Author: admin

ತುಮಕೂರು: ಜಿಲ್ಲೆಯ ಕುಣಿಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಾಲಯದಲ್ಲಿರುವ 15,025 ಹಳೆ/ಅನುಪಯುಕ್ತ ಪುಸ್ತಕಗಳನ್ನು ನವೆಂಬರ್ 3ರಂದು ಮಧ್ಯಾಹ್ನ 3 ಗಂಟೆಗೆ ಟೆಂಡ‌ ಕಂ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುವುದು. ಅರ್ಜಿ ನಮೂನೆಯನ್ನು ಅಕ್ಟೋಬರ್ 29ರವರೆಗೆ ಕಾಲೇಜಿನ ಪ್ರಾಂಶುಪಾಲರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 31ರ ಸಂಜೆ 4 ಗಂಟೆಯೊಳಗೆ ಸಲ್ಲಿಸಬಹುದು ಎಂದು ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕಾದರೆ ದೂರ ದೃಷ್ಠಿಯನ್ನು ಇಟ್ಟುಕೊಳ್ಳಬೇಕು ಹಾಗೂ ಯೋಜನೆಗಳಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯವಾಗಿದೆ ಎಂದು ಪಟ್ಟನಾಯ್ಕನಹಳ್ಳಿಯ ಸ್ಪಟಿಕಮುರಿಯ ಪೀಠಾಧ್ಯಕ್ಷ ಶ್ರೀ ನಂಜಾವದೂತಸ್ವಾಮೀಜಿ ತಿಳಿಸಿದರು. ಅವರು ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದ ಬಳಿಯ ಭಂಢಾರದಹಳ್ಳಿಯ ಶ್ರೀಭಂಡಾರದಮ್ಮ ದೇವಿಯ ನೂತನ ದೇವಾಲಯ ಜೀರ್ಣೋದ್ದಾರ ಹಾಗೂ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸರ್ಕಾರದ ಹಲವು ಯೋಜನೆಗಳಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯವಾಗುತ್ತಿದೆ. ಇಂತಹ ತಾರತಮ್ಯಗಳ ಬಗ್ಗೆ ಸರ್ಕಾರಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪರಿಹಾರ ನೀಡುವಾಗ ಹಲವು ತಾಂತ್ರಿಕ  ಕಾರಣಗಳನ್ನು ನೀಡಿ ಬುದ್ದಿವಂತಿಕೆಯನ್ನು ತೋರುತ್ತಾರೆ. ಇದ ಬಂದ ರೈತರಿಗೆ ಅನ್ಯಾಯವಾಗುತ್ತಿದ್ದು ನೀರಾವರಿ ಯೋಜನೆಗಳು ರೈತರ ಬಾಳಿಗೆ ಗೋಳಿನ ಘಟನೆಗಳಾಗಬಾರದು, ಇಂತಹವುಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸ ಬೇಕಾಗುತ್ತದೆ. ಉದಾಹರಣೆಗೆ ಕೊರಟಗೆರೆ ತಾಲೂಕಿನಲ್ಲಿ ಎತ್ತಿನಹೊಳೆ ಯೋಜನೆಯಲ್ಲಿ ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ರೈತರುಗಳ ಒಂದೇ ಬದುವಿನ ಎರಡು ಜಮೀನುಗಳಿಗೆ ಬೇರೆ ಬೇರೆ…

Read More

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಮಾಜಿ ಶಾಸಕರೊಬ್ಬರಿಗೆ ಹೋರಿಯೊಂದು ತಿವಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ದೀಪಾವಳಿ ಪ್ರಯುಕ್ತ ಎರಡು ದಿನಗಳ ಹಿಂದೆ ಬಳ್ಳಿಗಾವಿಯಲ್ಲಿ ಸಾಂಪ್ರಾದಾಯಿಕ ಗ್ರಾಮೀಣ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯನ್ನು ವೀಕ್ಷಿಸಲು ಶಿಕಾರಿಪುರದ ಮಾಜಿ ಶಾಸಕ ಮಹಾಲಿಂಗಪ್ಪ ತೆರಳಿದ್ದರು. ಮನೆಯೊಂದರ ಬಾಗಿಲ ಮುಂದೆ ಹೋರಿ ಬೆದರಿಸುವ ಸ್ಪರ್ಧೆ ನೋಡುತ್ತಾ ನಿಂತಿದ್ದಾಗ ಅಲ್ಲಿಗೆ ಬಂದ ಹೋರಿ, ಒಂದೆರಡು ಬಾರಿ ಮಹಾಲಿಂಗಪ್ಪ ಅವರನ್ನು ತಿವಿದು ಎತ್ತಿಹಾಕಿದೆ. ಸಣ್ಣಪುಟ್ಟ ಗಾಯಗಳಿಂದ ಮಹಾಲಿಂಗಪ್ಪ ಚೇತರಿಸಿಕೊಂಡಿದ್ದಾರೆ. ಮನೆಯೊಂದರ ಬಾಗಿಲತ್ತ ಓಡುತ್ತಿದ್ದ ಮಹಾಲಿಂಗಪ್ಪ ಅವರಿಗೆ ಹೋರಿ ಬಿಳಿ ಬೂದು ಬಣ್ಣದ ಹೋರಿ ಎರಡು ಬಾರಿ ಕೊಂಬಿನಿಂದ ತಿವಿದಿದ್ದೆ. ತದನಂತರ ಅವರು ಅಂಗಾತ ಮಲಗಿದ್ದಾರೆ. ನಂತರ ಹೋರಿ ಅಲ್ಲಿಂದ ಬೇರೆಡೆಗೆ ಓಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಜಿ ಶಾಸಕರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಳಗಾವಿ: 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.  ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶನಿವಾರ ಬೆಳಗಾವಿ ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚೆನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸ್ವಾಭಿಮಾನಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು. ಬಾಬಾ ಸಾಹೇಬ್ ಪಾಟೀಲರು…

Read More

ಬೆಂಗಳೂರು: ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದ್ದು, ಬಿಜೆಪಿ ಮತ್ತು ಭಾರತ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಆರೋಪಿಸಿದ್ದಾರೆ. ಮತ ಕಳ್ಳತನದ ವಿರುದ್ಧ ಸಹಕಾರನಗರದಲ್ಲಿರುವ ತಮ್ಮ ಗೃಹ ಕಚೇರಿಯಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಕೃಷ್ಣ ಬೈರೇಗೌಡ ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ’ ಎಂದು ಕಿಡಿಕಾರಿದರು. ಮಹದೇವಪುರದಲ್ಲಿ 35 ಸಾವಿರ ಅಕ್ರಮ ಮತಗಳನ್ನು ಪಟ್ಟಿಗೆ ಸೇರಿಸಿದ್ದಾರೆ ಎಂಬುದನ್ನು ಸಾಕ್ಷಿ ಸಮೇತ ನಿರೂಪಿಸಲಾಗಿದೆ. ಆಳಂದ ಕ್ಷೇತ್ರದಲ್ಲಿ 6 ಸಾವಿರ ನೈಜ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಅಕ್ರಮದ ಮಾಹಿತಿ ಸೂಕ್ತ ಸಮಯಕ್ಕೆ ಶಾಸಕ ಬಿ.ಆರ್.ಪಾಟೀಲ ಗಮನಕ್ಕೆ ಬಂದ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ‘ಉತ್ತರಾಧಿಕಾರಿ’ ಹೇಳಿಕೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದರು. ಚಲನಚಿತ್ರ ಕಲಾವಿದರಿಗೆ ನಟ್ಟು ಬೋಲ್ಟು ಟೈಟು ಮಾಡ್ತೀನಿ ಅನ್ನೋ ಧಮ್ಕಿ ಹಾಕೋಕೆ ಧೈರ್ಯ ಇದೆ. ಶಾಸಕರಿಗೆ ತಗ್ಗಿ–ಬಗ್ಗಿ ನಡೀಬೇಕು ಅಂತ ಧಮ್ಕಿ ಹಾಕೋ ಧೈರ್ಯ ಇದೆ. ಕಾರ್ಯಕರ್ತರಿಗೆ “ನಿಮ್ಮ ಛತ್ರಿ ಬುದ್ಧಿ ಗೊತ್ತು” ಅಂತ ಆವಾಜ್ ಹಾಕೋಕೆ ಧೈರ್ಯ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯನೂ ಇಲ್ಲವಾ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ? ಎಂದು ಆರ್.ಅಶೋಕ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಎಲ್ಲದಕ್ಕೂ ಡೆಲ್ಲಿ ಹೈಕಮಾಂಡ್ ಕಡೆ ಮುಖ ಮಾಡುವ ನೀವು, ನಾಳೆ ಅಪ್ಪಿ ತಪ್ಪಿ ಮುಖ್ಯಮಂತ್ರಿ ಆದರೆ ರಾಜ್ಯವನ್ನು ಹೇಗೆ ಮುನ್ನಡೆಸುತ್ತೀರಿ ಡಿ.ಕೆ.ಶಿವಕುಮಾರ್ ಅವರೇ? ದಿವಂಗತ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ಆಗಿದ್ದರೂ ಸೋನಿಯಾ…

Read More

ಬೆಂಗಳೂರು: ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶಗಳನ್ನು ಪಕ್ಷ ನೀಡಿದೆ. ನನ್ನನ್ನು ಗುರುತಿಸಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿರುವುದಕ್ಕೆ ಆಭಾರಿಯಾಗಿದ್ದೇನೆ. ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ದ ಎಂದು ಅವರು ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಎನ್ನುವ ಶಬ್ದ ಹೆಚ್ಚು ಕೇಳಿ ಬರುತ್ತಿದೆ. ಸಚಿವ ಸಂಪುಟ ಪುನರ್ ರಚನೆ ಆದ್ರೆ, ಸಿಎಂ ಪದವಿ ಕೂಡ ಬದಲಾಗುತ್ತಾ ಎನ್ನುವ ಕುತೂಹಲ ಸದ್ಯಕ್ಕೆ ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಪಾವಗಡ:  2025–26 ನೇ ಸಾಲಿನ  ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪಾವಗಡ ಪಟ್ಟಣದ ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಮತ್ತು ಶಟಲ್ ಬ್ಯಾಡ್ಮಿಂಟನ್  ಪ್ರಥಮ ಸ್ಥಾನ ಗಳಿಸಿ  ಹಾಗೂ ಉದ್ದ ಜಿಗಿತ ಕೀರ್ತನ ದ್ವಿತೀಯ ಸ್ಥಾನ  ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ದೈಹಿಕ ಶಿಕ್ಷಕರಾದ ಅಬ್ದುಲ್ ಶುಕುರ್  ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿ ತುಂಬಾಡಿ ಗ್ರಾ.ಪಂ ಅಧ್ಯಕ್ಷ ನಟರಾಜ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಲ್ಪಾವಧಿಗೆ ಗ್ರಾ.ಪಂ ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆಯಾಗಿದ್ದಾರೆ. ಗ್ರಾ.ಪಂ ಅಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ತಾ.ಪಂ. ಇಓ ಅಪೂರ್ವ ಕಾರ್ಯನಿರ್ವಹಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಮತ್ತು ರಮೇಶ್ ಡಿ.ಆರ್. ನಾಮಪತ್ರ ಸಲ್ಲಿಸಿದ್ದು, ೧೬ ಮಂದಿ ಸದಸ್ಯರಲ್ಲಿ ರಮೇಶ್ ೧೦ ಮತ, ರಮೇಶ್ ಡಿ.ಆರ್. ೬ ಮತ ಪಡೆದಿದ್ದು, ಗ್ರಾ.ಪಂ ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆಯಾಗಿದ್ದಾರೆ ಚುನಾವಣಾಧಿಕಾರಿ ಅಪೂರ್ವ ಅಧಿಕೃತ ಘೋಷಣೆ ಮಾಡಿದರು. ಗ್ರಾ.ಪಂ. ನೂತನ ಅಧ್ಯಕ್ಷ ರಮೇಶ್ ಮಾತನಾಡಿ, ಗ್ರಾ.ಪಂ ಸದಸ್ಯರ ಬೆಂಬಲದಿಂದ ತುಂಬಾಡಿ ಗ್ರಾ.ಪಂ ನೂತನ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ, ಸದಸ್ಯರ, ಅಧಿಕಾರಿಗಳ ವಿಶ್ವಾಸದೊಂದಿಗೆ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹ ವ್ಯಕ್ತಿಗಳಿಗೆ ಸಿಗುವಂತೆ ಮಾಡುವ ಉದ್ದೇಶ ಹೊಂದಿದ್ದೇನೆ ಎಂದರು. ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ನಟರಾಜ್ ಮಾತನಾಡಿ,…

Read More

ಮಧುಗಿರಿ:  ಹತ್ತನೇ ಬಾರಿಗೆ  ಮಧುಗಿರಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ 2025–26 ನೇ ಸಾಲಿನ ಕ್ರೀಡಾಕೂಟದಲ್ಲಿ  ವಾಲಿಬಾಲ್ ಪಂದ್ಯಾವಳಿಯಲ್ಲಿ ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ತಾಲೂಕು ದೈಹಿಕ ಶಿಕ್ಷಕರ ಸಂಘದಿಂದ ಜ್ಞಾನಭೋದನಿ ಶಾಲೆಯ ದೈಹಿಕ ಶಿಕ್ಷಕರಾದ ಅಬ್ದುಲ್ ಶುಕೂರ್  ರವರನ್ನು  ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇಣುಕಮ್ಮ ಮತ್ತು  ಬಿಆರ್ ಸಿ ವೆಂಕಟೇಶ್, ಇ ಸಿ ಓ ಚಂದ್ರಶೇಖರ್ ಹಾಗೂ ತಾಲೂಕಿನ ದೈಹಿಕ ಶಿಕ್ಷಕರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More