Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ತುಮಕೂರು: ನಮ್ಮ ಜೀವನ ಕ್ರಮವನ್ನು ಮುಂದಿನ ಪೀಳಿಗೆಗೆ ಸಾಗಿಸುವ ಸಂಪರ್ಕ ಸೇತುವೆಯೇ ಜಾನಪದ. ಜಾನಪದ ನಿಂತ ನೀರಲ್ಲ, ಕಾಲಕ್ಕೆ ತಕ್ಕಂತೆ ಬದಲಾಗುವ ತೊರೆಯಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೆಚ್.ಎಲ್. ಪುಷ್ಪಅಭಿಪ್ರಾಯಪಟ್ಟರು. ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು ವತಿಯಿಂದ ಶನಿವಾರ ಆಯೋಜಿಸಿದ್ದ ‘ಜಾನಪದ ನಡೆ ವಿದ್ಯಾರ್ಥಿಗಳ ಕಡೆ ಎಂಬ ವಿಚಾರ ಸಂಕಿರಣ ಮತ್ತು ಜಾಣಜಾಣೆಯರ ಜಾನಪದ ಗಾಯನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವದ ಬೇರೆಲ್ಲಾ ಕಲೆಗಳಿಗಿಂತ ಜಾನಪದ ಕಲೆ ವಿಭಿನ್ನವಾದದ್ದು, ಪ್ರಸ್ತುತ ಜಾನಪದ ಕಲೆಯ ಅನಿವಾರ್ಯತೆ ಮತ್ತು ಅವಶ್ಯಕತೆಗಳನ್ನು ಯುವ ಪೀಳಿಗೆ ಅರಿಯಬೇಕು. ಜಾನಪದ ಹಾಡುಗಳು ನಮ್ಮ ಬದುಕಿನ ಎಲ್ಲಾ ಆಯಾಮಗಳನ್ನು ಕಟ್ಟಿಕೊಡುತ್ತವೆ. ಜಾನಪದವನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಕೆಲಸ ನಡೆಯಬೇಕಿದೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಭು.ಜಿ. ಮಾತನಾಡಿ, ಕವಿವಾಣಿ ಹೂ, ಜನವಾಣಿ ಬೇರು, ಇವೆರಡೂ ನಮ್ಮ ಸಂಸ್ಕೃತಿಯ ಮೂಲ. ಜ್ಞಾನ ಸಂಪಾದನೆ ಸಿದ್ದಿಸುವುದು ಜಾನಪದದಿಂದ ಮಾತ್ರ. ನಮ್ಮ ವ್ಯಕ್ತಿತ್ವವನ್ನುರೂಪಿಸುವಲ್ಲಿ ಇವುಗಳ ಪಾತ್ರದೊಡ್ಡದು ಎಂದರು.…
ತುಮಕೂರು: ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಇಂಗ್ಲಿಷ್ ವಿಭಾಗವು ಪ್ರಸಿದ್ಧ ನಾಟಕಕಾರ ವಿಲಿಯಂ ಶೇಕ್ಸ್’ಫಿಯರ್ ಅವರ ಹ್ಯಾಮ್ಲೆಟ್ ಹಾಗೂ ಜೂಲಿಯಸ್ ಸೀಸರ್ ನಾಟಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಂಡಿತ್ತು. ಶಿರಾ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕ ಪ್ರಭಾಸ್ ಪಂಡಿತ್‌ಟಿ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಹ್ಯಾಮ್ಲೆಟ್ ನಾಟಕವನ್ನು ಮಹಾಭಾರತ ಮತ್ತು ರಾಮಾಯಣಗಳ ಸನ್ನಿವೇಶಗಳಿಗೆ ಹೋಲಿಕೆ ಮಾಡುವ ಮೂಲಕ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶೇಠ್ ಪ್ರಕಾಶ್ ಎಂ., ನಮ್ಮಆಲೋಚನೆಯನ್ನು ನಾಟಕಗಳು ಮತ್ತಷ್ಟು ಸುಧಾರಿಸುತ್ತವೆ, ಕಲ್ಪನಾ ಶಕ್ತಿಯನ್ನು ಹೆಚ್ಚಿಸುವುದರಜೊತೆಗೆ ಹೊಸ ರೀತಿಯ ಆಲೋಚನೆಗಳಿಗೆ ಕಾರಣವಾಗುತ್ತವೆ. ಹ್ಯಾಮ್ಲೆಟ್ ನಾಟಕವು ಬಿಎಸ್ಸಿ ಮೂರನೆಯ ಸೆಮಿಸ್ಟರ್ ನ ಭಾಗವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಂದರ್ಭದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ.ಜ್ಯೋತಿ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಮಕ್ಕಳನ್ನು, ಹದಿಹರೆಯದ ಯುವಜನರನ್ನು ಮೊಬೈಲ್ ನಿಂದ ಹೊರತರಲು ತುಮಕೂರಿನ ಶ್ರೀಸಿದ್ದವನ ಫ್ರೆಂಡ್ಸ್ ಅಸೋಸಿಯೇಷನ್ ವತಿಯಿಂದ ಜನವರಿ 12ರಿಂದ 16ರವರೆಗೆ ಹೆರಿಟೇಜ್ ಸ್ಟೋರ್ಟ್ಸ್ ಕಾರ್ನಿವೆಲ್ ಹೆಸರಿನಲ್ಲಿ ದೇಶಿಯ ಪಾರಂಪರಿಕ ಕ್ರೀಡೆಗಳ ಆಯೋಜನೆ ಮಾಡಿದೆ ಎಂದು ಶ್ರೀಸಿದ್ದವನ ಪ್ರೆಂಡ್ಸ್ ಆಸೋಸಿಯೇಷನ್ ನ ಧರ್ಮರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕರೋನ ನಂತರದಲ್ಲಿ ಮಕ್ಕಳು, ಯುವಜನರು ಮೊಬೈಲ್ ಗೆ ದಾಸರಾಗಿರುವ ಪರಿಣಾಮ ಅವರ ಮಾನಸಿಕ ಆರೋಗ್ಯ ದಿನದಿಂದ ದಿನಕ್ಕೆ ಕೆಡುತ್ತಿದೆ. ಸ್ವತಹಃ ಶಿಕ್ಷಕರಾಗಿ ನಾವು ಇದನ್ನು ಗಮನಿಸಿದ್ದೇವೆ. ಹೇಗಾದರೂ ಮಾಡಿ ಮೊಬೈಲ್ ಗೀಳಿನಿಂದ ಮಕ್ಕಳು ಮತ್ತು ಯುವಜನರನ್ನು ಹೊರತರಬೇಕೆಂಬ ಉದ್ದೇಶದಿಂದ ಮೆದುಳಿಗೆ ಕೆಲಸ ನೀಡುವ, ನಲಿಯುತ್ತಲೇ ಕಲಿಯಬಹುದಾದ ಕರ್ನಾಟಕದ 8 ದೇಶಿಯ ಪಾರಂಪರಿಕ ಆಟಗಳು ಸೇರಿದಂತೆ ವಿಶ್ವದ 50 ಆಟಗಳನ್ನು ಆಡಿಸಲು ಒಂದು ವೇದಿಕೆ ಸಿದ್ದಗೊಳಿಸಲಾಗಿದೆ. ಉಪ್ಪಾರಹಳ್ಳಿ ರೈಲ್ವೆ ಅಂಡರ್ ಪಾಸ್ ಸಮೀಪವಿರುವ ಶೈವಿ ನಿವಾಸದಲ್ಲಿ ಪಾರಂಪರಿಕ ಕ್ರೀಡೆಗಳನ್ನು ಆಡಲು ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಚಟುವಟಿಕೆಯನ್ನು ಉದ್ದೀಪನಗೊಳಿಸಲು ಹೊಸ ಪ್ರಯತ್ನ…
