Author: admin

ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ನಿವಾಸಿಗಳು ಈಗ ಕರಡಿ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಪಟ್ಟಣದ ತಾಲ್ಲೂಕು ಕಚೇರಿಯ ಹಿಂಭಾಗದಲ್ಲಿರುವ ಜನವಸತಿ ಪ್ರದೇಶದಲ್ಲಿ ಭಾನುವಾರ ರಾತ್ರಿ ಕರಡಿಯೊಂದು ಓಡಾಡುತ್ತಿರುವುದು ಕಂಡುಬಂದಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಜನವಸತಿ ಪ್ರದೇಶದಲ್ಲಿ ಕರಡಿ ಸಂಚರಿಸುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಫೋನ್‌ ನಲ್ಲಿ ಸೆರೆಹಿಡಿದಿದ್ದಾರೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪಟ್ಟಣದ ನಿವಾಸಿಗಳ ನಿದ್ದೆಗೆಡಿಸಿದೆ. ಈ ಹಿಂದೆಯೂ ಇದೇ ಭಾಗದಲ್ಲಿ ಕರಡಿ ಮತ್ತು ಚಿರತೆಗಳ ಓಡಾಟ ಕಂಡುಬಂದಿತ್ತು. ಮುಂಜಾನೆ ವಾಕಿಂಗ್‌ ಗೆ ತೆರಳುವ ಸಮಯದಲ್ಲಿ ಕರಡಿಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ. ಈ ಪ್ರದೇಶದಲ್ಲಿ ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಈಗಾಗಲೇ ಹಲವು ಬಾರಿ ದೂರು ನೀಡಿ, ಪ್ರಾಣಿಗಳನ್ನು ಹಿಡಿಯುವಂತೆ ಮನವಿ ಮಾಡಲಾಗಿತ್ತು. “ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಎಷ್ಟು ಬಾರಿ ತಿಳಿಸಿದರೂ ಅವರು ಈ ಬಗ್ಗೆ ಸೂಕ್ತ ಗಮನ ಹರಿಸುತ್ತಿಲ್ಲ” ಎಂದು ಈ ಭಾಗದ…

Read More

ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ ನಾಮಕರಣ ಮಹೋತ್ಸವ ಜರುಗಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಒಟ್ಟು 119 ನವಜಾತ ಶಿಶುಗಳಿಗೆ ಶಿವಕುಮಾರ ಶ್ರೀಗಳ ಹೆಸರನ್ನು ಇಡಲಾಯಿತು. ಗಂಡು ಮಕ್ಕಳಿಗೆ ‘ಶಿವಕುಮಾರ’ ಮತ್ತು ಹೆಣ್ಣು ಮಕ್ಕಳಿಗೆ ‘ಶಿವಾನಿ’ ಎಂದು ನಾಮಕರಣ ಮಾಡಲಾಯಿತು.  ಶ್ರೀ ಶಿವಕುಮಾರ ಸ್ವಾಮೀಜಿಗಳ ದಾಸೋಹ ಟ್ರಸ್ಟ್ ವತಿಯಿಂದ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಾಮಕರಣಗೊಂಡ ಪ್ರತಿಯೊಂದು ಮಗುವಿಗೂ ಮಠದ ವತಿಯಿಂದ ಒಂದು ತೊಟ್ಟಿಲು, ಬಟ್ಟೆಗಳು, ಹಾಸಿಗೆ–ದಿಂಬು ಹಾಗೂ ಸೊಳ್ಳೆ ಪರದೆಯನ್ನು ಉಚಿತವಾಗಿ ವಿತರಿಸಲಾಯಿತು. ವಾಸ್ತವವಾಗಿ ಈ ನಾಮಕರಣ ಮಹೋತ್ಸವವು ಶಿವಕುಮಾರ ಶ್ರೀಗಳ ಜಯಂತಿಯಂದೇ ನಡೆಯಬೇಕಿತ್ತು. ಆದರೆ ಆ ದಿನ ರಾಷ್ಟ್ರಪತಿಗಳ ಭೇಟಿ ಮತ್ತು ಭದ್ರತಾ ಕಾರಣಗಳಿಂದಾಗಿ ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕಿರಲಿಲ್ಲ. ಹೀಗಾಗಿ ಇಂದು (ಏಪ್ರಿಲ್ 5) ಮಠದ ಆವರಣದಲ್ಲಿ ಬಹಳ ಶ್ರದ್ಧಾ ಭಕ್ತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಕ್ಕಳೊಂದಿಗೆ ಆಗಮಿಸಿದ್ದ ನೂರಾರು ದಂಪತಿಗಳು ತಮ್ಮ ಮಕ್ಕಳಿಗೆ ‘ಕಾಯಕ…

