Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ಔರಾದ: ಸತತ ಮೂರು ಬಾರಿ ಪಟ್ಟಣದ ಪಿಕಾರ್ಡ ಬ್ಯಾಂಕ್ ನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದ ರಘುನಾಥ ಬಿರಾದರವರಿಗೆ ತಮ್ಮ ಸ್ವಗ್ರಾಮ ತೇಗಂಪೂರನಲ್ಲಿ ಗ್ರಾಮಸ್ಥರಿಂದ ಸನ್ಮಾನ ಮಾಡಲಾಯಿತು. ಸನ್ಮಾನ ಮಾಡಿ ಮಾತನಾಡಿದ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕಾಶಪ್ಪ ಮುಕ್ತೆದಾರ, ರಘುನಾಥ ಬಿರಾದರ ಸತತ ಮೂರು ಬಾರಿ ಪಿಕಾರ್ಡ ಬ್ಯಾಂಕ್ ನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಇದಕ್ಕೆ ಕಾರಣ ಅವರ ಪ್ರಾಮಾಣಿಕತೆ, ಪ್ರತಿಯೊಂದು ಕೆಲಸದಲ್ಲೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಾರೆ, ಹೀಗಾಗಿ ಅವರು ಸತತ ಮೂರು ಬಾರಿ ನಿರ್ದೇಶಕರಾಗಿ ಹಾಗೂ ಪಿಕಾರ್ಡ ಬ್ಯಾಂಕನ ಅಧ್ಯಕ್ಷರಾಗಿದಾರೆ, ಮತ್ತೆ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಲೆಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ನುಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಬಸವಣಪ್ಪಾ ಮುಕ್ತೆದಾರ, ಗ್ರಾಪಂ ಮಾಜಿ ಸದಸ್ಯರಾದ ಕಾಶಪ್ಪಾ ಮುಕ್ತೆದಾರ ಗುರುನಾಥ ಮುಕ್ತೆದಾರ, ಪತ್ರಕರ್ತ ರವೀಂದ್ರ ಮುಕ್ತೆದಾರ, ಅಮರ ಮುಕ್ತೆದಾರ, ಯುವ ಉದ್ಯಮಿ ನಾಗೇಶ ಮುಕ್ತೆದಾರ, ಕಿರಣ ಬಿರಾದರ, ರತಿಕಾಂತ ಬಿರಾದರ ಹೀಗೆ ಅನೇಕರು ಭಾಗಿಯಾಗಿದ್ದರು. ವರದಿ: ಅರವಿಂದ…
ಬೀದರ್: ಜಿಲ್ಲೆಯ ಔರಾದ ತಾಲೂಕು ಸಂತಪುರ ಕ್ಷೇತ್ರದಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂತಪುರ್ ಗ್ರಾಮದ ಬಸವರಾಜ್ ಸಿದ್ದಯ್ಯ ಸ್ವಾಮಿ ಅವರನ್ನು ಪಿಕೆಪಿಎಸ್ ಸಂಘ ನಿಯಮಿತ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಹಿನ್ನೆಲೆ ಅವರನ್ನು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ವರ್ಗದ ಜೊತೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾ.ಹೋಮ ಹರೀಶ್, ವಿಲಾಸ್ ಹಸನ್ಮುಖಿ, ಜಯಪ್ರಕಾಶ್, ಅಲೀಮ್ ಕುರ್ಚೆ ಪಾಂಡು ರಾಥೋಡ್, ಸೂರ್ಯಕಾಂತ್ ಸೋನಿ ಇತರರು ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮುಂಬೈ: ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಬಂಧಿತ ಆರೋಪಿಯಾಗಿದ್ದಾನೆ.. ಆತನನ್ನು ಸೈಫ್ ನಿವಾಸದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕಾಸರ್ವಾಡವಲಿಯ ಹಿರಾನಂದಾನಿ ಎಸ್ಟೇಟ್ ಬಳಿ ಬಂಧಿಸಲಾಗಿದೆ. ದುಷ್ಕರ್ಮಿ ಥಾಣೆಯ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಹೇಳಿಕೊಂಡಿದ್ದನಂತೆ., ಗುರುವಾರ ಮುಂಜಾನೆ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಆರೋಪಿ ದಾಳಿ ನಡೆಸಿದ್ದ. ಆರು ಬಾರಿ ಇರಿತಕ್ಕೊಳಗಾಗಿದ್ದ ಸೈಫ್ ಅವರನ್ನು ಆಟೋರಿಕ್ಷಾದಲ್ಲಿ ನಗರದ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಳಿಕ ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನೀಡಿ, ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಅವರ ಬೆನ್ನುಮೂಳೆಯಿಂದ 2.5 ಇಂಚಿನ ಚಾಕುವಿನ ತುಂಡನ್ನು ತೆಗೆಯಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಆಂಧ್ರಪ್ರದೇಶಕ್ಕೆ ಒಮ್ಮೆ ಹೋದಾಗ ಅಲ್ಲಿನ ಗ್ರಾಮಗಳಲ್ಲಿ ಸಿ.ಸಿ.ರಸ್ತೆ ಮಾತ್ರ ಕಾಣುತ್ತದೆ ಹೊರತು ಚರಂಡಿಗಳು ಕಾಣುವುದಿಲ್ಲ, ಆದಾ ಕಾರಣ ಮನೆಗಳ ಬಚ್ಚಲುಗಳ ನೀರು CC ರಸ್ತೆಯ ಮೇಲೆ ನಿಂತಿರುತ್ತವೆ. ಇದರಿಂದ ಗ್ರಾಮ ನೈರ್ಮಲ್ಯಕ್ಕೆ ತೊಂದರೆ ಆಗುತ್ತದೆ. ಇಂತ ಸಂದರ್ಭದಲ್ಲಿ ಚರಂಡಿಗಳ ಮಹತ್ವ ಗೊತ್ತಾಗುತ್ತದೆ. ಚರಂಡಿಗಳು ಗ್ರಾಮದ ಒಳಗೆ ಮನೆಗಳ ಬಚ್ಚಲು ನೀರು ( ಕೊಳಕು ನೀರು ) ಗ್ರಾಮದಿಂದ ಹೊರಕ್ಕೆ ಹರಿಯುವುದರಿಂದ ಗ್ರಾಮಗಳು ಸ್ವಚ್ಛತೆಯಿಂದ ಇರಲು ಸಾಧ್ಯ ಆಗುತ್ತದೆ. ನೀರು ಗ್ರಾಮದ ಒಳಗೆ ನಿಂತರೆ ಸೊಳ್ಳೆಗಳ ಉತ್ಪತಿಗೆ ಕಾರಣ ಆಗಿ ಡೇಂಗೆ, ಮಲೇರಿಯಾ ರೋಗಗಳು ಹರಡಲು ಕಾರಣ ಆಗುತ್ತದೆ. ಈ ಕಾರಣಕ್ಕೆ ಚರಂಡಿಗಳ ನೀರು ಗ್ರಾಮದಿಂದ ಹೊರಗೆ ಹೋಗುವ ವ್ಯವಸ್ಥೆ ಆಗಬೇಕಾಗಿದೆ. ಚರಂಡಿಗಳು ಎಷ್ಟು ಮಹತ್ವ ಎಂಬುದು ಸರಿ ಎನ್ನಿಸಿದರು. ಚರಂಡಿಗಳ ಹೆಸರಿನಲ್ಲಿ ಕಾಮಗಾರಿ ಹೆಸರಿನಲ್ಲಿ ಒಂದು ದಂಧೆ ಆಗಬಾರದು, ರಾಜ್ಯದಲ್ಲಿ ಏನಾಗಿದೆ ಎಂದರೆ ಟೆಂಡರ್ ನಲ್ಲಿ ಭಾಗವಹಿಸಿದ ಗುತ್ತಿಗೆದಾರರು ಗ್ರಾಮಗಳಿಗೆ ಬಂದು ರಸ್ತೆ ಪಕ್ಕದಲ್ಲಿ ಆ ವೈಜ್ಞಾನಿಕ ಚರಂಡಿಗಳನ್ನು ನಿರ್ಮಾಣ ಮಾಡಿ…
ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು. ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ: ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು. ಜನ ಪತ್ರಕರ್ತರ ಮೇಲೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಜಾಪುರದಲ್ಲಿರುವ ಜೆಮ್‌ಪಾರ್ಕ್ ಲೇಔಟ್ ನಿಂದ ನಾಪತ್ತೆಯಾಗಿದ್ದ ಏಳು ವರ್ಷದ ವಿಶೇಷ ಚೇತನ ಬಾಲಕನ ಮೃತದೇಹ ಹತ್ತಿರದ ಸರೋವರದಲ್ಲಿ ಪತ್ತೆಯಾಗಿದೆ. ಎಲ್ವಿನ್ ಡಿಸೋಜಾ ಎಂಬ ಬಾಲಕ ಗುರುವಾರ ಮಧ್ಯಾಹ್ನ 2.30 ರ ಸುಮಾರಿಗೆ ಮನೆಯ ಹೊರಗೆ ಸೈಕಲ್ ಸವಾರಿ ಮಾಡುತ್ತಿದ್ದ, ಅವನ ತಾಯಿ ಮನೆಯಲ್ಲಿದ್ದರು, ವಾಷಿಂಗ್ ಮೆಷಿನ್ ತಂತ್ರಜ್ಞರು ದುರಸ್ತಿಗೆ ಬಂದಿದ್ದರಿಂದ ಮನೆಯೊಳಗೆ ಹೋಗಿದ್ದರು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಳು ಹೊರಗೆ ಬಂದಾಗ, ಆಟವಾಡುತ್ತಿದ್ದ ಮಗ ನಾಪತ್ತೆಯಾಗಿದ್ದ. ಸುತ್ತಮುತ್ತ ಹುಡುಕಿದರೂ ಬಾಲಕ ಪತ್ತೆಯಾಗದ ಕಾರಣ, ಅವನ ತಂದೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದರು. ಗುಡಿಗಟ್ಟನಹಳ್ಳಿಯ ಪುಷ್ಪಂ ಲಶ್ ಕೌಂಟಿ ಮನರಂಜನಾ ಪ್ರದೇಶದ ಬಳಿ, ಅವನ ಮನೆಯ ಸಮೀಪದಲ್ಲಿ ಅವನು ಕೊನೆಯದಾಗಿ ಎಲ್ಲಿ ಕಾಣಿಸಿಕೊಂಡಿದ್ದನೆಂಬ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದರು. ಮಧ್ಯಾಹ್ನ 2.44 ರವರೆಗೆ ನೀರಿನ ಟ್ಯಾಂಕ್ ಬಳಿ ಕಾಣಿಸಿಕೊಂಡಿದ್ದ. ನಂತರ ಪತ್ತೆಯಾಗಲಿಲ್ಲ. ಕೊನೆಗೆ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ…
ಬೆಂಗಳೂರು: ಸೆಂಟ್ರಲ್ ಬೋರ್ಟ್ ಆಫ್ ಸೆಕೆಂಡರಿ ಎಜ್ಯುಕೇಶನ್ (CBSE)ನಲ್ಲಿ 212 ವಿವಿಧ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದೆ. ಆಫೀಸ್ ಸೂಪರಿಂಟೆಂಡೆಂಟ್- 142 ಹುದ್ದೆಗಳು ಹಾಗೂ ಜೂನಿಯರ್ ಅಸಿಸ್ಟಂಟ್ — 70 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಹತೆ: ಆಫೀಸ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ವೇಗವಾಗಿ ಇಂಗ್ಲಿಷ್, ಹಿಂದಿ ಟೈಪಿಂಗ್ ಮಾಡುವ ಕೌಶಲ ಹೊಂದಿರಬೇಕು. ಗರಿಷ್ಠ ವಯೋಮಿತಿ 30. ವಿದ್ಯಾರ್ಹತೆ: ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಪಿಯುಸಿ ಅಥವಾ 10 + 2 ಪಾಸಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ವೇಗವಾಗಿ ಇಂಗ್ಲಿಷ್, ಹಿಂದಿ ಟೈಪಿಂಗ್ ಮಾಡುವ ಕೌಶಲ ಹೊಂದಿರಬೇಕು. ಗರಿಷ್ಠ ವಯೋಮಿತಿ: 27. ಎರಡೂ ಹುದ್ದೆಗಳಿಗೆ ಮೀಸಲು ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಒಎಂಆರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ, ವಿವರಣಾತ್ಮಕ ಪರೀಕ್ಷೆ ಮತ್ತು ಟೈಪಿಂಗ್ ಕೌಶಲ ಪರೀಕ್ಷೆ ಮೂಲಕ ಈ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು…
ವಿಜಯಪುರ: ಮನೆಗಳಿಗೆ ನುಗ್ಗಿ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ ಮುಸುಕುಧಾರಿ ದರೋರೆಕೋರರ ಮೇಲೆ ಗುಂಡಿನ ದಾಳಿ ನಡೆಸಿದ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಮಧ್ಯಪ್ರದೇಶದ ತಂಡ ವಿಜಯಪುರದಲ್ಲಿ ದರೋಡೆಗೆ ಯತ್ನಿಸಿದ ತಂಡ ಎಂದು ಹೇಳಲಾಗಿದ್ದು, ಮಹೇಶ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಸದ್ಯ ತಪ್ಪಿಸಿಕೊಂಡ ಮೂವರ ಪತ್ತೆಯಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಜೈನಾಪುರ ನಗರದಲ್ಲಿ ಸಂತೋಷ ಎಂಬುವರ ಮನೆಗೆ ಬುಧವಾರ ರಾತ್ರಿ ನುಗ್ಗಿದ್ದ ಈ ದರೋಡೆಕೋರರು