Subscribe to Updates
Get the latest creative news from FooBar about art, design and business.
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
Author: admin
ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆರೋಪಿಯ ಮೊಣಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ದರೋಡೆ ನಡೆಸಿದ ಇಬ್ಬರು ಆರೋಪಿಗಳನ್ನು ಕೇಂದ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಣೇಶ್ (23) ಮತ್ತು ಶರವಣ (35) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಆರೋಪಿಗಳ ವಿರುದ್ಧ ಈಗಾಗಲೇ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಜ.19ರಂದು ರಾತ್ರಿ ಸುಮಾರು 11.30ಕ್ಕೆ ಕೆ.ಆರ್.ಮಾರುಕಟ್ಟೆ ಗೋಡೌನ್ ಸ್ಟ್ರೀಟ್ ನಲ್ಲಿ ತಮಿಳುನಾಡು ಮೂಲದ 37 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, 650 ರೂ. ನಗದು, ಚಿನ್ನದ ತಾಳಿ, ಓಲೆ, ಬೆಳ್ಳು ಕಾಲು ಚೈನ್ ಹಾಗೂ ಮೊಬೈಲ್ ದೋಚಿಕೊಂಡು ಆರೋಪಿಗಳು ಪರಾರಿಯಾಗಿದ್ದರು. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಗುಬ್ಬಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತಾಲ್ಲೂಕು ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಗುಬ್ಬಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನಿಗದಿತ ಅರ್ಜಿ ನಮೂನೆಯನ್ನು ಡಿ.ದೇವರಾಜ ಅರಸು ಭವನ, ಮಾರುತಿ ನಗರ, 6ನೇ ಅಡ್ಡರಸ್ತೆ, ರೈಲ್ವೇ ಸ್ಟೇಷನ್ ರಸ್ತೆ, ಗುಬ್ಬಿ ಪಟ್ಟಣ–572216 ಈ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜನವರಿ 31ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ : bceogubbi@gmail.com ಅಥವಾ ದೂ.ವಾ.ಸಂ. 08131–222456ನ್ನು ಸಂಪರ್ಕಿಸಬಹುದಾಗಿದೆ ಎಂದು ಗುಬ್ಬಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ “ಗಣರಾಜ್ಯೋತ್ಸವ ದಿನಾಚರಣೆ–2025” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸುವರು. ನಗರ ವಿಧಾನಸಭಾ ಕ್ಷೇತ್ರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು. ಅಂದು ಸಂಜೆ 4:30 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಜನವರಿ 27ರಂದು ಬೆಳಿಗ್ಗೆ 10 ಗಂಟೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ‘ಜಿಲ್ಲಾ ಮಟ್ಟದ ಮಾವು, ಬಾಳೆ ಬೆಳೆಗಳ ವಿಚಾರ ಸಂಕಿರಣ ಹಾಗೂ ತರಬೇತಿ’ ಕಾರ್ಯಕ್ರಮವನ್ನು ಏರ್ಪಡಿಸಿದೆ. ವಿಚಾರ ಸಂಕಿರಣದಲ್ಲಿ ಮಾವು ಬೆಳೆಯ ಸಮಗ್ರ ಬೇಸಾಯ ತಾಂತ್ರಿಕ ಪದ್ಧತಿ, ಮಾವು ಬೆಳೆಯ ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ, ಬಾಳೆ ಬೆಳೆಯ ಸಮಗ್ರ ಬೇಸಾಯ ತಾಂತ್ರಿಕ ಪದ್ಧತಿ, ಬಾಳೆ ಬೆಳೆಯ ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ, ಹಣ್ಣುಗಳ ತಾಂತ್ರಿಕ ಬೇಸಾಯ ಪದ್ಧತಿ, ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ಮಾರುಕಟ್ಟೆ ಕುರಿತು ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 8970870918, 9538287992, 7022679182, 8197516149ನ್ನು ಸಂಪರ್ಕಿಸಬಹುದಾಗಿದೆ. ರೈತ ಬಾಂಧವರು ಈ ವಿಚಾರ ಸಂಕಿರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಚಂದ್ರಶೇಖರ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾವಿ ಗ್ರಾಮ ಪಂಚಾಯತಿ ಹಾಗೂ ಶ್ರೀದೇವಿ ಮೆಡಿಕಲ್ ಕಾಲೇಜು ಆಸ್ಪತ್ರೆ ಗ್ರಾಮೀಣ ತರಬೇತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಸಿಂಗೀಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ “ಉಚಿತ ಆರೋಗ್ಯ ತಪಾಸಣೆ ಮತ್ತು ಕ್ಷಯರೋಗ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕಾಗಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮೋಹನ್ ದಾಸ್ ಮಾತನಾಡಿ, ಕ್ಷಯರೋಗ ಸಂಪೂರ್ಣವಾಗಿ ಗುಣಪಡಿಸಬಹುದಾದ ಒಂದು ರೋಗವಾಗಿದೆ. ಭಾರತವನ್ನು ಕ್ಷಯ ಮುಕ್ತವನ್ನಾಗಿಸಲು ಕರ್ನಾಟಕ ಸರ್ಕಾರ ನೂರು ದಿನಗಳ ಕ್ಷಯ ಮುಕ್ತ ಅಭಿಯಾನವನ್ನು ಹಮ್ಮಿಕೊಂಡಿದ್ದು, 2 ವಾರಕ್ಕಿಂತ ಹೆಚ್ಚು ಕೆಮ್ಮು ಅಥವಾ ಜ್ವರ, ತೂಕದಲ್ಲಿ…
ತುಮಕೂರು: ಶ್ರೀ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಲಿಂಗೈಕ್ಯ ಡಾ.ಶಿವಕುಮಾರ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ, ಸಮರ್ಪಣಾ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು. ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಮಂಗಳವಾರ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 6ನೇ ಪುಣ್ಯ ಸಂಸ್ಮರಣೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಳ ಜೀವನ ಮತ್ತು ಉನ್ನತ ಚಿಂತನೆಯ ತತ್ವವನ್ನು ಅನುಸರಿಸಿ, ಇತರರನ್ನು ಅದೇ ಮಾರ್ಗವನ್ನು ಅನುಸರಿಸಲು ಪ್ರೇರೇಪಿಸಿದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಸೇವೆಯನ್ನು ಮೆಚ್ಚಿ ಹಲವಾರು ರಾಷ್ಟ್ರ ಹಾಗೂ ಅಂತರರಾಷ್ಟ್ರಮಟ್ಟದ ಪ್ರಶಸ್ತಿಗಳು ದೊರೆತಿದೆಯಲ್ಲದೆ, ಭಾರತ ಸರ್ಕಾರವು ಅವರಿಗೆ 2015ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಎಂದು ಹೇಳಿದರು. ವಿಶ್ವ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಹಾಗೂ ಸಾಮರಸ್ಯವನ್ನು ಪ್ರೇರೇಪಿಸುವ ಭಾರತೀಯ ಸಂಸ್ಕೃತಿಯು ಅನಂತವಾದುದು. ನಮ್ಮ ಸಂತರು ಅನಾದಿ ಕಾಲದಿಂದಲೂ ನಿರಂತರವಾಗಿ ಭಾರತೀಯ ಸಂಸ್ಕೃತಿಯನ್ನು ರಕ್ಷಿಸುತ್ತಿದ್ದಾರೆ. ನಮ್ಮ ಧರ್ಮದ ಏಕತೆ, ಸಮಗ್ರತೆ ಮತ್ತು ಸನಾತನ ಧರ್ಮದ ಪರಂಪರೆಯನ್ನು…
ಹಾಸನ: ಜಿಲ್ಲೆಯ ಯಸಳೂರು ಅರಣ್ಯದಲ್ಲಿ 2023ರ ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ, ದಸರಾ ಅಂಬಾರಿ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರ ವೀಕ್ಷಣೆಗೆ ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಅರ್ಜುನ, ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ. ಹೀಗಾಗಿ ಬಳ್ಳೆಯಲ್ಲಿ ಕೂಡ ಸ್ಮಾರಕ ನಿರ್ಮಿಸಲಾಗಿದ್ದು, ಫೆಬ್ರವರಿ ಅಂತ್ಯದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಆ ಸ್ಮಾರಕವನ್ನೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೀದರ್: ಜಿಲ್ಲೆಯ ಔರಾದಾ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಪಂಚಾಯತ್ ನಿಂದ ನೀಡಲಾಗುವ ಸಾರ್ವಜನಿಕ ಮನೆಗಳ ನಿರ್ಮಾಣಕ್ಕೆ ಗ್ರಾ.ಪಂ. ಬಿಲ್ ಕಲೆಕ್ಟರ್ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಬಿಲ್ ಕಲೆಕ್ಟರ್ ಗಣಪತಿ ಎಂಬವರು ಫಲಾನುಭವಿಗಳ ಮನೆಗೆ ಜಿಪಿಎಸ್ ಮಾಡಿದ ಕೂಡಲೇ ಫಲಾನುಭವಿಗಳಿಂದ 1 ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಸ್ಥಳೀಯ ಪತ್ರಕರ್ತರಾದ ಅರವಿಂದ ಮಲ್ಲಿಗೆ ಅವರು ಪ್ರಶ್ನಿಸಿದ್ದು, ಈ ವೇಳೆ ಪಿಡಿಓ ಎದುರೇ ದುಡ್ಡು ತೆಗೆದುಕೊಳ್ಳುತ್ತೇನೆ ಏನು ಮಾಡ್ತೀರಾ ಮಾಡ್ಕೋ ಎಂದು ಉದ್ಧಟತನದಿಂದ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜೊತೆಗೆ ಬಿಲ್ ಕಲೆಕ್ಟರ್ ಗಣಪತಿ ಇರುತ್ತಾರೆ ಮತ್ತು ಪಿಡಿಓ ಎದುರೇ ಹಣ ತೆಗೆದುಕೊಳ್ಳುತ್ತೇನೆ ಎಂದು ಉದ್ಧಟತನದಿಂದ ಮಾತನಾಡುತ್ತಿದ್ದಾರೆ. ಸಾರ್ವಜನಿಕರ ಕೆಲಸಗಳನ್ನು ಕೂಡ ಸರಿಯಾದ ಸಮಯಕ್ಕೆ ಮಾಡಿಕೊಡುತ್ತಿಲ್ಲ, ಪ್ರಶ್ನಿಸಿದರೆ, ದರ್ಪ, ದುರಾಹಂಕಾರದ ಮಾತುಗಳಿಂದ, ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸುತ್ತಿದ್ದಾರೆ ಹೀಗಾಗಿ ಇವರನ್ನು ಕೆಲಸ ವಜಾಗೊಳಿಸುವಂತೆ ಅರವಿಂದ ಮಲ್ಲಿಗೆ ಆಗ್ರಹಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಕೊರಟಗೆರೆ: ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾ ಸ್ವಾಮಿಗಳು ದೇಶ ಕಂಡಂತ ಸಂತರಲ್ಲಿ ಶ್ರೇಷ್ಠ ಸಂತರಾಗಿದ್ದಾರೆ ಎಂದು ಬೆಳ್ಳಾವಿಯ ಖಾರದಮಠದ ಶೀ ವೀರ ಬಸವ ಸ್ವಾಮೀಜಿ ತಿಳಿಸಿದರು. ಅವರು ಕೊರಟಗೆರೆ ತಾಲ್ಲೂಕು ಶ್ರೀ ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಮಹಾಸ್ವಾಮಿಯರವರ 6 ವರ್ಷದ ಪುಣ್ಯಸ್ಮರಣೆ ಮತ್ತು ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಡಾ.ಶಿವಕುಮಾರ ಮಹಾಸ್ವಾಮಿಗಳು ಅನ್ನ, ಅಕ್ಷರ, ಹಾಗೂ ಜ್ಞಾನದ ದಾಸೋಹಗಳನ್ನು ಕರ್ನಾಟಕ ರಾಜ್ಯಕ್ಕೆ ನೀಡಿದ ಮಹಾತ್ಮರಾಗಿದ್ದಾರೆ. ರಾಜ್ಯದಲ್ಲಿ ಈ ದಿನವನ್ನು ದಾಸೋಹದ ದಿನವನ್ನಾಗಿ ಆಚರಿಸಿದ್ದಾರೆ, ನಮ್ಮಗಳ ಸೌಭಾಗ್ಯ ಏನೆಂದರೆ ನಮ್ಮ ಜೀವಿತಾವದಿಯಲ್ಲಿ 144 ವರ್ಷಗಳ ಪ್ರಯಾಗ್ ರಾಜ್ ನ 8 ಕೋಟಿ ಜನರ ಬೃಹತ್ ಕುಂಭಮೇಳ ನೋಡುತ್ತಿರುವುದು ಮತ್ತು ಮಹಾನ್ ಸಂತ ಡಾ.ಶಿವಕುಮಾರ ಮಹಾ ಸ್ವಾಮಿಗಳ ಭಾರದ ಹೆಜ್ಜೆಯ ಗುರುತುಗಳನ್ನು ಕಂಡಿರುವುದು ಅವರ ಪುಣ್ಯಸ್ಮರಣೆಯನ್ನು ದಾಸೋಹ ದಿನವನ್ನಾಗಿ ಆಚರಿಸುವುದಾಗಿದೆ ಎಂದರು. ತಹಶೀಲ್ದಾರ್ ಮಂಜುನಾಥ್ ಮಾತನಾಡಿ. ಡಾ.ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ರಾಜ್ಯ ಮತ್ತು…