Author: admin

ಧಾರವಾಡ: ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ  ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ ಸಂಶೋಧನೆ ಕ್ಷೇತ್ರದಲ್ಲಿ ಆದ್ಯತೆ ನೀಡಬೇಕೆಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮಹಾವಿದ್ಯಾಲಯ ಅಮೃತ ಮಹೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲಬು, ರೈತರ ತಲಾ ಆದಾಯವನ್ನೂ ಇನ್ನು ಎಂಟುಪಟ್ಟು ಹೆಚ್ಚಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಇದಕ್ಕೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅನುವಾಗುವಂತೆ ಕೃಷಿಯಲ್ಲಿ ಸಾಂಪ್ರದಾಯಿಕತೆ ಉಳಿಸಿಕೊಂಡು ಆಧುನಿಕತೆ ಅಳವಡಿಸಿಕೊಳ್ಳಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಪರಾಷ್ಟ್ರಪತಿಗಳು ತಿಳಿಸಿದರು. ಕೃಷಿಗೆ ಭಾರತ ಸರಕಾರ ಮೊದಲಿನಿಂದಲೂ ಆದ್ಯತೆ ನೀಡಿದೆ. ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ ಜೊತೆಗೆ ಈಗ ಪ್ರಧಾನಿ ನರೇಂದ್ರ ಮೋದಿ ಅವರು ಜೈ ಅನುಸಂದಾನ ಸೇರಿಸಿ, ಮಹತ್ವಪೂರ್ಣಗೊಳಿಸಿದ್ದಾರೆ. ರೈತರ ಹೊಲಗಳು…

Read More

ಹುಬ್ಬಳ್ಳಿ: ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳನ್ನು ಆಧರಿಸಿದ ಕಾರ್ಯಕ್ರಮಗಳಿಗೆ ಮಹತ್ವ ನೀಡಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು. ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಶಾಲೆಗಳಲ್ಲಿ ಬಸವಣ್ಣನವರು, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಸೇರಿದಂತೆ ರಾಷ್ಟ್ರದ ಮಹಾನ ನಾಯಕರ ಕುರಿತಾಗಿ ಭಾಷಣ ಸ್ಪರ್ಧೆಯನ್ನು ನಡೆಸಬೇಕು. ಅತ್ಯುತ್ತಮವಾಗಿ ಭಾಷಣ ಮಾಡುವ ಆರು ಜನ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ವೇದಿಕೆಯಲ್ಲಿ ಸನ್ಮಾನಿಸಲಾಗುವುದು. ಅಲ್ಲದೇ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ ವಿದ್ಯಾರ್ಥಿಗಳ ತಂಡದಿಂದ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಅವರಿಗೂ ಸಹ ಉತ್ತಮ ವೇದಿಕೆಯನ್ನು ಕಲ್ಪಿಸಿದಂತಾಗುವುದು. ಮೂರು ಕಡೆಗಳಲ್ಲಿ ವೇದಿಕೆ ನಿರ್ಮಾಣ ಮಾಡಿ, ವಿವಿಧ ಕಾರ್ಯಕ್ರಮಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತಿಹಾಸದ ಘಟನೆಗಳನ್ನು ಮೆಲುಕು ಹಾಕುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಜಾನಪದ ಶೈಲಿಯ…

Read More

ತುಮಕೂರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗವೂ ಕೂಡ ನಾಲ್ಕನೇ ಅಂಗವಾಗಿ ಕಾರ್ಯ ನ್ಯಾಯ ಶಾಸನ ವಿಚಾರಗಳಲ್ಲಿ ಮಹತ್ತರವಾದ ಬದಲಾವಣೆ ತರುವಲ್ಲಿ ಬಹು ಮುಖ್ಯವಾಗಿರುವ ಪತ್ರಿಕಾರಂಗ ದೇಶದ ಡೆಮಾಕ್ರಸಿಯನ್ನು ಭದ್ರಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್‌ ಅವರು ತಿಳಿಸಿದರು. ಜನವರಿ 18 ಮತ್ತು 19 ರಂದು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಘಟಕ ಇವರ ಆತಿಥ್ಯದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ವೇದಿಕೆ ನಿರ್ಮಾಣ, ವಸ್ತು ಪ್ರದರ್ಶನ ಮಳಿಗೆ ನಿರ್ಮಾಣ ಸೇರಿದಂತೆ ಇತರೆ ಪೂರ್ವ ಸಿದ್ಧತಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಮ್ಮತುಮಕೂರಿನ ಜಿಲ್ಲಾಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರ ಮಾರ್ಗದರ್ಶನದಂತೆ ಶಿಕ್ಷಣ ಭೀಷ್ಮ ಡಾ.ಎಚ್‌.ಎಮ್‌.ಗಂಗಾಧರಯ್ಯ ನವರು ಕಟ್ಟಿ ಬೆಳೆಸಿದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ರಾಜ್ಯದ ಎಲ್ಲಾ ಪತ್ರಕರ್ತರು ಒಂದೆಡೆ ಸೇರಿ ಸಮ ಸಮಾಜದ ನಿರ್ಮಾಣಕ್ಕೆ ಪತ್ರಕರ್ತರು ನೀಡಿರುವ ಕೊಡುಗೆ ಎಂತಹದು ಎಂಬ ವಿಷಯವನ್ನು ಸಮಾಜಕ್ಕೆ…

Read More

ತುಮಕೂರು: ನವಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿಜಪಾನಂದಜೀ ಮಹಾರಾಜ್  ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 162ನೇ ಜನ್ಮ ಮಹೋತ್ಸವದ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ನೆರವೇರಿಸಿ ಮಾತನಾಡಿದ ಅವರು, ದೇಶಕ್ಕೋಸ್ಕರ ಜೀವನದುದ್ದಕ್ಕೂ ಪ್ರಾರ್ಥನೆ ಮಾಡಿ, ದೇಶವು ಪಾಶ್ಚಿಮಾತ್ಯರ ಹಿಡಿತದಿಂದ ಮುಕ್ತಿ ಪಡೆಯಬೇಕು ಎಂದು ಹೋರಾಡಿದ ಮಹಾನ್ ವ್ಯಕ್ತಿ ವಿವೇಕಾನಂದರು ಎಂದರು. ನನ್ನ ದೇಶಕ್ಕೆ ನಾನು ಏನು ಮಾಡಬಲ್ಲೆ? ನನ್ನ ಸಂಸ್ಕೃತಿಗೆ ನನ್ನಕೊಡುಗೆ ಏನು? ಎಂದು ನೀವೇ ಪ್ರಶ್ನಿಸಿಕೊಳ್ಳಿ. ಮಂಗಳಕ್ಕೆ ಹೋದ ನಾವು ಮನದ ಅಂಗಳಕ್ಕೆ ಹೋಗುವುದಕ್ಕೆ ವಿಫಲ ಆಗುತ್ತಿದ್ದೇವೆ ಎಂದರು. ಶಾಲೆಯ ಶಿಕ್ಷಣದಲ್ಲಿ ಅಗತ್ಯ ವಿಚಾರಗಳಿಗಿಂತ ಅನಗತ್ಯ ವಿಚಾರಗಳನ್ನು ತುಂಬುತ್ತಿದ್ದಾರೆ. ಸ್ವಾಮಿ ವಿವೇಕಾನಂದರವರ ವಿಚಾರಧಾರೆ ಕಣಕಣದಲ್ಲಿ ಬರಬೇಕು. ಯುವಜನತೆ ಶಕ್ತಿಯ ಜ್ವಾಲೆಗಳಾಗಬೇಕು ಎಂದರು. ಶಿಕ್ಷಣ ತಜ್ಞರಾದ ಕೆ.ಆರ್.ಪದ್ಮಿನಿ ಮಾತನಾಡಿ , ಸ್ವಾಮಿ ವಿವೇಕಾನಂದರು…

