Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬೆಂಗಳೂರು: ಶಸ್ತ್ರ ಚಿಕಿತ್ಸೆ ಬಳಿಕ ವಿಶ್ರಾಂತಿಯಲ್ಲಿರುವ ನಟ ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಜನವರಿ 26ಕ್ಕೆ ವಾಪಸ್ ಆಗಲಿದ್ದಾರೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ. ವಿಡಿಯೋ ಮೂಲಕ ಫ್ಯಾನ್ಸ್ ಗೆ ಮಾಹಿತಿ ನೀಡಿರುವ ಶಿವರಾಜ್ ಕುಮಾರ್ ಅವರು, ನಿಮ್ಮೆಲ್ಲರನ್ನೂ ನೋಡುವುದಕ್ಕೆ ನಾನು ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಯುಎಸ್ ನ ಮಿಯಾಮಿ ಕ್ಯಾನ್ಸರ್ ಇನ್ ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವರಾಜ್ ಕುಮಾರ್ ಅವರು ಬಳಿಕ ಕೆಲವು ದಿನಗಳ ಕಾಲ ಅಲ್ಲೇ ಉಳಿದು ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಬೆಂಗಳೂರಿಗೆ ಆಗಮಿಸಲು ಸಿದ್ಧತೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಬಜೆಟ್ ನಲ್ಲಿ ಹೆಚ್ಚು ಹಣ ಮೀಸಲಿಡಿ: ನಿರ್ಮಲಾ ಸೀತಾರಾಮನ್ ಗೆ ಡಿ.ಕೆ.ಶಿವಕುಮಾರ್ ಮನವಿ
ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಅಗತ್ಯಗಳನ್ನು ಪೂರೈಸಲು ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ. 1.5 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಬೆಂಗಳೂರು, ವಿಶೇಷವಾಗಿ ತಂತ್ರಜ್ಞಾನ ವಲಯದಲ್ಲಿ ಅಗಾಧ ಬೆಳವಣಿಗೆಯನ್ನು ಕಂಡಿದ್ದು, ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಗಳನ್ನು ಆಕರ್ಷಿಸುತ್ತಿದೆ. ಆದಾಗ್ಯೂ, ನಗರದಲ್ಲಿ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳು ಅದರ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯ ಬೇಡಿಕೆಗಳನ್ನು ಪೂರೈಸಲು ಹೆಣಗಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವರ ಗಮನಸೆಳೆದಿದ್ದಾರೆ. ಬೆಂಗಳೂರು ಉತ್ತರ– ದಕ್ಷಿಣ ಕಾರಿಡಾರ್ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ.…
ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಕ್ರೋ–ಫೈನಾನ್ಸ್ ಕಂಪನಿಗಳಿಂದ ಸಾಲಗಾರರ ಮೇಲೆ ನಡೆಯುತ್ತಿರುವ ಕಿರುಕುಳ ಹಿನ್ನೆಲೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ಮೈಕ್ರೋಫೈನಾನ್ಸ್ ಕಂಪನಿಗಳ ಸಂಘದ ಪ್ರತಿನಿಧಿಗಳು, ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಾದೇಶಿಕ ಅಧಿಕಾರಿಗಳು ಮತ್ತು ನಬಾರ್ಡ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು. ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಸಾಲ ವಸೂಲಾತಿ ವೇಳೆ ಆರ್ ಬಿಐ ನಿಯಮದಂತೆ ನಡೆದುಕೊಳ್ಳಬೇಕು. ಸಂಜೆ 5 ಗಂಟೆ ನಂತರ ಸಾಲ ವಸೂಲಾತಿಗೆ ಹೋಗಬಾರದು. ಮೈಕ್ರೋ ಫೈನಾನ್ಸ್, ಗಿರವಿ ಅಂಗಡಿಯವರು ಈ ಕಾನೂನು ಪಾಲಿಸಬೇಕು. ಕಾನೂನು ಬಾಹಿರವಾಗಿ ಸಾಲ ವಸೂಲಾತಿಗೆ…
