Author: admin

ಬೀದರ್:   ಇಂದು ಬೀದರ್  ನಗರದ ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ದರೋಡೆಕೋರರು ಖಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದರೋಡೆಕೋರರು 93 ಲಕ್ಷ ರೂಪಾಯಿ ದೋಚಿರುವ ಮಾಹಿತಿ ಇದೆ. ಮೃತ ವ್ಯಕ್ತಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ವಿವರ ಇನ್ನಷ್ಟೇ ತಿಳಿಯಬೇಕಿದೆ. ಬ್ಯಾಂಕಿನ ಕಚೇರಿ ಎದುರು ರಕ್ತಸಿಕ್ತ ಸ್ಥಿತಿಯಲ್ಲಿ ಅವರ ದೇಹ ಬಿದ್ದಿದೆ. ಘಟನೆಯ ವಿಷಯ ತಿಳಿದು ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ನೂರಾರು ಜನ ಅಲ್ಲಿ ಜಮಾಯಿಸಿದರು. ಇಡೀ ಪ್ರದೇಶದಲ್ಲಿ ಪೊಲೀಸರು ಬ್ಯಾರಿಕೇಡ್‌ ಅಳವಡಿಸಿ ಜನರನ್ನು ಚದುರಿಸಿದರು. ಸಂಸ್ಥೆಯ ಸಿಬ್ಬಂದಿ ಎಂದಿನಂತೆ ಅವರ ವಾಹನದಲ್ಲಿ ಹಣದ ಸಮೇತ ಬ್ಯಾಂಕಿಗೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ…

Read More

ಬೀದರ್: ಅರಣ್ಯ ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ರವರ 62ನೇ ಹುಟ್ಟು ಹಬ್ಬದ ಹಿನ್ನೆಲೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಠಾಣಾ ಕುಶನೂರನಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಭದ್ರ್ಯಯ ಸ್ವಾಮಿ ಕಾಂಗ್ರೆಸ್ ಯುವ ಮುಖಂಡರು, ಸಂಗಮೇಶ್ ಪಾಟೀಲ್ ಪಿಕೆಪಿಎಸ್  ಉಪಾಧ್ಯಕ್ಷರು ನೀಡೋದ, ಎಂ.ಡಿ.ಸಿಕಂದರ್ ಎಸ್ ಡಿಎಂಸಿ ಸದಸ್ಯರು, ಖಮರ ಮುಲ್ಲಾ ಕಾಂಗ್ರೆಸ್ ಯುವ ಮುಖಂಡರೂ ಠಾಣಾ ಕುಶನೂರ , ಪ್ರಸಾದ್ ಮಾಳ್ಳಗೆ ಅಧ್ಯಕ್ಷರು ಗ್ಲೋರಿ ಸ್ಟಾರ್ ಯೂತ್ ಕ್ಲಬ್   ಹಾಗೂ ಕಾಂಗ್ರೆಸ್ ಯುವ ಮುಖಂಡರು  ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕುವಿನಿಂದ ನಡೆದ ದಾಳಿ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ನೇತೃತ್ವದ ಸರ್ಕಾರದ ವಿರುದ್ಧ ಈ ಘಟನೆಯನ್ನು ಮುಂದಿಟ್ಟುಕೊಂಡು ವಾಗ್ದಾಳಿ ನಡೆಸಿದೆ. ‘ಎಕ್ಸ್’‌ ಅಕೌಂಟ್‌ ನಲ್ಲಿ ಟ್ವೀಟ್‌ ಮಾಡಿರುವ ಶಿವಸೇನೆ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ, ಸೆಲೆಬ್ರೆಟಿಗಳು  ಸುರಕ್ಷತೆಯ ಕೊರತೆ ಎದುರಿಸುತ್ತಿದ್ದಾರೆ, ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ. ಮುಂಬೈನಲ್ಲಿ ಮತ್ತೋರ್ವ ಸೆಲೆಬ್ರಿಟಿ ಮೇಲೆ ಹಲ್ಲೆ ನಡೆದಿದೆ. ಈ ದಾಳಿ ಮುಂಬೈ ಪೊಲೀಸರು ಮತ್ತು ಗೃಹ ಸಚಿವರ ಕಾರ್ಯವೈಖರಿ ಮೇಲೆ ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ ಎಂದು ಟೀಕಿಸಿದ್ದಾರೆ. ಬಾಬಾ ಸಿದ್ದಿಕಿ ಹತ್ಯೆ, ನಟ ಸಲ್ಮಾನ್ ಖಾನ್‌ ಗೆ ಬರುತ್ತಿರುವ ಕೊಲೆ ಬೆದರಿಕೆಗಳು ಮತ್ತು ಈಗ ಸೈಫ್‌ ಅಲಿ ಖಾನ್‌ ಮೇಲಿನ ದಾಳಿಯಿಂದಾಗಿ, ದೇಶ ವಾಸಿಗಳಲ್ಲಿ ಮುಂಬೈ ನಗರ ಸುರಕ್ಷಿತವಲ್ಲ ಎಂಬ ಭಾವನೆ ಮೂಡುವಂತಾಗಿದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ಕೆಪಿಸಿಸಿಗೆ ನೂತನ ಅಧ್ಯಕ್ಷರ ಆಯ್ಕೆಯಾಗಬೇಕು ಎಂದು ಬುಧವಾರ ಆಗ್ರಹಿಸಿದ್ದ ಸತೀಶ್ ಜಾರಕಿಹೊಳಿ ಇದೀಗ ಹೈಕಮಾಂಡ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ಹೊಡೆದಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್​ಬುಕ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಡಿ.ಕೆ. ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ ಎಂದಿದ್ದಾರೆ. ಮಾಧ್ಯಮ ವರದಿಗಳ ಬಗ್ಗೆ ಗಮನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು, ಡಿಕೆ ಶಿವಕುಮಾರ್ ವಿರುದ್ಧ ಸಾಹುಕಾರ್ ಸಮರ ಎಂದೆಲ್ಲ ವರದಿಗಳಾಗಿವೆ. ಹೀಗಾಗಿ ಆ ಬಗ್ಗೆ ಸ್ಪಷ್ಟೀಕರಣ ಕೊಡಬೇಕಾಗಿ ಬಂದಿದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷ ಮತ್ತು ಇಸ್ರೋ ಅಧ್ಯಕ್ಷರಾಗಿ ವಿ.ನಾರಾಯಣನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಹಿರಿಯ ವಿಜ್ಞಾನಿ ಎಸ್.ಸೋಮನಾಥ್‌ ಅವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ ನಾರಾಯಣನ್‌ ಅವರನ್ನು ನೇಮಕ ಮಾಡಲಾಗಿದೆ. ಹಿರಿಯ ವಿಜ್ಞಾನಿ ಡಾ.ನಾರಾಯಣನ್‌ ಅವರು ಇಸ್ರೋದ ಲಿಕ್ವಿಡ್‌ ಪ್ರೊಪಲ್ಶನ್‌ ಸಿಸ್ಟಮ್ಸ್‌ ಸೆಂಟರ್‌ ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ನಾರಾಯಣನ್‌ ಅವರು ಸ್ಪೇಸ್‌ ಕ್ರಾಫ್ಟ್‌ ಮತ್ತು ಲಾಂಚ್‌ ವೆಹಿಕಲ್ಸ್‌ ನ ಪ್ರೊಪಲ್ಶನ್‌ ಸಿಸ್ಟಮ್ಸ್‌ ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಳಗಾವಿ:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಘಟನೆ ಸಂಬಂಧ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಅವರು, ಕ್ಯಾಂಟರ್ ವೊಂದು ಕಾರಿಗೆ ಡಿಕ್ಕಿ ಹೊಡೆದಿರುವ ಬಗ್ಗೆ ಬಹಿರಂಗಪಡಿಸಿದ್ದಾರೆ. ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ಹೆಬ್ಬಾಳ್ಕರ್, ಅವರ ಸಹೋದರ ಎಂಎಲ್‌ ಸಿ ಚನ್ನರಾಜ್ ಹಟ್ಟಿಹೊಳಿ, ಗನ್‌ಮ್ಯಾನ್ ಮತ್ತು ಚಾಲಕನಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ. ಅಪಘಾತ ಸಂಭವಿಸಿದೆ.  ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು. ಬೆಳಗ್ಗೆ 5 ಗಂಟೆಗೆ ಅಂಬಡಗಟ್ಟಿ ಕ್ರಾಸ್ ಬಳಿ ಒಂದು ಕಂಟೇನರ್ ಟ್ರಕ್ ಬಲಗಡೆಯಿಂದ ಎಡಗಡೆಗೆ ಬಂದಿದೆ. ಈ ವೇಳೆ ಇವರ ಕಾರಿನ ಬಲಭಾಗಕ್ಕೆ ತಾಗಿದೆ. ಅದರಿಂದ ಮುಂದೆ ಆಗಲಿದ್ದ ಹೆಚ್ಚಿನ ಅನಾಹುತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಗಿಳಿದು ಕಾರು ಮರಕ್ಕೆ ಗುದ್ದಿದೆ ಎಂದು ಹೇಳಿದ್ದಾರೆ. ಆರಂಭದಲ್ಲಿ,…

Read More

ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾದ ಘಟನೆ ನಡೆದಿದ್ದು, ಸದ್ಯ ಗಂಭೀರ ಸ್ಥಿತಿಯಲ್ಲಿರುವ ನಟನನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ 2.30ರ ಸುಮಾರಿಗೆ  ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಅವರ ನಿವಾಸಕ್ಕೆ ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿ, ಮನೆಯವರು ಎಚ್ಚರಗೊಂಡಿರುವುದು ತಿಳಿದು ಪರಾರಿಯಾಗಲು ಯತ್ನಿಸಿದ್ದಾನೆ. ತಡೆಯಲು ಯತ್ನಿಸಿದ ವೇಳೆ  ಚೂರಿಯಿಂದ ಇರಿಯಲಾಗಿದೆ. ಹಲ್ಲೆಗೊಳಗಾಗಿದ್ದ ಸೈಫ್ ಅಲಿ ಖಾನ್ ಅವರನ್ನು ಮುಂಜಾನೆ 3.30ಕ್ಕೆ ಆಸ್ಪತ್ರೆಗೆ ಕರೆತರಲಾಯಿತು. ಸೈಫ್ ಅವರಿಗೆ 2 ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ ಆರು ಭಾಗಗಳಲ್ಲಿ ಗಾಯಗಳಾಗಿವೆ. ಸದ್ಯ ಚಿಕಿತ್ಸೆ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ:  ಜಾಮೀಯಾ ಮಸೀದಿ ಮತ್ತು ವಕ್ಫ್ ಆಸ್ತಿಯನ್ನು ಗ್ರಾಮದ ಚಾಂದ್ ಬಾಷಾ ಎನ್ನುವರು ತನ್ನ ಹೆಸರಿಗೆ ಖಾತೆ ಮಾಡಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿ, ವೈ.ಎನ್.ಹೊಸಕೋಟೆ ಗ್ರಾಮದ ಜಾಮೀಯಾ ಮಸೀದಿಯ ಪದಾಧಿಕಾರಿಗಳು ಬುಧವಾರ ಪಾವಗಡ ಪಟ್ಣಣದ ತಹಶೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ವೇಳೆ ಜಾಮೀಯಾ ಮಸೀದಿಯ ಮುತುವಲ್ಲಿಯಾದ ಸಾಧಿಕ್ ಸಾಭ್ ಮಾತನಾಡಿ, ವೈ.ಎನ್.ಹೊಸಕೋಟೆ ಗ್ರಾಮದ ಸರ್ವೆ ನಂ 234 ರಲ್ಲಿ 17–15 ಗುಂಟೆ ಜಮೀನಿದ್ದು, ಈ ಜಮೀನು ಸುಮಾರು 300 ವರ್ಷಗಳ ಹಳೆಯ ಕಾಲದ್ದಾಗಿದ್ದು, ಮುಸಲ್ಮಾನ್ ಬಾಂಧವರು ಮರಣ ಹೊಂದಿದರೆ ಶವ ಸಂಸ್ಕಾರ ಮಾಡುತ್ತಿದ್ದು, ಈ ಸ್ಥಳ ಬಿಟ್ಟರೆ ನಮ್ಮ ಊರಿಗೂ ಮತ್ತು ಸುತ್ತಮುತ್ತಲಿನ 7 ಊರು ಗಳಿಗೂ ಯಾವುದೆ  ಖಬರ್‌ಸ್ಥಾನ್ ಇರುವುದಿಲ್ಲಾ, ಆದರೆ ಚಾಂದ್ ಬಾಷಾ ಎನ್ನುವರು ಈ ಜಮೀನು ತನ್ನದೆ ಎಂದು ಪಾವಗಡ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ಈ ಮೊಕದ್ದಮೆಯನ್ನು ನ್ಯಾಯಾಲಯ ವಜಾ ಮಾಡಿ, ಈ ಸ್ಥಳ ಜಾಮೀಯಾ ಮಸೀದಿಗೆ ಸೇರಿದೆ ಎಂದು ಆದೇಶ ನೀಡಿದೆ,…

