Author: admin

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರಿಂದ ಮೊದಲ ಬಾರಿಗೆ ನಾಮನಿರ್ದೇಶಕರಿಗೆ ಶಾಸಕರೊಬ್ಬರು ತುಮುಲ್ ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತುಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ವೆಂಕಟೇಶ್ 2 ನಾಮಪತ್ರ ಹಾಗೂ ಎನ್ ಡಿ ಎ ಅಭ್ಯಥಿಯಾಗಿ ಎಸ್.ಆರ್. ಗೌಡ ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನ 12 ಗಂಟೆಯಾದರೂ ಯಾರು ನಾಮಪತ್ರವನ್ನು ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು. ನಂತರ ಮತದಾನ ನಡೆದು ಶಾಸಕ ಹೆಚ್.ವಿ.ವೆಂಕಟೇಶ್ ಅವರು 9 ಮತಗಳನ್ನು ಪಡೆದರೆ, ಎಸ್.ಆರ್.ಗೌಡ 5 ಮತಗಳನ್ನು ಪಡೆದ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ ಅವರು ತುಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು. ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗದ್ದುಗೆಗೇರಲು ತೀವ್ರ ಪೈಪೋಟಿ…

Read More

ತುಮಕೂರು:  ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾವಿ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಜನವರಿ 23ರಂದು ಬೆಳಿಗ್ಗೆ 10:30 ಗಂಟೆಗೆ ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಅಸಾಂಕ್ರಾಮಿಕ ಕಾಯಿಲೆಗಳ ತಪಾಸಣೆ ಮತ್ತು ಋತುಬಂಧ ಕುರಿತು ಜನಜಾಗೃತಿ ಕಾರ್ಯಕ್ರಮ”ವನ್ನು ಏರ್ಪಡಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಬಿ.ಎಮ್. ಕಾರ್ಯಕ್ರಮವನ್ನು ಉದ್ಘಾಟಿಸುವರು. ಬೆಳ್ಳಾವಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಅಧ್ಯಕ್ಷತೆವಹಿಸುವರು. ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ, ಮಧುಮೇಹ, ರಕ್ತದೊತ್ತಡ,  ಋತುಬಂಧ ಕುರಿತು ಮಾಹಿತಿ ನೀಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಹೆಚ್.ಡಿ.ಕೋಟೆ: ತಾಲ್ಲೂಕಿನ ನೆಮ್ಮನ ಹಳ್ಳಿ ಗ್ರಾಮದ ಅಂಗನವಾಡಿ  ಕೇಂದ್ರದ ಆವರಣದಲ್ಲಿ,  ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಹೆಚ್.ಡಿ.ಕೋಟೆ  ಮತ್ತು ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಿ.ಮಟಕೆರೆ ಸಹಯೋಗದೊಂದಿಗೆ, ಉಚಿತ ದಂತ ತಪಾಸಣೆ  ಮತ್ತು ಚಿಕಿತ್ಸೆ ಶಿಬಿರ ಹಾಗೂ  ಬಾಯಿ ಆರೋಗ್ಯ  ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ  ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್ , ದಂತ ತಜ್ಞ ವೈದ್ಯರಾದ ಸಮೀವುಲ್ಲಾ ಷರೀಫ್ ರವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಚಂದ್ರ ಶೇಖರ್ ರವರು  ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಾರ್ವಜನಿಕ ಆಸ್ಪತ್ರೆ ದಂತ ತಜ್ಞ ರಾದ ಡಾ.ಸಮೀ ವುಲ್ಲಾ ಶರೀಫ್ ರವರು ಮಾತನಾಡಿ, ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಾಯಿ ಆರೋಗ್ಯದ ಮಹತ್ವವನ್ನು ತಿಳಿಸಿಕೊಡುವುದು ಎಂದರು. ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ ಏಕೆಂದರೆ ಅನೇಕ ಕಾಯಿಲೆಗಳ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ,…

Read More

ತುಮಕೂರು:  ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಚುನಾವಣೆಯಲ್ಲಿ  ಪಾವಗಡ ಶಾಸಕ ವೆಂಕಟೇಶ್ ತುಮೂಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಾಸಕ ವೆಂಕಟೇಶ್  9 ಮತಗಳ‌ ಭರ್ಜರಿಗೆ ಗೆಲುವು ದಾಖಲಿಸಿದ್ದಾರೆ.  ಪ್ರತಿಸ್ಪರ್ಧಿ ಎಸ್.ಆರ್. ಗೌಡ 5 ಮತಗಳನ್ನ ಪಡೆದು ಸೋಲನುಭವಿಸಿದ್ದಾರೆ. 14 ನಿರ್ದೇಶಕರನ್ನು  ಹೊಂದಿರುವ ತುಮೂಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪೆರ್ನಾಜೆ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನಲ್ಲಿ  ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್  ಆರ್ಟ್ಸ್ ) ವಿದುಷಿ  ಚೈತನ್ಯ ಕೋಟೆ  ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ಪ್ರಥಮ ರಾಂಕ್  ಗಳಿಸಿದ್ದಾರೆ. ಚೈತನ್ಯ ಕೋಟೆ   ಅವರು ಜನವರಿ  18ರಂದು ವಿಶ್ವವಿದ್ಯಾಲಯದಲ್ಲಿ ನಡೆದ 7, 8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಇವರು ಕುಕ್ಕೆ ಸುಬ್ರಹ್ಮಣ್ಯ ಸಮೀಪದ, ಬೂದಿಪಳ್ಳದ ಭಾಸ್ಕರ ಕೋಟೆ ಮತ್ತು ವೀಣಾ ಕೋಟೆ ಇವರ ಪುತ್ರಿ ಹಾಗೂ ಶ್ರೀ ತಿರುಮಲ ಭಟ್ ಇವರ ಪತ್ನಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪೆರ್ನಾಜೆ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಯುನಿವರ್ಸಿಟಿ ಮೈಸೂರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಜೂನಿಯರ್ ವಿಭಾಗದಲ್ಲಿ ಸ್ವರ ಸಿಂಚನ ಸಂಗೀತ ಶಾಲೆಯ ಆರು ಮಂದಿ ಹಾಗೂ ಸೀನಿಯರ್ ವಿಭಾಗದಲ್ಲಿ ಐದು ಮಂದಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶೇಕಡ 100% ಫಲಿತಾಂಶ ದಾಖಲಿಸಿದೆ ಎಂದು ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಸವಿತಾ ಕೋಡಂದೂರು ತಿಳಿಸಿದ್ದಾರೆ. ಜೂನಿಯರ್ ವಿಭಾಗದಲ್ಲಿ : ಅಶ್ವಿನಿ, ಸಾತ್ವಿಕ, ರಿತ್ವಿಕ ಇಂಚರ , ಪುಷ್ಪ ಬಲ್ಲಾಳ್ ಹಾಗೂ ವಾಣಿ ಸೀನಿಯರ್ ವಿಭಾಗದಲ್ಲಿ : ಪ್ರತಿಭಾ, ಪಲ್ಲವಿ ,ಭಾಗ್ಯಶ್ರೀ , ಕಿರಣ್ ಶ್ರೀ, ಮನೋಜ್ಞ. ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಜ.16 ಸ್ವರ ಸಿಂಚನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸುಗಮ ಸಂಗೀತ ಮಧುರ ಗಾನ ವೈಭವ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿ ಅವರ ಗದ್ದುಗೆ ದಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಧ್ಯಾನ ಮಂದಿರದಲ್ಲಿ ಕೆಲಕಾಲ ಕುಳಿತು ಪ್ರಾರ್ಥನೆ ಸಲ್ಲಿಸಿದರು. ನಂತರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀವಾದ ಪಡೆದರು. ಇದೇ ಸಂದಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ್: ಹಳ್ಳಿಖೇಡ್–ಬಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿ 560 ರೂಪಾಯಿಗಳನ್ನು ವಶಕ್ಕೆ ಪಡೆದುಕೊಂಡು ಕಾನೂನು ಕ್ರಮಕೈಗೊಂಡಿದ್ದಾರೆ. ಮಟಕಾ ಜೂಜಾಟ ದಾಳಿಯಲ್ಲಿ ಶ್ರಮಿಸಿದ ಹಳ್ಳಿಖೇಡ್–ಬಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ಮಂಠಾಳ ಪೊಲೀಸ್ ಠಾಣೆಯ ಪಿ.