ತುಮಕೂರು: ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಮತ್ತು ಸೂಚನಾ ಫಲಕಗಳ ಅರಿವಿನ ಕಾರ್ಯಕ್ರಮ ನಡೆಯಿತು. ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀ ಸಿದ್ದಲಿಂಗಸ್ವಾಮೀಜಿಗಳು, ಹೆಲ್ಮೆಟ್ ಧರಿಸಿಯೇ ವಾಹನ ಚಲಾಯಿಸಬೇಕು, ಅಪಘಾತಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಎಲ್ಲರೂ ಸಂಚಾರಿ ನಿಯಮಗಳನ್ನು ಪಾಲಿಸಬೇಕು, ಪೋಷಕರು ಚಿಕ್ಕ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ನೀಡಬಾರದು, 18ವರ್ಷಆದ ನಂತರ ಅವರಿಗೆ ಲೈಸೆನ್ಸ್ ಕೊಡಿಸಿಯೇ ವಾಹನಗಳನ್ನು ನೀಡಬೇಕು, ಮಕ್ಕಳ ಜೀವ ಮುಖ್ಯ ವಾಹನ ಚಲಾಯಿಸುವಾಗ ನಿಧಾನವಾಗಿ, ಅಂತರ ಕಾಯ್ದುಕೊಂಡು, ರಸ್ತೆ ನಿಯಮಗಳನ್ನು ಪಾಲಿಸುತ್ತಾ ವಾಹನಗಳನ್ನು ಚಲಾಯಿಸಬೇಕು, ಮಕ್ಕಳಿಗೆ ಏನಾದರೂ ಹೆಚ್ಚು ಕಡಿಮೆ ಆದರೆ ಪೋಷಕರ ಆಕ್ರಂದನ ನೋಡಲು ಆಗುವುದಿಲ್ಲ, ಆಟೋ, ಬಸ್, ಇತ್ಯಾದಿ ವಾಹನಗಳಲ್ಲಿ ಎಷ್ಟು ಸೀಟು ಇದೆಯೋ ಅಷ್ಟೇ ಜನರನ್ನು ಹಾಕಬೇಕು, ಚಾಲಕರು ದುಡ್ಡಿನ ಆಸೆಗಾಗಿ ಹೆಚ್ಚು ಜನರನ್ನು ಕುಳ್ಳಿರಿಸಿ ಅಪಘಾತವಾದರೆ ಆ ಸಂಸಾರಕ್ಕೆ ಹೊಣೆ ಯಾರು…
ಮಂಗಳೂರು: ನಕ್ಸಲರ ಶರಣಾಗತಿ ಪ್ರಕ್ರಿಯೆ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅನುಮಾನ ವ್ಯಕ್ತಪಡಿಸಿದ್ದು, ನಿಯಮ ಉಲ್ಲಂಘಿಸಿ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಎನ್ ಕೌಂಟರ್ ನಲ್ಲಿ ಮೃತಪಟ್ಟ ವಿಕ್ರಮ್ ಗೌಡ ಅವರಿಗೆ ಸೇರಿದ್ದು ಎನ್ನಲಾಗಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬಗ್ಗೆ ಸರ್ಕಾರದ ಬಳಿ ಉತ್ತರವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ನಕ್ಸಲೀಯರು ಶರಣಾಗುವುದು ಎಂದರೆ ಅದು ನಂಬಿದ ತತ್ವ ಮತ್ತು ಸಿದ್ದಾಂತಕ್ಕೆ ಮಾಡಿದ ಮೋಸ. ದುಡಿಯುವ ಜನರಿಗೆ ದ್ರೋಹ ಮಾಡಿದಂತೆ. ದುಡ್ಡು ಮಾಡಲು ಹೋಗುತ್ತಾರೆ ಎಂದು ಜನರು ಆಡಿಕೊಳ್ಳುತ್ತಾರೆ. ನಮ ಜೊತೆ ಮಾತುಕತೆಗೆ ಬನ್ನಿ ಎಂದು ಸರ್ಕಾರ ಆಹ್ವಾನಿಸುತ್ತಿದೆ. ಲಕ್ಷಗಟ್ಟಲೇ ಹಣ ಕೊಡುತ್ತೇವೆ ಎನ್ನುತ್ತಾರೆ. ನಾವು ಸರ್ಕಾರದ ಪ್ಯಾಕೇಜ್ ಒಪ್ಪಿಕೊಂಡು ಶರಣಾಗುವುದೆಂದರೆ ನಮನ್ನು ನಾವು ಮಾರಿಕೊಂಡಂತೆ ಎಂದು ವಿಕ್ರಮ್ ಗೌಡ ಹೇಳಿರುವ ಆಡಿಯೋ ಬಹಿರಂಗಗೊಂಡಿದೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕೆಂದು ಒತ್ತಾಯ ಮಾಡಿದ್ದಾರೆ. ಈ ಹಿಂದೆಯೂ…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳ ಮಾಂಸ ನೀಡಲು ಬೇಟೆಯಾಡುತ್ತಿದ್ದ ಶಾರ್ಪ್ ಶೂಟರ್ ಸೇರಿದಂತೆ ಮೂವರನ್ನು ಸಂಚಾರಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನಗರದ ತೋಟದಗುಡ್ಡದಹಳ್ಳಿ ನಿವಾಸಿ ಶಾರ್ಪ್ ಶೂಟರ್ ಶ್ರೀನಿವಾಸ್(46), ನೆಲಮಂಗಲದ ಹನುಮಂತರಾಜು(44) ಮತ್ತು ರಾಮನಗರದ ಮುನಿರಾಜು(38) ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ 2 ತಿಂಗಳುಗಳಿಂದ ಆರೋಪಿಗಳ ಬಂಧನಕ್ಕೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದರು. ಥಾರ್ ಜೀಪ್ ನಲ್ಲಿ ಪರಾರಿಯಾಗುತ್ತಿದ್ದ ಮಾಹಿತಿಯಂತೆ ಸಿನಿಮೀಯ ಶೈಯಲ್ಲಿ ಸುಮಾರು 6 ಕಿ.ಮೀ. ಅಟ್ಟಾಡಿಸಿ ರಾಮನಗರ ಜಿಲ್ಲೆಯ ಚಿಕ್ಕಕುಂಟನಹಳ್ಳಿ ಕ್ರಾಸ್ ಬಳಿ ಜೀಪ್ನ್ನು ತಡೆದು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಜಿಂಕೆ, 2 ಕಾಡು ಹಂದಿ, 1 ಗನ್, 1 ಏರ್ ಗನ್, 11 ಜೀವಂತ ಗುಂಡು, 2 ಚಾಕು, 1ಕೊಡಲಿ, 1 ಮಚ್ಚು, 3 ಮೊಬೈಲ್, ಥಾರ್ ಜೀಪ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಹೈ ಫ್ಲ್ಯಾಶ್ ಲೈಟ್ಗಳನ್ನ ಬಳಸಿ ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಅವುಗಳ ಮಾಂಸವನ್ನು ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಸರಬರಾಜು ಮಾಡುತ್ತಿದ್ದರು ಎಂಬುದು…
ಬೆಂಗಳೂರು: ಅರಣ್ಯ ಸಚಿವರ ಹೆಸರು ದುರ್ಬಳಕೆ ಮಾಡಿ ವ್ಯಕ್ತಿಯೊಬ್ಬರಿಗೆ 6 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 2023ರಲ್ಲಿ ವೀರೇಶ್ ಎಂಬಾತ ಅಡವಿ ಎಂಬುವವರಿಗೆ ಪರಿಚಯವಾಗಿದ್ದು, ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕರ ಮತ್ತು ಅರಣ್ಯ ರಕ್ಷಕರ ಹುದ್ದೆಗಳಿಗೆ ವಿವಿಧ ಜಿಲ್ಲೆಯಗಳಲ್ಲಿ ಅರ್ಜಿ ಕರೆದಿದ್ದು, ತನಗೆ ಅರಣ್ಯ ಸಚಿವರು ತುಂಬಾ ಆತ್ಮೀಯರಾಗಿದ್ದು, ಸರ್ಕಾರ ಹುದ್ದೆ ಕೊಡಿಸುವುದಾಗಿ ಅವರನ್ನು ನಂಬಿಸಿದ್ದಾನೆ. ಈತನ ಮಾತನ್ನು ನಂಬಿದ ಪಿ.ಹೆಚ್.ಅಡವಿ(ರಾಣಿಬೆನ್ನೂರು) ಅವರು ತಮ ಮಕ್ಕಳು ಮತ್ತು ಸಹೋದರನ ಮಕ್ಕಳು ಮತ್ತು ಹೆಂಡತಿಯ ಅಕ್ಕನ ಮಗ ಸೇರಿ ಮೂವರಿಗೆ ಧಾರವಾಡ, ಶಿವಮೊಗ್ಗ ಮತ್ತು ಚಾಮರಾಜ ನಗರ ಜಿಲ್ಲೆಗಳಿಗೆ ಅರ್ಜಿ ಹಾಕಿಸಿದ್ದಾರೆ. ನಂತರ ವೀರೇಶ್ ಗೆ ಮುಂಗಡವಾಗಿ 2 ಲಕ್ಷದಂತೆ ಮೂವರಿಂದ ಒಟ್ಟು 6 ಲಕ್ಷ ಹಣ ಕೊಡಬೇಕು ಎಂದು ಹೇಳಿ ವಿಕಾಸ ಸೌಧದ ಬಳಿ ಪೋನ್ಪೇಯಿಂದ 50ಸಾವಿರ ಹಣವನ್ನು ಪಡೆದಿದ್ದಾನೆ. ತದನಂತರದಲ್ಲಿ ನಗದು ರೂಪದಲ್ಲಿ ಉಳಿದ 2.50ಲಕ್ಷ ಹಣವನ್ನು ಮಾಹಿತಿ ಸೌಧದ ಬಳಿ…
ಚಿಕ್ಕಮಗಳೂರು: ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗೋದು ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶೃಂಗೇರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಟೆಂಪಲ್ ರನ್ ಎಂಬ ಮಾಧ್ಯಮದವರ ಪ್ರಶ್ನೆಗೆ, ನಾನು ದಿನ ಪೂಜೆ ಮಾಡ್ತೀನಿ. ನಾನು ಧರ್ಮದ ಮೇಲೆ ನಂಬಿಕೆ ಇಟ್ಟವನು. ಸಮಾಜ, ಜನ, ರಾಜ್ಯ, ಪಕ್ಷ, ಕುಟುಂಬಕ್ಕಾಗಿ ಪೂಜೆ ಮಾಡ್ತೀನಿ. ಟೆಂಪಲ್ ರನ್ ಏನಿಲ್ಲ, ಹಾಗಾದ್ರೆ ದೇವಸ್ಥಾನ ಏಕೆ, ಬೀಗ ಹಾಕ್ಬಿಡಿ. ದೇವನೊಬ್ಬ ನಾಮ ಹಲವು ಎನ್ನುವ ತತ್ವದ ಮೇಲೆ ನಂಬಿಕೆ ಇಟ್ಟವನು ನಾನು. ಅವರವರ ನಂಬಿಕೆ ಅವರವರ ಆಚಾರ-ವಿಚಾರ ಅವರಿಗೆ ಬಿಟ್ಟದ್ದು ಎಂದರು. ರಾಜಕಾರಣದಲ್ಲಿ ಯಾವ ತಿರುವು ಅವಶ್ಯಕತೆ ಇಲ್ಲ. ಪಕ್ಷ, ಹೈಕಮಾಂಡ್ ಹೇಳಿದ್ದೇ ಅಂತಿಮ. ನನಗೆ ಯಾರ ಒತ್ತಾಯ, ಬೆಂಬಲ ಏನೂ ಬೇಡ. ನನಗಾಗಿ ಕಾರ್ಯಕರ್ತರು, ಶಾಸಕರು, ಬೆಂಬಲಿಗರು, ಕೂಗೋದು ಬೇಡ. ಮಾಡೋ ಕೆಲಸ ಮಾಡೋಣ, ಫಲಾಫಲ ದೇವರಿಗೆ ಬಿಡೋಣ ಎಂದು ಹೇಳಿಕೆ ನೀಡಿದರು.…
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಕೊರಟಗೆರೆ ತಾಲೂಕಿನ ಕಸಬಾ ಮತ್ತು ಕೋಳಾಲ ಹೋಬಳಿಯಲ್ಲಿ ಪ್ರವಾಸದಲ್ಲಿದ್ದು, ಅವರನ್ನು ಕೋಳಾಲ ಜನತೆ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ವ್ಯಾಪ್ತಿಯಲ್ಲಿ ಬರುವ 7 ಗ್ರಾ.