Read More

ತುಮಕೂರು: ಜಿಲ್ಲಾ ಮೇದ(ಎಸ್.ಟಿ.) ಗಿರಿ ಜನಾಂಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಮಾನಿಕೆರೆ ಮುಖ್ಯರಸ್ತೆಯಲ್ಲಿರುವ ಕನ್ನಡ ಭವನದಲ್ಲಿ “ಮೇದ ಜನಾಂಗದ ತುಮಕೂರು ಜಿಲ್ಲಾ ಸಮಾವೇಶ, ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ವಧು–ವರರ ಸಮಾವೇಶ” ವನ್ನು ಏರ್ಪಡಿಸಲಾಗಿದೆ. ಚಿತ್ರದುರ್ಗ ಸೀಬಾರ ಮೇದರ ಗುರುಪೀಠ ಶ್ರೀ ಕೇತೇಶ್ವರ ಮಹಾಮಠದ ಶ್ರೀ ಇಮ್ಮಡಿ ಬಸವ ಮೇದರ ಕೇತೇಶ್ವರ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು. ಮಠದ ಅಧ್ಯಕ್ಷರು ಹಾಗೂ ಲೋಕೋಪಯೋಗಿ ಇಲಾಖೆ ನಿವೃತ್ತ ಅಧೀಕ್ಷಕ ಅಭಿಯಂತರ ಸಿ.ಪಿ.ಪಾಟೀಲ್ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ತುಮಕೂರು ಜಿಲ್ಲಾ ಮೇದ(ಎಸ್.ಟಿ.) ಗಿರಿ ಜನಾಂಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಚನ್ನಬಸವಯ್ಯ ಜಿ. ಅಧ್ಯಕ್ಷತೆ ವಹಿಸುವರು. ಸಚಿವರಾದ ಕೆ.ಎನ್.ರಾಜಣ್ಣ, ವಿ.ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಎಸ್.ಆರ್. ಶ್ರೀನಿವಾಸ್, ಡಾ.ರಂಗನಾಥ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ…

Read More

ತಿಪಟೂರು: ತಾಲೂಕಿನ ಮೀಸೆತಿಮ್ಮನಹಳ್ಳಿ ಬಳಿ ಇರುವ ಮಾನ್ಯಶ್ರೀ ಕೋಕನೆಟ್ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಎರಡು ವರ್ಷದ ಹೆಣ್ಣು ಮಗು ಕಾರ್ಖಾನೆಯ ಸಮೀಪದ ಗುಂಡಿಗೆ ಬಿದ್ದು ಮೃತಪಟ್ಟಿದೆ. ಬಿಹಾರ ಮೂಲದ ತಂದೆ ಹರೀಂದ್ರ ಕುಮಾರ್ ಮತ್ತು ತಾಯಿ ರೀನಾದೇವಿ ದಂಪತಿ ಪುತ್ರಿ ಕುಸುಮಕುಮಾರಿ (2) ಸಾವನ್ನಪ್ಪಿರುವ ದುರ್ದೈವಿ. ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಟವಾಡುತ್ತಿದ್ದ ಮಗು ಕಾಣದೇ ಇದ್ದಾಗ ಪೋಷಕರು ಹುಡುಕಾಟ ನಡೆಸಿದಾಗ ಗುಂಡಿ ಒಳಗೆ ಬಿದ್ದಿರುವುದನ್ನು ಗಮನಿಸಿ ಮಗುವನ್ನು ಮೇಲೆ ಎತ್ತಲಾಗಿದೆ. ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಇರಬೇಕಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಮ್ಮ ಪಕ್ಷದ ಹಿರಿಯ ನಾಯಕರು, ಅವರು ಹೇಳಿರುವುದರಲ್ಲಿ ತಪ್ಪು ಹುಡುಕಬಾರದು. ಸತೀಶ್ ಜಾರಕಿಹೋಳಿ ಅಭಿಪ್ರಾಯಕ್ಕೆ ನನ್ನ ಸಂಪೂರ್ಣ ಸಹಮತ ಇದೆ ಎಂದು ರಾಜಣ್ಣ ಹೇಳಿದರು. ಪ್ರದೇಶ್ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆಂದು ಪಕ್ಷದ ಹೈಕಮಾಂಡ್ ಹೇಳಿದರೆ ಒಪ್ಪುತ್ತೇವೆ ಎಂದು ಕೆ.ಎನ್.ರಾಜಣ್ಣ ಹೇಳಿದರು. ಯಾರಿಗಾದರೂ ಅಧ್ಯಕ್ಷ ಸ್ಥಾನ ಕೊಡಲಿ ನಮ ಅಭ್ಯಂತರವಿಲ್ಲ. ಪೂರ್ಣ ಪ್ರಮಾಣದ ಅಧ್ಯಕ್ಷರಾದರೆ ಸರಿ ಆಗುತ್ತದೆ. ಲೋಕಸಭಾ ಚುನಾವಣೆ ನಡೆದು 6 ತಿಂಗಳು ಆಗಿದೆ. ಹೈಕಮಾಂಡ್ ನಾಯಕರೇ ಗೊಂದಲ ಮಾಡಿದ್ದು, ಅವರೇ ನಿವಾರಣೆ ಮಾಡಬೇಕು ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು: ಮನೆಯ ಕಿಟಕಿಯಲ್ಲಿಟ್ಟಿದ್ದ ಕೀ ಮೂಲಕ ಬಾಗಿಲು ತೆಗೆದು ಹಣ—ಆಭರಣ ಕಳವು ಮಾಡಿಕೊಂಡು ಪರಾರಿಯಾಗಿದ್ದ ಆಟೋ ಚಾಲಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 8 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ, ಹಣ ವಶಪಡಿಸಿಕೊಳ್ಳಲಾಗಿದೆ. ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿ ಬ್ಯಾಟರಾಯನದೊಡ್ಡಿ ಗ್ರಾಮದ ಕಾರ್ತಿಕ್ ಕುಮಾರ್ ಅಲಿಯಾಸ್ ಟ್ಯಾಟು ಕಾರ್ತಿಕ್(25) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವೃಷಭಾವತಿ ನಗರದ 12ನೇ ಮುಖ್ಯರಸ್ತೆ ನಿವಾಸಿ ಪ್ರೇಮನಾಥ ಎಂಬುವರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಹೋಗಲು ಆಟೋ ಬುಕ್ ಮಾಡಿದ್ದು, ಮನೆ ಬಳಿ ಬಂದ ಆಟೋದಲ್ಲಿ ಡ್ರಾಪ್ ಪಡೆಯುವ ವೇಳೆ ಮನೆಗೆ ಬೀಗ ಹಾಕಿ ಕೀಯನ್ನು ಕಿಟಕಿ ಬಳಿ ಇಡುವುದನ್ನು ಆಟೋ ಚಾಲಕ ಗಮನಿಸಿದ್ದಾನೆ. ನಂತರ ಇವರನ್ನು ಸ್ಯಾಟ್ಲೈಟ್ ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಿದ್ದಾನೆ. ಬಳಿಕ ವಾಪಸ್ ಇವರ ಮನೆ ಬಳಿ ಬಂದು ಕಿಟಕಿಯಲ್ಲಿದ್ದ ಕೀ ಬಳಸಿ ಮನೆ ಬೀಗ ತೆಗೆದು ಬೀರುವಿನಲ್ಲಿದ್ದ 138 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿಯ ಸಾಮಾಗ್ರಿ…

