Subscribe to Updates
Get the latest creative news from FooBar about art, design and business.
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
Author: admin
ಬೆಂಗಳೂರು: ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಮೂಕ ಪ್ರಾಣಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಹಾಗೂ ಗೋಹಿಂಸೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮತ್ತೊಮೆ ಸೂಚನೆ ನೀಡಿದ್ದೇನೆಂದು ಹೇಳಿದರು. ಈ ರೀತಿಯ ಮನಸ್ಥಿತಿ ಇರುವವರನ್ನು ಮೊದಲು ಗುರುತಿಸಬೇಕು. ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ? ಅಥವಾ ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲಾ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ರವಿವಾರ ನಡೆದಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಅವಘಡದಿಂದ ಬಸ್ ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಡಿಪೋಗೆ ಸೇರಿದ ಬಸ್ ಶಿರ್ಕೆ ವೃತ್ತದಿಂದ ನಾಗರಭಾವಿಗೆ ತೆರಳುತ್ತಿದ್ದಾಗ ಬೆಳಗ್ಗೆ 6:25ಕ್ಕೆ ಈ ಘಟನೆ ನಡೆದಿದೆ. ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಢಾಬಾ ಮಾಲೀಕರ ದೂರಿನ ಆಧಾರದ ಮೇಲೆ ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ: 50 ಸಾವಿರ ರೂಪಾಯಿ ಸಾಲ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿ ಸಾಲ ವಸೂಲಿ ಮಾಡಿಕೊಂಡ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ಘಟನೆ ಸಂಬಂಧ ಸಂತ್ರಸ್ತ ಬಾಲಕಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವಿಶಾಲ್ ಪುಂಡಲೀಕ ಡವಳಿ (22) , ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಫ್ ಐಆರ್ ನಲ್ಲಿ ವಿಶಾಲ್ ನ ತಂದೆ ಮತ್ತು ಸಹೋದರನ ಹೆಸರೂ ಇದೆ ಎಂದು ತಿಳಿದುಬಂದಿದೆ. ಬಾಲಕಿಯ ತಾಯಿಯು ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಅವರಿಗೆ ಕಿವಿಯೋಲೆ ಅಡವಿರಿಸಿ 50 ಸಾವಿರ ಸಾಲ ಪಡೆದುಕೊಂಡಿದ್ದರು. ಒಪ್ಪಿದ ಅವಧಿಯೊಳಗೆ ಸಾಲು ಪಾವತಿ ಮಾಡದ ಹಿನ್ನೆಲೆ ಮಗಳನ್ನು ತನ್ನ ಮಗ ವಿಶಾಲ್ ಗೆ ಮದುವೆ ಮಾಡಿಕೊಡಲು ರೇಖಾ ಪುಂಡಲೀಕ ಒತ್ತಡ ಹೇರಲು ಆರಂಭಿಸಿದ್ದಳು, ಸೆಪ್ಟೆಂಬರ್ 17, 2024 ರಂದು, ಬಾಲಕಿಯನ್ನು ಅಪಹರಿಸಿ ಮರುದಿನ ಅಥಣಿಗೆ ಕರೆದೊಯ್ದು, ಅಲ್ಲಿ ತನ್ನ ಮಗನೊಂದಿಗೆ…
ತುಮಕೂರು: ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸೂಕ್ತ ಸಂದರ್ಭದಲ್ಲಿ ಸಿಗಬೇಕಾದರೆ ಪತ್ರಕರ್ತರ ಸಂಘಗಳು ಮತ್ತಷ್ಟು ಗಟ್ಟಿಗೊಳ್ಳಬೇಕಿದೆ. ಆ ಮೂಲಕ ಪತ್ರಿಕಾ ಸ್ವಾತಂತ್ರ, ಮತ್ತು ಅಭಿವ್ಯಕ್ತಿ ಸ್ವಾತಂತ್ರವನ್ನು ರಕ್ಷಣೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಮ್ಯಾಗ್ನೇಸ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಡಾ.ಪಿ.ಸಾಯಿನಾಥ್ ತಿಳಿಸಿದ್ದಾರೆ. ನಗರದ ಶ್ರೀಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ 39ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡುತಿದ್ದ ಅವರು, ಪತ್ರಿಕಾ ಒಕ್ಕೂಟಗಳು ಅವನತಿಯಾದರೆ ಸ್ವಾತಂತ್ರ ಪತ್ರಿಕೋದ್ಯಮ ಸತ್ತ ಹಾಗೆ. ಆದ್ದರಿಂದ ಪತ್ರಕರ್ತರು ಮತ್ತು ಸಂಘಟನೆಗಳು ಸಂಯುಕ್ತವಾಗಿ ಇಂತಹ ವೇದಿಕೆಗಳ ಹೋರಾಟ ನಡೆಸುವ ಅಗತ್ಯವಿದೆ ಎಂದರು. ಸಮ್ಮೇಳನಗಳು, ಕಾರ್ಯಾಗಾರಗಳಲ್ಲಿ, ಪತ್ರಕರ್ತರ ಸಮಸ್ಯೆಗಳ, ಹಕ್ಕು ಬಾಧ್ಯತೆಗಳನ್ನು ಚರ್ಚಿಸಲು ಇಂತಹ ವೇದಿಕೆಗಳು ನಿರಂತರವಾಗಿ ನಡೆಯಬೇಕು. ಪತ್ರಿಕೋದ್ಯಮ ಮತ್ತು ಪತ್ರಕರ್ತರ ನಡುವೆ ಸಾಕಷ್ಟು ವೈರುಧ್ಯವಿದೆ. ಉದ್ಯಮ ಬದಲಾವಣೆಗಳನ್ನು ಕಾಣುತ್ತಿದೆ. ವೃತ್ತಿಪರ ಪತ್ರಕರ್ತರ ಬದುಕು ಹಸನಾಗಲು ಸರಕಾರಗಳನ್ನು ಮನವೊಲಿಸುವ ತೀವ್ರ ಹೋರಾಟಗಳನ್ನು ಸಮ್ಮೇಳನಗಳಲ್ಲಿ ರೂಪಿಸಬೇಕೆಂದು ಪಿ.ಸಾಯಿನಾಥ್ ಸಲಹೆ ನೀಡಿದರು. ಬಂಡವಾಳ…
