Author: admin

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಗಂಗಮತಸ್ಥರ ಸಂಘದ ವತಿಯಿಂದ ಜನವರಿ 21ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ನಿಜಶರಣ ಅಂಬಿಗರ ಚೌಡಯ್ಯ ಜಯಂತಿ” ಹಾಗೂ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಪುಣ್ಯಸ್ಮರಣೆಯ ಪ್ರಯುಕ್ತ “ಅಕ್ಷರ ದಾಸೋಹ ದಿನಾಚರಣೆ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಮಹನೀಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುವುದು. ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗ, ಸಮುದಾಯದ ಮುಖಂಡರು, ಕಲಾವಿದರು, ಗಣ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾವಿ ಗ್ರಾಮ ಪಂಚಾಯತಿ ಹಾಗೂ ಶ್ರೀದೇವಿ ಮೆಡಿಕಲ್ ಕಾಲೇಜು ಆಸ್ಪತ್ರೆ ಗ್ರಾಮೀಣ ತರಬೇತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಜನವರಿ 21ರಂದು ಬೆಳಿಗ್ಗೆ 10:30 ಗಂಟೆಗೆ ಸಿಂಗೀಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ “ಉಚಿತ ಆರೋಗ್ಯ ತಪಾಸಣೆ ಮತ್ತು ಕ್ಷಯರೋಗ ಕುರಿತು ಜನಜಾಗೃತಿ ಕಾರ್ಯಕ್ರಮ”ವನ್ನು ಏರ್ಪಡಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಬಿ.ಎಮ್. ಕಾರ್ಯಕ್ರಮವನ್ನು ಉದ್ಘಾಟಿಸುವರು. ಬೆಳ್ಳಾವಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ, ಕ್ಷಯರೋಗ ಕುರಿತು ಮಾಹಿತಿ ನೀಡಲಾಗುವುದು. ಕ್ಷಯರೋಗ, ದೀರ್ಘಾವಧಿ ಜ್ವರ, ಕೆಮ್ಮಿಗೆ ಕಫ ಪರೀಕ್ಷೆ, ರಕ್ತದೊತ್ತಡ, ಮಧುಮೇಹ ಮತ್ತಿತರ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಜನವರಿ 21ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಮೇಘಾಲಯ ರಾಜ್ಯದ ರಾಜ್ಯಪಾಲರಾದ ಸಿ.ಹೆಚ್. ವಿಜಯಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಸಿದ್ದಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಹಾಗೂ ಉತ್ತಾಧಿಕಾರಿ ಶ್ರೀ ಶಿವ ಸಿದ್ಧೇಶ್ವರ ಸ್ವಾಮಿ, ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಶ್ರವಣಬೆಳಗೊಳ ಜೈನಮಠದ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸರಾದ ನಾಡೋಜ ಡಾ:ಗೊ.ರು.ಚನ್ನಬಸಪ್ಪ ಅವರಿಗೆ ಸಿದ್ಧಗಂಗಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೈಸೂರಿನ ಸಾಹಿತಿ ಡಾ.ಹೆಚ್.ಟಿ. ಶೈಲಜಾ ಹಾಗೂ ತುಮಕೂರಿನ ಸಮಾಜ ಸೇವಕ ಜಿ.ಎನ್. ಬಸವರಾಜಪ್ಪ ಅವರಿಗೆ ಸಿದ್ಧಗಂಗಾ ಶಿವಕುಮಾರಶ್ರೀ ಪ್ರಶಸ್ತಿ, ಬೆಂಗಳೂರಿನ ಎಸ್. ಶಿವಾನಂದ ಶರ್ಮ,…