ಎಸ್.ಐ.ವಿಜಯಕುಮಾರ ನಾಯಕ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ್: ರಸ್ತೆ ಅಪಘಾತದಿಂದ ಸಂಭವಿಸುವ ಅಮಾಯಕರ ಪ್ರಾಣ ರಕ್ಷಣೆ ಮಾಡುವುದು ಮತ್ತು ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂತಪೂರ ಪೊಲೀಸರು ರಾಷ್ಟ್ರೀಯ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮ ಆಯೋಜಿಸಿದರು. ಪೊಲೀಸ್ ವರಿಷ್ಠಾಧಿಕಾರಿಗಳಾದ ಐ.ಪಿ.ಎಸ್. ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಸಂತಪೂರ ಪೊಲೀಸ್ ಠಾಣೆಯ ಪಿಎಸ್ ಐ ನಂದಕುಮಾರ ಅವರ ನೇತೃತ್ವದಲ್ಲಿ ಪೊಲೀಸರು ಸಾರ್ವಜನಿಕರಿಗೆ Save yourself to save your family always wear helmet & seat belt ಎಂಬ ವಾಕ್ಯದೊಂದಿಗೆ ಜಾಗೃತಿ ಮೂಡಿಸಿದರು. ಜನ ಸಾಮಾನ್ಯರ ಪ್ರಾಣ ರಕ್ಷಣೆ ಮತ್ತು ಅಪರಾಧ ತಡೆಯುವುದು, ನಡೆಯದಂತೆ ನಿಗಾ ವಹಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ , ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಶಾಪಿಂಗ್ ಕರೆದೊಯ್ಯಲಿಲ್ಲ ಎಂದು ನೊಂದು ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಬಾಲಕಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪೋಷಕರು ಆತ್ಮಹತ್ಯೆ ವಿಚಾರ ಪೊಲೀಸರಿಗೆ ಮಾಹಿತಿ ನೀಡದೆಯೇ ಅಂತ್ಯ ಸಂಸ್ಕಾರ ನಡೆಸಿದ ಘಟನೆ ನಡೆದಿದೆ. ಮಾಗಡಿ ತಾಲೂಕಿನ ಸೋಲೂರಿನ ಬಸವನಹಳ್ಳಿ ನಿವಾಸಿ ಧೃತಿ ಜಿ. ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದಾಳೆ. ಶನಿವಾರ ಸಂಜೆ 4 ರಿಂದ 5 ಗಂಟೆಯ ನಡುವೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೃಷಿಕರಾದ ಆಕೆಯ ತಂದೆ ಗಂಗಾಧರಯ್ಯ ಮತ್ತು ತಾಯಿ ಸಂಬಂಧಿಕರ ಮದುವೆಗೆಂದು ಶಾಪಿಂಗ್’ಗೆ ಹೋಗಿದ್ದರು. ದಂಪತಿಗೆ ದೃತಿ ಒಬ್ಬಳೇ ಮಗಳಿದ್ದು, ಈಕೆ ಪಿಯುಸಿ ಓದುತ್ತಿದ್ದಳು. ತನ್ನನ್ನು ಶಾಂಪಿಂಗ್’ಗೆ ಕರೆದುಕೊಂಡು ಹೋಗದ್ದಕ್ಕೆ ಬೇಸರಗೊಂಡಿದ್ದಳು. ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಕಾಲೇಜಿನಿಂದ ಮನೆಗೆ ಬಂದಿರುವ ಆಕೆ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಶಾಪಿಂಗ್ ಮುಗಿಸಿ ಮನೆಗೆ ಬಂದ ವೇಳೆ ಬಾಲಕಿ ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಿಸಿದರೆ, ದೇಹವನ್ನು ತುಂಡಾಗಿಸುತ್ತಾರೆಂಬ ಭಯದಿಂದ ಪೊಲೀಸರಿಗೆ…

Read More