Read More

ಬೆಂಗಳೂರು: ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೆಪಿಸಿಸಿಯಿಂದ ನೋಟೀಸ್ ನೀಡಿದಾಕ್ಷಣ ದೊಡ್ಡ ಅನಾಹುತವೇನೂ ಆಗುವುದಿಲ್ಲ, ಪಕ್ಷದ ಅಧ್ಯಕ್ಷರಿಗೆ ಸ್ಪಷ್ಟ ಉತ್ತರ ನೀಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಹೇಳಿದ್ದನ್ನು ಬೇರೆ ರೀತಿ ಬಿಂಬಿಸಿ ಪಕ್ಷದ ಅಧ್ಯಕ್ಷರ ಮುಂದೆ ಪ್ರಶ್ನೆ ಕೇಳಲಾಗುತ್ತದೆ. ಅದಕ್ಕೆ ಅವರು ನಾಲ್ಕು ಮಾತನಾಡುತ್ತಾರೆ. ತಿರುಗಿ ಅದೇ ರೀತಿಯ ಪ್ರಶ್ನೆಗಳನ್ನು ನನ್ನ ಬಳಿ ಕೇಳಲಾಗುತ್ತದೆ. ಈ ರೀತಿ ಪರಸ್ಪರ ಚರ್ಚೆಗಳು ವೈಯಕ್ತಿಕವಾಗಿ ಹಾಗೂ ಪಕ್ಷಕ್ಕೆ ಹಾನಿಯಾಗುತ್ತದೆ ಎಂದರು. ಏನು ಬಹಳ ದೊಡ್ಡ ನೋಟಿಸ್ ಕೊಟ್ಟರೆ, ಅದರಿಂದ ಅನಾಹುತವೇನೂ ಆಗುವುದಿಲ್ಲ, ನೋಟಿಸ್ ಕೊಡುವ ಅಧಿಕಾರ ಅವರಿಗಿದೆ, ನಾನು ಅದಕ್ಕೆ ತಕ್ಕ ಉತ್ತರ ನೀಡುತ್ತೇನೆ, ನಾನು ಅರ್ಧಗಂಟೆ ಮಾಧ್ಯಮದವರ ಜೊತೆ ಮಾತನಾಡಿರುವ ವಿಡಿಯೋ ಸಾಕ್ಷ್ಯ ಕೂಡ ನನ್ನ ಬಳಿ ಇದೆ. ಅದನ್ನೇ ಆಧಾರವಾಗಿಟ್ಟುಕೊಂಡು ಉತ್ತರ ನೀಡುತ್ತೇನೆ ಎಂದರು. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೆಂದು ಹೇಳಿಯೇ…

Read More

ಮಧುಗಿರಿ: ಪಟ್ಟಣದಲ್ಲಿ ಸಂತೆ ದಿನವಾದ ಬುಧವಾರದಂದು ಬೆಳಿಗ್ಗೆ ಪೊಲೀಸರ ದಿಢೀರ್ ಪಥಸಂಚಲನ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿತು. ಯಾವುದೇ ಚುನಾವಣೆ ಇಲ್ಲ, ಯಾವುದೇ ಗಲಭೆಗಳು ಆಗಿಲ್ಲ, ಕೋಮು ಸೌಹಾರ್ತೆಗೆ ಧಕ್ಕೆ ಆಗುವಂತ ಯಾವುದೇ ಪ್ರಕರಣಗಳ ನಡೆಯದಿದ್ದರೂ ಕೂಡ ಡಿವೈಎಸ್ಪಿ ನೇತೃತ್ವದಲ್ಲಿ ನಡೆದ ಪಥ ಸಂಚಲನಕ್ಕೆ ಕಾರಣ. ಇತ್ತೀಚೆಗೆ ಡಿವೈಎಸ್ಪಿ ಕಚೇರಿಯಲ್ಲಿ ಡಿವೈಎಸ್ಪಿ ನಡೆಸಿದ ರಾಸಲೀಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದನ್ನು ಸಾರ್ವಜನಿಕರಲ್ಲಿ ಪೊಲೀಸರ ಮೇಲೆ ಉಂಟಾದ ಕೆಟ್ಟ ಅಭಿಪ್ರಾಯ ಹೋಗಲಾಡಿಸುವ ಸಲುವಾಗಿ ಮತ್ತು ಕಾನೂನು ಅರಿವು ಜಾಗೃತ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡಿವೈಎಸ್ಪಿ ಮಂಜುನಾಥ್, ಪಿಎಸ್ ಐ ಗಳಾದಂತಹ ವಿಜಯಕುಮಾರ್, ಮುತ್ತುರಾಜ್, ಅಮ್ಮಣ್ಣಗಿ ಮತ್ತು ಮಧುಗಿರಿ ಪೊಲೀಸರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಮಧುಗಿರಿಯ ಡಿವೈಎಸ್ ಪಿ ಕಚೇರಿಯಿಂದ ಹೊರಟ ಜಾತ ದಂಡೋರ ಬಾಗಿಲು ರಸ್ತೆ, ದೊಡ್ಡಪೇಟೆ, ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ರಸ್ತೆ ,ಡೂಂಲೈಟ್ ವೃತ್ತ,, ಹೈ ಸ್ಕೂಲ್ ರಸ್ತೆ, ತಾಲೂಕು ಆಫೀಸ್ ರಸ್ತೆ, ನೃಪತುಂಗ ವೃತ್ತ, ಟಿವಿವಿ…

Read More