Author: admin

ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸಂತ್ರಸ್ತ ಕುಟುಂಬಕ್ಕೆ ಮೂರು ಹಸುಗಳನ್ನು ನೀಡಿದ್ದಾರೆ. ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕೊಟ್ಟ ಮಾತಿನಂತೆಯೇ ಜಮೀರ್ ಖಾನ್ ನಡೆದುಕೊಂಡಿದ್ದು, 3 ಲಕ್ಷ ಮೌಲ್ಯದ ಮೂರು ಹಸುಗಳನ್ನು ಸಂತ್ರಸ್ತರ ಕುಟುಂಬಕ್ಕೆ ನೀಡಿದ್ದಾರೆ. ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ಇಂದು ಹಸ್ತಾಂತರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ತುಮಕೂರು ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಪರಮೇಶ್ವರ ಅವರ ಮನೆಯ ಸುತ್ತಲೂ ಪೊಲೀಸರು ಬ್ಯಾರಿಕೇಡ್ ನಿರ್ಮಿಸಿ ಬಿಜೆಪಿ ಕಾರ್ಯಕರ್ತರನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ತಲೆಮರೆಸಿಕೊಂಡು ಬಂದಿದ್ದ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಅವರ ಕೆಲ ಕಾರ್ಯಕರ್ತರೊಂದಿಗೆ ಪ್ರಯತ್ನಿಸಿದರು. ತಲೆಗೆ ಕೇಸರಿ ಟವಲ್ ಸುತ್ತಿಕೊಂಡು, ಕೈಯಲ್ಲಿ ಸಗಣಿ ಹಿಡಿದುಕೊಂಡು ಬಂದಿದ್ದ ಶಾಸಕ ಸುರೇಶ್ ಗೌಡ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ವಶಕ್ಕೆ ತೆಗೆದುಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯಾಗಿರುವಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಸಲ ಸಾವಯವ ಬೆಲ್ಲದ ಜಿಲೇಬಿ ಎಲ್ಲರನ್ನೂ ಸೆಳೆಯುತ್ತಿದೆ. 500ಕ್ಕೂ ಹೆಚ್ಚು ಜನರು ಸೇರಿ ಕನಿಷ್ಠ 12 ಲಕ್ಷಕ್ಕೂ ಹೆಚ್ಚು ಜಿಲೇಬಿ ತಯಾರಿಸುವ ಗುರಿಯನ್ನು ಹೊಂದಿದ್ದಾರೆ. ಬರುವಂತಹ ಭಕ್ತರಿಗೆ ದಾಸೋಹದಲ್ಲಿ ಈ ಜಿಲೇಬಿಗಳನ್ನು ಹಂಚಲಾಗುತ್ತಿದೆ. ಪ್ರತಿ ವರ್ಷ ವಿಶೇಷ ತಿನಿಸುಗಳನ್ನು ಹಂಚುವ ಮೂಲಕ ಗವಿಮಠದ ಜಾತ್ರೆಯ ದಾಸೋಹ ಖ್ಯಾತಿಯನ್ನು ಪಡೆದುಕೊಂಡಿದೆ. ಸಿಂಧನೂರಿನ ಸಮಾನ ಮನಸ್ಕ ಗೆಳೆಯರ ಬಳಗದವರು, ಈ ಸಲ ಲಕ್ಷಾಂತರ ಜನರಿಗೆ ಸಾವಯವ ಬೆಲ್ಲದ ಜಿಲೇಬಿಗಳನ್ನು ಗುಣಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ 5 ಲಕ್ಷಕ್ಕೂ ಹೆಚ್ಚು ಶೇಂಗಾ ಹೋಳಿಗೆಗಳನ್ನು ತಂಬೂರಿನಲ್ಲಿ ತಯಾರಿಸಿಕೊಂಡು ಬಂದು ಇಲ್ಲಿ ದಾಸೋಹಕ್ಕೆ ನೀಡುತ್ತಿದ್ದರು. ಈ ಸಲ ಗವಿಮಠದ ಆವರಣದಲ್ಲಿಯೇ ಜಿಲೇಬಿಗಳನ್ನು ತಯಾರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕನಿಷ್ಠ 12ರಿಂದ 15 ಲಕ್ಷ ಜಿಲೇಬಿಗಳನ್ನು ತಯಾರಿಸಲಾಗುತ್ತಿದ್ದು, ಇದಕ್ಕಾಗಿ 50 ಕ್ವಿಂಟಲ್ ಮೈದ ಇಟ್ಟು 125 ಕ್ವಿಂಟಲ್ ಸಾವಯವ ಬೆಲ್ಲ ಎರಡು…

Read More

ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಅವರು ನಿಧನರಾಗಿದ್ದಾರೆ. ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ವಿಜಿ ಅವರ ಸಂಪೂರ್ಣ ಹೆಸರು ವಿಜಯ್ ಕುಮಾರ್ ಆಗಿತ್ತು. 1965ರಿಂದ 2024ರ ವರೆಗೆ ಆ್ಯಕ್ಟೀವ್ ಆಗಿದ್ದ ಸರಿಗಮ ವಿಜಿ 250ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 75ಕ್ಕೂ ಅಧಿಕ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ವಿಜಿ ಕೆಲಸ ಮಾಡಿದ್ದರು, ಬೆಳವಳದ ಮಡಿಲಲ್ಲಿ ಚಿತ್ರದಲ್ಲಿ ವಿಜಿ ಮೊದಲ ಬಾರಿಬಣ್ಣ ಹಚ್ಚಿದ್ದರು. ವಿಜಿ ನಟಿಸುತ್ತಿದ್ದ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಜನಪ್ರಿಯವಾಗಿತ್ತು. ಹಾಗಾಗಿ ಅವರ ಹೆಸರಿನ ಜೊತೆ ಸರಿಗಮ ಎನ್ನುವುದು ಸೇರಿಕೊಂಡಿತ್ತು. ಈ ನಾಟಕ 500ಕ್ಕೂ ಅಧಿಕ ಪ್ರದರ್ಶನ ಕಂಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾಕಿಸ್ತಾನದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ ಪತ್ತೆಯಾಗಿರುವ ಘಟನೆ ನಡೆದಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಾಜಿ ಗಣಿಗಾರಿಕೆ ಸಚಿವ ಇಬ್ರಾಹಿಂ ಹಜಲ್ ಮುರಾದ್ ಅವರು, ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಸುಮಾರು 800 ಬಿಲಿಯನ್ ಪಾಕಿಸ್ತಾನಿ ರೂಪಾಯಿ(80 ಸಾವಿರ ಕೋಟಿ) ಮೌಲ್ಯದ ಚಿನ್ನ ಪತ್ತೆಯಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅಟ್ಟಾಕ್ ನಿಂದ ತರ್ಬೆಲಾ ಮತ್ತು ಮಿಯಾನ್ ಕಣಿವೆವರೆಗಿನ 32 ಕಿ.ಮೀ. ಪ್ರದೇಶದಲ್ಲಿ ಈ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಪಾಕಿಸ್ತಾನದ ಭೂವೈಜ್ಞಾನಿಕ ಸಮೀಕ್ಷಾ ಇಲಾಖೆ ನಡೆಸಿದ ಸಂಶೋಧನೆಯಲ್ಲಿ ಚಿನ್ನದ ನಿಕ್ಷೇಪ ಇರುವುದು ದೃಢಪಟ್ಟಿದೆ. ಈ ಚಿನ್ನದ ನಿಕ್ಷೇಪ ಪಾಕಿಸ್ತಾನದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಬಳಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ರಾಜಸ್ಥಾನ: ಗೆಸ್ಟ್ ಹೌಸ್ ನಲ್ಲಿ ತಂಗಿದ್ದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಮೆಹಂದಿಪುರದ ಬಾಲಾಜಿ ಪಟ್ಟಣದ ಧರ್ಮಶಾಲಾ ಅತಿಥಿಗೃಹದಲ್ಲಿ ನಡೆದಿದೆ. ಮೃತರೆಲ್ಲರೂ ಉತ್ತರಾಖಂಡದ ಡೆಹ್ರಾಡೂನ್ ನ ರಾಯ್ ಪುರ ಪ್ರದೇಶದವರು ಎಂದು ಹೇಳಲಾಗಿದೆ. ಪೋಷಕರು ಹಾಗೂ ಮಗ, ಮಗಳು ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ. ಜನವರಿ 12ರಂದು ಸಮಾಧಿ ವಾಲಿ ಗಲಿಯ ರಾಧಾ—ಕೃಷ್ಣ ಆಶ್ರಮದ ಧರ್ಮಶಾಲಾ ಕೊಠಡಿಯಲ್ಲಿ ಈ ಕುಟುಂಬ ಬಾಡಿಗೆ ಪಡೆದಿತ್ತು. ಜನವರಿ 14ರಂದು ಚೆಕ್ ಔಟ್ ಮಾಡಲು ಈ ಕುಟುಂಬ ನಿರ್ಧರಿಸಿತ್ತು. ಆದರೆ ಮ್ಯಾನೇಜರ್ ಪರಿಶೀಲಿಸಲು ಕೊಠಡಿಯೊಳಗೆ ತೆರಳಿದ ವೇಳೆ ನಾಲ್ಕು ಮೃತದೇಹಗಳು ಬಿದ್ದಿರುವುದು ಕಂಡು ಬಂದಿದ್ದು, ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಾಜಿ ಪೊಲೀಸರು ಹಾಗೂ ತೋಡಭೀಮ್ ಠಾಣೆ ಪ್ರಭಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ವಿಷ ಸೇವಿಸಿ ಸಾವನ್ನಪ್ಪಿರುವ ಶಂಕೆ ಮೂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ಯಾವುದೇ ವಿಚಾರದಲ್ಲಿ ಸಮಸ್ಯೆ ಇಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು. ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಸಚಿವರಾದ ಜಿ. ಪರಮೇಶ್ವರ ಮತ್ತು ಕೆ.ಎನ್. ರಾಜಣ್ಣ ಅವರು ಕಾರಣಾಂತರಗಳಿಂದ ಕೆಪಿಸಿಸಿ ಸರ್ವಸದಸ್ಯರ ಸಭೆಗೆ ಬಂದಿರಲಿಲ್ಲ ಎಂದರು. ಬೆಳಗಾವಿ ಜಿಲ್ಲೆಯ ರಾಜಕಾರಣ ಕುರಿತು ಡಿ.ಕೆ. ಶಿವಕುಮಾರ್ ಮತ್ತು ಸತೀಶ ಜಾರಕಿಹೊಳಿ ಮಧ್ಯೆ ಯಾವ ಜಗಳವೂ ಆಗಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಕೈಗಾರಿಕಾ ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆಯೇ ವಿನಾ ದುರಾಸೆಯಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರಿನ…

Read More

ಬೆಳಗಾವಿ: ಮಕರ ಸಂಕ್ರಾಂತಿ ಹಬ್ಬಕ್ಕೆ ಮಗಳಿಗೆ ವಿವಿಧ ಅಡುಗೆ ಮಾಡಿ, ಬುತ್ತಿ ಹಿಡಿದುಕೊಂಡು ಅಳಿಯನ ಮನೆಗೆ ಬಂದ ಅತ್ತೆಯನ್ನು ಅಳಿಯನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪದಮುಕಿ(43) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಇವರ ಅಳಿಯ ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಆರೋಪಿ ಶುಭಂ 7 ತಿಂಗಳ ಹಿಂದಷ್ಟೇ ರೇಣುಕಾ ಪುತ್ರಿ ಛಾಯಾಳನ್ನು ವಿವಾಹವಾಗಿದ್ದನು. ಹೀಗಾಗಿ ರೇಣುಕಾ ಮಗಳಿಗೆ ಎಳ್ಳು ಬೆಲ್ಲದ ಜೊತೆ ಸಂಕ್ರಾಂತಿ ಹಬ್ಬದೂಟ ಕೊಡುವುದಕ್ಕೆ ಮಗಳ ಮನೆಗೆ ಬಂದಿದ್ದರು. ಆದರೆ ಈ ವೇಳೆ ಹಣ ಕೊಡಲಿಲ್ಲವೆಂದು ಶುಭಂ ಅತ್ತೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಛಾಯಾ ಚಿಕಿತ್ಸೆಗೆ ಖರ್ಚಾಗಿದ್ದ ಹಣ ನೀಡುವಂತೆ ಶುಭಂ ಖ್ಯಾತೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಏಕಾಏಕಿ ತನ್ನ ಅತ್ತೆಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮವಾಗಿ ರೇಣುಕಾ ಅವರು ತೀವ್ರ ರಕ್ತಸ್ರಾವದಿಂದ ಮನೆಯಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿ ಶುಭಂ…

Read More

ಮೈಸೂರು: ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಚಿವ ವೆಂಕಟೇಶ್ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಸಂಕ್ರಾಂತಿ ಆಚರಿಸತ್ತಿರುವುದಾಗಿ ಹೇಳಿದರು. ತಮ್ಮೊಂದಿಗೆ ತಂದಿದ್ದ ಹಸುವಿನ ಸಗಣಿಯನ್ನು ಬಿಜೆಪಿ ಕಾರ್ಯಕರ್ತರು ಸಚಿವರ ನಿವಾಸಕ್ಕೆ ಅದನ್ನು ಎಸೆಯಲು ಪ್ರಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾಕಾರರು ಹಸುವಿನ ಸಗಣಿ ಎಸೆಯುವುದನ್ನು ತಡೆದು ಅವರನ್ನು ಬಂಧಿಸಿದರು. ನಂತರ ಪ್ರತಿಭಟನಾಕಾರರನ್ನು ಡಿಎಆರ್ ಮೈದಾನಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಅವರನ್ನು ಬಿಡುಗಡೆ ಮಾಡಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಕೇರಳ: ಶಬರಿಮಲೆ ಪೊನ್ನಂಬಲ ಬೆಟ್ಟದಲ್ಲಿ ಮಕರಜ್ಯೋತಿ ಪ್ರಜ್ವಲಿಸಿತು.  ಸಂಜೆ 6:45ಕ್ಕೆ ದೀಪಾರಾಧನೆ ನಡೆಸಿದ ಸ್ವಲ್ಪ ಹೊತ್ತಿನಲ್ಲಿ ಮಕರಜ್ಯೋತಿ ಕಾಣಿಸಿಕೊಂಡಿದೆ. 6.47ರ ಹೊತ್ತಿಗೆ ಮೊದಲ ಜ್ಯೋತಿ ಕಾಣಿಸಿಕೊಂಡಿದ್ದು, ಸೆಕೆಂಡುಗಳ ನಂತರ ಮತ್ತೆ ಎರಡು ಬಾರಿ ಪ್ರಜ್ವಲಿಸಿತು. ಲಕ್ಷಾಂತರ ಭಕ್ತರು ಮಕರಜ್ಯೋತಿ ವೀಕ್ಷಿಸಿದರು. ಮಕರಜ್ಯೋತಿ ವೀಕ್ಷಣೆಗೆ ಶಬರಿಮಲೆ ಆಸುಪಾಸಿನ ಹಲವು ಕೇಂದ್ರಗಳಲ್ಲಿ ವ್ಯವಸ್ಥೆ ಏರ್ಪಡಿಸಲಾಗಿತ್ತು. ಸುಮಾರು ಒಂದು ಲಕ್ಷಕ್ಕೂ ಅಧಿಕ ಅಯ್ಯಪ್ಪ ಭಕ್ತರು ಮಕರ ಜ್ಯೋತಿ ದರ್ಶನ ಪಡೆದುಕೊಂಡರು. ಶಬರಿ ಮಲೆಯ ವಿವಿಧ ಪ್ರದೇಶಗಳಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಜ್ಯೋತಿ ದರ್ಶನದ ವೇಳೆ ಭಕ್ತರು ಅಯ್ಯಪ್ಪ ಸ್ವಾಮಿಯ ಘೋಷವಾಕ್ಯ ಕೂಗಿ ಸಂಭ್ರಮಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More