Read More

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ದೇಶದಲ್ಲಿ ಎಲ್‌ಪಿಜಿ (LPG) ಕೊರತೆ ಉಂಟಾಗುತ್ತಿದ್ದು, ಕೇಂದ್ರ ಸರ್ಕಾರ ತಕ್ಷಣವೇ ತನ್ನ ವಿದೇಶಾಂಗ ನೀತಿಯಲ್ಲಿ ಬದಲಾವಣೆ ತಂದು ಇತರ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಲು ಮುಂದಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಎಲ್‌ ಪಿಜಿ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಾಮಾನ್ಯ ಜನರ ಮೇಲೆ ಹೊರೆ: ಗ್ಯಾಸ್ ಕೊರತೆಯಿಂದಾಗಿ ಈಗಾಗಲೇ ಸಣ್ಣ ಹೋಟೆಲ್‌ ಗಳು ಮತ್ತು ಅನೇಕ ಕಾರ್ಖಾನೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಇದು ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ.  ಮಧ್ಯಪ್ರಾಚ್ಯದ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಆದ್ದರಿಂದ ಸರ್ಕಾರವು ಪರ್ಯಾಯ ಮಾರ್ಗಗಳನ್ನು ಹುಡುಕಬೇಕು ಮತ್ತು ಇತರ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಿ ಅನಿಲ ಆಮದು ಮಾಡಿಕೊಳ್ಳುವ ಮೂಲಕ ಸಮಸ್ಯೆಯನ್ನು ಪರಿಹರಿಸಬೇಕು ಅಂತಾ ಅವರು ಒತ್ತಾಯ ಮಾಡಿದರು. ಈ ಗಂಭೀರ ವಿಷಯದ…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಅಸ್ಪೃಶ್ಯತೆಯ ನಿವಾರಣಾ ಹೋರಾಟದ ಮುಂಚೂಣಿ ವಹಿಸಿದ ಧೀಮಂತ ನಾಯಕ ಶೋಷಿತರ ದಮನಿತರ ಧ್ವನಿ. ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನರಾಮ್ ಅವರ ಜನ್ಮದಿನದಂದು ಅವರಿಗೆ ಗೌರವದ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ರವಿಕುಮಾರ್ ಮಲ್ಲಿಗೆ ಮಾತನಾಡಿ, ಡಾ.ಬಾಬು ಜಗಜೀವನರಾಮ್  ಸ್ವಾತಂತ್ರ್ಯ ಹೋರಾಟಗಾರರಾಗಿ, ಸ್ವಾತಂತ್ರ್ಯ ನಂತರ ಭಾರತ ಸರ್ಕಾರದ ಸಚಿವರಾಗಿ, ಉಪ ಪ್ರಧಾನಿಯಾಗಿ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ನಾಯಕರು. ಕೃಷಿ ಸಚಿವರಾಗಿದ್ದಾಗ ಸುಧಾರಿತ ಬಿತ್ತನೆ ಬೀಜ ಹಾಗೂ ಸುಧಾರಿತ ತಳಿಗಳನ್ನು ಅನುಷ್ಠಾನಗೊಳಿಸಿ ಆಹಾರ ಧಾನ್ಯಗಳ ಕೊರತೆ ನೀಗಿಸಿದ ಹಸಿರುಕ್ರಾಂತಿಯ ಹರಿಕಾರ ಎನಿಸಿಕೊಂಡರು. ಅವರ ತತ್ವಾದರ್ಶಗಳು ವಿಚಾರಧಾರೆಗಳು ನಮಗೆಲ್ಲರಿಗೂ ದಾರಿದೀಪವಾಗಿವೆ ಎಂದರು. ಈ ಸಂದರ್ಭದಲ್ಲಿ  ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆತ್ಮಾರಾಮ್,  ಎಂ.ಡಿ.ನಯೂಮ್,  ಸುಭಾಷ್ ಸೈನೋರೆ, ಶಿವಕಾಂತ್ ಮಾಳೆಗೆ, ಶಿವಕುಮಾರ ಸೈನೋರೆ, ಉಮಕಾಂತ್,  ಮಾಳೆಗೆ, ಪೌಲ್ ಧೋಳೆ,  ಜೀವನ ಮಾಳೆಗೆ, ನವೀನ್,  ಅನಿಲ್ ,…

