Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಕಲ್ಪತರು ಉತ್ಸವದ ಸಂಭ್ರಮ; ಹಬ್ಬದ ವಾತಾವರಣ ಮನೆಮಾಡಿತ್ತು. ಸಿನಿಮಾ ತಾರೆಯರಾದ ಅನಿರುದ್ಧ ಜಟ್ಕರ್, ಅನುಷಾ ರಾಯ್ ಹಾಗೂ ದೀಪಿಕಾ ದಾಸ್ ಉತ್ಸವದ ಮೆರುಗನ್ನು ಹೆಚ್ಚಿಸಿದರು. ಕಲಾತಂಡಗಳ ಮೆರವಣಿಗೆಯಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಭಾಗವಹಿಸಿ ಸಾಂಪ್ರದಾಯಿಕ ಉಡುಗೆ–ತೊಡುಗೆಗಳೊಂದಿಗೆ ವಿವಿಧ ಕಲಾಪ್ರಕಾರಗಳನ್ನು ಪ್ರತಿನಿಧಿಸಿದರು. ವೀರಗಾಸೆ, ಯಕ್ಷಗಾನ, ಕೋಲಾಟ, ಡೊಳ್ಳು ಕುಣಿತ ಹೀಗೆ 20ಕ್ಕೂ ಹೆಚ್ಚು ವಿದ್ಯಾರ್ಥಿ ಕಲಾತಂಡಗಳು ಭಾಗವಹಿಸಿದವು. ಮೆರವಣಿಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಆರಂಭವಾಗಿ ಶಿವಕುಮಾರ ಸ್ವಾಮೀಜಿ ವೃತದ ಮೂಲಕ ಸಾಗಿತು. ಚಿತ್ರನಟ ಅನಿರುದ್ಧ ಜಟ್ಕರ್ ಮಾತನಾಡಿ, ನಮ್ಮ ಚಿಂತನೆಗಳು ಯಾವಾಗಲೂ ಸಕಾರಾತ್ಮಕವಾಗಿರಬೇಕು. ವಿದ್ಯೆ ಎಂಬುದು ಶಕ್ತಿಯುತವಾದ ಆಯುಧ. ವಿದ್ಯೆಯನ್ನು ಸಕಾರಾತ್ಮಕವಾದ ಕಾರ್ಯಗಳಿಗೆ ಬಳಸಿಕೊಂಡರೆ ಸಮಾಜದಲ್ಲಿರುವ ಕೊಳಕನ್ನು ತೊಳೆಯಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಶಿಕ್ಷಣ ಕೇವಲ ಉದ್ಯೋಗಕ್ಕೆ ಸೀಮಿತವಾಗಬಾರದು. ಸಾಮಾಜಿಕ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದರು. ನಟಿ ಅನುಷಾ ರಾಯ್ ಮಾತನಾಡಿ, ಯಾರೂ ಕದಿಯಲು ಸಾಧ್ಯವಾಗದ ಎರಡು ವಿಷಯಗಳೆಂದರೆ ವಿದ್ಯೆ ಮತ್ತು ಕಲೆ. ಶಿಕ್ಷಣ ಬದುಕಿಗೆ…
ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು ನಾಳೆ ಪ್ರಕಟಗೊಳ್ಳಲಿದೆ. ನಗರ ಪೊಲೀಸ್ ನಲ್ಲಿ ನಾಗರಿಕ ಸ್ವಯಂಸೇವಕನಾಗಿದ್ದ ಸಂಜಯ್ ರಾಯ್, ಕಳೆದ ವರ್ಷ ಆಗಸ್ಟ್ 9 ರಂದು ಉತ್ತರ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿದಾರರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಆರೋಪದ ಮೇಲೆ ಬಂಧಿತನಾಗಿದ್ದ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸೀಲ್ದಾ ನ್ಯಾಯಾಲಯದ ಅನಿರ್ಬನ್ ದಾಸ್ ಅವರ ಮುಂದೆ ವಿಚಾರಣೆ ಪ್ರಾರಂಭವಾದ 57 ದಿನಗಳ ನಂತರ ನಾಳೆ ತೀರ್ಪು ನೀಡಲಾಗುವುದು. ಪ್ರಕರಣದ ತನಿಖೆ ನಡೆಸುತ್ತಿದ್ದ ಕೋಲ್ಕತ್ತಾ ಪೊಲೀಸರು ಆರಂಭದಲ್ಲಿ ಆಗಸ್ಟ್ 10 ರಂದು ರಾಯ್ ಅವರನ್ನು ಬಂಧಿಸಿದರು, ಆಸ್ಪತ್ರೆಯ ಸೆಮಿನಾರ್ ಕೊಠಡಿಯಿಂದ ವೈದ್ಯರ ದೇಹವನ್ನು ವಶಪಡಿಸಿಕೊಂಡ ಒಂದು ದಿನದ ನಂತರ ಕಲ್ಕತ್ತಾ ಹೈಕೋರ್ಟ್ ನಂತರ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತು ಮತ್ತು ಸಂಸ್ಥೆಯು ಆರೋಪಿಗಳಿಗೆ ಮರಣದಂಡನೆಯನ್ನು ಕೋರಿದೆ. ನಮ್ಮತುಮಕೂರಿನ ಕ್ಷಣ…
ಬೆಳಗಾವಿ: ನಮಗೆ ಯಾರೂ ಮಾತನಾಡಬೇಡಿ ಅಂತ ಹೇಳಿಲ್ಲ, ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಅರಿವು ನಮಗೂ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿ, ಎಲ್ಲೂ ಸಹ ನಾವು ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನೈಜ ಸ್ಥಿತಿ ಹೇಳಲು ಹೋದಾಗ ಅದು ಬೇರೆ ಇರುತ್ತದೆ. ಅದನ್ನೆ ಬಿಂಬಿಸಲು ಹೋದರೆ ನಮಗೆ ಮತ್ತು ಪಕ್ಷಕ್ಕೂ ಕಷ್ಟ ಆಗುತ್ತದೆ. ಅಧ್ಯಕ್ಷರ ಬದಲಾವಣೆ ಮಾಡುವ ಅಧಿಕಾರ ನಮಗಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಧ್ಯಕ್ಷನಾಗಿ ಮುಂದುವರಿದಿದ್ದೆ ಎಂಬ ಡಾ.ಜಿ.ಪರಮೇಶ್ವರ್ ಹೇಳಿಕೆ ಬಗ್ಗೆ, ಆ ರೀತಿ ನಾವು ಏನೂ ಹೇಳಿಯೇ ಇಲ್ಲ. ನಾವೇನಿದ್ದರೂ ಹೈಕಮಾಂಡ್ ಅಂತಾನೇ ಹೇಳಿದ್ದೇವೆ. ಆ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ನಾವು ಏನೋ ಹೇಳುವುದರಿಂದ ಪಕ್ಷಕ್ಕೆ ಮುಜುಗರ ಆಗಬಾರದು ಅಂತಾ ಸ್ಪಷ್ಟೀಕರಣ ಕೊಟ್ಟಿದ್ದೇವೆ ಎಂದು ಪುನರುಚ್ಚರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಳಗಾವಿ: ಸತೀಶ್ ಜಾರಕಿಹೊಳಿಗೆ ನೋಟಿಸ್ ನೀಡಲಾಗಿದೆ ಎನ್ನುವುದು ವದಂತಿ, ಅವರಿಗೆ ನೋಟಿಸ್ ನೀಡಲು ಯಾವುದೇ ಕಾರಣಗಳಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನೆಲ್ಲ ಯಾರೂ ಹಬ್ಬಿಸುತ್ತಿದ್ದಾರೆ ನನಗೆ ಗೊತ್ತಿಲ್ಲ. ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಅವರು ಸ್ಪಷ್ಟಪಡಿಸಿದರು ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸ ಇಡಬೇಡಿ, ಯಾವ ಸಚಿವರಿಗೂ ನೋಟಿಸ್ ನೀಡಲು ಕಾರಣವಿಲ್ಲ. ಇವೆಲ್ಲ ಕೇವಲ ವದಂತಿ ಎಂದು ಸಷ್ಪಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದ್ದರೆ, ಅವರು ಇಲ್ಲಿ ಯಾಕೆ ಬರುತ್ತಿದ್ದರು ಎಂದು ಮರುಪ್ರಶ್ನಿಸುವ ಮೂಲಕ ಅದಕ್ಕೂ ಸುರ್ಜೇವಾಲ ತೆರೆ ಎಳೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೀದರ್: ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್ನಲ್ಲಿ ಪತ್ತೆಯಾಗಿದ್ದಾರೆ. ಬೀದರ್ ನಲ್ಲಿ ಹಣ ದೋಚಿಕೊಂಡು ಬಂದಿದ್ದ ಆರೋಪಿಗಳು ಹೈದರಾಬಾದ್ ಮೂಲಕ ಛತ್ತೀಸ್ಗಢದ ರಾಯಪುರಕ್ಕೆ ಪರಾರಿಯಾಗಲು ಪ್ಲಾನ್ ಮಾಡಿದ್ದರು. ಖಾಸಗಿ ಬಸ್ ಟ್ರಾವೆಲ್ ನಲ್ಲಿ ಟಿಕೆಟ್ ಬುಕ್ ಮಾಡಿದ್ದ ಆರೋಪಿಗಳ ಲಗೇಜ್ ಅನ್ನು ಬಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಗ್ ಗಳಲ್ಲಿ ಭಾರೀ ಪ್ರಮಾಣದಲ್ಲಿ ಹಣ ಕಂಡು ಬಂದಿದ್ದು, ಇದನ್ನು ಸಿಬ್ಬಂದಿ ಪ್ರಶ್ನಿಸಿದಾಗ ಅವರಿಗೇ ಸ್ವಲ್ಪ ಹಣ ನೀಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಕರ್ನಾಟಕ ಪೊಲೀಸರು ಗಮನಿಸಿದ್ದಾರೆ. ಪೊಲೀಸರನ್ನು ಕಂಡ ತಕ್ಷಣ ಎಚ್ಚೆತ್ತುಕೊಂಡ ದರೋಡೆಕೋರರು, ಟ್ರಾವೆಲ್ ಏಜೆನ್ಸಿ ಮ್ಯಾನೇಜರ್ ಹೊಟ್ಟೆಗೆ ಫೈರ್ ಮಾಡಿದ್ದಾರೆ. ಸ್ಥಳದಲ್ಲಿದ್ದ ಮತ್ತೊಬ್ಬರಿಗೂ ಗಾಯವಾಗಿದೆ. ಗುಂಡಿನ ಶಬ್ದ ಕೇಳಿ ಜನರು ಓಡಲು ಆರಂಭಿಸಿದಾಗ ಜನರ ಗುಂಪಿನಲ್ಲಿ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಈ ವೇಳೆ ಹರಸಾಹಸಪಟ್ಟು ಒಬ್ಬ ದರೋರೆಕೋರನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಮೈಸೂರು : ಹರಕೆಗೆ ಬಿಟ್ಟ ಹೋರಿಯ ಬಾಲವನ್ನು ದುಷ್ಕರ್ಮಿಗಳು ಕತ್ತರಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿಯ ಹಳ್ಳದಕೆರೆಯಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಕೆ ಹೋರಿಯ ಕೂಗು ಕೇಳಿ ಸ್ಥಳೀಯರು ಪಶುವೈದ್ಯರಿಗೆ ಮಾಹಿತಿ ನೀಡಿದಾಗ, ದುಷ್ಕರ್ಮಿಗಳು ಅದರ ಬಾಲವನ್ನು ಕತ್ತರಿಸಿ ಗಾಯಗೊಳಿಸಿರುವುದನ್ನು ಕಂಡುಬಂದಿದೆ. ಹೋರಿ ಅಪಾಯದಿಂದ ಪಾರಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ತಿಳಿದುಬಂದಿದೆ. ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ…
ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ನಡೆದ ಚಾಕು ಇರಿತ ಪ್ರಕರಣ ಇಂಡಸ್ಟ್ರಿಯನ್ನು ತಲ್ಲಣಗೊಳಿಸಿದೆ. ಸೈಫ್ ಅಲಿಖಾನ್ ಅವರಿಗೆ 6 ಬಾರಿ ಚಾಕುವಿನಿಂದ ಇರಿಯಲಾಗಿದೆ. ಚೂರಿ ಇರಿತದಿಂದಾಗಿ ಸೈಫ್ ಅಲಿಖಾನ್ ಅವರ ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯವಾಗಿದೆ. ಚಿಕಿತ್ಸೆ ಪಡೆಯುತ್ತಿರುವ ನಟ ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಆರೋಪಿ ಮೊದಲಿಗೆ ಸೈಫ್ ಎರಡನೇ ಪುತ್ರ ಜೆಹ್ ರೂಮಿನ ಒಳಗೆ ನುಗ್ಗಿದ್ದಾನೆ. ಮಗುವಿನ ಹತ್ತಿರ ಹೋಗುತ್ತಿದ್ದಂತೆ ರೂಮಿನ ನೆಲದ ಮೇಲೆ ಮಲಗಿದ್ದ ಕೆಲಸದಾಕೆ ಕೂಗಲು ಶುರು ಮಾಡಿದ್ದಾರೆ. ಈ ವೇಳೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಆರೋಪಿ, ಶಬ್ದ ಮಾಡದಂತೆ ಬೆದರಿಸಿದ್ದಾನೆ. ನಿನಗೇನು ಬೇಕೆಂದು ಕೇಳಿದಾಗ ರೂ.1 ಕೋಟಿ ಕೇಳಿದ್ದ. ಇದೇ ವೇಳೆ ಸೈಫ್ ಹಾಗೂ ಕರೀನಾ ಅವರು ಕೂಡ ಸ್ಥಳಕ್ಕೆ ಬಂದು ರಕ್ಷಣೆಗೆ ಧಾವಿಸಿದರು. ಈ ವೇಳೆ ಸೈಫ್ ಅವರ ಮೇಲೆ ಹಲ್ಲೆ ನಡೆಸಿದ. ಬಳಿಕ ಮನೆಯ ಇತರರು ಎಚ್ಚರಗೊಳ್ಳಲು ಆರಂಭವಾದಾಗ ಸ್ಥಳದಿಂದ ಪರಾರಿಯಾದ ಎಂದು ಕೆಲಸದಾಕೆ ಪೊಲೀಸರ…
