Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ಮಧುಗಿರಿ: ತುಮುಲ್ ಚುನಾವಣೆ ನಡೆದು 14 ತಿಂಗಳು ಕಳೆದಿದ್ದು ಸುಪ್ರೀಂ ಕೋರ್ಟಿನ ತೀರ್ಪಿನಿಂದಾಗಿ ಮತ್ತೆ ಕ್ಷೇತ್ರದ ಹೈನುಗಾರರ ಸೇವೆಗೆ ಮರಳುತ್ತಿರುವುದಕ್ಕೆ ಸಂತಸವಾಗಿದೆ ಎಂದು ನೂತನ ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು. ಪಟ್ಟಣದ ತುಮುಲ್ ಕಚೇರಿಗೆ ಅಭಿಮಾನಿಗಳೊಂದಿಗೆ ಅದ್ದೂರಿಯಾಗಿ ಪ್ರವೇಶಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಒಂದು ದಿನ ಮುಂಚೆ ಇದ್ದ ಅರ್ಹ ಮತದಾರರ ಪಟ್ಟಿಯಿಂದ ನನ್ನನ್ನು ಬಿಟ್ಟ ತುಮುಲ್ ಅಧಿಕಾರಿಗಳು ಹಿರಿಯ ಅಧಿಕಾರಿಗಳ ಹೆಸರು ಹೇಳಿ ನನಗೆ ಮೋಸ ಮಾಡಿದ್ದರು. ಆದರೆ ಹಿರಿಯ ಅಧಿಕಾರಿಗಳಿಂದ ಅಂತಹ ಯಾವುದೇ ಪ್ರಸ್ತಾವಣೆ ಇರಲಿಲ್ಲ. ಇದನ್ನು ನ್ಯಾಯಾಲಯದ ಗಮನಕ್ಕೆ ತಂದಾಗ ನನಗೆ ಮತದಾನದ ಹಕ್ಕು ಸಿಕ್ಕಿತು. ನಂತರ ಚುನಾವಣೆಯಲ್ಲಿ ಅನರ್ಹಗೊಂಡ ಡೇರಿಗಳ ಡೆಲಿಗೇಟ್ ಮತದಾರರನ್ನು ಅರ್ಹ ಎಂದು ಮತದಾರರ ಪಟ್ಟಿ ಮರು ಮುದ್ರಣವಾಯಿತು. ಇದು ಕೂಡ ಕಾನೂನು ಬಾಹಿರವಾಗಿದ್ದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು ಅಲ್ಲೂ ನನ್ನ ಪರವಾಗಿ ನ್ಯಾಯವನ್ನು ಎತ್ತಿ ಹಿಡಿಯಲಾಯಿತು. ಆದರೂ ವಿನಾಕಾರಣ ಗೊಂದಲದಿಂದ ಪ್ರಕರಣ ಮುಂದೆ ಹೋಗಿದ್ದು ಈಗ…
ಕುಣಿಗಲ್: ಜನಗಣತಿ ತರಬೇತಿ ವೇಳೆಯಲ್ಲಿ ಶಿಕ್ಷಕಿಯೊಬ್ಬರು ತೀವ್ರ ರಕ್ತದೊತ್ತಡದಿಂದ ಕುಸಿದು ಬಿದ್ದ ಘಟನೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ. ಬಿದನಗೆರೆ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ ಆರ್.ಮಂಜುಳ (45) ಕುಸಿದು ಬಿದ್ದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನ ಗಣತಿ ಅಂಗವಾಗಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಎಂದಿನಂತೆ ಶಿಕ್ಷಕಿ ಮಂಜುಳ ಮಂಗಳವಾರ ಜನಗಣತಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ತರಬೇತಿ ವೇಳೆ ಶಿಕ್ಷಕಿ ಆರ್.ಮಂಜುಳ ದಿಢೀರನೇ ಕುಸಿದು ಬಿದ್ದರು. ತಕ್ಷಣ ಅಲ್ಲಿಯೇ ಇದ್ದ ತಹಶೀಲ್ದಾರ್ ಎನ್.ಆರ್.ಕರಿಯಾನಾಯ್ಕ ತಮ್ಮ ಸರ್ಕಾರಿ ಬುಲೆರೋ ವಾಹನದಲ್ಲಿ ಶಿಕ್ಷಕಿಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಶಿಕ್ಷಕಿ ಮಂಜುಳ ಆರೋಗ್ಯವನ್ನು ವಿಚಾರಿಸಿದ ತಹಶೀಲ್ದಾರ್ ಅವರನ್ನು ಮನೆಗೆ ಕಳಿಸಿಕೊಟ್ಟರು. ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾಮಣಿ, ಜನಗಣತಿ ತರಬೇತಿಗೆ ಶಿಕ್ಷಕರನ್ನು ಕಳಿಸಿ ಕೊಡುವ ವೇಳೆಯಲ್ಲಿ ಅವರ ಆರೋಗ್ಯವನ್ನು ವಿಚಾರಿಸಲಾಗಿದ್ದು, ಆರೋಗ್ಯ ಸರಿಯಿಲ್ಲದವರಿಂದ ಮಾಹಿತಿ ಪಡೆದು ಅವರನ್ನು…
ತುಮಕೂರು: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ತಾಲೂಕು ಮಟ್ಟದ ಜನತಾ ದರ್ಶನ–ಜನಸ್ಪಂದನ ಕಾರ್ಯಕ್ರಮ ಯಶಸ್ವಿಗೊಳಿಸಿದ ಬೆನ್ನಲ್ಲೇ ಇಂದು ಬೆಳಗ್ಗೆ 11ಕ್ಕೆ ಜಿಲ್ಲಾಮಟ್ಟದ ಬೃಹತ್ ಜನತಾದರ್ಶನ/ಜನಸ್ಪಂದನ ಕಾರ್ಯಕ್ರಮವನ್ನು ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಆಯೋಜಿಸಿದೆ. ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಲುವಾಗಿ ಹತ್ತು ಕೌಂಟರ್ ಗಳನ್ನು ಗ್ರಂಥಾಲಯ ಸಭಾಂಗಣದ ಕಾರಿಡಾರ್ ನಲ್ಲಿ ತೆರೆದಿದ್ದು, ಈ ಕೌಂಟರ್ ಗಳಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕೌಂಟರ್ ಗಳಲ್ಲಿ ಇ–ಜಿಆರ್ ಎಸ್ ತಂತ್ರಾಂಶ ಒಳಗೊಂಡ ಡಾಟಾ ಎಂಟ್ರಿ, ಕಂಪ್ಯೂಟರ್ ವ್ಯವಸ್ಥೆ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗಿದ್ದು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮ ರೂಪಿಸುವ ಸಂಬಂಧ ಆದೇಶವನ್ನು ನೀಡಲಾಗಿದೆ ಎಂದು…
ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ. ಮಳವಳ್ಳಿ ಮೂಲದ ಪ್ರಸನ್ನ ಎಂಬುವವರು ಮಾಜಿ ಶಾಸಕರ ವಿರುದ್ಧ ಈ ಆರೋಪ ಮಾಡಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮುಂದೆ ನ್ಯಾಯಕ್ಕಾಗಿ ಕಣ್ಣೀರಿಟ್ಟಿದ್ದಾರೆ. ಸೋಮವಾರ ಮಂಡ್ಯದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ದಿಶಾ’ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಪ್ರಸನ್ನ ಕುಮಾರ್ ಎಂಬ ವ್ಯಕ್ತಿ, ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. “ನನ್ನ ಪತ್ನಿ ಮತ್ತು ಮಾಜಿ ಶಾಸಕ ಅನ್ನದಾನಿ ನಡುವೆ ಕಳೆದ 10 ವರ್ಷಗಳಿಂದ ಅಕ್ರಮ ಸಂಬಂಧವಿದೆ. ಇದರಿಂದ ನನ್ನ ಸಂಸಾರ ಬೀದಿಗೆ ಬಂದಿದೆ. ಅನ್ನದಾನಿ ಅವರು ನನ್ನ ಪತ್ನಿಗೆ ಮೈಸೂರಿನಲ್ಲಿ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಅಪಾರ್ಟ್‌ಮೆಂಟ್ ಕೊಡಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ನನಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ನನ್ನ ಮೇಲೆಯೇ ಮಾನನಷ್ಟ…
ದಾವಣಗೆರೆ: ದೇಶದಲ್ಲಿ ಆಟೋ ಎಲ್ ಪಿಜಿ (LPG) ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ಆಟೋ ಚಾಲಕರು ತಾತ್ಕಾಲಿಕವಾಗಿ ಎಲ್ ಪಿಜಿ ಬದಲು ಪೆಟ್ರೋಲ್ ಬಳಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲ್ ದೇಶದಲ್ಲಿ ಯಾವಾಗಲೂ ಲಭ್ಯವಿರುತ್ತದೆ. ಆದರೆ ಆಟೋ ಎಲ್ ಪಿಜಿ ವಿಶ್ವದ ಕೆಲವೇ ದೇಶಗಳಲ್ಲಿ ಮಾತ್ರ ಲಭ್ಯವಿರುವ ಕಾರಣ ಅದರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಅವರು ತಿಳಿಸಿದರು. ಕರ್ನಾಟಕದಲ್ಲಿ ಒಟ್ಟು 372 ಆಟೋ ಎಲ್ ಪಿಜಿ ವಿತರಣಾ ಕೇಂದ್ರಗಳಿದ್ದು, ಈ ಪೈಕಿ ಸರ್ಕಾರಿ ಸ್ವಾಮ್ಯದ ಕೇಂದ್ರಗಳು ಕೇವಲ 72 ಮಾತ್ರ. ಉಳಿದ 300 ಕೇಂದ್ರಗಳನ್ನು ಖಾಸಗಿ ಕಂಪನಿಗಳು ನಿರ್ವಹಿಸುತ್ತಿವೆ. ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯಾಗಿರುವ ಕಾರಣ ಖಾಸಗಿ ಕಂಪನಿಗಳು ಎಲ್ ಪಿಜಿ ದರವನ್ನು ಪ್ರತಿ ಕೆ.ಜಿ.ಗೆ 110 ರೂಪಾಯಿಗಳವರೆಗೆ ಹೆಚ್ಚಿಸಿವೆ. ಆದರೆ ಸರ್ಕಾರಿ ಕೇಂದ್ರಗಳಲ್ಲಿ ದರ ಏರಿಕೆ ಮಾಡದ ಕಾರಣ ಅಲ್ಲಿ ಬೆಲೆ 89 ರೂಪಾಯಿಗಳಷ್ಟಿದೆ. ಇದೇ ಕಾರಣಕ್ಕೆ ಸರ್ಕಾರಿ…
ಬೆಂಗಳೂರು: ಸ್ಯಾಂಡಲ್‌ವುಡ್ ನ ಹಿರಿಯ ನಟಿ ಸುಧಾರಾಣಿ ಅವರು ತಮ್ಮ ಮತ್ತು ನಟ ಶಿವರಾಜ್‌ಕುಮಾರ್ ಅವರ ಬಗ್ಗೆ ಹರಡಿಸಲಾಗಿರುವ ಸುಳ್ಳು ಸುದ್ದಿಯ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಕೇವಲ ‘ವ್ಯೂವ್ಸ್’ ಮತ್ತು ಪ್ರಚಾರಕ್ಕಾಗಿ ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ‘ವ್ಯೂವ್ಸ್ ಮಾಫಿಯಾ’ ವಿರುದ್ಧ ಅವರು ಕೆರಳಿ ಕೆಂಡವಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ “ಸುಧಾರಾಣಿ ಅವರಿಗೆ ಶಿವರಾಜ್‌ಕುಮಾರ್ ಕಂಡರೆ ಪ್ರೀತಿ ಇತ್ತು ಮತ್ತು ಅವರನ್ನು ಮದುವೆಯಾಗಬೇಕೆಂಬ ಆಸೆ ಇತ್ತು” ಎಂಬ ಶೀರ್ಷಿಕೆಯಡಿ ಪೋಸ್ಟ್ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ ಸುಧಾರಾಣಿ ಅವರು ಯಾವುದೋ ಸಂದರ್ಶನದಲ್ಲಿ ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ ಎಂದು ಸುಳ್ಳು ಹೇಳಲಾಗಿತ್ತು. ಈ ಕಪೋಲಕಲ್ಪಿತ ಸುದ್ದಿಯನ್ನು ನೋಡಿ ಬೇಸರಗೊಂಡ ಸುಧಾರಾಣಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಖಡಕ್ ಉತ್ತರ ನೀಡಿದ್ದಾರೆ, “ಸ್ವಲ್ಪನಾದರೂ ನೈತಿಕತೆ ಇರಲಿ. ಕೇವಲ ವ್ಯೂವ್ಸ್‌ಗಾಗಿ ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಸರಿಯಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು…
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಅತಿ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಆತಂಕಕಾರಿ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಜ್ಯೋತಿ ಕಪಾಳೆ ಹಿರೇಮಠ (57) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂದರಖೇಡ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಜ್ಯೋತಿ ಅವರು ಬೀದರ್ ನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು ಮತ್ತು ವಾರಕ್ಕೊಮ್ಮೆ ಕಲಬುರಗಿಯಲ್ಲಿರುವ ತಮ್ಮ ಮನೆಗೆ ಬಂದು ಹೋಗುತ್ತಿದ್ದರು. ಕಲಬುರಗಿಯಿಂದ ಬೀದರ್ ಗೆ ಮರಳುವ ಮಾರ್ಗಮಧ್ಯೆ ಕಮಲಾಪುರ ತಾಲೂಕಿನ ಕಲ್ಮೂಡ ಬಳಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಮೊದಲು ಮಾರಕಾಸ್ತ್ರಗಳಿಂದ ಅವರನ್ನು ಕೊಚ್ಚಿ ಕೊಲೆ ಮಾಡಿದ ಹಂತಕರು, ನಂತರ ರಸ್ತೆ ಪಕ್ಕದಲ್ಲಿ ಸುಮಾರು 5 ಲೀಟರ್ ಪೆಟ್ರೋಲ್ ಸುರಿದು ಶವವನ್ನು ಸುಟ್ಟು ಹಾಕಿದ್ದಾರೆ. ಆರಂಭದಲ್ಲಿ ಕಲ್ಮೂಡ ಗ್ರಾಮದ ಮನೋಹರ್ ಎಂಬುವವರು ನೀಡಿದ ದೂರಿನ…
ಬೆಂಗಳೂರು: ರಾಜ್ಯದ ಮುಂಬರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಲಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ನಡೆಯಲಿರುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆಯಾ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ನೀಡಿರುವ ಸ್ಪಂದನೆಯೇ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಹೇಳಿದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂಬುದೆಲ್ಲಾ ಕೇವಲ ಊಹಾಪೋಹ, ಅಲ್ಲಿಯೂ ನಾವು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಅವರು ತಿಳಿಸಿದರು. ಇದೇ ವೇಳೆ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆಯ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಭಾರಿ ಆರ್ಥಿಕ ಅನ್ಯಾಯವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ದಕ್ಷಿಣದ ರಾಜ್ಯಗಳ ತೆರಿಗೆ ಹಣವನ್ನು ಉತ್ತರದ ರಾಜ್ಯಗಳಿಗೆ ಕೊಂಡೊಯ್ಯುವ ಹುನ್ನಾರ ಇದು. ಈ…
ಶಿರಾ/ತುಮಕೂರು: ದೇಶದಲ್ಲಿ ಸುಮಾರು 15 ಕೋಟಿ ಬಿಜೆಪಿ ಕಾರ್ಯಕರ್ತರು ಇದ್ದು, ಬಿಜೆಪಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವುದು ನಮ್ಮ ಮೂಲ ಉದ್ದೇಶ. ಪಕ್ಷಕ್ಕೆ ಕಾರ್ಯಕರ್ತರೇ ಶಾಶ್ವತ ಎಂದು ವಿಧಾನಪರಿಷತ್ ಸದಸ್ಯರು ಹಾಗೂ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲಾ ಸಂಘಟನೆ ಅಧ್ಯಕ್ಷ ಚಿದಾನಂದ್ ಎಂ.ಗೌಡ ಹೇಳಿದರು. ನಗರದ ಸೇವಾ ಸದನದಲ್ಲಿ ಸೋಮವಾರ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲಾ ಸಂಘಟನೆ ವತಿಯಿಂದ ಏರ್ಪಡಿಸಿದ್ದ ಭಾರತೀಯ ಜನತಾ ಪಕ್ಷದ 46ನೇ ವರ್ಷದ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಎಂದರೆ ದೇಶಭಕ್ತಿ ಅಖಂಡ ಭಾರತ ಹಾಗೂ ವಸುದೈವ ಕುಟುಂಬಕಂ ಎನ್ನುವ ಪಕ್ಷದಲ್ಲಿ ನಾವೆಲ್ಲರೂ ಇರುವುದೇ ನಮ್ಮ ಪುಣ್ಯ ಎಂದು ಅವರು ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷಕ್ಕೆ ಕರ್ನಾಟಕ ಹೆಬ್ಬಾಗಿಲು ಆಗಿದೆ ಎಂದರು. ನರೇಂದ್ರ ಮೋದಿಯವರು 2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಕುಮಾರು ಬದಲಾವಣೆ ತಂದಿದ್ದಾರೆ. ಗೃಹ ಮಂಡಳಿ ಮಂಡಳಿ ಯೋಜನೆ ಯಡಿ ಅಡುಗೆ ಅನಿಲ ಸಂಪರ್ಕ ಕೊಟ್ಟಿದ್ದಾರೆ. ಉಜ್ವಲ್…
ತುಮಕೂರು: ಪಕ್ಷದ ಕಾರ್ಯಕರ್ತರು ಬಿಜೆಪಿಯ ಇತಿಹಾಸ ತಿಳಿಯಬೇಕು. ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಪಕ್ಷದ ಧೈಯೋದ್ದೇಶಗಳನ್ನು ಜನರಿಗೆ ಪರಿಚಯಿಸಬೇಕು. ವಿವಿಧ ಆಯಾಮಗಳಲ್ಲಿ ಕೆಲಸ ಮಾಡುತ್ತಾ ಸಂಘಟನೆ ಮಾಡುವುದಕ್ಕೆ ಹಾಗೂ ಅಧಿಕಾರಕ್ಕೆ ಲಕ್ಷ್ಯವಹಿಸಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಕಾರ್ಯಕರ್ತರಿಗೆ ಸಲಹೆ ಮಾಡಿದರು. ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ ಬಿಜೆಪಿ ಸ್ಥಾಪನೆಗೆ ಕಾರಣಕರ್ತರಾದ ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಒಂದು ಸ್ಥಾನದಿಂದ ಆರಂಭಗೊಂಡು ಅಧಿಕಾರ ಹಿಡಿಯುವ ಮಟ್ಟಕ್ಕೆ ಬೆಳೆದಿರುವ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ರಾಷ್ಟ್ರೀಯತೆ, ಸ್ವದೇಶಿ, ದೇಶದ ಅಭಿವೃದ್ಧಿ ಎಂಬ ಸಿದ್ಧಾಂತಗಳಲ್ಲಿ ಯಾವತ್ತೂ ಹೊಂದಾಣಿಕೆ ಮಾಡಿಕೊಳ್ಳದೆ ಇಂದಿಗೂ ತನ್ನ ತತ್ವಸಿದ್ಧಾಂತಗಳಿಗೆ ಬಿಜೆಪಿ ಬದ್ಧವಾಗಿ ಮುನ್ನಡೆಯುತ್ತಿದೆ ಎಂದು ಹೇಳಿದರು. 1951ರಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರು ನೆಹರೂ ಸಂಪುಟದಿಂದ ರಾಜೀನಾಮೆ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲದೊಂದಿಗೆ ಭಾರತೀಯ…