Author: admin

ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ಬೆಳಿಗ್ಗೆ 7:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ಹುತಾತ್ಮರಾದ ಸ್ಮರಣಾರ್ಥವಾಗಿ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಗುವುದು. ಇಲಾಖಾಧಿಕಾರಿಗಳು, ಸಿಬ್ಬಂದಿ ವರ್ಗ, ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಚುನಾವಣಾ ತಹಶೀಲ್ದಾರ್ ರೇಷ್ಮಾ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಮಾರ್ಚ್ 21ರಿಂದ ಎಸ್ ಎಸ್ ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಮಕ್ಕಳವಿದ್ಯಾಭ್ಯಾಸದ ಕಡೆ ಶಿಕ್ಷಕರು ಗಮನಕೊಟ್ಟು ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಪಾಠ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಭು ಜಿ. ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಕುಂಠಿತವಾಗಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಪ್ರತೀಮಕ್ಕಳವಿಶ್ಲೇಷಣೆ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳ ವಿದ್ಯಾಭ್ಯಾಸ ಮತ್ತು ಕಲಿಕೆಯ ಬಗ್ಗೆ ಶಿಕ್ಷಕರು ವೈಯಕ್ತಿಕವಾಗಿ ವಿದ್ಯಾರ್ಥಿಗಳನ್ನು ವಿಶ್ಲೇಷಣೆ ಮಾಡಿ ಯಾವ ವಿಷಯದಲ್ಲಿ ಮಕ್ಕಳು ಹಿಂದುಳಿದಿದ್ದಾರೆ ಎಂದು ಪಟ್ಟಿ ತಯಾರಿಸಬೇಕು. ಅಂತಹ ಮಕ್ಕಳಿಗೆ ವಿಶೇಷ ತರಗತಿಗಳನ್ನು ನೀಡಿ ಓದಿನಲ್ಲಿ ಮುಂದೆ ಬರುವಂತೆ ಮಾಡಬೇಕು ಎಂದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ದಿ) ಸಂಜೀವಪ್ಪ, ಉಪಕಾರ್ಯದರ್ಶಿ (ಆಡಳಿತ) ಹಾಲಸಿದ್ದಪ್ಪ ಪೂಜೇರಿ, ಶಾಲಾಶಿಕ್ಷಣ ಇಲಾಖೆ ಮಧುಗಿರಿ ವಿಭಾಗದ ಉಪ ನಿರ್ದೇಶಕರಾದ ಗಿರಿಜಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು…

Read More

ತುಮಕೂರು: ನೀವು ಇತರರೊಂದಿಗೆ ನಡೆಸುವ ಸಂಹನವು ನಿಮ್ಮ ಜ್ಞಾನವನ್ನು ತಾನಾಗಿಯೇ ಹೆಚ್ಚಿಸುತ್ತದೆ. ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೇ ಸರಿಯಾದ ಪರಿಹಾರವಾಗಿದೆ ಎಂದು ಮಥುರಾದ ಜಿ.ಎಲ್.ಎ. ವಿಶ್ವವಿದ್ಯಾಲಯದ  ಸಮಕುಲಾಧಿಪತಿ  ಪ್ರೊ. ಡಿ.ಎಸ್. ಚೌಹಾಣ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠ ಮತ್ತು ಕೌಶಲ್ಯ ಅಭಿವೃದ್ಧಿಕೋಶದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಸುಭಾಶ್ಚಂದ್ರ ಬೋಸರ ಮೇಲೆ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಭಾವ’  ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಾಮಿ ವಿವೇಕಾನಂದ ಅವರು ಬದುಕುಳಿದಿದ್ದು ಕೆಲವೇ ವರ್ಷಗಳು ಆದರೆ ಅವರು ದೇಶಕ್ಕೆ ಕೊಟ್ಟ ಕೊಡುಗೆ ಅಪಾರ. ಅವರು ಅನಂತ ಜ್ಞಾನವೇ ಆಗಿದ್ದರು ಎಂದ ಪ್ರೊ.ಚೌಹಾಣ್, ಸ್ವರ್ಗಆಕಾಶದಲ್ಲಿಲ್ಲ, ಮುಂಬರುವ ಯುವ ಪೀಳಿಗೆಯಲ್ಲಿದೆ ಎಂಬ ವಿವೇಕಾನಂದರ ಮಾತುಗಳನ್ನು ನೆನಪಿಸಿಕೊಂಡರು. ಇಡೀ ವಿಶ್ವವೇ ವಿವೇಕಾನಂದರ ವಿಚಾರಗಳನ್ನು ಅಳವಡಿಸಿಕೊಂಡಾಗ ಶಾಂತಿ ಸಹಬಾಳ್ವೆ ನೆಲೆಯೂರುತ್ತದೆ. ನಮ್ಮ ಮಾತೃಭೂಮಿ ಸೇವೆ ಮಾಡಲು ಸಿಗುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಬೇಡಿ. ಸ್ವಾಮಿ ವಿವೇಕಾನಂದರ ಪ್ರೇರಣೆಯಿಂದ ಸುಭಾಶ್‌ ಚಂದ್ರ ಬೋಸ್‌ತಮಗೆ ದೊರಕಿದ್ದ ಐಸಿಎಸ್ ಹುದ್ದೆಯನ್ನು ತ್ಯಜಿಸಿ ಸ್ವಾತಂತ್ರ‍್ಯ…

