Subscribe to Updates
Get the latest creative news from FooBar about art, design and business.
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
Author: admin
ಉತ್ತರ ಪ್ರದೇಶ: ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ–ಸಾಂಸ್ಕೃತಿಕ ಸಂಗಮವಾದ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿಂದು ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣನವರು ಪಾಲ್ಗೊಂಡು, ಧರ್ಮಪತ್ನಿ ಶೈಲಜಾ ಸೋಮಣ್ಣ ಅವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತಿರುವುದೇ ನಮ್ಮ ಜೀವಿತಾವಧಿಯ ಪುಣ್ಯ ಎನ್ನಲು ಹೆಮ್ಮೆಯೆನಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕವಾಗಿ ಜಗದ್ವಿಖ್ಯಾತವಾದ ಈ ಆಚರಣೆಯ ಪುಣ್ಯದಿಂದ ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಹಾಗೂ ತುಂಬಾಡಿ ರಾಮಯ್ಯ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ `ಮಣೆಗಾರ 25′ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡತನ ಶ್ರೇಣಿಕರಣದ ಅತ್ಯಂತ ಕೆಳಮಟ್ಟದಲ್ಲಿ ಇರುವಂತಹ ದಲಿತರ ಮೇಲೆ ಮೇಲ್ವರ್ಗದವರಿಂದ ಆಗುವ ದೌರ್ಜನ್ಯಗಳು, ಅವಮಾನ, ಕ್ರೌರ್ಯಗಳನ್ನು ಈ ಪುಸ್ತಕದಲ್ಲಿ ಕಾಣಬಹುದು ಎಂದರು. ಪತ್ರಕರ್ತ ರಘುನಾಥ್ ಚ.ಹ. ಮಾತನಾಡಿ, ಈ ಕೃತಿಯಲ್ಲಿ ಸಾಂಸ್ಕೃತಿಕ ಸಾಮಾಜಿಕ ಮಹತ್ವ ಎದ್ದು ಕಾಣಿಸುತ್ತದೆ. ಈ ಕೃತಿಯ ಮುಖಾಂತರ ಮಣೆಗಾರ ಎಂಬ ವ್ಯಕ್ತಿಯನ್ನು ವಿಶ್ವಮಾನವನನ್ನಾಗಿ ಲೇಖಕರು ಚಿತ್ರಿಸಿದ್ದಾರೆ. ಸೃಜನಶೀಲ ಭಾಷೆಯ ಉಪಯೋಗ ಮತ್ತು ಕಹಿಯನ್ನು ಮೀರಿದ ಕಾರುಣ್ಯ, ಶೋಷಣೆಯ ವಿರುದ್ಧದ ತಣ್ಣನೆಯ ಧ್ವನಿಯ ಮೂಲಕ ಸಾಂಸ್ಕೃತಿಕ ಅನನ್ಯತೆಯನ್ನು ಕಟ್ಟುವಲ್ಲಿ ಈ ಕೃತಿ ಯಶಸ್ವಿಯಾಗಿದೆ…
ತುಮಕೂರು: ಸಂಸ್ಕಾರ ಪಠ್ಯಪುಸ್ತಕಗಳನ್ನು ಓದುವುದರಿಂದ ಬರುವುದಲ್ಲ. ಮನೆತನದಿಂದ ಸಂಸ್ಕಾರ ಬೆಳೆಯಬೇಕು. ಸಂಸ್ಕಾರಯುತ ವ್ಯಕ್ತಿಗಳಿಂದ ಮಾತ್ರ ಸ್ವಸ್ಥಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿದ ಅವರು, ವ್ಯಕ್ತಿಗಳು ಕಾನೂನನ್ನು ಓದಿ ಅದನ್ನು ಪಾಲಿಸುವುದು ಬೇರೆ, ಹಿರಿಯರಿಗೆ, ತಂದೆ ತಾಯಿಯರಿಗೆ ಗೌರವ ಕೊಡುವುದೇ ಬೇರೆ ಎಂದರು. ವಿದ್ಯಾರ್ಥಿಗಳು ಬರೀ ತರಗತಿ, ಮೊಬೈಲ್ ಗಳಿಗೆ ಸೀಮಿತವಾಗದೆ ಸ್ಪರ್ಧೆ, ಕ್ರೀಡೆ, ಸಂಗೀತ, ಮನರಂಜನೆ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ತುಮಕೂರಿನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ, ಎಲ್ಲರಿಗೂ ಮೂರು ಮುಖವಿದೆ. ಅದರಲ್ಲಿಒಂದು ಜಗತ್ತಿಗೆ ತೋರಿಸುವ ಮುಖ, ಎರಡನೆಯದ್ದು ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ತೋರಿಸುವ ಮುಖ, ಮೂರನೆಯದ್ದು ಯಾರಿಗೂ ತೋರಿಸದೆ…
ತುಮಕೂರು: ಹಿರೇಹಳ್ಳಿ ಎಸ್.ಬಿ.ಐ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ 13 ದಿನಗಳ ಜೂಟ್ ಉತ್ಪನ್ನಗಳ ತಯಾರಿಕೆ(JUTE PRODUCTS UTPADAK) ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಅವಧಿಯಲ್ಲಿ ಉಚಿತ ವಸತಿ–ಊಟದ ವ್ಯವಸ್ಥೆ ಮಾಡಲಾಗುವುದು. ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ನೇರವಾಗಿ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ– ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕರ ಕಚೇರಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಜನವರಿ 28ರೊಳಗಾಗಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2243386, ಮೊ.ಸಂ. 9738351048, 9663680001ನ್ನು ಸಂಪರ್ಕಿಸಬಹುದಾಗಿದೆ ಎಂದು ತರಬೇತಿ ಸಂಸ್ಥೆ ನಿರ್ದೇಶಕ ಕೆ.ಎನ್. ವಾದಿರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ–1, 2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸೌಲಭ್ಯ ನೀಡಲು ಅರ್ಹರಿಂದ ಆನ್’ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಫೆಬ್ರವರಿ 5ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಇಲಾಖಾ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 26 ರಿಂದ 28ರವರೆಗೆ ನಗರದ ಎಸ್.ಎಸ್.ಪುರಂನಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ “ಫಲಪುಷ್ಪ ಪ್ರದರ್ಶನ”ವನ್ನು ಏರ್ಪಡಿಸಲಾಗಿದೆ. ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಅವರು ಜನವರಿ 26ರ ಸಂಜೆ 5 ಗಂಟೆಗೆ ಉದ್ಘಾಟಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಳಿಗೆಗಳ ಉದ್ಘಾಟನೆ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ತಾಂತ್ರಿಕ ಕರಪತ್ರ ಬಿಡುಗಡೆ ನೆರವೇರಿಸಲಿದ್ದು, ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಜನವರಿ 26ರ ಸಂಜೆ 5 ಗಂಟೆ ಹಾಗೂ 27ರ ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ರೈತಬಾಂಧವರು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಪಟ್ಟನಾಯಕನಹಳ್ಳಿ ಜಾತ್ರೆ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಟ್ಟನಾಯಕನಹಳ್ಳಿ ಶ್ರೀ ಓಂಕಾರೇಶ್ವರ ಸ್ವಾಮಿ ಜಾತ್ರಾ ಸಮಿತಿ ಸಹಯೋಗದಲ್ಲಿ ಜನವರಿ 25ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಶ್ರೀ ಗುರುಗುಂಡೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಕಬಡ್ಡಿ ಪಂದ್ಯಾವಳಿ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಪ್ರಥಮ–10000, ದ್ವಿತೀಯ–8000, ತೃತೀಯ–5000ರೂ.ಗಳ ನಗದು ಬಹುಮಾನವನ್ನು ನೀಡಲಾಗುವುದು. ಜಾನಪದ ಗೀತೆ(ವೈಯಕ್ತಿಕ), ಭಾವಗೀತೆ(ವೈಯಕ್ತಿಕ), ಏಕಪಾತ್ರಾಭಿನಯ(ವೈಯಕ್ತಿಕ) ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ತಲಾ 1000 ರೂ.