ಬೆಳಗಾವಿ: ಸಾಲ ಮರುಪಾವತಿಸದ ಹಿನ್ನೆಲೆ ಬಾಣಂತಿ ಸಹಿತ ಕುಟುಂಬದವರನ್ನು ಹೊರ ಹಾಕಿದ ಘಟನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯ ಬೀಗ ತೆರವುಗೊಳಿಸಿ ಕುಟುಂಬಸ್ಥರನ್ನು ಮನೆಗೆ ಸೇರಿಸಿದ್ದಾರೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಹಣಕಾಸು ಸಂಸ್ಥೆ, ಮನೆಯನ್ನು ಸೀಝ್ ಮಾಡಿತ್ತು. ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಸುದ್ದಿ ತಿಳಿದು, ತಮ್ಮ ಆಪ್ತ ಸಹಾಯಕರನ್ನು ಸ್ಥಳಕ್ಕೆ ಕಳಿಸಿ ಕುಟುಂಬಕ್ಕೆ ಆಹಾರ, ಧಾನ್ಯಗಳನ್ನು ಮತ್ತು ಸ್ವಲ್ಪಮಟ್ಟಿಗೆ ಆರ್ಥಿಕ ನೆರವನ್ನು ಒದಗಿಸಿದರು. ನಂತರ ಹಣಕಾಸು ಸಂಸ್ಥೆಯ ಪ್ರತಿನಿಧಿಗಳ ಜೊತೆ ಮಾತನಾಡಿ, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿ ಕುಟುಂಬಸ್ಥರನ್ನು ಮನೆಗೆ ಸೇರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪ್ರಜಾಪ್ರಭುತ್ವದ ನೆಲೆಗಟ್ಟುವ ಅವಶ್ಯಕ ಅಂಶವೇ ಮತದಾನ. ಭಾರತದ ಚುನಾವಣಾ ಆಯೋಗ (ECI) ಸ್ಥಾಪನೆಯ ದಿನವಾದ ಜನವರಿ 25ರ ರಾಷ್ಟ್ರೀಯ ಮತದಾರರ ದಿನಾಚರಣೆ, ಪ್ರತಿ ವರ್ಷ ಈ ದಿನವನ್ನು ತದಾರರ ಜಾಗೃತಿಯ ಕಾರ್ಯಕ್ರಮಗಳ ಮೂಲಕ ರಾಷ್ಟ್ರದ ಪ್ರಜಾಸತ್ತಾತ್ಮಕ ಮೂಲವನ್ನು ಬಲಪಡಿಸುವ ಹೆಜ್ಜೆಯಾಗಿ ಆಚರಿಸಲಾಗುತ್ತದೆ. ಈ ಬಾರಿ 15ನೇ ರಾಷ್ಟ್ರೀಯ ಮತದಾರರ ದಿನವು ECIಯ 75 ವರ್ಷಗಳ ಸಾಧನೆಗಳನ್ನೂ, 2024ರ ಯಶಸ್ವಿ ಲೋಕಸಭಾ ಚುನಾವಣೆಯೂ ಚರ್ಚೆಗೆ ಒಳಪಡಿಸಿತು. ಈ ಸಂದರ್ಭದಲ್ಲಿ, 100 ಕೋಟಿ ಮತದಾರರ ಗುರಿಯತ್ತ ಸಾಗುತ್ತಿರುವ ಭಾರತ, ಜಾಗೃತ ಮತದಾರರ ಮಹತ್ವವನ್ನು ಮತ್ತೊಮ್ಮೆ ಧ್ವನಿಸಿತು. ಮತದಾನದ ಮಹತ್ವ: ಪ್ರತಿಯೊಬ್ಬರ ಮತವು ದೇಶದ ಭವಿಷ್ಯ ರೂಪಿಸುವ ಶಕ್ತಿಯಾಗಿದೆ. ಇದು ಕೇವಲ ಹಕ್ಕಾಗಿಯೇ ಉಳಿಯದೇ, ಪ್ರಜಾಪ್ರಭುತ್ವದ ಪ್ರಾಣಶಕ್ತಿಯಾಗಿದೆ. ಯುವಜನಾಂಗವು ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ಬದ್ಧತೆಯಿಂದ ಪಾಲ್ಗೊಳ್ಳುವ ಮೂಲಕ ದೇಶದ ಅಭಿವೃದ್ಧಿಯ ಚಕ್ರವನ್ನು ತಿರುಗಿಸಬಲ್ಲದು. 18-29 ವರ್ಷದ ವಯೋಮಾನದ 21.7 ಕೋಟಿ ಯುವ ಮತದಾರರ ಸಂಖ್ಯೆಯು ಭಾರತಕ್ಕೆ ಭವಿಷ್ಯ ಕಟ್ಟುವ ಮಹತ್ವದ ಪೂರಕವಾಗಿದೆ. ಪ್ರಜಾಪ್ರಭುತ್ವದ ಜಾಗೃತಿಗೆ ಅನಿವಾರ್ಯತೆ:…
