Author: admin

ಬೆಳಗಾವಿ:  ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ. ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು. ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು.ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಹಾಸನ: ಕಾಂತಾರ ಚಾಪ್ಟರ್ –1 ಕನ್ನಡ ಸಿನಿಮಾದ ಚಿತ್ರೀಕರಣದ ವೇಳೆ ಸಕಲೇಶಪುರ ಅರಣ್ಯದಲ್ಲಿ ಅಕ್ರಮವಾಗಿ ಶೂಟಿಂಗ್ ಸೆಟ್ ವಸ್ತುಗಳನ್ನು ಸುರಿದಿದ್ದಕ್ಕಾಗಿ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಗೆ ಅರಣ್ಯ ಇಲಾಖೆ ಅಧಿಕಾರಿಗಳು ರೂ. 50,000 ದಂಡ ವಿಧಿಸಿದ್ದಾರೆ. ರಿಷಭ್ ಶೆಟ್ಟಿ ನಿರ್ದೇಶನದ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಸ್ಫೋಟಿಸಿ, ಮರಗಳನ್ನು ಕಡಿದಿರುವ ಆರೋಪ ಕೂಡಾ ಚಿತ್ರತಂಡದ ಮೇಲಿದೆ. ಸಕಲೇಶಪುರ ಅರಣ್ಯದ ಸರ್ವೇ ಸಂಖ್ಯೆ 131 ರ ಡೀಮ್ಡ್ ಫಾರೆಸ್ಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಿತ್ರ ತಂಡ ಷರತ್ತು ಪಡೆಯುವ ಮುನ್ನ ಅರಣ್ಯದ ಒಳಗಡೆ ಸಾಮಾಗ್ರಿಗಳನ್ನು ಸುರಿದಿದ್ದರು. ಇದು ಅತಿಕ್ರಮಣಕ್ಕೆ ಸಮಾನವಾಗಿದ್ದು, ಕರ್ನಾಟಕ ಅರಣ್ಯ ಕಾಯ್ದೆಯಡಿ ಅವರಿಗೆ 50,000 ರೂ. ದಂಡ ವಿಧಿಸಲಾಗಿದೆ. ಕೆಲವು ದಿನಗಳ ನಂತರ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಜನವರಿ 1 ರಂದು ಅನುಮತಿಗಾಗಿ ಯೂನಿಟ್ ಅರ್ಜಿ ಸಲ್ಲಿಸಿತು. ಆದರೆ ಇಲಾಖೆಯನ್ನು ಸಂಪರ್ಕಿಸುವ ಮೊದಲೇ ಅವರು ಕಾಡಿನೊಳಗೆ ವಸ್ತುಗಳನ್ನು ಸುರಿದಿದ್ದರು. ಜನವರಿ 3 ರಂದು ಸ್ಥಳವನ್ನು…

Read More

ಮುಂಬೈ:  ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ನಡೆಸಿದ ವ್ಯಕ್ತಿಯನ್ನು ಬಂಧಿಸಲು ಹೇಗೆ ಸಾಧ್ಯವಾಯ್ತು  ಎನ್ನುವುದು ಇದೀಗ ಬಹಿರಂಗಗೊಂಡಿದೆ. ಅಂದ ಹಾಗೆ ಆರೋಪಿ ಸಿಕ್ಕಿ ಬೀಳಲು ಕಾರಣವಾಗಿದ್ದು, ಪರೋಟ ಮತ್ತು ಯುಪಿಐ ಪೇಮೆಂಟ್ ಅಂತೆ. ಸೈಫ್ ಅಲಿಖಾನ್ ಮೇಲಿನ ದಾಳಿ ಬಳಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು. ಆರೋಪಿ ಪೊಲೀಸರನ್ನು ದಾರಿ ತಪ್ಪಿಸಲು ಹಲವು ಮಾರ್ಗಗಳನ್ನು ಕಂಡುಕೊಂಡಿದ್ದನಾದರೂ ಕೊನೆಗೆ ಪರೋಟ ತಿಂದು ಅದಕ್ಕೆ ಪಾವತಿಸಲು ಮೊಬೈಲ್ ಮೂಲಕ ಗೂಗಲ್ ಪೇ ವಹಿವಾಟು ನಡೆಸಿದ್ದು, ಆತ ಇದ್ದ ಸ್ಥಳದ ಬಗ್ಗೆ ಪೊಲೀಸರು ಮಾಹಿತಿ ಪಡೆಯಲು ಸಾಧ್ಯವಾಗಿದೆ. ಹೀಗಾಗಿ ಆರೋಪಿಯ ಸುಳಿವು ದೊರೆತ  ಮುಂಬೈ ಪೊಲೀಸರು ಭಾನುವಾರ  ಶಂಕಿತನನ್ನು ಬಂಧಿಸಿದ್ದರು. ಬಂಧಿತ ವ್ಯಕ್ತಿ ಬಾಂಗ್ಲಾದೇಶದ ಪ್ರಜೆಯಾಗಿದ್ದು, ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ನಡೆದಿದೆ. ಸಂಜೀವ್ (40), ಅಭಿಷೇಕ್(26), ಅವಿನಾಶ್ (24),  ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಘಟನೆ ಸಂಬಂಧ  ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದವರು ಬೀದರ್ ​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ್: ಔರಾದ (ಬಾ) ಪೊಲೀಸ್ ಠಾಣೆಯ ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವಾದ  4 ಲಕ್ಷ ರೂ.ಗೂ ಅಧಿಕ ಮೌಲ್ಯದ ಟ್ರ್ಯಾಕ್ಟರ್ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬೀದರ್ ಪೊಲೀಸ್ ಅಧೀಕ್ಷಕರಾದ ಪ್ರದೀಪ್ ಗುಂಟಿ ಅವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಡಿವೈಎಸ್ ಪಿ   ಶಿವಾನಂದ ಪವಾಡಶೆಟ್ಟಿ ಪೊಲೀಸ್ ಉಪಾಧೀಕ್ಷಕರು ಭಾಲ್ಕಿ ರಘುವೀರಸಿಂಗ ಠಾಕೂರ, ಸಿಪಿಐ ಔರಾದ ವೃತ್ತ ನೇತೃತ್ವದಲ್ಲಿ  ಔರಾದ(ಬಿ) ಪೊಲೀಸ್ ಠಾಣೆಯ ಪಿ.ಎಸ್.ಐ  ರೇಣುಕಾ,   ಪಿಎಸ್ ಐ ವಸಿಮ್ ಪಟೇಲ್ ರವರು ತಮ್ಮ ಸಿಬ್ಬಂದಿ  ಉತ್ತಮ, ಶಯ  ಸಂಜುಕುಮಾರ,  ಅರುಣಕುಮಾರ, ಜ್ಞಾನೇಶ್ವರ ರವರನ್ನೊಳಗೊಂಡ ತಂಡವು ಕಳವಾದ 4,80,500 ರೂ. ಮೌಲ್ಯದ ಟ್ರ್ಯಾಕ್ಟರ್ ಹಾಗೂ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದೆ. ಕಳ್ಳತನ ಪ್ರಕರಣವನ್ನು ಚಾಕಚಕ್ಯತೆಯಿಂದ ಭೇದಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ  ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ   ಮಠಕ್ಕೆ ಭೇಟಿ ನೀಡಿ ಶ್ರೀ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಇವರೊಂದಿಗೆ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು. ಇದೇ ವೇಳೆ ಪತ್ರಕರ್ತರ ಬಗ್ಗೆ ಮಾತನಾಡಿದ ಬಿ ವೈ ವಿಜಯೇಂದ್ರ,ಇಂದು ಶ್ರೀ ಶಿವಕುಮಾರ ಸ್ವಾಮೀಜಿಗಳ  ಪುಣ್ಯ ಸಂಸ್ಮರಣೆಯಾಗಿದೆ, ಕೋಟ್ಯಂತರ ಭಕ್ತರಿಗೆ ಹರಸಿ ಹಾರೈಸಿದ‌ ಶ್ರೀಗಳ ಈ ದಿನವನ್ನು ಮಾನ್ಯ ಯಡಿಯೂರಪ್ಪ ನವರು ದಾಸೋಹ ದಿನ ಎಂದು ಘೋಷಣೆ ಮಾಡಿದ್ದರು. ಆದರೆ ಈ ಸರ್ಕಾರ ಈ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದೆ. ಸರ್ಕಾರಕ್ಕೆ ಯಾವಾಗ ಬುದ್ದಿ ಬರತ್ತೋ ಆವಾಗ ದಾಸೋಹ ದಿನ ಅರ್ಥ ಪೂರ್ಣವಾಗಿ ಆಚರಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ತಿಳಿಸಿದ್ದಾರೆ. ಜೊತೆಗೆ ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ.ಮುಖ್ಯ…

Read More

ತುಮಕೂರು:  ಭಾರತೀಯ ವಾಯುಪಡೆಯಲ್ಲಿ ಖಾಲಿಯಿರುವ ಏರ್‌ ಮ್ಯಾನ್ ಗ್ರೂಪ್ ‘ವೈ’(ವೈದ್ಯಕೀಯ ಸಹಾಯಕ ವೃತ್ತಿ) ಹಾಗೂ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗಾಗಿ ಜನವರಿ 29 ರಿಂದ ಫೆಬ್ರವರಿ 6ರವರೆಗೆ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ. ನೇಮಕಾತಿ ರ‍್ಯಾಲಿಯು ಜನವರಿ 29 ರಿಂದ ಫೆಬ್ರವರಿ 6ರವರೆಗೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಕೇರಳ ರಾಜ್ಯ ಕೊಚ್ಚಿಯ ಎರ್ನಾಕುಲಂ ಪಿ.ಟಿ. ಉಷಾ ರಸ್ತೆಯ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ. ವಾಯುಪಡೆಯ ಗ್ರುಪ್ ‘ವೈ’(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ಹುದ್ದೆಯ ಆಯ್ಕೆಗೆ ಜನವರಿ 29ರಂದು ನಡೆಯಲಿರುವ ನೇಮಕಾತಿ ರ‍್ಯಾಲಿಯಲ್ಲಿ 10+2 ವಿದ್ಯಾರ್ಹತೆ ಹೊಂದಿದ ಹಾಗೂ 2004ರ ಜುಲೈ 3 ಮತ್ತು 2008ರ ಜುಲೈ 3ರ ನಡುವೆ ಜನಿಸಿರುವ ಅವಿವಾಹಿತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ವಾಯುಪಡೆಯ ಗ್ರುಪ್ ‘ವೈ’ ವೈದ್ಯಕೀಯ ಸಹಾಯಕ ಹುದ್ದೆಯ ಆಯ್ಕೆಗೆ ಫೆಬ್ರವರಿ 4ರಂದು ನಡೆಯಲಿರುವ ನೇಮಕಾತಿ ರ‍್ಯಾಲಿಯಲ್ಲಿ ಫಾರ್ಮಸಿಯಲ್ಲಿ ಡಿಪ್ಲೊಮಾ/ಬಿಎಸ್ಸಿ ಪದವಿ ಹೊಂದಿರುವ 2001ರ ಜುಲೈ 3 ಮತ್ತು 2006ರ ಜುಲೈ 3ರ…

Read More

ತುಮಕೂರು: ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ 28 ತುರ್ತು ಚಿಕಿತ್ಸಾ ವೈದ್ಯರ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಭರ್ತಿ ಮಾಡಲು ಜನವರಿ 23ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಷರತ್ತು ಮತ್ತು ನಿಬಂಧನೆಗೊಳಪಟ್ಟು ಭರ್ತಿ ಮಾಡಲಾಗುವುದು. ಆಯ್ಕೆಯಾದವರಿಗೆ ಮಾಸಿಕ 60,000ರೂ.ರಂತೆ ಸಂಚಿತ ವೇತನವನ್ನು ನೀಡಲಾಗುವುದು. ಆಸಕ್ತರು ಅಗತ್ಯ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9449843064ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: 21ನೇ ಶತಮಾನದಲ್ಲೂ ಭಾರತದಲ್ಲಿ ಮುಟ್ಟಿನ ಬಗ್ಗೆ ತಪ್ಪು ಕಲ್ಪನೆಗಳಿವೆ. ವಿದೇಶಗಳಲ್ಲಿ ಇದರ ಬಗ್ಗೆ ಹೆಚ್ಚು ಅರಿವಿದೆ. ಹಾಗಾಗಿ ಅವರು ನೈರ್ಮಲ್ಯಕ್ಕೆ ಹೆಚ್ಚು ಕಾಳಜಿ ವಹಿಸುತ್ತಾರೆ. ನಮ್ಮ ಮಹಿಳಾ ಉದ್ಯೋಗಿಗಳ ಆರೋಗ್ಯ ದೃಷ್ಟಿಯಿಂದ ಮುಟ್ಟಿನ ಸಂದರ್ಭದಲ್ಲಿ ನೈರ್ಮಲ್ಯ ನಿರ್ವಹಣೆಯ ಬಗ್ಗೆ ನಿರಂತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಹಸಿರುದಳ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೊರಗುತ್ತಿಗೆ ನೌಕರರಿಗೆ‘ಮುಟ್ಟಿನ ಸಂದರ್ಭದಲ್ಲಿ ನೈರ್ಮಲ್ಯ ನಿರ್ವಹಣೆ’ಕುರಿತ ಮೂರು ದಿನಗಳ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು. ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೊರಗುತ್ತಿಗೆ ನೌಕರರಿಗೆ ಪ್ರತಿ ತಿಂಗಳೂ ಸ್ಯಾನಿಟರಿ ಪ್ಯಾಡ್ಗಳನ್ನು ಉಚಿತವಾಗಿ ನೀಡಲಾಗುವುದು ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಲಸಚಿವೆ ನಾಹಿದಾಜಮ್ ಜಮ್ ಮಾತನಾಡಿ, ಡಬ್ಲ್ಯೂಎಚ್ ಓ ಮತ್ತುಯುನಿಸೆಫ್ ಸಮೀಕ್ಷೆಯ ಪ್ರಕಾರ ಶೇ.60 ಮಹಿಳೆಯರಿಗೆ ಮುಟ್ಟಿನ ಬಗ್ಗೆ ಅರಿವೇ ಇರುವುದಿಲ್ಲ. ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರು…

Read More

ತುಮಕೂರು: ವೈದ್ಯರು ಸರಿಯಾದ ಸಮಯಕ್ಕೆ ರೋಗಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಚಿಕಿತ್ಸೆ ನೀಡಿದರೆ ಜನ ಮಾನಸದಲ್ಲಿ ಸದಾ ಕಾಲ ಉಳಿಯುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ವೈದ್ಯಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ಪ್ರತಿದಿನ ತಪ್ಪದೇ ಕರ್ತವ್ಯಕ್ಕೆ ಹಾಜರಾಗಿ ರೋಗಿಗಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಬೇಕು ಎಂದರು. ವೈದ್ಯಾಧಿಕಾರಿಗಳು ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮಾಡಬೇಕು. ಬಡವರಿಗೆ ಉತ್ತಮ ಸೇವೆಯನ್ನು ನೀಡಬೇಕು. ಆಯುಷ್ಮಾನ್ ಆರೋಗ್ಯ ಮಂದಿರ ಗ್ರೇಡ್ ಸಿಸ್ಟಮ್ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ತುಮಕೂರು ಜಿಲ್ಲೆ ಮೊದಲ ಸ್ಥಾನದಲ್ಲಿರಬೇಕು. ವೈದ್ಯಾಧಿಕಾರಿಗಳು ತಮ್ಮ ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ಉಪ ಕಾರ್ಯದರ್ಶಿ (ಆಡಳಿತ), ಜಿಲ್ಲಾ ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು,…

Read More