Author: admin

ನೆಲಮಂಗಲ:  ನೋಡಲು ದಪ್ಪವಾಗಿದ್ದಾನೆ ಎಂದು ಹುಡುಗಿಯ ಪೋಷಕರು ನಿರಾಕರಿಸುತ್ತಿರುವ ಘಟನೆಯಿಂದ ನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ನಾರಾಯಣಪ್ಪನಪಾಳ್ಯದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕ ವೆಂಕಟೇಶ್‌(29) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಗೋವಿಂದರಾಜು ಮತ್ತು ಮಂಗಳಮ್ಮ ದಂಪತಿ ಪುತ್ರ ವೆಂಕಟೇಶ್​ ಮದುವೆಯಾಗಲು ಸುಮಾರು 15 ಹುಡುಗಿಯರನ್ನ ನೋಡಿದ್ದರು. ಎಲ್ಲಾ ಹುಡುಗಿ ಪೋಷಕರು ಹುಡುಗ ದಪ್ಪಗಿದ್ದಾನೆಂದು ನಿರಾಕರಿಸಿದ್ದರು ಎಂದು ತಿಳಿದು ಬಂದಿದೆ. ಹುಡುಗಿ ಸಿಗುತ್ತಿಲ್ಲ ಮತ್ತು ದಪ್ಪವಾಗಿದ್ದಾರೆ ಎನ್ನುವ ಅವಮಾನದಿಂದ ನೊಂದು ತನ್ನ ಬಾಡಿಗೆ ಮನೆಯಲ್ಲಿ ವೆಂಕಟೇಶ್ ನೇಣಿಗೆ ಶರಣಾಗಿದ್ದಾರೆ. ಫೋನ್ ತೆಗೆಯದಿದ್ದಕ್ಕೆ ಚಿಕ್ಕಮ್ಮ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ  ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ರಾಯ್ಪರ: ಭದ್ರತಾ ಪಡೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ  ನಕ್ಸಲರು ಅಡಗಿಸಿಟ್ಟಿದ್ದ ಐಇಡಿ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡು ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ನಕ್ಸಲ್ ಕೇಂದ್ರಿತ ಪ್ರದೇಶವಾದ ನಾರಾಯಣಪುರ ಜಿಲ್ಲೆಯ ಅಬುಜ್‌ ಮಾರ್‌ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ  ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರತಾ ಪಡೆ ಸಿಬ್ಬಂದಿ ಗಾರ್ಪಾ ಗ್ರಾಮದ ಬಳಿ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರು ಅಡಗಿಸಿಟ್ಟಿದ್ದ  ಐಇಡಿ ಸ್ಫೋಟಗೊಂಡಿದೆ. ಈ ಪ್ರದೇಶ ನಕ್ಸಲ್ ಕೇಂದ್ರಿತ ಪ್ರದೇಶವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಮಾನನಷ್ಟ ಮೊಕದ್ದಮೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ ಮತ್ತು ಬಿಜೆಪಿಗೆ ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಗೆ ನೀಡಿದ್ದ ಸಮನ್ಸ್‌ಗೆ ಪ್ರತಿಯಾಗಿ 2024ರ ಜೂನ್ 7ರಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಖುದ್ದು ಹಾಜರಾಗಿದ್ದರು ಮತ್ತು ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮುಂಬೈ: ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ವ್ಯಕ್ತಿ ಹಾಗೂ  ನಟ ಶಾರೂಖ್ ಖಾನ್ ಮನೆಗೆ ನುಗ್ಗಲು ಯತ್ನಿಸಿದ್ದ ವ್ಯಕ್ತಿ ಒಬ್ಬನೇ ಎನ್ನುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ ಜನವರಿ 14 ರಂದು ರಿಟ್ರೀಟ್ ಹೌಸ್‌ ನ ಹಿಂಭಾಗದಲ್ಲಿ ಆರರಿಂದ ಎಂಟು ಅಡಿ ಉದ್ದದ ಕಬ್ಬಿಣದ ಏಣಿಯನ್ನು ಇರಿಸಿ ಶಾರುಖ್ ಖಾನ್ ಅವರ ಮನೆ ಮನ್ನತ್ ಒಳಗೆ ನೋಡಲು ಯತ್ನಿಸಿದ ವ್ಯಕ್ತಿ ಇದೇ ಆರೋಪಿ ಎನ್ನುವ ಶಂಕೆ ವ್ಯಕ್ತವಾಗಿದೆ. ಶಾರುಖ್ ಖಾನ್ ಮನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿರುವ ವ್ಯಕ್ತಿಯ ಎತ್ತರ ಮತ್ತು ಮೈಕಟ್ಟು ಸೈಫ್ ಅಲಿ ಖಾನ್‌ ಕಟ್ಟಡದ ಮೆಟ್ಟಿಲುಗಳ ಮೇಲೆ ಕಾಣುವ ವ್ಯಕ್ತಿಯ ಎತ್ತರಕ್ಕೆ ಹೊಂದಿಕೆಯಾಗುತ್ತಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಶಾರುಖ್ ಖಾನ್ ಅವರ ಮನೆ ಮನ್ನತ್ ಒಳಗೆ ಪ್ರವೇಶಿಸಿದ ವ್ಯಕ್ತಿ ಭಾರವಾದ ಕಬ್ಬಿಣದ ಏಣಿಯನ್ನು ಇಟ್ಟು ಹತ್ತಲು ಯತ್ನಿಸಿದ್ದ. ಒಬ್ಬನೇ ಈ ಏಣಿಯನ್ನು ಹಿಡಿದು ಹತ್ತಲು ಸಾಧ್ಯವಿಲ್ಲ, ಹಾಗಾಗಿ ಈತನ ಜೊತೆಗೆ ಬೇರೆ ಇಬ್ಬರು ಮೂವರು ಇರುವ ಶಂಕೆ ವ್ಯಕ್ತವಾಗಿದೆ.…