ಗಳ ಪ್ರಥಮ ಹಾಗೂ 500 ರೂ.ಗಳ ದ್ವಿತೀಯ ಬಹುಮಾನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಹಾಗೂ ಕಲಾವಿದರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9742894304/ 9980588415ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ಸೇವಾನುಭವದ ಆಧಾರದಲ್ಲಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆಯಾದವರಿಗೆ ಮಾಸಿಕ 30,000 ರೂ.ಗಳ ಗೌರವಧನ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಫೆಬ್ರವರಿ 18ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ಪದವಿ/ ಸ್ನಾತಕ ಪದವಿ, ಅಪ್ಲಿಕೇಶನ್ ನಿರ್ವಹಣೆ ಕನಿಷ್ಟ 2 ವರ್ಷಗಳ ಸೇವಾನುಭವ, ಸ್ಥಳೀಯ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2956624ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 24ರಂದು ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಗೋಪಾಲದೇವರಹಳ್ಳಿ, ಕಳ್ಳಂಬೆಳ್ಳ, ಚಿಕ್ಕನಹಳ್ಳಿ, ದೊಡ್ಡಅಗ್ರಹಾರ, ಭೂಪಸಂದ್ರ, ಹಾಲೇನಹಳ್ಳಿ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ರೈತರು/ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಚೇಳೂರು–ತುಮಕೂರು ಮಾರ್ಗದ ಮುಖ್ಯ ರಸ್ತೆ ಅವ್ಯವಸ್ಥೆ ಬಗ್ಗೆ ನಮ್ಮ ತುಮಕೂರು ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಇದೀಗ ರಸ್ತೆ ದುರಸ್ತಿ ಕೆಲಸ ಆರಂಭಿಸಿದ್ದು, ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯವನ್ನ ಒದಗಿಸುವಲ್ಲಿ ಮತ್ತೊಮ್ಮೆ ನಮ್ಮತುಮಕೂರು ವರದಿಯು ಸಹಕಾರಿಯಾಗಿದೆ. ಚೇಳೂರು—ತುಮಕೂರು ರಸ್ತೆ ಅವ್ಯವಸ್ಥೆ ಬಗ್ಗೆ ನಮ್ಮತುಮಕೂರು “ರಸ್ತೆ ಗುಂಡಿಯೊಳಗೋ, ಗುಂಡಿಯೇ ರಸ್ತೆಯೋ? | ಚೇಳೂರು–ತುಮಕೂರು ಮುಖ್ಯ ರಸ್ತೆ ಅವ್ಯವಸ್ಥೆ” ಶೀರ್ಷಿಕೆಯಡಿ ಸವಿವರವಾದ ವರದಿ ಪ್ರಕಟಿಸಿ, ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯನ್ನು ಎಚ್ಚರಿಸಿತ್ತು. ಈ ವರದಿಯ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆಗೆ ಟಾರು ಹಾಕುವ ಮೂಲಕ ರಸ್ತೆ ದುರಸ್ತಿ ಮಾಡಿದ್ದು, ಸಾರ್ವಜನಿಕರು ನೆಮ್ಮದಿಯಿಂದ ವಾಹನ ಚಲಾಯಿಸಿಕೊಂಡು ಪ್ರಯಾಣಿಸಲು ಸಹಕಾರಿಯಾಗಿದೆ. ಚೇಳೂರು-ತುಮಕೂರು ಮಾರ್ಗದ ಮುಖ್ಯ ರಸ್ತೆಯ ಅವ್ಯವಸ್ಥೆಗೆ ತಾತ್ಕಾಲಿಕ ಮುಕ್ತಿದೊರಕಿದೆ. ರಸ್ತೆ ಹಾನಿಗೀಡಾದ ಪ್ರದೇಶಗಳಲ್ಲಿ ರಸ್ತೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಸಾರ್ವಜನಿಕರಿಗೆ ಗುಣಮಟ್ಟದ ರಸ್ತೆಯನ್ನು ದೊರಕಿಸಿಕೊಡುವಲ್ಲಿ ನಮ್ಮ ತುಮಕೂರು ವರದಿಯು ಸಹಕಾರಿಯಾಗಿದೆ. ವರದಿ: ಗಣೇಶ್, ಮಾರನಹಳ್ಳಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…