ಒಮ್ಮೆ ರಾಜನೊಬ್ಬ ಒಂದು ಕುಸ್ತಿ ಪಂದ್ಯ ಏರ್ಪಡಿಸಿ ಯಾರು ನನ್ನನ್ನು ಕುಸ್ತಿಯಲ್ಲಿ ಸೋಲಿಸುತ್ತಾರೋ ಅವರಿಗೆ ತನ್ನ ಮಗಳನ್ನು ಕೊಟ್ಟು ವಿವಾಹ ಮಾಡುವುದಾಗಿ ಡಂಗೂರ ಸಾರಿಸಿದನು. ರಾಜನನ್ನು ಸೋಲಿಸಲು ಬಹಳ ಜನ ಬಂದರು. ಕುಸ್ತಿ ಪಂದ್ಯ ಆರಂಭವಾಯಿತು ಎಲ್ಲರೂ ರಾಜನಿಂದ ಪರಾಭವಗೊಂಡು ಹೋಗುತ್ತಿದ್ದರೇ ಹೊರತು ಯಾರಿಂದಲೂ ರಾಜನನ್ನು ಸೋಲಿಸಲು ಆಗಲಿಲ್ಲ. ಜನರ ಗುಂಪಿನಲ್ಲಿ ಇದನ್ನೆಲ್ಲಾ ನೋಡುತ್ತಿದ್ದ ಒಬ್ಬ ಭಿಕ್ಷುಕನೊಬ್ಬನಿದ್ದ ತಾನೊಂದು ಕೈ ನೋಡಿಬಿಡುವ ಎಂದುಕೊಂಡು ಕಣಕ್ಕೆ ಬಂದ ಅವನ ಅದೃಷ್ಟವೋ ಏನೋ ಎಂಬಂತೆ ಕುಸ್ತಿಯಲ್ಲಿ ರಾಜನನ್ನು ಸೋಲಿಸಿಯೇ ಬಿಟ್ಟ, ಸಂತೋಷಗೊಂಡ ರಾಜ ನೀವೇನು ಕೆಲಸ ಮಾಡುತ್ತಿರುವಿರಿ ಎಂದಾಗ ಭಿಕ್ಷುಕ ತಾನು ಭಿಕ್ಷಾಟನೆ ಮಾಡುತ್ತಿರುವುದಾಗಿ ಹೇಳಿದ ಆದರೂ ರಾಜ ಅಳುಕದೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ವಿವಾಹ ಕಾರ್ಯ ಆರಂಭಿಸಿಯೇ ಬಿಟ್ಟ. ಭಿಕ್ಷುಕನಿಗೆ ಇದು ಸತ್ಯವೇ, ನನಗೆ ರಾಜನ ಮಗಳೊಂದಿಗೆ ವಿವಾಹವಾಗುವುದೇ? ಇದು ನನಸೇ, ಎಂದು ತನ್ನನ್ನು ತಾನೇ ನಂಬದಾದ. ಮತ್ತು ರಾಜನ ಮಗಳನ್ನು ಕೇಳಿದ ನಿಮಗೆ ನನನ್ನೊಡನೆ ವಿವಾಹ ಬೇಸರವಿಲ್ಲವೇ ಎಂದಾಗ ರಾಜನ ಮಗಳು…
ತುಮಕೂರು: ನೋಡುಗರಿಂದ ಓದುಗರಿಂದ ಪತ್ರಿಕೆಗಳು ದೂರದಲ್ಲಿವೆ. ರಾಜಕಾರಣಿಗಳು ಸಿನಿಮಾರಂಗದವರನ್ನ ಬಿಟ್ಟು ಜನಸಾಮನ್ಯರ ಬಳಿ ಪತ್ರಿಕೆಗಳು ಹೋಗಬೇಕಿದೆ ಆಗ ಓದುಗರ ಸಂಖ್ಯೆ ಹೆಚ್ಚುತ್ತದೆ, ಪತ್ರಿಕೆಗಳು ಸಿದ್ದಾಂತ, ನಡವಳಿಕೆಗಳನ್ನು ಬದಲಾಯಿಸದೆ ಹೋದರೆ ಕಷ್ಟ ಸಾಧ್ಯ, ನಾವು ವಿಶ್ವಾಸಾರ್ಹತೆ ಗಳಿಸಬೇಕು ಎಂದು ರವೀಂದ್ರ ಭಟ್ ಐನೈಕ್ಯ ಹೇಳಿದ್ದಾರೆ. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಕರ್ನಾಟಕ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುಮಕೂರಿನಲ್ಲಿ ನಡೆದ ಸಮ್ಮೇಳನ ಕ್ಕೆ ತುಮಕೂರು ಕಾ.ನಿ.ಪ. ಜಿಲ್ಲಾ ಸಂಘಕ್ಕೆ ಅಭಿನಂದನೆ ಸಲ್ಲಿಸುತ್ತೇನೆ, ಪತ್ರಕರ್ತರ ರಾಜ್ಯ ಸಮ್ಮೇಳನ ರಾಷ್ಟ್ರೀಯ ಸಮ್ಮೇಳನವಾಗಿ ಪರಿವರ್ತನೆಯಾಗಬೇಕು ಸಮ್ಮೇಳನಕ್ಕೆ ಸರ್ವಾಧ್ಯಕ್ಷರೊಬ್ಬರನ್ನು ಸೃಷ್ಟಿ ಮಾಡಬೇಕು ಎಂದು ತಿಳಿಸಿದರು. ಗೋಷ್ಠಿ ಉದ್ಘಾಟಿಸಿ ಮಾತನಾಡಿದ ವಿಜಯವಾಣಿ ಸಂಪಾದಕ ಕೆ.ಎನ್.ಚೇನ್ನೆಗೌಡ, ಪತ್ರಿಕೋದ್ಯಮದಲ್ಲಿ ಓದುಗರ ಕೊರತೆ ಇದೆ, ಸೋಷಿಯಲ್ ಮೀಡಿಯಾ ಅಬ್ಬರ ಹೆಚ್ಚಿದೆ. ಅದರಲ್ಲೂ ಸವಾಲುಗಳನ್ನು ಎದುರಿಸಿ ಪತ್ರಿಕೆಗಳು ನಡೆಯುತ್ತಿವೆ. ಓದುಗರನ್ನ ಜಾಗೃತೆಗೊಳಿಸುವುದು ಸಂಪಾದಕರು ಜವಾಬ್ದಾರಿ ಓದುಗರಲ್ಲಿ ಸುದ್ದಿಯ ಕುತೂಹಲ ಕೆರಳಿಸುವ ಹಂತದಲ್ಲಿ ವಿಫಲರಾಗುದ್ದೇವೆ ಎನ್ನುವ…
ತುಮಕೂರು: ಪತ್ರಿಕೋದ್ಯಮ ಇಂದು ತಾಂತ್ರಿಕವಾಗಿ ಬಹಳಷ್ಟು ಅಭಿವೃದ್ಧಿ ಹೊಂದಿದ್ದು ಪತ್ರಕರ್ತರಿಗೆ ಸಾಮಾಜಿಕ ಜಾಲತಾಣದಲ್ಲಿನ ಅನುಕೂಲಗಳಿಗಿಂತ ಸವಾಲುಗಳು ಹೆಚ್ಚಾಗಿವೆ ಎಂದು ವಿಜಯಕರ್ನಾಟಕ ದಿನಪತ್ರಿಕೆಯ ಸಂಪಾದಕರಾದ ಸುದರ್ಶನ್ ಚನ್ನಂಗಿಹಳ್ಳಿ ಅವರು ತಿಳಿಸಿದರು. ತುಮಕೂರು ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಕಾರ್ಯ ನಿರ್ವಹಿತ ಪತ್ರಕರ್ತರ ಸಂಘದ 39ನೇ ಸಮ್ಮೇಳನದ ‘ಸಾಮಾಜಿಕ ಜಾಲತಾಣ ಮತ್ತು ಪತ್ರಕರ್ತರ ಸವಾಲುಗಳು’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಮೊಬೈಲ್ ಗಳಲ್ಲಿ ಒಂದು ಆಪ್ ಹೇಗೆ ಅಪ್ಡೇಟ್ ಆಗುತ್ತದೆಯೋ ಅದೇ ರೀತಿಯಾಗಿ ತಾಂತ್ರಿಕವಾಗಿ ಇಂದಿನ ಪತ್ರಕರ್ತರು ಬದಲಾವಣೆ ಕಾಣಬೇಕಿದೆ ಪೆನ್ನಿನಲ್ಲಿ ಬರೆಯುವ ಅನೇಕ ಪತ್ರಕರ್ತರು ಇಂದಿನ ಡಿಜಿಟಲ್ ಮಾಧ್ಯಮಕ್ಕೆ ಅನಿವಾರ್ಯವಾಗಿ ಹೊಂದಿಕೊಂಡಿದ್ದಾರೆ. ಅದೇ ರೀತಿಯಲ್ಲಿ ಸರ್ಕಾರಿ ಕಚೇರಿಯಲ್ಲಿ ತಾಂತ್ರಿಕ ವ್ಯವಸ್ಥೆಗಳು ಜಾರಿಯಲ್ಲಿವೆ. ಹಾಗೆಯೇ ಇಂದಿನ ಪತ್ರಕರ್ತರು ನವಮಾಧ್ಯಮದ ಅಂತರ್ಯಗಳನ್ನ ಅರಿತುಕೊಂಡು ಪತ್ರಿಕೋದ್ಯಮವನ್ನು ಮುನ್ನಡೆಸಬೇಕು ಎಂದು ತಿಳಿಸಿದರು. ಇಂದು AI ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನಮ್ಮ ಪತ್ರಕರ್ತರ ಕಾರ್ಯವೈಖರಿಗಳನ್ನು ಕಸಿದುಕೊಂಡಿದ್ದು, ಅನ್ಯ ಭಾಷೆಗಳ…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ‘ಬಚ್ಚಾ’ ಎಂದು ರಮೇಶ್ ಜಾರಕಿಹೊಳಿ ಕರೆದಿರುವುದು ತಪ್ಪು ಎಂದು ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು, ಅವರ ಪದ ಬಳಕೆಯನ್ನು ಒಪ್ಪಲಾಗದು ಎಂದರು. ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಆ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ಇದನ್ನು ಯಾರೂ ಮರೆಯಬಾರದು. ಶಾಸಕರೊಬ್ಬರು ಈ ರೀತಿ ಮಾತನಾಡಿರುವುದು ತಪ್ಪು. ಇದನ್ನು ಒಪ್ಪಲಾಗದು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೈಸೂರು : ಫೆಬ್ರವರಿ 10 ರಿಂದ 12 ರವರೆಗೆ ಟಿ ನರಸೀಪುರದ ತ್ರಿವೇಣಿ ಸಂಗಮದ ಬಳಿ ಕುಂಭಮೇಳ 2025 ನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು ಇಂದು ಕುಂಭ ಮೇಳ –2025 ರ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಫೆಬ್ರವರಿ 10 ರಿಂದ 12 ಈವರೆಗೆ ಟಿ ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು. ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ.…
ಧಾರವಾಡ: ಭಾರತ ಸರಕಾರದ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮೂಲಕ ದಿವ್ಯಾಂಗರಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತದೆ. ದಿವ್ಯಾಂಗರ ಸ್ವಾಲಂಬಿ ಬದುಕಿಗೆ ಮತ್ತು ಹಿರಿಯನಾಗರಿಕರ ಸ್ವಾಭಿಮಾನದ ಬದುಕಿಗೆ ನಮ್ಮ ಸರ್ಕಾರದ ಬೆಂಬಲ ಸದಾ ಇರುತ್ತದೆ. ಅಗತ್ಯ ಸಹಾಯ, ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ನಾಗರೀಕ ಸರಬರಾಜು ಮತ್ತು ಆಹಾರ, ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದರು. ಅವರು ಇಂದು (ಜ.19) ಬೆಳಿಗ್ಗೆ ಧಾರವಾಡ ನಗರದ ಜೆ.ಎಸ್.ಎಸ್ ಕಾಲೇಜು ಸಭಾಂಗಣದಲ್ಲಿ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಅಂಗವಿಕಲ ವ್ಯಕ್ತಿಗಳಿಗೆ ನೆರವು (ADIP) ಯೋಜನೆಯಡಿಯಲ್ಲಿ 1051 ದಿವ್ಯಾಂಗ ಜನರಿಗೆ ಮತ್ತು ರಾಷ್ಟ್ರೀಯ ವಯೋಶ್ರೀ (RVY) ಯೋಜನೆಯಡಿಯಲ್ಲಿ 576 ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ, ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಈ ಶಿಬಿರದಲ್ಲಿ ಉಚಿತವಾಗಿ ಅರ್ಹರಿಗೆ ಸಾಧನ ಸಲಕರಣೆಗಳನ್ನು ಉಚಿತವಾಗಿ ವಿತರಿಸಲು ಕೇಂದ್ರ ಸರಕಾರ…