Read More

ತುಮಕೂರು: ಕಲ್ಪತರು ನಗರಿಯಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ತುಮಕೂರು ಜಿಲ್ಲಾಘಟಕ ಆತಿಥ್ಯ ವಹಿಸಿಕೊಂಡು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದು, ಮಹಿಳಾ ಪಡೆಯು ಕೂಡ ಯಶಸ್ವಿಗೊಳಿಸಲು ಸಣ್ಣದ್ಧವಾಗಿದೆ. ವಿವಿಧ ಸಂಘ ಸಂಸ್ಥೆಗಳ ಮಹಿಳೆಯರು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಮೂಲಕ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮುಂದಾಗಿದೆ. ನಗರದ ಪತ್ರಿಕಾ ಭವನದಲ್ಲಿ ಈ ಕುರಿತಾಗಿ ಮಹಿಳಾ ಸಮಿತಿಯಿಂದ ಹಿಂದೂ ಸಭೆ ನಡೆಸಲಾಯಿತು.  ಮಹಿಳಾ ಸಮಿತಿಯ ಗೌರವ ಅಧ್ಯಕ್ಷರಾದ ಕಮಲ ಗಂಗನಮಯ್ಯ ಬಾಹಾರಮಾಕುಮಾರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಡಾಕ್ಟರ್ ಲೀಲಾವತಿಯವರು ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ಆದ ಸಾಧನೆಯನ್ನು ಮಾಡಿರುವುದು ಎಲ್ಲರಿಗೂ ತಿಳಿದ ವಿಚಾರ ಅದೇ ರೀತಿಯಾಗಿ ಪತ್ರಿಕಾರಂಗದಲ್ಲೂ ಮಹಿಳೆ ತನ್ನಚಾಪನ್ನ ಮೂಡಿಸಿದ್ದು ತನ್ನದೇ ಆದ ಬರಹ ವಿಚಾರವಂತಿಕೆಯನ್ನು ಮೈಗೂಡಿಸಿಕೊಂಡು ಪತ್ರಿಕಾರಂಗದಲ್ಲೂ ಬೆಳೆಯುತ್ತಿರುವುದು ಶ್ಲಾಘನೀಯವಾಗಿದೆ.  ಈ ನಿಟ್ಟಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಿಳೆಯರಿಗೂ 39ನೇ ಸಮ್ಮೇಳನದಲ್ಲಿ…

Read More

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ–ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು. ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು’ ಎಂದಿದ್ದಾರೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್–ಕಾನ್ ಸಂಸ್ಥೆಯ ಸಮೀಪದಲ್ಲೇ ಇದು…

Read More