Read More

ತುಮಕೂರು: ದೇಶ ಹಾಗೂ ಸಂಸ್ಕೃತಿಗೆ ದ್ರೋಹಿಯಾಗಿ ಬದುಕುವುದಕ್ಕಿಂತ ದೇಹಿಯಾಗಿ ಬದುಕುವುದೇ ಲೇಸು. ನಾಡು, ನೆಲ, ಸಂಸ್ಕೃತಿ, ಭಾಷೆ, ದೇಶ ಮರೆತರೆ ಅದಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ವಾಗ್ಮಿ ಹಿರೇಮಗಳೂರು ಕಣ್ಣನ್‌ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಪ್ರೇರಣಾ ಉಪನ್ಯಾಸ ಮಾಲೆಯ ಅಂಗವಾಗಿ ಸೋಮವಾರ ‘ಭಾಷೆ, ಸಂಸ್ಕೃತಿ ಮತ್ತುಯುವಜನತೆ’ ಕುರಿತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಜಗತ್ತಿನ ಎಲ್ಲ ದೇಶಗಳ ಹುಟ್ಟಿದ ದಿನಾಂಕವನ್ನುಗುರುತಿಸಲು ಸಾಧ್ಯವಿದೆ. ಆದರೆ ಭಾರತ ದೇಶಕ್ಕೆ ಮಾತ್ರ ಹುಟ್ಟಿನ  ದಿನಾಂಕವಿಲ್ಲ. ಯಾವ ದೇಶಕ್ಕೆ ಹುಟ್ಟಿನ ದಿನಾಂಕವಿರುವುದಿಲ್ಲವೋ,  ಆ ದೇಶಕ್ಕೆ ಸಾವಿನ ದಿನಾಂಕವೂ ಇರುವುದಿಲ್ಲ. ಸನಾತನ ಭಾರತಕ್ಕೆ ಅಷ್ಟು ಆಳವಾದ ಇತಿಹಾಸವಿದೆ ಎಂದರು. ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾ ನಿಲಯದ ಆಶಯವನ್ನುಅರ್ಥಮಾಡಿಕೊಂಡು ವಿಶ್ವಮಾನವತೆಯನ್ನು ರೂಢಿಸಿಕೊಳ್ಳಬೇಕು. ವಿಜ್ಞಾನಿ ಬುದ್ಧಿ, ತತ್ವಜ್ಞಾನಿ ಮನಸ್ಸು ಹಾಗೂ ಕವಿ ಹೃದಯ ಬೆಳೆಸಿಕೊಂಡರೆ ಬದುಕು ಹಸನಾಗುತ್ತದೆ ಎಂದರು. ತಾಯಿ, ತಾಯ್ನಾಡು, ತಂದೆ, ತಾಯ್ನುಡಿ– ಈ ನಾಲ್ಕನ್ನು ಜೀವನದಲ್ಲಿ ಮರೆಯಬೇಡಿ. ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಸಂಸ್ಕೃತಿ ಯುವಜನಾಂಗದ್ದುಆಗಬಾರದು. ಸಾಧಕರ ಜೀವನ ಚರಿತ್ರೆಗಳನ್ನು ಓದಿ…

Read More

ಚೆನ್ನೈ: ಗೋಮೂತ್ರದಲ್ಲಿನ ಔಷಧೀಯ ಗುಣವಿದೆ ಎಂದು ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಕೊಂಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವರಿ 15ರಂದು ಮಾತು ಪೊಂಗಲ್ ಪ್ರಯುಕ್ತ ಗೋ ಸಂರಕ್ಷಣಾ ಶಾಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವಾಗ, ಸನ್ಯಾಸಿಯೊಬ್ಬರು ತೀವ್ರ ಜ್ವರವಿದ್ದಾಗ ಗೋಮೂತ್ರ ಸೇವಿಸಿ ಹೇಗೆ ಚೇತರಿಸಿಕೊಂಡರು ಎಂಬ ಉದಾಹರಣೆ ನೀಡುವಾಗ ಕಾಮಕೋಟಿ ಅವರು ಈ ಹೇಳಿಕೆ ನೀಡಿದ್ದಾರೆ. ಗೋಮೂತ್ರವು ಬ್ಯಾಕ್ಟೀರಿಯಾ ನಿರೋಧಕ, ಶಿಲೀಂಧ್ರಯ ನಿರೋಧಕ ಹಾಗೂ ಜೀರ್ಣಕಾರಕ ಗುಣಗಳನ್ನು ಹೊಂದಿದೆ. ಹೊಟ್ಟೆ ಉರಿ ಸಮಸ್ಯೆಯಂತಹ ಆರೋಗ್ಯ ಸಮಸ್ಯೆಗಳಿಗೆ ಗೋಮೂತ್ರ ಸೂಕ್ತ. ಅಲ್ಲದೇ ಗೋಮೂತ್ರದ ಔಷಧೀಯ ಗುಣಗಳನ್ನು ಪರಿಗಣಿಸಬೇಕು ಎಂದು ಅವರು ಹೇಳಿಕೆ ನೀಡಿದ್ದಾರೆ. ಐಐಟಿ ನಿರ್ದೇಶಕನ ಹೇಳಿಕೆಗೆ ತಮಿಳುನಾಡು ಕಾಂಗ್ರೆಸ್ ಸಂಸದ ಪಿ.ಕಾರ್ತಿ ಚಿದಂಬರಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಂಸ್ಕರಣೆ ಮಾಡದ, ತಾಜಾ ಗೋ ಮೂತ್ರದಲ್ಲಿ ವಿಷಕಾರಿ ಬ್ಯಾಕ್ಟೀರಿಯಾಗಳು ಇರುತ್ತವೆ. ಹೀಗಾಗಿ, ಗೋ ಮೂತ್ರದ ನೇರ ಸೇವನೆ ಮಾನವನ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಭಾರತೀಯ ಪಶು ಸಂಶೋಧನಾ ಸಂಸ್ಥೆ ಗೋಮೂತ್ರದ…