Read More

ತಿಪಟೂರು: ನಗರದಲ್ಲಿ ತಲೆದೋರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ನಗರಸಭೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಎಚ್ಚರಿಸಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ತಾಲ್ಲೂಕು ಆಡಳಿತ ಮತ್ತು ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈ ಹಿಂದೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಗರಸಭೆ ಆಯುಕ್ತರು ನಗರಕ್ಕೆ 62 ಹೊಸ ಕೊಳವೆಬಾವಿಗಳನ್ನು ಕೊರೆಸಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಕೊಳವೆಬಾವಿಗಳು ಎಲ್ಲಿವೆ ಎಂಬ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ಇಲ್ಲ ಎಂದರು. ನಗರಕ್ಕೆ 24 ಗಂಟೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಸುಮಾರು 72 ಸಾವಿರ ಕೋಟಿ ರೂ. (ವರದಿಯಂತೆ) ವೆಚ್ಚದಲ್ಲಿ ಅಳವಡಿಸಲಾದ ಪೈಪುಗಳು ಬಳಕೆಯಿಲ್ಲದೆ ತುಕ್ಕು ಹಿಡಿಯುತ್ತಿವೆ. ಇದರಿಂದ ಸರ್ಕಾರದ ಹಣ ಪೋಲಾಗುತ್ತಿದೆ ಎಂದು ಕಿಡಿಕಾರಿದರು. ನಗರದ ಗೋವಿನಪುರ ರಸ್ತೆಯು ಅತ್ಯಂತ ಕೆಟ್ಟದಾಗಿದ್ದು, ದೊಡ್ಡ ದೊಡ್ಡ…

Read More

ತಿಪಟೂರು: ತಾಲ್ಲೂಕಿನ ಬಿದರೆಗುಡಿ ಸಮೀಪದ ಬೈರಾಪುರ ಗೇಟ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅರಸೀಕೆರೆ ತಾಲ್ಲೂಕಿನ ಬಿ.ಎಲ್. ಕೊಪ್ಪಲು ಗ್ರಾಮದ ನಿವಾಸಿ ವಿಜಯಕುಮಾರ್ (26) ಎಂಬುವರು ಮೃತಪಟ್ಟಿದ್ದಾರೆ. ಮೃತ ವಿಜಯಕುಮಾರ್ ಅವರು ತಿಪಟೂರು ನಗರದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿಕೊಂಡು ಶುಕ್ರವಾರ ರಾತ್ರಿ ತಮ್ಮ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ, ಬೈರಾಪುರ ಗೇಟ್ ಬಳಿ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ವಿಜಯಕುಮಾರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿರುವುದೇ ಈ ಅಪಘಾತಕ್ಕೆ ಮುಖ್ಯ ಕಾರಣ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಅಪೂರ್ಣವಾಗಿರುವುದರಿಂದ ಏಕಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿದ್ದು, ವಾಹನ ಸವಾರರಿಗೆ ರಸ್ತೆಯ ಅರಿವಾಗುತ್ತಿಲ್ಲ. ಅಲ್ಲದೆ, ಸರಿಯಾದ ಸೂಚನಾ ಫಲಕಗಳಿಲ್ಲದಿರುವುದು ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಈ ಭಾಗದಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಶಿರಾ (ತುಮಕೂರು): ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 32ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗದಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಗೆ, ಹಾವೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್‌ನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಪ್ರವೀಣ್ (16) ಮತ್ತು ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಚವಡಿ ಗ್ರಾಮದ ಸಂಗೀತಾ (16) ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಸುಮಾರು 32 ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಂಬತ್ತು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಿರಾ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…

Read More

ತುಮಕೂರು: ಅಕ್ಷರ, ಅನ್ನ, ಆಶ್ರಯ ಸೇವೆಯ ಮೂಲಕ ತ್ರಿವಿಧ ದಾಸೋಹಿಯಾಗಿರುವ ಸಿದ್ದಗಂಗಾ ಮಠದ ಡಾ. ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ನಗರ ದಾಸೋಹ ಯೂನಿವರ್ಸಿಟಿಯಾಗಿದೆ. ಸ್ವಾಮೀಜಿಗಳ ದಾಸೋಹ ಪ್ರೇರಣೆ ಹಾಗೂ ಅವರ ಮೇಲಿನ ಭಕ್ತಿಯಿಂದಾಗಿ ನಗರದಲ್ಲಿ ಭಕ್ತರು, ಸಂಘಸಂಸ್ಥೆಗಳು ರಾಮನವಮಿಯಾಗಲಿ, ಹನುಮ ಜಯಂತಿಯಾಗಲಿ, ರಾಜ್ಯೋತ್ಸವವಾಗಲಿ ಅಲ್ಲಿ ಅನ್ನದಾಸೋಹ ಏರ್ಪಡಿಸುವ ಪದ್ಧತಿ ರೂಢಿಸಿಕೊಂಡಿದ್ದಾರೆ ಎಂದು ಹಿರೇಮಠಾಧ್ಯಕ್ಷರಾದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಶನಿವಾರ ನಗರದ ವಿಶ್ವವಿದ್ಯಾಲಯದ ಎದುರು ಬಸವ ಸೇವೆ, ಕನ್ನಡ ಮತ್ತು ಸಂಸ್ಕೃತಿ ವೇದಿಕೆ ಹಾಗೂ ಭಕ್ತರು ಡಾ. ಶಿವಕುಮಾರ್ ಸ್ವಾಮೀಜಿಗಳ 119ನೇ ಜನ್ಮವರ್ಷಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಾಮೀಜಿಗಳಿಗೆ ಭಕ್ತಿ ಸಮರ್ಪಣೆ ಹಾಗೂ ಅನ್ನದಾಸೋಹ ಕಾರ್ಯಕ್ರಮದಲ್ಲಿ ದಾಸೋಹ ವಿತರಣೆ ಮೂಲಕ ಹಿರೇಮಠ ಶ್ರೀಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದು ಡಾ.ಶಿವಕುಮಾರ್ ಸ್ವಾಮೀಜಿಗಳನ್ನು ನಾವು ಭಕ್ತಿಯಿಂದ ಸ್ಮರಿಸುತ್ತೇವೆ. ಅವರ ತ್ರಿವಿಧ ದಾಸೋಹ ಸೇವೆ ವಿಶ್ವವಿಖ್ಯಾತವಾಗಿದೆ, ಪೂಜ್ಯರ ಪ್ರೇರಣೆಯಿಂದ ಭಕ್ತರು ಎಲ್ಲಾ ಕಾರ್ಯಕ್ರಮಗಳಲ್ಲಿ ಅನ್ನದಾಸೋಹದ ಸಂಸ್ಕೃತಿ ಅಳವಡಿಸಿಕೊಂಡಿದ್ದು, ಪೂಜ್ಯರ ಕಾರಣದಿಂದ…