ಪಂ. ಮತ್ತು ಕಸಬಾ ಹೋಬಳಿಯ 6 ಗ್ರಾ.ಪಂ.ಗಳ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಲಾಯಿತು. ಭಾರತ ಸರಕಾರದ ಯೋಜನೆಯಡಿ ಬರುವ ಗ್ರಾಮೀಣ ಪ್ರದೇಶದ ಪಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಸೋಮಣ್ಣ, ತುಮಕೂರು ಜಿ.ಪಂ. ಮತ್ತು ಕೊರಟಗೆರೆ ತಾ.ಪಂ.ನ ಅಲಿಂಕೋ ಸಾಧನಾ ಸಲಕರಣೆ, ಕೃಷಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತುಂತುರು ನೀರಾವರಿ ಯೋಜನೆ, ಪಶು ಇಲಾಖೆಯ ರಾಷ್ಟ್ರೀಯ ಜಾನುವಾರು ಮೀಷನ್ ಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು. ಜಿಲ್ಲೆಯಲ್ಲಿ ಅಭಿವೃದ್ಧಿಯ ಒಳ್ಳೆಯ ಕೆಲಸಗಳು ಆಗುತ್ತಿವೆ ಎಂದ ಸೋಮಣ್ಣ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಗುಣಗಾನ ಮಾಡಿದರು. ಬಳಿಕ ಕೊರಟಗೆರೆ ತಾಲೂಕಿನ 187ಜನ ವಿಶೇಷ ಚೇತನರಿಗೆ ಸಾಧನಾ ಸಲಕರಣೆ ಅಲಿಂಕೋ ಯೋಜನೆಯಡಿ ಎಲೆಕ್ಟ್ರೀಕ್ ಸೈಕಲ್,…
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಜವಾಹರ್ ಲಾಲ್ ನೆಹರೂ ಅವರಿಂದ ಹಿಡಿದು ರಾಜೀವ್ ಗಾಂಧಿವರೆಗೂ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಡಲಿಲ್ಲ. ಬಿ.ಆರ್. ಅಂಬೇಡ್ಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಹರು, ರಾಜೀನಾಮೆಯಿಂದ ಏನೂ ನಷ್ಟವಿಲ್ಲ ಎಂದಿದ್ದರು ಎಂದು ಹೇಳಿದರು. ಕಾಂಗ್ರೆಸ್ ನಾಯಕರು ಬಿ.ಆರ್. ಅಂಬೇಡ್ಕರ್ ಅವರನ್ನು ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್ ಸುಡುವ ಪಕ್ಷ, ಅದರಲ್ಲಿ ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪ್ರಹ್ಲಾದ್ ಜೋಷಿ ಹೇಳಿದರು. ಕೆಲವು ದಲಿತ ಮುಖಂಡರಿಗೆ ಕಾಂಗ್ರೆಸ್ ಭ್ರಮೆ ಹುಟ್ಟಿಸಿದೆ, ದಲಿತರು ಕಾಂಗ್ರೆಸ್ನಿಂದ ದೂರ ಇದ್ದಷ್ಟು ಒಳ್ಳೆಯದು. ಕಾಂಗ್ರೆಸ್ ನವರು ಮೀಸಲಾತಿ ವಿರೋಧ ಮಾಡಿದ್ದರು. ಕಾಂಗ್ರೆಸ್ ಸದಾ ದಲಿತ ಸಮುದಾಯವನ್ನು ಕತ್ತಲಲ್ಲಿ ಇಟ್ಟಿದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…