ತುಮಕೂರು: ಸರ್ಕಾರಿ ಫೈನ್ ಆರ್ಟ್ಸ್ ಪದವಿ ಕಾಲೇಜಿನಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 2025ರ ಈ ದಿನವು ಭಾರತದ ಚುನಾವಣಾ ಆಯೋಗದ (ECI) 75ನೇ ವರ್ಷದ ಮಹೋತ್ಸವವನ್ನು ಗುರುತಿಸಿತು ಮತ್ತು 2024ರ ಯಶಸ್ವಿ ಲೋಕಸಭಾ ಚುನಾವಣೆಗಳನ್ನು ಸ್ಮರಿಸಿತು. ಕಾರ್ಯಕ್ರಮದಲ್ಲಿ ಡಾ.ಮಂಜುನಾಥ ಆರ್., ತುಮಕೂರು ಜಿಲ್ಲಾ ಚುನಾವಣಾ ಸಾಹಿತ್ಯ ಸಮಿತಿಯ (ELC) ಸಂಚಾಲಕರು ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು, ಮತದಾನದ ಮಹತ್ವವನ್ನು ವಿವರಣೆ ಮಾಡಿದರೆ, 21.7 ಕೋಟಿ ಯುವ ಮತದಾರರು ಸೇರಿದಂತೆ 99.1 ಕೋಟಿ ನೋಂದಾಯಿತ ಮತದಾರರು ಭಾರತದಲ್ಲಿ ಗಣನೆಗೆ ಬಂದಿರುವುದು ಹೈಲೈಟ್ ಮಾಡಿದರು. ಇದೇ ವೇಳೆ ಹಾಜರಿದ್ದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ರವರು ಅಧ್ಯಕ್ಷತೆ ವಹಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರನ ಪಾತ್ರದ ಬಗ್ಗೆ ಗಮನಾರ್ಹ ಅಂಶಗಳನ್ನು ಚರ್ಚಿಸಿದರು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಹೇಗೆ ಜಾಗೃತ ಮತದಾರರ ಮೇಲೆ…
ಬೀದರ್: ಎಟಿಎಂ ದರೋಡೆ ಪ್ರಕರಣದಲ್ಲಿ ಇಬ್ಬರು ದರೋಡೆಕೋರರು ಗುಂಡು ಹಾರಿಸಿದ ಪರಿಣಾಮ ಗಿರಿ ವೆಂಕಟೇಶ ಎಂಬವರು ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಗುಂಡಿನ ದಾಳಿಗೊಳಗಾಗಿದ್ದ ಮತ್ತೊಬ್ಬ ಸಿಬ್ಬಂದಿ ಶಿವ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ಇವರಿಗೆ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹೈದ್ರಾಬಾದಿನ ಕೇರ್ ಆಸ್ಪತ್ರೆಯಲ್ಲಿ 4 ಗಂಟೆ ಶಸ್ತ್ರ ಚಿಕಿತ್ಸೆ ನಡೆಸಿದ ಬಳಿಕ ಶಿವ ಅಪಾಯದಿಂದ ಪಾರಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಈವರೆಗೆ ಒಟ್ಟು 11 ಲಕ್ಷ ರೂಪಾಯಿ ವೆಚ್ಚವಾಗಿದೆ. ಈ ಪೈಕಿ 9 ಲಕ್ಷ ರೂ. ನೀಡಲಾಗಿದೆ ಎಂದು ಬೀದರ್ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಳಿದ ಬಾಕಿ ವೆಚ್ಚ 2 ಲಕ್ಷ ರೂ.ಗಳನ್ನು ಸಿ.ಎಮ್.ಎಸ್. ಕಂಪನಿ ವತಿಯಿಂದ ಪಾವತಿಸಲಾಗುವುದಾಗಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 250 ಅಡಿ ಎತ್ತರದ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಸಮುದಾಯದ ಪರವಾಗಿ ಕರ್ನಾಟಕ ಭೀಮ್ ಸೇನೆ (ರಿ) ಸಂಘಟನೆವತಿಯಿಂದ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಲಾಯಿತು. ಕರ್ನಾಟಕ ಭೀಮ್ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ರಾಮಲಿಂಗಯ್ಯ ರವರ ನೇತೃತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ತೆಲಂಗಾಣ ರಾಜ್ಯದಲ್ಲಿ 125ಅಡಿ ಎತ್ತರದ, ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ 206 ಅಡಿ ಎತ್ತರದ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ರಾಜ್ಯದ ಎಲ್ಲಾ ಹಿಂದುಳಿದ ಸಮುದಾಯ ಮಹತ್ವದ ಪಾತ್ರ ವಹಿಸಿದೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ 250 ಅಡಿ ಎತ್ತರದ ಪ್ರತಿಮೆಯನ್ನು ಬೆಂಗಳೂರು ಹಾಗೂ ಮೈಸೂರು ಮಧ್ಯೆ ನಿರ್ಮಾಣ ಮಾಡಬೇಕೆಂದು ಮನವಿ ಮಾಡಲಾಯಿತು. ಈ ಹಿಂದೆ ಇದ್ದಂತಹ ಸರ್ಕಾರದ ದುರಾಡಳಿತದಿಂದ ಬೇಸತ್ತು, ಎಲ್ಲ…
ತುಮಕೂರು: ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯಾವ ತೊಂದರೆಯೂ ಆಗದೆ ನೇರವಾಗಿ ಅವರ ಖಾತೆಗೆ ಹಣ ಜಮೆಯಾಗುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಫಲಾನುಭವಿಗಳ ಬ್ಯಾಂಕ್ ಖಾತೆಗಳು ಆಧಾರ್ ಜೋಡಣೆಗೆ ಸಂಬಂಧಿಸಿದ ದೂರುಗಳು ಬರುತ್ತಿದ್ದು, ಶೀಘ್ರವಾಗಿ ಇವುಗಳನ್ನು ಪರಿಹಾರ ಮಾಡಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಗೌಡ ತಿಳಿಸಿದರು. ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಗ್ಯಾರೆಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿವೆ. ಕೆಲವರು ಮಾತ್ರ ಗೃಹಲಕ್ಷ್ಮೀ ಹಣ ಪಾವತಿಯಾಗಿಲ್ಲ ಎಂದು ದೂರು ನೀಡುತ್ತಿದ್ದಾರೆ. ಯಾವ ಕಾರಣಕ್ಕೆ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿಲ್ಲ ಎಂಬುದರ ಬಗ್ಗೆ ಶೀಘ್ರ ಮಾಹಿತಿ ಪಡೆದು ಪರಿಹಾರ ನೀಡುವಂತೆ ನಿರ್ದೇಶಿಸಿದರು. ಜಿಲ್ಲೆಯಲ್ಲಿ ಈವರೆಗೆ ಗೃಹಲಕ್ಷ್ಮೀ ಯೋಜನೆಗೆ 1807 ಕೋಟಿ ರೂ., ಗೃಹ ಜ್ಯೋತಿ ಯೋಜನೆಗೆ 314 ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 474 ಕೋಟಿ ರೂ.ಗಳ ಅನುದಾನ…
ತುಮಕೂರು: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮವು “ಬಂಜಾರ ಬಹುಮುಖಿ ಕಲಾ ಪ್ರತಿಭಾನ್ವೇಷಣೆ– ಕಲಾ ಮಳಾವ್ ಕಾರ್ಯಕ್ರಮ”ವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಕಲಾಪ್ರದರ್ಶನ ನೀಡಲಿಚ್ಛಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ತುಮಕೂರು ವಲಯ ಕಚೇರಿ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ, ಸರಸ್ವತಿಪುರಂ, 2ನೇ ಹಂತ, ತುಮಕೂರು–572102 ಅಥವಾ ದೂ.ವಾ.ಸಂ. 0816–2956063, ಇ–ಮೇಲ್: tumkurktdcl@gmail.com ಅನ್ನು ಸಂಪರ್ಕಿಸಬೇಕೆಂದು ನಿಗಮದ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx