Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಜನವರಿ 16ರ ತನಕ ಮೋಡದ ವಾತಾವರಣ ಇರಲಿದ್ದು, 17ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಮಲೆನಾಡು : ಕೊಡಗು ಒಂದೆರಡು ಕಡೆ, ಹಾಸನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 16ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 17ರಿಂದ ಒಣ ಹವೆ ಆವರಿಸುವ ಲಕ್ಷಣಗಳಿವೆ. ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಹನಿ ಮಳೆಯ ಸಾಧ್ಯತೆ ಇದೆ. ಈಗಿನಂತೆ ಜನವರಿ 17ರ ತನಕ…
ತುಮಕೂರು: ಯುವಕರು ತರಗತಿಗಳಲ್ಲಿ ಹಾಗೂ ಬಿಡುವಿನ ವೇಳೆಯಲ್ಲೆಲ್ಲ ಮೊಬೈಲ್ ಗಳನ್ನು ಬಳಸುತ್ತಾರೆ. ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಕುರುಡು ಮತ್ತು ಕಿವುಡುತನ ಚಿಕ್ಕ ವಯಸ್ಸಿನಲ್ಲಿಯೇ ಕಾಡುತ್ತದೆ ಎಂದು ಡಫ್ ಚಿಲ್ಡ್ರನ್ ಫೌಂಡೇಶನ್ ನ ಕಾರ್ಯಕ್ರಮ ವ್ಯವಸ್ಥಾಪಕವೀರೇಶ್ ವೈ.ಎಸ್. ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿಯುವ ರೆಡ್ ಕ್ರಾಸ್ ಮತ್ತುರೆಡ್ ರಿಬ್ಬನ್ ಕ್ಲಬ್ ಆಯೋಜಿಸಿದ್ದ ಉಚಿತ ಕಣ್ಣು ಮತ್ತು ಕಿವಿ ತಪಾಸಣಾ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಹಿಂದೆ ಎಪ್ಪತ್ತು, ಎಂಬತ್ತು ವಯಸ್ಸಿನವರಿಗೆ ಕಾಡುತ್ತಿದ್ದ ಕಿವುಡುತನ ಮತ್ತುಅಂಧತ್ವಇಂದು10–15ನೇ ವಯಸ್ಸಿನ ಮಕ್ಕಳಲ್ಲಿ ಕಾಡುತ್ತಿದೆ. ಇದಕ್ಕೆಕಾರಣ ಹೆಚ್ಚಿನ ಶಬ್ದಮಾಲಿನ್ಯ ಮತ್ತು ಧ್ವನಿ ಉಪಕರಣಗಳ ಅತಿಯಾದ ಬಳಕೆ. ನವಜಾತ ಶಿಶುಗಳಲ್ಲೂ ಈ ಸಮಸ್ಯೆ ಹೆಚ್ಚುತ್ತಿದೆ ಎಂದರು. ಮಕ್ಕಳಿಗೆ ಐದು ವರ್ಷದ ಒಳಗೆ ಕಿವಿ ಕೇಳದಿದ್ದರೆ ಅವರು ಮಾತನಾಡುವುದನ್ನು ಕಲಿಯುವುದಿಲ್ಲ. ಹಾಗಾಗಿ ಮಕ್ಕಳ ಶ್ರವಣ ನ್ಯೂನತೆಯನ್ನು ಸೂಕ್ತ ಸಂದರ್ಭದಲ್ಲಿ ವೈದ್ಯರಿಗೆ ತೋರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ ಪಂಚೇಂದ್ರಿಯಗಳಲ್ಲಿ…
ತುಮಕೂರು: ಕಲ್ಪತರು ನಗರಿ ತುಮಕೂರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ರಾಜ್ಯ ಮಟ್ಟದ 39ನೇ ಸಮ್ಮೇಳನ ಗರಿಗೆದರಿದ್ದು, ತುಮಕೂರು ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಜನವರಿ 18 ಮತ್ತು 19ರಂದು ನಗರದಎಸ್ಎಸ್ ಐ ಟಿ ಕಾಲೇಜು ಕ್ಯಾಂಪಸ್ ಆವರಣದಲ್ಲಿ ನಡೆಯಲಿದ್ದು, ಹತ್ತು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿರುವ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸುದ್ದಿ ಮನೆಯಲ್ಲಿ ಕೆಲಸ ಮಾಡುವ ವಿವಿಧ ಪತ್ರಿಕಾ ಚೇತನಗಳಿಗೆ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಈ ಪ್ರಶಸ್ತಿಗಳನ್ನ ಕಲ್ಪತರು ನಾಡಿನಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನದಲ್ಲಿ ವಿತರಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕ ಅಭಿನಂದನೆ ಸಲ್ಲಿಸಿದೆ. ಜಿಲ್ಲಾಧ್ಯಕ್ಷ ಚಿನಿ. ಪುರುಷೋತ್ತಮ್ ಅವರು ಮಾತನಾಡಿ, ತುಮಕೂರು ಜಿಲ್ಲೆ ಸಾಂಸ್ಕೃತಿಕ ಶೈಕ್ಷಣಿಕ ಕಲೆ ಸಾಹಿತ್ಯ ಸೇರಿದಂತೆ ಹಲವು ರಂಗಗಳಲ್ಲಿ ತನ್ನದೇ ಆದಛಾಪು ಮೂಡಿಸಿದೆ, ಅದೇ ರೀತಿಯಾಗಿ ಪತ್ರಿಕಾರಂಗ ಮತ್ತು ಪತ್ರಿಕೋದ್ಯಮದ ಹುಟ್ಟಿಗೂ ಕಾರಣವಾಗಿದ್ದು ಡಿ.ವಿ.ಗುಂಡಪ್ಪರಂತಹ ಮಹಾನ್ ಚೇತನಗಳು ಇಲ್ಲಿ ಬದುಕಿ…
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 18 ಮತ್ತು 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜನವರಿ 18ರಂದು ನಿಟ್ಟೂರು, ಗುಬ್ಬಿ, ಬಿದರೆ, ದೊಡ್ಡಗುಣಿ, ಕಡಬ, ಕಲ್ಲೂರು, ಕೆ.ಜಿ.ಟೆಂಪಲ್, ಉಂಗ್ರಾ, ಸೋಮಲಾಪುರ ಹಾಗೂ ಜನವರಿ 19ರಂದು ಅಂತರಸನಹಳ್ಳಿ, ಟಿ.ಎಂ.ಟಿ.ಪಿ, ವಸಂತನರಸಾಪುರ, ತೋವಿನಕೆರೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮ/ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಜನವರಿ 24ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ಯಾತ್ಸಂದ್ರ, ಮೈದಾಳ ರಸ್ತೆ, ಬಸವಪಟ್ಟಣ, ತುಮಕೂರು–572104 ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2278014ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಜಿಲ್ಲೆಯ ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಠ ಸ್ಪಟಿಕಪುರಿ ಮಹಾ ಸಂಸ್ಥಾನದಲ್ಲಿ ಜನವರಿ 20ರಂದು ಬೆಳಿಗ್ಗೆ 9 ಗಂಟೆಗೆ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ವಾನ ಪ್ರದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು, ಆಸಕ್ತ ಶ್ವಾನಪಾಲಕರು ಜನವರಿ 18ರೊಳಗಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತುಮಕೂರು ಮೊ.ಸಂ. 9448769650/ 8494830759/ 968678797/ 7559912315/ 9880561094, ತುರುವೇಕೆರೆ-9945533787, ಕೊರಟಗೆರೆ-9964677451, ಚಿಕ್ಕನಾಯಕನಹಳ್ಳಿ-9945510509, ಶಿರಾ-9880313812, ಮಧುಗಿರಿ-9535966048, ಪಾವಗಡ-9742876225, ಗುಬ್ಬಿ-9449173655, ತಿಪಟೂರು-9448431987ನ್ನು ಸಂಪರ್ಕಿಸಬೇಕೆAದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ವಾನ ಪ್ರದರ್ಶನದ ಪ್ರಯುಕ್ತ ಸಾಕು ನಾಯಿಗಳ ಆರೋಗ್ಯ ರಕ್ಷಣೆ, ಸಾಕಾಣಿಕೆ ಬಗ್ಗೆ ಪ್ರಾಣಿ ತಜ್ಞರಿಂದ ವಿಚಾರ ವಿನಿಮಯವನ್ನು ನಡೆಸಲಾಗುವುದು. ಈ ಪ್ರದರ್ಶನದಲ್ಲಿ 25ಕ್ಕೂ ಅಧಿಕ ವಿವಿಧ ತಳಿಗಳ ಶ್ವಾನಗಳು ರಾಜ್ಯದ ವಿವಿಧೆಡೆಯಿಂದ ಭಾಗವಹಿಸಲಿವೆ. ಪ್ರದರ್ಶನಕ್ಕೆ ಸಾಕು ನಾಯಿಗಳನ್ನು ಕರೆತರುವವರು ಮುಂಜಾಗ್ರತೆಯಾಗಿ ತಮ್ಮ ಶ್ವಾನಗಳಿಗೆ ಎಲ್ಲಾ ರೋಗಗಳ ವಿರುದ್ಧ ಲಸಿಕೆ ಹಾಕಿಸಿರಬೇಕು.…
ತುಮಕೂರು: ಜಿಲ್ಲಾ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜನವರಿ 26ರಿಂದ 28ರವರೆಗೆ 3 ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ತುಮಕೂರು ನಗರದ ಹವ್ಯಾಸಿ ನಾಗರಿಕರು ತಾವು ಬೆಳೆದಿರುವ ಆಕರ್ಷಕ ಆರ್ಕಿಡ್, ಬೋನ್ಸಾಯ್ ಗಿಡ, ಕ್ಯಾಕ್ಟಸ್ ಮತ್ತು ಸಕ್ಯೂಲೆಂಟ್ಸ್ ಗಿಡಗಳನ್ನು ಪ್ರತ್ಯೇಕವಾಗಿ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ. ಗಿಡಗಳ ಸುರಕ್ಷತೆ ತೋಟಗಾರಿಕೆ ಇಲಾಖೆಯ ಹೊಣೆಯಾಗಿದ್ದು, ಆಸಕ್ತಿಯುಳ್ಳವರು ಜನವರಿ 23ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9741928966ನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕ ಶಾರದಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಲಿದ್ದು, ನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ವರದಿಯನ್ನು ಆಧರಿಸಿದ ಯಾವುದೇ ನಿರ್ಧಾರವು ಸರ್ಕಾರದ ವಿಶೇಷಾಧಿಕಾರವಾಗಿದ್ದು, ವಿಶ್ಲೇಷಿಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಅವರ ನೇತೃತ್ವದಲ್ಲಿ ಕಳೆದ ವರ್ಷ ಫೆಬ್ರವರಿ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿತ್ತು, ಸಮಾಜದ ಕೆಲವು ವರ್ಗಗಳು ಮತ್ತು ಆಡಳಿತಾರೂಢ ಕಾಂಗ್ರೆಸ್ ನ ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದರು. ವರದಿಯ ಮುಚ್ಚಿದ ಲಕೋಟೆಯನ್ನು ಸಂಪುಟದ ಮುಂದೆ ತೆರೆಯಲು ನಿರ್ಧರಿಸಲಾಗಿದೆ, ಇಲ್ಲದಿದ್ದರೆ ಅದು ಮಾಹಿತಿ ಸೋರಿಕೆಗೆ ಕಾರಣವಾಗಬಹುದು ಎಂದಿದ್ದಾರೆ. ಸಭೆಯಲ್ಲಿ ಇದರ ಬಗ್ಗೆ ಚರ್ಚೆ ನಡೆಯುತ್ತದೆಯೋ ಇಲ್ಲವೋ, ನಾನು ಈಗ ಅದರ ಬಗ್ಗೆ ಮಾತನಾಡಲು ಸಾಧ್ಯವಿಲ್ಲ, ಒಮ್ಮೆ ಮುಚ್ಚಿದ ಲಕೋಟೆ ತೆರೆದ ನಂತರ ಕನಿಷ್ಠ ಮಾಹಿತಿ ನಮಗೆ ತಿಳಿಯುತ್ತದೆ…
ಬೆಂಗಳೂರು: ಶೀಘ್ರವೇ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡಿ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಬೇಡಿಕೆಯಿಟ್ಟಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ ಸುರ್ಜೆವಾಲಾರನ್ನು ಭೇಟಿ ಮಾಡಿದ್ದೇನೆ. ಪಕ್ಷದ ಆಗು ಹೋಗುಗಳು ಹಾಗೂ ಸಂಘಟನೆ ಬಗ್ಗೆ ಚರ್ಚೆ ಮಾಡಿದೆ. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ ಎಂದರು. ಸದ್ಯ ಡಿ.ಕೆ.ಶಿವಕಮಾರ್ ಅವರು ಅಧ್ಯಕ್ಷರಾಗಿದ್ದು, ಇವರನ್ನೇ ಮುಂದುವರಿಸುವುದಾದರೆ ಅದನ್ನು ಸ್ಪಷ್ಟಪಡಿಸಿ ಅಂತ ಹೇಳಿದ್ದೇನೆ. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ಮತ ಸೆಳೆಯುವವರನ್ನು ಹಾಗೂ ವರ್ಚಸ್ಸು ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ ಅಂತ ಹೇಳಿದ್ದೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪಾವಗಡ: ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದ ಸ್ಥಿತಿಯಲ್ಲಿರುವ ರಸ್ತೆಯಲ್ಲಿ ಓಡಾಡಲು ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು, ರಸ್ತೆ ಅಭಿವೃದ್ಧಿಪಡಿಸಿವಂತೆ ಸಾರ್ವಜನಿಕರು ಆಕ್ರೋಶವನ್ನು ಹೊರಹಾಕಿದ್ದಾರೆ. ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದಿಂದ ಮೇಗಳಪಾಳ್ಯ ಲಂಬಾಣಿಹಟ್ಟಿ ಬಲ್ಲೇನಹಳ್ಳಿ ತಿಪ್ಪಯ್ಯನದುರ್ಗ ಕ್ಕೆ ಹೋಗುವ ಮುಖ್ಯ ರಸ್ತೆಯ ದುಸ್ಥಿತಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಹಲವಾರು ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಆದರೆ ಈ ರಸ್ತೆ ಬಹಳ ಕುಣಿಗಳಿಂದ ಆವರಿಸಿದ್ದು, ಸವಾರರಿಗೆ ಆತಂಕವನ್ನು ಉಂಟು ಮಾಡುತ್ತಿದೆ. ಹಲವಾರು ಜನ ಅಪಘಾತಗಳಿಗೆ ಗುರಿಯಾಗುತ್ತಿದ್ದು, ತೊಂದರೆ ಅನುಭವಿಸುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಮಾತ್ರ ಬರುವ ಜನಪ್ರತಿನಿಧಿಗಳು ತದನಂತರ ಈ ಕಡೆ ತಿರುಗುತ್ತಿಲ್ಲ. ಇದರಿಂದ ಗ್ರಾಮೀಣ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ರಸ್ತೆಯ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ. ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…