Read More

ಮಂಗಳೂರು: ಮಂಗಳೂರಿನ ಉಳ್ಳಾಲದಲ್ಲಿ ಬ್ಯಾಂಕ್ ದರೋಡೆ ನಡೆದಿದ್ದು, ಕಾರೊಂದರಲ್ಲಿ ಬಂದ ದರೋಡೆಕೋರರು ಸಿಬ್ಬಂದಿಯನ್ನು ಬಂದೂಕು, ತಲವಾರು ತೋರಿಸಿ ಬೆದರಿಸಿ ನಗ-—ನಗದು ದೋಚಿ ಪರಾರಿಯಾಗಿದ್ದಾರೆ. ಕಾರೊಂದರಲ್ಲಿ ಬಂದ ಐವರು ದರೋಡೆಕೋರರ ತಂಡ ಈ ಕೃತ್ಯ ಎಸಗಿದೆ. ದರೋಡೆಕೋರರು ಎಲ್ಲರೂ ಮುಸುಕುಧಾರಿಗಳಾಗಿದ್ದರು. ಘಟನೆ ವೇಳೆ ಬ್ಯಾಂಕ್ ನಲ್ಲಿ ಮೂವರು ಮಹಿಳಾ ಸಿಬ್ಬಂದಿ ಹಾಗೂ ಒಬ್ಬ ಪುರುಷ ಸಿಬ್ಬಂದಿ ಹಾಗೂ ಒಬ್ಬ ಸಿಸಿ ಟಿವಿ ಟೆಕ್ನೀಷಿಯನ್  ಇದ್ದರು ಎಂದು ತಿಳಿದು ಬಂದಿದೆ. ಬ್ಯಾಂಕ್ ನಲ್ಲಿದ್ದ ಸಿಬ್ಬಂದಿಗೆ ಬಂದೂಕು  ಹಾಗೂ ತಲವಾರು ತೋರಿಸಿ ಬೆದರಿಸಿ, ಲಾಕರ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಲಕ್ಷಾಂತರ ರೂ. ನಗದು ದೋಚಿದ ದರೋರೆಕೋರರು ಕಾರಿನಲ್ಲಿ ಪರಾರಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬಳ್ಳಾರಿ:  ಇಂದಿನ ಮಕ್ಕಳು ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಪಕರು, ಆದ್ದರಿಂದ ಅವರ ಶಿಕ್ಷಣ ಮತ್ತು ಕಲ್ಯಾಣ ಮತ್ತು ಅವರಲ್ಲಿ ನೈತಿಕ ಗುಣಗಳ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬಳ್ಳಾರಿ ಜಿಲ್ಲೆಯ ಎಸ್‌ಬಿ ಗ್ರೂಪ್ ಆಫ್ ಇನ್‌ ಸ್ಟಿಟ್ಯೂಷನ್ ನಲ್ಲಿ ಬೃಂದಾ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಬೃಂದಾ ಪಿಯು ಕಾಲೇಜು, ಬೃಂದಾ ಪದವಿ ಕಾಲೇಜು ಮತ್ತು ಸ್ಕಂದ ಇನ್‌ಸ್ಟಿಟ್ಯೂಷನ್ ಆಫ್ ನರ್ಸಿಂಗ್ ಅನ್ನು ಉದ್ಘಾಟಿಸಿ, ಅಂಕುರಂ–2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜೀವನದ ಯಶಸ್ಸಿನಲ್ಲಿ ಶಿಕ್ಷಣವು ದೊಡ್ಡ ಪಾತ್ರವನ್ನು ವಹಿಸುತ್ತದೆ, ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ, ಒಬ್ಬ ವ್ಯಕ್ತಿಯು ಶಿಕ್ಷಣ ಪಡೆದಾಗ ಅವನ ಅಭಿವೃದ್ಧಿಯು ಉತ್ತಮವಾಗಿರುತ್ತದೆ. ಶಿಕ್ಷಣವು ನಮಗೆ ಆಲೋಚನೆಗಳನ್ನು ವ್ಯಕ್ತಪಡಿಸುವ ಸಾಮರ್ಥ್ಯವನ್ನು ಒದಗಿಸುತ್ತದೆ. ಶಿಕ್ಷಣವನ್ನು ಎಂದಿಗೂ ಕದಿಯಲಾಗುವುದಿಲ್ಲ, ಶಿಕ್ಷಣವು ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ಹೇಳಿದರು. ಸ್ವಾಮಿ ವಿವೇಕಾನಂದರು ‘ನಮಗೆ ಅಂತಹ ಶಿಕ್ಷಣ ಬೇಕು, ಅದು ಚಾರಿತ್ರ‍್ಯವನ್ನು…

Read More

ಮಧುಗಿರಿ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಪುರಸಭೆ  ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಕಾಳಜಿ ಫೌಂಡೇಶನ್ (ರಿ) ತುಮಕೂರು ತಂಡ ಮನವಿ ಮಾಡಿದೆ. ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ, ವಿಶೇಷವಾಗಿ 23ನೇ ವಾರ್ಡ್‌ನಲ್ಲಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನವರಿ 16ರಂದು ಸಂಜೆ ಎಸ್.ಎಂ. ಕೃಷ್ಣ ಬಡಾವಣೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಶಾಲೆ ಮುಗಿಸಿ ಮನೆಗೆ ತೆರಳುವಾಗ, ಶಾಲೆಯಿಂದ ಸುಮಾರು 700 ಮೀಟರ್ ದೂರದಲ್ಲಿ ಎರಡು ನಾಯಿಗಳು ಆಕೆಯ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಕಾಳಜಿ ಪೌಂಡೇಶನ್ (ರಿ) ತುಮಕೂರು ಇದರ ಸಂಘಟನಾ ಕಾರ್ಯದರ್ಶಿ  ಮಧುಗಿರಿ ಮಹೇಶ್ ವಿದ್ಯಾರ್ಥಿನಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ತಕ್ಷಣ ಪುರಸಭೆ ಆರೋಗ್ಯ ನಿರೀಕ್ಷಕರಿಗೆ ಮಾಹಿತಿ ನೀಡಿದಾಗ, ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಬಂದು, ನಾಯಿಗಳನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಕೆಲವರು ನಾಯಿಯನ್ನು ಹಿಡಿಯದಂತೆ ಜಗಳ ಮಾಡಿದ್ದರಿಂದ  ಸಿಬ್ಬಂದಿ ಹಿಂಜರಿಯುವಂತಾಯಿತು. ಹೀಗಾಗಿ  ನಾಯಿಗಳನ್ನು ಸುರಕ್ಷಿತವಾಗಿ ಹಿಡಿಯಲು ಪುರಸಭಾ ಸಿಬ್ಬಂದಿಗೆ ಪೊಲೀಸ್ ರಕ್ಷಣೆ…

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ರೆಡ್ಡಿ ಜನಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಮಹಾಯೋಗಿ ವೇಮನ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸುವರು.  ನಗರದ ಚಿಕ್ಕಪೇಟೆ ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ದಿವ್ಯ ಸಾನಿಧ್ಯವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಜಿಲ್ಲೆಯ ರೆಡ್ಡಿ ಸಮುದಾಯದ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಬೆವಿಕಂ ನಗರ ಉಪವಿಭಾಗ–1ರಲ್ಲಿ ಜನವರಿ 18ರಂದು ಮಧ್ಯಾಹ್ನ 3:30 ಗಂಟೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ತಿಳಿಸಿದ್ದಾರೆ. ನಗರ ಉಪವಿಭಾಗ-1ರ ಉತ್ತರ/ಕೇಂದ್ರ/ಪಶ್ಚಿಮ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಅರಳೇಪೇಟೆ ಹಾಗೂ ಕೆ.ಆರ್.ಬಡಾವಣೆ, ಕುವೆಂಪು ನಗರ, ಆದರ್ಶನಗರ, ಹನುಮಂತಪುರ, ಕೋತಿತೋಪು, ಶಾರದಾದೇವಿ ನಗರ, ಸಿರಾಗೇಟ್, ಅರಕೆರೆ, ಊರುಕೆರೆ, ರಂಗಾಪುರ, ಯಲ್ಲಾಪುರ, ಅಣ್ಣೇನಹಳ್ಳಿ, ಅಂತರಸನಹಳ್ಳಿ, ಕುಪ್ಪೂರು, ದಿಬ್ಬೂರು, ಎಸ್.ಎನ್.ಪಾಳ್ಯ, ಪಿ.ಎಸ್.ಪಾಳ್ಯ, ಹೆಬ್ಬಾಕಾ, ಸಂತೇಪೇಟೆ, ಮಂಡಿಪೇಟೆ, ಗಾರ್ಡನ್ ರಸ್ತೆ,  ಜೈಪುರ, ಪಿ.ಹೆಚ್.ಕಾಲೋನಿ ಹೆಚ್.ಟಿ. ಮತ್ತು ಎಲ್.ಟಿ. ಗ್ರಾಹಕರು ಸಭೆಗೆ ಹಾಜರಾಗಿ ಸೂಕ್ತ ಸಲಹೆ, ದೂರುಗಳಿದ್ದಲ್ಲಿ ಪರಿಹರಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ಗುಣಮಟ್ಟದ ವಸತಿಯುತ ಶಿಕ್ಷಣ ನೀಡುವ ಉದ್ದೇಶದಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಡಾ.ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾಗಾಂಧಿ /ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2025–26ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಕಟ್ಟಡ ವ್ಯವಸ್ಥೆಯೊಂದಿಗೆ ನುರಿತ ಶಿಕ್ಷಕರಿಂದ ಶಿಕ್ಷಣ ಸೌಲಭ್ಯ ನೀಡಲಾಗುವುದು. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಥಿಯ STS ನಂಬರ್, ವಿದ್ಯಾರ್ಥಿಯ ಆಧಾರ್ ಕಾರ್ಡ್, ಶಾಲಾ ದೃಢೀಕರಣ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ವಿಶೇಷ ವರ್ಗವಿದ್ದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರ ಲಗತ್ತಿಸಿ ಜನವರಿ 25ರೊಳಗಾಗಿ ಹತ್ತಿರದ ವಸತಿ ಶಾಲೆಗಳಿಗೆ ಸಲ್ಲಿಸಬಹುದಾಗಿದೆ. ಪ್ರವೇಶಾತಿಗೆ ಫೆಬ್ರವರಿ 15ರಂದು ಪರೀಕ್ಷೆ ನಡೆಯಲಿದ್ದು,  ಸಫಾಯಿ ಕರ್ಮಚಾರಿ / ಪೌರಕಾರ್ಮಿಕರ ಮಕ್ಕಳಿಗೆ…

Read More