Read More

ಬೆಂಗಳೂರು: ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಯತ್ನಾಳ್ & ಟೀಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್ ಮಾಡುವವರು ಮಾಡಿಕೊಳ್ಳಲಿ, ಅವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ನಾನು ಕೆಲಸ ಮಾಡಲು ಬಂದಿದ್ದೇನೆ, ಕೆಲಸ ಇಲ್ಲದವರು ಮಾತನಾಡುತ್ತಾರೆ, ಮಾತನಾಡಲಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ವಿಜಯೇಂದ್ರ ಹೇಳಿದರು. ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಕ್ರಮ ಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ. ಫೆಬ್ರವರಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ಕಾರ್ಯಕರ್ತರ ನೋವು ಇದೆ. ಆ ನೋವು ಏನು ಎಂದು ಅರ್ಥ ಆಗುತ್ತೆ. ಇದೆಲ್ಲದಕ್ಕೂ ಇತಿಶ್ರೀ ಹಾಡೋ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ವಿಜಯಪುರ: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ. ಸದ್ಯ ಹಲ್ಲೆಗೊಳಗಾದವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಮಿಕರ ಕೈ ಕಾಲು ಕಟ್ಟಿ,ಕಾಲ ಮೇಲೆ ನಿಂತು ಪೈಪ್ ನಿಂದ ಹಲ್ಲೆ ನಡೆಸಿ ಅಂಗಾಲು, ಬೆನ್ನು, ಸೊಂಟದ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಿಜಯಪುರದ ಹೊರವಲಯದ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಈ ಘಟನೆ ನಡೆದಿದೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಎಂಬಾತ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಎಂಬ ಮೂವರು ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ. ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ ಪೈಪ್ ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು, ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಊರಿಗೆ ಹೋಗಿ ವಾಪಸ್…

Read More

ಬೆಂಗಳೂರು: ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಅದಕ್ಕೂ ನನಗೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಅದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಆರೋಪಿಸಿದರು. ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ: ಮೈಕ್ರೋ ಫೈನಾನ್ಸ್ನವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೇ ಕಿರುಕುಳ ಕೊಟ್ಟರೂ ಅವರ ವಿರುದ್ಧ ಕ್ರಮ ಕೈಗೊಳ್ತೇವೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿ ಆತನ ಜೀವ ಕಾಪಾಡಿದ್ದಾರೆ. ಸೋಮವಾರ ಬೆಳಗ್ಗೆ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಪ್ರಕಾರ, ಸೋಮವಾರ ಬೆಳಗ್ಗೆ 10:25ರ ಸುಮಾರಿಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಾಗ ಬಿಹಾರ ಮೂಲದ ವಾಯುಪಡೆಯ ಮಾಜಿ ವ್ಯಕ್ತಿ ಅನಿಲ್ ಕುಮಾರ್ ಪಾಂಡೆ ಎಂಬುವವರು ಹಳಿ ಮೇಲೆ ಹಾರಿದ್ದಾರೆ. ಅವರು ಟ್ರ್ಯಾ ಕ್ಗೆ ಜಿಗಿದ ತಕ್ಷಣ, ತುರ್ತು ಟ್ರಿಪ್ ಸಿಸ್ಟಮ್ (ಇಟಿಎಸ್) ಅನ್ನು ಬಳಸಿ BMRCL ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ. ಘಟನೆಯ ನಂತರ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳ ಮೇಲೆ ಕೆಲಕಾಲ ಪರಿಣಾಮ ಬೀರಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗೆ ಯಾವುದೇ ಗಾಯಗಳಾಗಿಲ್ಲ. 10:50ಕ್ಕೆ ಹಸಿರು ಮಾರ್ಗದಲ್ಲಿ ರೈಲು ಸೇವೆಗಳನ್ನು ಪುನರಾರಂಭಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಶಿವಮೊಗ್ಗ: ಬೀದಿ ನಾಯಿಯನ್ನು ಕೊಂದು ಆಟೋ ಹಿಂದೆ ಕಟ್ಟಿ ಎಳೆದೊಯ್ದ ಆಟೋ ಚಾಲಕನೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ವಾಜೀದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಕೆಂಚನಾಳ ಗ್ರಾಮದಲ್ಲಿ ಜ.16ರಂದು ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ಪಾಡಿಗೆ ಮಲಗಿದ್ದ ನಾಯಿಯ ತಲೆ ಮೇಲೆ ಪದೇ ಪದೇ ಕಲ್ಲು ಎತ್ತಿ ಹಾಕಿ ಅರೆ ಜೀವ ಮಾಡಿ ಬಳಿಕ ಆಟೋಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದು ಕೊಂದಿರುವ ಆರೋಪ ಕೇಳಿ ಬಂದಿದೆ. ಈ ಘಟನೆಯನ್ನು ಯುವಕನೊಬ್ಬ ವಿಡಿಯೋ ಮಾಡಿಕೊಂಡು ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮನೇಕಾ ಗಾಂಧಿ ಹಾಗೂ ಪ್ರಾಣಿ ದಯಾ ಸಂಘದವರ ಮೇಲ್ ಐಡಿಗೆ ಯುವಕನ ಮೊಬೈಲ್ನಿಂದಲೇ ಸಂದೇಶ ಕಳುಹಿಸಿದ್ದಾರೆ. ಕೇವಲ 45 ನಿಮಿಷಗಳಲ್ಲೇ ಸ್ಪಂದಿಸಿದ ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ಯುವಕನಿಗೆ ಕೂಡಲೇ ಸ್ಥಳೀಯ ಠಾಣೆಗೆ ತೆರಳಿ ದೂರು ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಶಿವಮೊಗ್ಗ ಎಸ್ಪಿ…

Read More