Read More

ತುಮಕೂರು:  ಟೆಂಪಲ್ ನಗರದ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ಎಂಬ ಅಧಿಕಾರಿಯ ವಿರುದ್ಧ ಗುತ್ತಿಗೆದಾರರನ್ನು ಅಸಭ್ಯ ಶಬ್ದಗಳಿಂದ ನಿಂದಿಸಿ ದರ್ಪ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಹಾಗೂ ಆ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಸಿ. ರಾಜೇಶ್ ಮಾತನಾಡಿ, ನಿಗಮದ ವಿಭಾಗಾಂತರದ ವಿವಿಧ ಕೆಲಸಗಳ ಅಡಿಯಲ್ಲಿ ತಪಾಸಣೆ ಪಡೆದ ವಿದ್ಯುತ್ ಗುತ್ತಿಗೆದಾರರು ಅತಿ ಅಲ್ಪಾವಧಿಯ ತಪಾಸಣೆ ಅಂದರೆ 31 ರಂದು ತಪಾಸಣೆ ಕಾರ್ಯ ಮುಗಿಸಿ ಲಾಗಿನ್ ಮಾಡಲು ಹೋದಾಗ ವಿಷಯದ ಬಗ್ಗೆ ವಿಚಾರಿಸಿಕೊಂಡು ಕೆಲಸಕ್ಕಾಗಿ ಹೋದಾಗ ಅಲ್ಲಿನ ಅಧಿಕಾರಿ ದರ್ಶನ್ ಅವರು ಅಸಭ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಆದ್ದರಿಂದ ಈ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಎಂದು ಹೇಳಿದರು. ಈ ಸಂಬಂಧ ಅಧಿಕಾರಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವಿಭಾಗದ ಹಿರಿಯ ಅಧಿಕಾರಿಗಳಿಗೆ ದೂರು…

Read More

ತುಮಕೂರು: ಮೇ 3ರಿಂದ 10 ರವರೆಗೆ ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ಟೆನ್ನಿಸ್ ಕ್ರೀಡಾಕೂಟ ತುಮಕೂರು ಓಪನ್ ಚಾಂಪಿಯನ್ ಶಿಪ್ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕ್ರೀಡಾಕೂಟ ಸಂಬಂಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ವಹಿಸಿರುವ ಜವಾಬ್ದಾರಿಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸುವಂತೆ ಅವರು ತಿಳಿಸಿದರು. ವಿವಿಧ ಸುಮಾರು 12 ದೇಶಗಳಿಂದ ಕ್ರೀಡಾಪಟುಗಳು ತುಮಕೂರಿಗೆ ಬರಲಿದ್ದಾರೆ ಅಲ್ಲದೆ ಅಂತರಾಷ್ಟ್ರೀಯ ಮಟ್ಟದ ತೀರ್ಪುಗಾರರು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು ಅವರಿಗೆಲ್ಲ ವಸತಿ, ಊಟ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಬೇಕು ಎಂದರು. ಈ ಕ್ರೀಡಾ ಕೂಟವು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆಯುತ್ತಿದ್ದು ತುಮಕೂರಿನ ನಾಲ್ಕು ಕ್ರೀಡಾ ಅಂಕಣಗಳಲ್ಲಿ ನಡೆಯಲಿದೆ. ಈ ಕ್ರೀಡಾ ಕೂಟಕ್ಕೆ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದರು. ಸುಮಾರು 100ಕ್ಕೂ ಹೆಚ್ಚು ಅಂತರಾಷ್ಟ್ರೀಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ದಾನಿಗಳೇ ನೀಡಲಿದ್ದಾರೆ. ಟೆನ್ನಿಸ್ ಅಸೋಸಿಯೇಷನ್…

Read More