ ನಡೆಸಿದವರ ಮೇಲೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬ ಕಾರ್ಮಿಕರು ಹಬ್ಬಕ್ಕೆ ಊರಿಗೆ ಹೋದವರು ತಡವಾಗಿ ಬಂದರು ಎಂಬ ಕಾರಣಕ್ಕೆ ಇಟ್ಟಿಗೆ ಭಟ್ಟಿಯ ಮಾಲೀಕ ಮತ್ತು ಅವನ ಮಗ ಹಾಗೂ ಸಹಚರರು ಈ ಮೂವರು ಕೂಲಿಕಾರ್ಮಿಕರ ಪಾದ ಮತ್ತು ಕೈಗಳಿಗೆ ಪೈಪುಗಳಿಂದ ಮನಸೋ ಇಚ್ಛೆ ಥಳಿಸಿ, ಕಣ್ಣಿಗೆ ಖಾರದಪುಡಿ ಎರಚಿದ್ದರು. ಮೂರು ದಿನಗಳಿಂದ ನಿರಂತರವಾಗಿ…

Read More