Read More

ತುಮಕೂರು:  ಹೆಣ್ಣು ಮಕ್ಕಳ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಳ್ಳುವವರ ಪ್ರಮಾಣ ಹೆಚ್ಚುತ್ತಿದ್ದು, ಈ ಬಗ್ಗೆ ಹೆಣ್ಣು ಮಕ್ಕಳು ಹೆಚ್ಚು ಜಾಗರೂಕರಾಗಿರಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಎಚ್ಚರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಮತ್ತು ಉತ್ತರ ಶೈಕ್ಷಣಿಕ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹದಿಹರೆಯದ ಹೆಣ್ಣು ಮಕ್ಕಳ ಸಾಮಾಜಿಕ ಸಮಸ್ಯೆಗಳು–ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಹಳಷ್ಟು ಪ್ರಕರಣಗಳಲ್ಲಿ ಹೆಣ್ಣು ಮಕ್ಕಳ ಮುಗ್ಧತೆ ಮತ್ತು ಅಸಹಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡಿರುವುದು ಕಂಡು ಬರುತ್ತಿದೆ. ಇದಕ್ಕೆ ಆಸ್ಪದ ಕೊಡಬಾರದು ಎಂದರು. ಹದಿಹರೆಯದ ಅವಧಿಯಲ್ಲಿ ಗೊಂದಲಗಳು ಉಂಟಾಗುವುದು ಸಹಜ. ಸಮಸ್ಯೆಗಳು ಹೆಚ್ಚಿದಂತೆ ಸವಾಲುಗಳೂ ಹೆಚ್ಚುತ್ತವೆ. ಇವೆಲ್ಲವನ್ನೂ ನಿಭಾಯಿಸಲು ಆತ್ಮಸ್ಥೈರ್ಯ ಮುಖ್ಯ.…

Read More

ದೊಡ್ಡಬಳ್ಳಾಪುರ:  70 ವರ್ಷ ವಯಸ್ಸಿನ ವೃದ್ಧರೊಬ್ಬರನ್ನು ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ವಾಸುದೇವನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು,  ಮೃತ ವ್ಯಕ್ತಿಯನ್ನು ಈರಣ್ಣ (70) ಎಂದು ಗುರುತಿಸಲಾಗಿದೆ. ಈರಣ್ಣ ದೊಡ್ಡಬಳ್ಳಾಪುರದ ವಾಸುದೇವನಹಳ್ಳಿಯ ತಮ್ಮ ಮನೆಯ ಹೊರಗೆ ರಾತ್ರಿ ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಕುತ್ತಿಗೆಯಲ್ಲಿ ಚಾಕು ಇರಿದಿರುವುದು ಕಂಡು ಬಂದಿದೆ.  ಈರಣ್ಣ ಅವರ ಕುತ್ತಿಗೆಗೆ ಚಾಕು ಹಾಕಿ ಹಾಗೇ ಬಿಟ್ಟಿರುವ ದುಷ್ಕರ್ಮಿಗಳು ನಂತರ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಬೆಳಗ್ಗೆ ಮನೆಯವರು ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್  ಠಾಣೆಯಲ್ಲಿ  ದೂರು ನೀಡಿದ್ದು, ದೂರನ್ನಾಧರಿಸಿ ಸ್ಥಳಕ್ಕೆ ಭೇಟಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ನಾನು ಸತ್ಯ ಹುಡುಕಲು ಹೋಗ್ತಿದ್ದೀನಿ, ನಾನು ವಿಷ್ಣುವಿನ ಮಗ ಎಂದು ಪತ್ರ ಬರೆದಿಟ್ಟು ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ ಮೋಹಿತ್ ಋಷಿ ನಾಪತ್ತೆಯಾದ ಯುವಕನಾಗಿದ್ದಾನೆ. ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗ್ತಿದ್ದೇನೆ, ನಾನು ವಿಷ್ಣುವಿನ ಮಗ, ನಾನು ಸತ್ಯವನ್ನು ಹುಡುಕಲು ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಮೊಬೈಲ್ ಮನೆಯಲ್ಲಿಯೇ ಬಿಟ್ಟು ಯುವಕ ಮನೆಯಿಂದ  ನಾಪತ್ತೆಯಾಗಿದ್ದಾನೆ. ಜ.16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಇದ್ದಕ್ಕಿದ್ದ ಹಾಗೆ ಯುವಕ ಮನೆ ಬಿಟ್ಟು ಹೊರಟು ಹೋಗಿದ್ದಾನೆ. ಸದ್ಯ ಘಟನೆಯಿಂದ ಆತಂಕಕ್ಕೊಳಗಾದ ಯುವಕನ ಪೋಷಕರು ಕೊಡಿಗೇಹಳ್ಳಿ ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿ ಮೋಹಿತ್ ಗಾಗಿ ಹುಡುಕಾಟ ಆರಂಭಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು ನಡೆದಿದ್ದು, ಸುಪ್ರೀಂಕೋರ್ಟ್ ಏಳು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂಕೋರ್ಟ್ ನಲ್ಲಿ ಜಾಮೀನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ಸರ್ಕಾರ ಪರ ವಕೀಲರು ತಮ್ಮ ವಾದ ಮಂಡಿಸಿದ್ದು,  ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ ಎಂದು ಮನವಿ ಮಾಡಿದ್ದಾರೆ.  ದರ್ಶನ್‌ ಅವರು ಸೆಲೆಬ್ರಿಟಿ ಆಗಿದ್ದು, ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ಪ್ರಭಾವ ಬಳಸಿ ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇದೆ  ಎಂದೂ ಉಲ್ಲೇಖಿಸಲಾಗಿದೆ.  ಹೈಕೋರ್ಟ್ ಪರಿಗಣಿಸದ ಹಲವು…

Read More

ಬೆಂಗಳೂರು: ಪಕ್ಷಕ್ಕೆ ಬರುವಂತೆ ಶ್ರೀರಾಮುಲು  ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಶ್ರೀರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆಗೆ  ವಿಧಾನಸೌಧದ ಬಳಿ ಸ್ಪಷ್ಟನೆ ನೀಡಿದ ಅವರು,  ಆತ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾನೆ. ಆತ ಆ ಪಕ್ಷದಲ್ಲಿಯೇ ಇರಲಿಲ್ಲ. ಈಗ ಆ ಪಕ್ಷಕ್ಕೆ ಕಾಲಿಟ್ಟು, ಆ ಮನೆಯನ್ನೇ ಒಡೆಯುವ ಪ್ರಯತ್ನ ಮಾಡುತ್ತಿದ್ದಾನೆ ಎಂದರು. ನಾನು ಆತನ ಹೆಸರು ಹೇಳಿ ಅವನನ್ನು ಏಕೆ ದೊಡ್ಡ ಮನುಷ್ಯನನ್ನಾಗಿ ಮಾಡಲಿ? ಆತ ನನ್ನ ಹೆಸರು ತೆಗೆದುಕೊಂಡರೆ ದೊಡ್ಡವನಾಗುತ್ತಾನೆಯೇ? ನಾನು ಸಂಪರ್ಕದಲ್ಲಿ ಇರುವುದನ್ನು ಆತ ನೋಡಿದ್ದಾನೆಯೇ? ಆತನೇ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ. ನಾನು ಯಾವುದನ್ನು ಬಹಿರಂಗಗೊಳಿಸಲು ಹೋಗುವುದಿಲ್ಲ ಎಂದು ಕಿಡಿಕಾರಿದರು. ಈ ಹಿಂದೆ ಚುನಾವಣೆಗೆ ಮುಂಚಿತವಾಗಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದು ನಿಜ. ಆಗ ಅವರು ಬರುವುದಿಲ್ಲ, ಬಿಜೆಪಿಯಲ್ಲಿಯೇ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು. ನಾನು ಆ ರೀತಿ ಸುಮಾರು…

Read More

ತಿಪಟೂರು:  ನಗರದ ನಗರಸಭೆ ಪಕ್ಕದಲ್ಲಿ  ಅತ್ಯಾಧುನಿಕ ಉಪಕರಣಗಳನ್ನ ಒಳಗೊಂಡ ಶೇಖರ್ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ ನಡೆಯಲಿದೆ ಎಂದು ಬ್ಲಡ್ ಬ್ಯಾಂಕ್  ಮುಖ್ಯಸ್ಥರಾದ ಡಾ.ಸೋಮಶೇಖರ್ ತಿಳಿಸಿದ್ದಾರೆ. ನಗರದ ಶೇಖರ್ ಬ್ಲಡ್ ಬ್ಯಾಂಕ್ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಪತರು ನಾಡಿನ ಜನರ ಬಹುದಿನಗಳ ಬೇಡಿಕೆಯಾಗಿದೆ.  ಬ್ಲಡ್ ಬ್ಯಾಂಕ್ ಫೆಬ್ರವರಿ 2ರಂದು ಪ್ರಾರಂಭೋತ್ಸವ ನಡೆಯಲಿದೆ. ಅತಿಥಿಗಳಾಗಿ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ.   ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಷಡಕ್ಷರಿ,  ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ  ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕೆರಗೋಡಿ ರಂಗಾಪುರ ಭೂಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿಗಳು, ನೊಣವಿನಕೆರೆ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಋಷಭ ದೇಶೀಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಜಿಗಳು, ತಿಪಟೂರು ಗುರುಕುಲಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಬಸವ ದೇಶಿ ಕೇಂದ್ರ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.  ನಾಡಿನ  ರಾಜಕೀಯ…

Read More