ಚಾಕುವಿನಿಂದ ದಾಳಿ ನಡೆಸಿ ದರೋಡೆ ಮಾಡಿದ್ದರು. ಗುರುವಾರ ರಾತ್ರಿ ಕನಕದಾಸ ಬಡಾವಣೆಯಲ್ಲಿ ಮನೆಯೊಂದಕ್ಕೆ ನುಗ್ಗಿ ಮತ್ತೆ ದರೋಡೆಗೆ ಯತ್ನಿಸಿದ್ದರು. ಆಗ ಕುಟುಂಬಸ್ಥರು ಚೀರಾಡಿದ್ದಾರೆ. ನಾವು ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ನಾಲ್ವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರ ಹೊರವಲಯದ ಟೋಲ್ ಪ್ಲಾಜಾ ಬಳಿ ಬೈಕ್ ನಲ್ಲಿ ನಾಲ್ವರು ಸಂಚಾರ ನಿಯಮ ಉಲ್ಲಂಘಿಸಿ ಹೋಗುತ್ತಿರುವಾಗ ಬೆನ್ನಟ್ಟಿದೆವು. ಆಗ ಬೈಕ್ ಜಾರಿ ಎಲ್ಲರೂ ಕೆಳಗಡೆ ಬಿದ್ದಿದ್ದಾರೆ. ಅಲ್ಲಿಂದ ಎದ್ದು ಜಮೀನಿನಲ್ಲಿ…
ಪಾವಗಡ: ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಈ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಕಾಂ ನಲ್ಲಿ ಓದುತ್ತಿರುವ ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ ಎಂಬ ವಿದ್ಯಾರ್ಥಿನಿ ಶನಿವಾರ ತರಗತಿ ಮುಗಿಸಿ ಪಟ್ಟಣದ ಕಡೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಕುಸಿದು ಬಿದ್ದಿದ್ದು ಆಕೆಯನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಇನ್ನು ಸಾರ್ವಜನಿಕ ಆಸ್ಪತ್ರೆಯ ಬಳಿ ವಿದ್ಯಾರ್ಥಿನಿಯ ಸ್ನೇಹಿತರ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು, ನಂತರ ವೈದ್ಯರು ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಮೃತ ವಿದ್ಯಾರ್ಥಿಯ ಆತ್ಮಕ್ಕೆ ಶಾಂತಿ ಸಿಗಲೆಂದು ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರುಗಳು ಸೇರಿದಂತೆ ವಿದ್ಯಾರ್ಥಿ ಬಳಗ ಸಂತಾಪ ಸೂಚಿಸಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೈಸೂರು: ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದೊಳಗಿನ ಎಲ್ಲಾ ಗೊಂದಲಗಳು ಬಗೆಹರಿಯುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯ ಕಡಿಮೆಯಾಗುತ್ತವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಅಧ್ಯಕ್ಷನಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದೇನೆ. ಅದನ್ನು ಸಂಘಟಿಸಲು ಮತ್ತಷ್ಟು ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಬಗ್ಗೆ ಕೇಳಿದಾಗ, ಪಕ್ಷದ ಹಿರಿಯ ನಾಯಕರು ಪಕ್ಷವನ್ನು ಮೂಲದಿಂದ ಕಟ್ಟಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ದಾಳಿ ಮಾಡುವಾಗ ಅಥವಾ ಟೀಕಿಸುವಾಗ ಜಾಗರೂಕರಾಗಿರಬೇಕು, ಅಂತಹ ಹೇಳಿಕೆಗಳು ಪಕ್ಷದ ಕಾರ್ಯಕರ್ತರಿಗೆ ನೋವುಂಟು ಮಾಡಬಹುದು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx