Subscribe to Updates
Get the latest creative news from FooBar about art, design and business.
- ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
- ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
- ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
- ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
- ತುಮಕೂರಿನಲ್ಲಿ ಡ್ರೀಮ್ ಡೀಲ್ ಲಕ್ಕಿ ಡ್ರಾ: 53 ಜನರಿಗೆ ಭರ್ಜರಿ ಬಹುಮಾನ
- ನಟರಾಜು ಜಿ.ಎಲ್. ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ: ಸಮಾಜಮುಖಿ ಹೋರಾಟಕ್ಕೆ ಮನ್ನಣೆ
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
Author: admin
ವರದಿ: ಹಾದನೂರು ಚಂದ್ರ ಸರಗೂರು: ತಾಲೂಕಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವರ ಮೇಲೆ ಹುಲಿ ದಾಳಿ ನಡೆಸಿ, ಪ್ರಾಣ ಬಲಿ ಪಡೆದಿದೆ. ಬಡಗಲಪುರ ಗ್ರಾಮದಲ್ಲಿ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ರೈತನ ಮೇಲೆ ನರಭಕ್ಷಕ ಹುಲಿ ದಾಳಿ ನಡೆಸಿರುವ ಘಟನೆ ಮುಳ್ಳೂರು(ಬೆಣ್ಣೇಗೆರೆ) ಗ್ರಾಮದಲ್ಲಿ ಭಾನುವಾರ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಂಚಿನ ನುಗು ವನ್ಯಜೀವಿ ವಲಯ ಅರಣ್ಯದಂಚಿನ ಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಣ್ಣೇಗೆರೆ ಗ್ರಾಮದ ರಾಜಶೇಖರ್(65) ಹುಲಿ ದಾಳಿಯಿಂದ ಮೃತಪಟ್ಟವರು. ಮೃತರಿಗೆ ಒಬ್ಬರು ಪುತ್ರರು, ಪತ್ನಿ ಇದ್ದಾರೆ. ಇವರು ಜಮೀನಿನಲ್ಲಿ ದನ ಮೇಯಿಸುವಾಗ ಹುಲಿ ಏಕಾಏಕಿ ದಾಳಿ ನಡೆಸಿ, ಕುತ್ತಿಗೆಗೆ ಬಲವಾಗಿ ಕಚ್ಚಿದೆ. ತಿನ್ನಲು ಯತ್ನಿಸಿ 100 ಮೀ. ದೂರದವರೆಗೂ ಎಳೆದುಕೊಂಡು ಹೋಗಿದೆ. ಆದರೆ, ತಿಂದಿಲ್ಲ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದು, ರಾಜಶೇಖರ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೈತರ ಆಕ್ರೋಶ: ಹುಲಿ ದಾಳಿಯಿಂದ ರೈತ ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ…
ತಿಪಟೂರು: ತಿಪಟೂರು ನಗರಕ್ಕೆ ಹಾಸನ, ಅರಸೀಕೆರೆ, ಬೆಂಗಳೂರು, ಹುಳಿಯಾರು ಹಾಗೂ ತುರುವೇಕೆರೆ ಕಡೆಯಿಂದ ಪ್ರವೇಶಿಸಲು ಸಾಧ್ಯವಿದ್ದರೂ, ಈ ರಸ್ತೆಯಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಕಷ್ಟಕರ ಎನ್ನುವಂತಿದೆ ಈ ರಸ್ತೆಯ ಸ್ಥಿತಿ. ಹಾಲ್ಕುರಿಕೆ ರಸ್ತೆಯ ಗೋವಿನಪುರ, ಅಣ್ಣಾಪುರದ ಅಸುಪಾಸಿನಲ್ಲಿ ರಸ್ತೆ ಗುಂಡಿಗಳು ಎದುರಾಗುತ್ತವೆ. ತುರುವೇಕೆರೆ ದಿಕ್ಕಿನಿಂದ ಬರುವ ವಾಹನಗಳಿಗೆ ರೈಲ್ವೆ ಮಾರ್ಗದ ಬಳಿ ಗುಂಡಿಗಳ ಸಾಲು ವೆಲ್ ಕಂ ಮಾಡುತ್ತವೆ. ರಾತ್ರಿಯಂತೂ ರಸ್ತೆ ಗುಂಡಿಯಲ್ಲಿ ನೀರು ನಿಂತು ಗುಂಡಿಗೆ ಬಿದ್ದು ಎದ್ದು ಹೋಗುವ ದುಸ್ಥಿತಿ ಜನರದ್ದಾಗಿದೆ. ಬೆಂಗಳೂರು ಕಡೆಯಿಂದ ಬರುವಾಗ ಕೋಡಿ ವೃತ್ತದಿಂದಲೇ ರಸ್ತೆ ಸುಸಜ್ಜಿತವಾಗಿಲ್ಲ. ಯುಜಿಡಿ ನೀರು ಮಳೆ ನೀರಿನ ಜೊತ ಕಲೆತು ರಸ್ತೆ ಮೇಲೆ ಹರಿದು ದುರ್ವಾಸನೆ ಬೀರುತ್ತಿದೆ. ಚೆಂದನೇಹಳ್ಳಿ ಗಡಿಯಿಂದ ತಿಪಟೂರು ಹಾಸನ ರಸ್ತೆಯಲ್ಲಿ ಆಳವಾದ ಗುಂಡಿಗಳಿದ್ದು, ಹಲವು ಅಪಘಾತ ಇಲ್ಲಿ ನಡೆದಿವೆ. ಗ್ರಾಮಾಂತರ ಪ್ರದೇಶದಲ್ಲಿ ಬೋಚಿಹಳ್ಳಿ ಮತ್ತಿಘಟ್ಟ ಜಿಲ್ಲಾ ರಸ್ತೆ, ಬಳವವೇರಲು ಹೊಸೂರು ರಸ್ತೆ, ವಿಘ್ನಸಂತೆ ಗ್ರಾಮ, ಹಾಲ್ಕುರಿಕೆ ಬೈರಾಪುರ ರಸ್ತೆ, ಹಾಲೇನಹಳ್ಳಿಯ ತಿರುವುಗಳಲ್ಲಿ ಆಳವಾದ ಗುಂಡಿಗಳಾಗಿವೆ.…
ತುರುವೇಕೆರೆ: ಇಂದು ತುರುವೇಕೆರೆಯ ಪ್ರವಾಸಿಮಂದಿರದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಸಲುವಾಗಿ (ವ್ಯಾಪ್ತಿ — ತುಮಕೂರುˌ ಚಿತ್ರದುರ್ಗˌ ಚಿಕ್ಕಬಳ್ಳಾಪುರˌ ದಾವಣಗೆರೆˌ ಕೋಲಾರ) ಈ ಕ್ಷೇತ್ರಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ಸ್ವಯಂಪ್ರೇರಿತರಾಗಿ ಬಂದು ತಮ್ಮ ತಮ್ಮ ತಾಲ್ಲೂಕು ಕಛೇರಿಯಲ್ಲಿ ನೋಂದಾಯಿಸಬೇಕೆಂದು ಡಿ.ಪಿ. ವೇಣುಗೋಪಾಲ್ ಮನವಿ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಭಾರತ ಚುನಾವಣಾ ಆಯೋಗವು ದಿನಾಂಕ 30.09.2025 ರಿಂದ ದಿನಾಂಕ 06.11.2025 ರವರೆಗೆ ಕಾಲಾವಕಾಶ ನಿಗದಿಪಡಿಸಿದ್ದು, ಎಲ್ಲಾ ಅರ್ಹ ಪದವೀಧರರು ನಮೂನೆ 18 ರಲ್ಲಿ ಪೂರಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಲು ಕೋರಿದರು. ಅಕ್ಟೋಬರ್ 30ಕ್ಕೆ ಪದವಿ ಉತ್ತೀರ್ಣರಾಗಿ ಮೂರು ವರ್ಷ ತುಂಬಿರಬೇಕು. ಈಗಾಗಲೇ ನೋಂದಣಿಯಾಗಿ ಮತದಾನ ಮಾಡಿದ ಪದವೀಧರರು ಮರು ನೋಂದಣಿ ಮಾಡಿಕೊಳ್ಳಬೇಕು. ಅರ್ಜಿಗಳನ್ನು ಸಲ್ಲಿಸಲು ಬೇಕಾದ ದಾಖಲೆಗಳು: 1) ಪದವಿ ಕಾನ್ವೋಕೇಶನ್ ಸರ್ಟಿಫಿಕೇಟ್ 2) ಆಧಾರ್ ಕಾರ್ಡ್ 3) ಚುನಾವಣಾ ಗುರುತಿನ…
ಕುಣಿಗಲ್: ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲಾಗುತ್ತಿದೆ ರಾಗಿ ಖರೀದಿ ಕೇಂದ್ರಗಳಲ್ಲಿ ರಾಗಿ ಬೋಕರ್ ಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಪ ಕೇಳಿಬಂದಿದೆ. ಇದನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು ಇಲ್ಲ ಎಂದರೆ ಸಂಬಂಧಪಟ್ಟ ಅಧಿಕಾ ರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಶಾಸಕ ಡಾ.ಎಚ್.ಡಿ.ರಂಗನಾಥ್ ಎಚ್ಚರಿಕೆ ನೀಡಿದರು. ಅವರು ಪಟ್ಟಡದ ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ರೈತರು ಆರ್ಥಿಕವಾಗಿ ಸಬಲರಾಗಲಿ ಎಂದು ರೈತ ಬೆಳೆದಂತ ರಾಗಿಗೆ ಪ್ರತಿ ಕ್ವಿಂಟಾಲಿಗೆ 4,886 ರೂಗಳನ್ನು ನಿಗದಿ ಮಾಡಿದೆ ಪ್ರತಿ ರೈತರಿಂದ 1 ಎಕರೆಗೆ ಕನಿಷ್ಠ 10 ಕ್ವಿಂಟಾಲ್ ನಿಂದ ಗರಿಷ್ಠ 50 ಕ್ವಿಂಟಾಲ್ ಮೀರದಂತೆ ರಾಗಿಯನ್ನ ಖರೀದಿ ಮಾಡಲಾಗುವುದು, ಈ ಬಾರಿ ಸರ್ಕಾರ ಹದಿನೈದು ಕೋಟಿ ರೂ.ಗಳ ರಾಗಿಯನ್ನು ಖರೀದಿ ಮಾಡಲಾಗುತ್ತದೆ. ರಾಗಿ ಬೆಳೆದಂತಹ ರೈತರು ಉತ್ತಮ ಗುಣಮಟ್ಟದ ರಾಗಿಯನ್ನು ಖರೀದಿ ಕೇಂದ್ರಕ್ಕೆ ಹಾಕಬೇಕು, ರಾಗಿ…