ರಾಯಚೂರು: ರಾತ್ರಿ ವೇಳೆ ರಸ್ತೆಗಳಲ್ಲಿ ಸುತ್ತಾಡುವ ಬೀಡಾಡಿ ದನಗಳಿಂದ ವಾಹನ ಅಪಘಾತ ತಡೆಯುವ ಉದ್ದೇಶದಿಂದ, ದನಗಳ ಕುತ್ತಿಗೆಗೆ ಹೊಳೆಯುವ ರೇಡಿಯಂ ಬೆಲ್ಟ್ ಧಾರಣೆ ಮಾಡಲು ರಾಷ್ಟ್ರೀಯ ಗೋ ರಕ್ಷಾ ವಾಹಿನಿ ಮತ್ತು ಗೋ ಸೇವಾ ಸಂಘದ ತಂಡ ಮುಂದಾಗಿದೆ. ನಗರದಲ್ಲಿ ಸಂಚರಿಸುವ ಹಸು ಮತ್ತು ಕರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸುತ್ತಿದ್ದು, ರಾತ್ರಿ ವೇಳೆ ಅನೇಕ ಕಡೆಗಳಲ್ಲಿ ಗೋವುಗಳು ವಾಹನ ಅಪಘಾತ ಸಂಭವಿಸಿ ಶಾಶ್ವತ ಅಂಗವೈಕಲ್ಯ ಅಥವಾ ಮೃತಪಡುವುದನ್ನು ಮನಗೊಂಡು ಗೋವುಗಳಿಗೆ ಬೆಲ್ಟ್ ಅಳವಡಿಸುತ್ತಿರುವುದು ಗಮನ ಸೆಳೆದಿದೆ. ಸಂಕ್ರಾಂತಿಯ ಸುಗ್ಗಿ ಸಂದರ್ಭದಲ್ಲಿ ಬೆಲ್ಟ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ವಾಸವಿ ನಗರದಲ್ಲಿ ಗೋವುಗಳಿಗೆ ಬೆಲ್ಟ್ ಅಳವಡಿಸುವ ಕಾರ್ಯಕ್ಕೆ ಯುವಕರು ಮುಂದಾಗಿದ್ದಾರೆ. ಇವರಿಗೆ ರಾಷ್ಟ್ರೀಯ ಗೋರಕ್ಷಾ ವಾಹಿನಿ, ಜೈ ಕಲ್ಯಾಣ ಕರ್ನಾಟಕ ಜನ ಜಾಗೃತಿ ಸೇವಾ ಸಂಘದ ಸದಸ್ಯರು ಸಾಥ್ ನೀಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಗೊಂದಲಗಳಿಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆದಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ಆದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕು. ವೋಟುತರುವವರನ್ನು ನೇಮಕ ಮಾಡಬೇಕು. ಇಲ್ಲವೇ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವುದಾದರೆ ಅದನ್ನು ಹೈಕಮಾಂಡ್ ಸ್ಪಷ್ಟವಾಗಿ ಹೇಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಚರ್ಚೆ ಆರಂಭವಾಗಿತ್ತು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಅಧ್ಯಕ್ಷರ ಬದಲಾವಣೆ ಮಾಡಬೇಕು ಎನ್ನುವುದಾದರೆ ಅವರು ಸಭೆಗೆ ಯಾಕೆ ಬರುತ್ತಿದ್ದರು? ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳು ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ತಿಳಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ…