Subscribe to Updates
Get the latest creative news from FooBar about art, design and business.
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
Author: admin
ತುಮಕೂರು: 111 ವರ್ಷಗಳ ಕಾಲ ಬದುಕಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪೀಠಾಧಿಪತಿಯಾಗಿ ತ್ರಿವಿಧ ದಾಸೋಹಿ(ಅನ್ನ, ಅಕ್ಷರ, ವಸತಿ) ಎಂಬ ಹೆಸರನ್ನು ಪಡೆದಿದ್ದ ಶ್ರೀ ಆರನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೂ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯಲ್ಲಿ ವಿಶೇಷ ಪೂಜಾ ಪ್ರಾರ್ಥನೆಯ ಸಲ್ಲಿಸಲಾಯಿತು. ನಂತರ ವಿಶೇಷವಾದ ರುದ್ರಾಕ್ಷಿ ರಥದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಇಟ್ಟು ಮಠದವರಣದಲ್ಲಿ ಅನೇಕ ಸ್ವಾಮೀಜಿಗಳ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು. ಖಾಸಗಿ ಹೋಟೆಲ್ ನಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ–2025ರ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜನವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರನಿವಾಸಿನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳದ ಉದ್ಘಾಟನೆ ನೆರವೇರಿಸುವರು ಎಂದರು. ಸರ್ಕಾರವು ಸುಮಾರು ಎರಡು ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ. 2017ರಲ್ಲಿ ಆಯೋಜಿಸಿದ ಮೊದಲ ಆವೃತ್ತಿಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಮೂಲಕ ರಾಜ್ಯವು ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದರು. 2025ರ ಈ ಮೇಳವು ರೈತರು, ರೈತ ಗುಂಪುಗಳು, ದೇಶಿಯ ಮತ್ತು ಅಂತರರಾಷ್ಟ್ರೀಯ ಕಂಪನಿಗಳು ಸಾವಯವ ಮತ್ತು ಸಿರಿಧಾನ್ಯ ವಲಯದ…
ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ (ಜ.21) ಅನಾವರಣಗೊಳಿಸಿದರು. ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ ಕರ್ನಾಟಕಕ್ಕೆ ಗೌರವ ತಂದಿದೆ ಎಂದು ಅಭಿಪ್ರಾಯಪಟ್ಟರು. ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು. ಗಾಂಧೀಜಿವರು ದೇಶಕ್ಕೆ ನೀಡಿದ ಕೊಡುಗೆಯನ್ನು ಈಗ ಎಲ್ಲರೂ ಸ್ಮರಿಸುತ್ತಿದ್ದಾರೆ. ಗಾಂಧೀಜಿಯವರು ತಮ್ಮ ಅಧ್ಯಕ್ಷತೆಯಲ್ಲಿ 1924 ರಲ್ಲಿ ಜರುಗಿದ ಅಧಿವೇಶನದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಕರೆ ನೀಡಿದರು. ಆದ್ದರಿಂದ ಈ ನೆಲವು ಐತಿಹಾಸಿಕ ಮಹತ್ವವನ್ನು ಹೊಂದಿದೆ. 1924 ರಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿಯೇ ನೂರು ವರ್ಷದ ಬಳಿಕ ಪಕ್ಷದ ಕಾರ್ಯಕಾರಿಣಿ ಸಭೆ ನಡೆಸಿರುವುದು ಅತ್ಯಂತ ಮಹತ್ವದ್ದಾಗಿದೆ…
ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೇಘಾಲಯ ರಾಜಪಾಲ ಸಿ.ಎಚ್. ವಿಜಯಶಂಕರ್ ಭೇಟಿ ನೀಡಿ ಶ್ರೀ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಇವರೊಂದಿಗೆ ಸುತ್ತೂರು ಮಠದ ಕ್ಷೇತ್ರದ ಶ್ರೀ ಸ್ವಾಮೀಜಿ ಹಾಗೂ ಮಾಜಿ ಶಾಸಕ ಸೊಗಡು ಶಿವಣ್ಣ ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಶ್ರೀ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಇವರೊಂದಿಗೆ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು : ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸಂಸ್ಮರಣೆಯಾಗಿದೆ, ಕೋಟ್ಯಂತರ ಭಕ್ತರಿಗೆ ಹರಸಿ ಹಾರೈಸಿದ ಶ್ರೀಗಳ ಈ ದಿನವನ್ನು ಮಾನ್ಯ ಯಡಿಯೂರಪ್ಪ ನವರು ದಾಸೋಹ ದಿನ ಎಂದು ಘೋಷಣೆ ಮಾಡಿದ್ದರು. ಆದರೆ ಈ ಸರ್ಕಾರ ಈ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದೆ. ಸರ್ಕಾರಕ್ಕೆ ಯಾವಾಗ ಬುದ್ದಿ ಬರತ್ತೋ ಆವಾಗ ದಾಸೋಹ ದಿನ ಅರ್ಥ ಪೂರ್ಣವಾಗಿ ಆಚರಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ತಿಳಿಸಿದ್ದಾರೆ. ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಠಕ್ಕೆ ಭೇಟಿ ನೀಡಿ, ಶ್ರೀ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ. ಮುಖ್ಯ ಮಂತ್ರಿಗಳು ಆದಷ್ಟು ಬೇಗ ಪುತ್ಥಳಿ ನಿರ್ಮಾಣ ಕಾರ್ಯ ಮುಗಿಸಲಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು. ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.…
ಕೋಲ್ಕತ್ತಾ: ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ಗೆ ಸೀಲ್ದಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ವೈದ್ಯೆ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆಯೂ ಸೀಲ್ದಾ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಆದೇಶ ನೀಡಿದ್ದಾರೆ. ಆರೋಪಿ ಸಂಜಯ್ ಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. 2024ರ ಆಗಸ್ಟ್ 9ರಂದು ಆಸ್ಪತ್ರೆಯ ಕಾನ್ಫರೆನ್ಸ್ ಕೊಠಡಿಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ವೈದ್ಯರ ಮೇಲೆ ಮೊದಲು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 50 ಸಾಕ್ಷಿಗಳ ವಿಚಾರಣೆ ನಡೆದು ಜನವರಿ 9ರಂದು ವಿಚಾರಣೆ ಮುಕ್ತಾಯವಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಮಂಗಳೂರು: ಮಂಗಳೂರಿನ ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕಿಂದ 12 ಕೋಟಿ ರು. ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಧಾರಾವಿ ಗ್ಯಾಂಗ್ ಗೆ ಸೇರಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈನಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ ಫಿಯೆಟ್ ಕಾರು, ಎರಡು ಗೋಣಿಚೀಲದಲ್ಲಿದ್ದ ಚಿನ್ನ, ತಲ್ವಾರ್, 2 ಪಿಸ್ತೂಲ್ ಹಾಗೂ ಇತರ ಸತ್ತು ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಪ್ರಕರಣದ ಕಿಂಗ್ಪಿನ್ ಮುರುಗಂಡಿ ತೇವರ್ (36), ರಾಜೇಂದ್ರನ್ (35) ಹಾಗೂ ಕಣ್ಣನ್ ಮಣಿ (36) ಎಂದು ಗುರುತಿಸಲಾಗಿದೆ. ದರೋಡೆಗೆಂದೇ ಮಂಗಳೂರಿಗೆ ಬಂದಿದ್ದ ಆರೋಪಿಗಳು, ದರೋಡೆ ನಂತರ ಕೇರಳ ಮೂಲಕ ತಮಿಳುನಾಡಿಗೆ ಪರಾರಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಬಂದೂಕು ಪರವಾನಗಿಯನ್ನು ಪೊಲೀಸ್ ಇಲಾಖೆ ರದ್ದುಪಡಿಸಿದೆ. ದರ್ಶನ್ ಅವರು ಬಂದೂಕು ಪರವಾನಗಿ ರದ್ದುಗೊಳಿಸದಂತೆ ಮನವಿ ಮಾಡಿದ ಹೊರತಾಗಿಯೂ ಪರವಾನಗಿಯನ್ನು ರದ್ದುಪಡಿಸಲಾಗಿದೆ. ತಮಗೆ ಭದ್ರತೆಯ ಅವಶ್ಯಕತೆ ಇದ್ದು, ಆ ಕಾರಣಕ್ಕೆ ತಮಗೆ ಬಂದೂಕಿನ ಅಗತ್ಯತೆ ಇದೆಯೆಂದು ನಟ ದರ್ಶನ್ ಪೊಲೀಸರಿಗೆ ಪತ್ರ ಬರೆದಿದ್ದರು. ಆದರೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಬಂದೂಕನ್ನು ಇರಿಸಿಕೊಳ್ಳುವಂತಿಲ್ಲ ಎಂದು ಹೇಳಿ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ಪೊಲೀಸ್ ಇಲಾಖೆ ರದ್ದು ಮಾಡಿದೆ. ಲೈಸೆನ್ಸ್ ರದ್ದಾಗಿರುವ ಕಾರಣ, ದರ್ಶನ್ ಈ ಕೂಡಲೇ ತಮ್ಮ ಬಂದೂಕನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸರೆಂಡರ್ ಮಾಡಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತಿರುವನಂತಪುರಂ: ಆಯುರ್ವೇದ ಕಶಾಯದಲ್ಲಿ ವಿಷ ಹಾಕಿ ಪ್ರಿಯಕರನಿಗೆ ಕುಡಿಸಿ ಹತ್ಯೆ ಮಾಡಿದ್ದ ಕೇರಳದ ಗ್ರೀಷ್ಮಾ ಎಂಬಾಕೆಗೆ ಸ್ಥಳೀಯ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳದ 23 ವರ್ಷದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪ್ರೇಯಸಿ 24 ವರ್ಷದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ತನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ ಹೇಳಿಕೆಯನ್ನು ಕೋರ್ಟ್ ತಿರಸ್ಕರಿಸಿತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. 2022ರ ಅ. 25ರಂದು ಶರೋನ್ ರಾಜ್ ವಿಷಪೂರಿತ ಜ್ಯೂಸ್ ಸೇವಿಸಿದ ಬಳಿಕ ಆತನ ಆರೋಗ್ಯ ಹದಗೆಟ್ಟಿತ್ತು. ಇದಾದ 11 ದಿನಗಳ ನಂತರ, ಅವರು ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದರು. ಗ್ರೀಷ್ಮಾಗೆ ನಾಗರಕೋಯಿಲ್ ನ ಸೇನಾ ಸಿಬ್ಬಂದಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ ಆಕೆ ತನ್ನ ಪ್ರೇಮಿಯಾಗಿದ್ದ ಶರೋನ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಆತನನ್ನು ತನ್ನ ಜೀವನದಿಂದ ದೂರವಿಡಲು…