ತುಮಕೂರು: ಅನುಸೂಚಿತ ಬುಡಕಟ್ಟು ಸಮುದಾಯದ ವಿರುದ್ಧ ಅವಮಾನಕಾರಿ, ಜಾತಿ ನಿಂದನೆ ಮಾಡಿದ ಮಾಜಿ ಸಂಸದ ರಮೇಶ್ ವಿಶ್ವನಾಥ ಕತ್ತಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಶುಕ್ರವಾರ ನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಅನುಸೂಚಿತ ಬುಡಕಟ್ಟು ಸಮುದಾಯದ ವಿರುದ್ಧ ಜಾತಿ ನಿಂದನೆ ಮಾಡಿದ ರಮೇಶ್ ಕತ್ತಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಹೇಳಿದ ಮುಖಂಡರು, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು. ನಗರದ ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ಜಿ. ಪುರುಷೋತ್ತಮ್ ಮಾತನಾಡಿ, ಮಾಜಿ ಸಂಸದ ರಮೇಶ್ ಕತ್ತಿಯವರು ಬೆಳಗಾವಿಯಲ್ಲಿ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನ ಪ್ರಕ್ರಿಯೆ ಸಂದರ್ಭದಲ್ಲಿ ಅನುಸೂಚಿತ ಬುಡಕಟ್ಟು ಸಮುದಾಯವನ್ನು ಕೆಟ್ಟ ಪದಗಳಿಂದ ಅವಹೇಳಕಾರಿಯಾಗಿ ನಿಂದಿಸಿದ್ದರು. ಅವರ ವಿರುದ್ಧ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು ಎಂದು ಮನವಿ ಮಾಡಿದರು. ರಮೇಶ್ ಕತ್ತಿ ಬಳಸಿರುವ ಪದ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾ ನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನವೆಂಬರ್ 8ರಂದು ಆಚರಿಸಲಾಗುವ “ಸಂತ ಶ್ರೇಷ್ಟ ಕನಕದಾಸರ ಜಯಂತ್ಯುತ್ಸವ” ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕುರುಬ ಸಮುದಾಯದ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವ ಬರಹದ ಅರ್ಜಿಯನ್ನು ನವೆಂಬರ್ 3ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ ಬಾಳನಕಟ್ಟೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2275204ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲೆಯ ಕುಣಿಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಾಲಯದಲ್ಲಿರುವ 15,025 ಹಳೆ/ಅನುಪಯುಕ್ತ ಪುಸ್ತಕಗಳನ್ನು ನವೆಂಬರ್ 3ರಂದು ಮಧ್ಯಾಹ್ನ 3 ಗಂಟೆಗೆ ಟೆಂಡ ಕಂ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುವುದು. ಅರ್ಜಿ ನಮೂನೆಯನ್ನು ಅಕ್ಟೋಬರ್ 29ರವರೆಗೆ ಕಾಲೇಜಿನ ಪ್ರಾಂಶುಪಾಲರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 31ರ ಸಂಜೆ 4 ಗಂಟೆಯೊಳಗೆ ಸಲ್ಲಿಸಬಹುದು ಎಂದು ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕಾದರೆ ದೂರ ದೃಷ್ಠಿಯನ್ನು ಇಟ್ಟುಕೊಳ್ಳಬೇಕು ಹಾಗೂ ಯೋಜನೆಗಳಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯವಾಗಿದೆ ಎಂದು ಪಟ್ಟನಾಯ್ಕನಹಳ್ಳಿಯ ಸ್ಪಟಿಕಮುರಿಯ ಪೀಠಾಧ್ಯಕ್ಷ ಶ್ರೀ ನಂಜಾವದೂತಸ್ವಾಮೀಜಿ ತಿಳಿಸಿದರು. ಅವರು ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದ ಬಳಿಯ ಭಂಢಾರದಹಳ್ಳಿಯ ಶ್ರೀಭಂಡಾರದಮ್ಮ ದೇವಿಯ ನೂತನ ದೇವಾಲಯ ಜೀರ್ಣೋದ್ದಾರ ಹಾಗೂ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸರ್ಕಾರದ ಹಲವು ಯೋಜನೆಗಳಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯವಾಗುತ್ತಿದೆ. ಇಂತಹ ತಾರತಮ್ಯಗಳ ಬಗ್ಗೆ ಸರ್ಕಾರಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪರಿಹಾರ ನೀಡುವಾಗ ಹಲವು ತಾಂತ್ರಿಕ ಕಾರಣಗಳನ್ನು ನೀಡಿ ಬುದ್ದಿವಂತಿಕೆಯನ್ನು ತೋರುತ್ತಾರೆ. ಇದ ಬಂದ ರೈತರಿಗೆ ಅನ್ಯಾಯವಾಗುತ್ತಿದ್ದು ನೀರಾವರಿ ಯೋಜನೆಗಳು ರೈತರ ಬಾಳಿಗೆ ಗೋಳಿನ ಘಟನೆಗಳಾಗಬಾರದು, ಇಂತಹವುಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸ ಬೇಕಾಗುತ್ತದೆ. ಉದಾಹರಣೆಗೆ ಕೊರಟಗೆರೆ ತಾಲೂಕಿನಲ್ಲಿ ಎತ್ತಿನಹೊಳೆ ಯೋಜನೆಯಲ್ಲಿ ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ರೈತರುಗಳ ಒಂದೇ ಬದುವಿನ ಎರಡು ಜಮೀನುಗಳಿಗೆ ಬೇರೆ ಬೇರೆ…
ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಮಾಜಿ ಶಾಸಕರೊಬ್ಬರಿಗೆ ಹೋರಿಯೊಂದು ತಿವಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ದೀಪಾವಳಿ ಪ್ರಯುಕ್ತ ಎರಡು ದಿನಗಳ ಹಿಂದೆ ಬಳ್ಳಿಗಾವಿಯಲ್ಲಿ ಸಾಂಪ್ರಾದಾಯಿಕ ಗ್ರಾಮೀಣ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯನ್ನು ವೀಕ್ಷಿಸಲು ಶಿಕಾರಿಪುರದ ಮಾಜಿ ಶಾಸಕ ಮಹಾಲಿಂಗಪ್ಪ ತೆರಳಿದ್ದರು. ಮನೆಯೊಂದರ ಬಾಗಿಲ ಮುಂದೆ ಹೋರಿ ಬೆದರಿಸುವ ಸ್ಪರ್ಧೆ ನೋಡುತ್ತಾ ನಿಂತಿದ್ದಾಗ ಅಲ್ಲಿಗೆ ಬಂದ ಹೋರಿ, ಒಂದೆರಡು ಬಾರಿ ಮಹಾಲಿಂಗಪ್ಪ ಅವರನ್ನು ತಿವಿದು ಎತ್ತಿಹಾಕಿದೆ. ಸಣ್ಣಪುಟ್ಟ ಗಾಯಗಳಿಂದ ಮಹಾಲಿಂಗಪ್ಪ ಚೇತರಿಸಿಕೊಂಡಿದ್ದಾರೆ. ಮನೆಯೊಂದರ ಬಾಗಿಲತ್ತ ಓಡುತ್ತಿದ್ದ ಮಹಾಲಿಂಗಪ್ಪ ಅವರಿಗೆ ಹೋರಿ ಬಿಳಿ ಬೂದು ಬಣ್ಣದ ಹೋರಿ ಎರಡು ಬಾರಿ ಕೊಂಬಿನಿಂದ ತಿವಿದಿದ್ದೆ. ತದನಂತರ ಅವರು ಅಂಗಾತ ಮಲಗಿದ್ದಾರೆ. ನಂತರ ಹೋರಿ ಅಲ್ಲಿಂದ ಬೇರೆಡೆಗೆ ಓಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಜಿ ಶಾಸಕರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಳಗಾವಿ: 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶನಿವಾರ ಬೆಳಗಾವಿ ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚೆನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸ್ವಾಭಿಮಾನಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು. ಬಾಬಾ ಸಾಹೇಬ್ ಪಾಟೀಲರು…