Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ಬಹಳ ಹಿಂದೆ, ಒಮ್ಮೆ ಒಂದು ಪುಟ್ಟ ಹಣತೆ ಸೂರ್ಯದೇವನನ್ನು ಕುರಿತು ಕೇಳಿತು, “ಹೇ… ಸೂರ್ಯದೇವ ಪ್ರತಿದಿನದ ನಿನ್ನ ಅಸ್ತಂಗತದ ನಂತರ ನಾನು ಪ್ರತಿ ಮನೆಯಲ್ಲೂ ಬೆಳಗುವೆ, ಆದರೆ ನಿನ್ನ ಹಾಗೆ ಸರ್ವ ದಿಕ್ಕುಗಳನ್ನೂ ಏಕಕಾಲದಲ್ಲಿ ಬೆಳಗಲು ಆಗುತ್ತಿಲ್ಲ ನನ್ನ ಬುಡದಲ್ಲಿ ಯಾವಾಗಲೂ ಕತ್ತಲೆಯೇ ಆವರಿಸಿರುವುದು ಇದಕ್ಕೆ ಏನು ಮಾಡಲಿ ಪರಿಹಾರ ತಿಳಿಸು” ಎಂದಾಗ, ಸೂರ್ಯದೇವ ಹೇಳಿದನು… “ಮಿತ್ರ ಕೊರಗಬೇಡ ನಾನೂ ಏನು ಸರ್ವ ಶಕ್ತನಲ್ಲ ನನ್ನ ಬೆನ್ನ ಹಿಂದೆ ನನಗಿಂತ ಆಧಿಕ ಪ್ರಕಾಶಮಾನವಾದ ನಕ್ಷತ್ರ ಒಂದು ಬಂದು ನಿಂತರೆ ನನಗೂ ಕೂಡ ನನ್ನ ಮುಂದೆ ನೆರಳ ಛಾಯೆ ಮೂಡುವುದು ಎಂದಾಗ ಹಣತೆ ಅದು ಹೇಗೆ ಎಂದಾಗ ಸೂರ್ಯದೇವ ನೋಡು ಮಿತ್ರ ನೀನು ಪ್ರಜ್ವಲಿಸುತ್ತಿರುವಾಗ ನಿನ್ನ ಬೆನ್ನ ಹಿಂದೆ ಒಂದು ಅಧಿಕ ಪ್ರಕಾಶಮಾನವಾದ ಪಂಜನ್ನು ಬೆಳಗಿಸಿದರೆ ನಿನ್ನ ಪ್ರಜ್ವಲಿಸುವ ಜ್ಯೋತಿಯ ಛಾಯೆ ಕೂಡ ಮುಂದೆ ಒಂದು ತಡೆ ಗೋಡೆಯ ಮೇಲೆ ನೆರಳಾಗಿ ಕಾಣುವುದು. ಸ್ವತಹ ಜ್ಯೋತಿಯೇ ಕೂಡ ನೆರಳಾಗಿ ಕಾಣುವಾಗ ಇನ್ನು ಸೃಷ್ಟಿಕರ್ತ…
ಚಿಕ್ಕಮಗಳೂರು: ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ 6 ನಕ್ಸಲರು ಕಾಡಿನಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಅಂತೆಯೇ ಒಂದು ಎ.ಕೆ–56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್ ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ. 7.62 ಎಂಎಂ ಎ.ಕೆ. ಮದ್ದುಗುಂಡು–11, 303– ರೈಫಲ್ ಮದ್ದುಗುಂಡು -– 133, 12 ಬೋರ್ ಕಾರ್ಟ್ರಿಡ್ಜಸ್ -– 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು -– 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ–56 ಖಾಲಿ ಮ್ಯಾಗ್ಜಿನ್- – 01 ದೊರೆತಿದೆ. ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 251 (1) (ಬಿ), 7 ಮತ್ತು 25 (1ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಛೇರ್ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟವರಾಗಿರಬೇಕು. ಈಗಾಗಲೇ ಇಲಾಖೆ ಅಥವಾ ಸರ್ಕಾರದ ಯಾವುದೇ ಇತರೆ ಮೂಲಗಳಿಂದ ಯಂತ್ರಚಾಲಿತ ವಾಹನ ಮತ್ತು ಬ್ಯಾಟರಿ ಚಾಲಿತ ವೀಲ್‌ಛೇರ್ ಪಡೆದಿರುವವರು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿಯೊಂದಿಗೆ ಕನಿಷ್ಠ 10 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಿರುವ ಬಗ್ಗೆ ಮತ್ತು ವಾರ್ಷಿಕ ಆದಾಯ 2ಲಕ್ಷ ರೂ.ಗಳಿಗಿಂತ ಕಡಿಮೆ ಇರುವ ಬಗ್ಗೆ ತಹಸೀಲ್ದಾರ್ ಧೃಢೀಕೃತ ಪ್ರಮಾಣ ಪತ್ರ, ಶೇ.75 ಮತ್ತು ಅದಕ್ಕಿಂತ ಹೆಚ್ಚಿಗೆ ವಿಕಲತೆ ಹೊಂದಿರುವ ಬಗ್ಗೆ ವಿಶಿಷ್ಟ ಗುರುತಿನ ಚೀಟಿ(ಯು.ಡಿ.ಐ.ಡಿ)ಯನ್ನು ಲಗತ್ತಿಸಿ ಸಲ್ಲಿಸಬೇಕು. ಆಸಕ್ತ ದೈಹಿಕ ವಿಕಲಚೇತನರು ಗ್ರಾಮ ಒನ್, ಕರ್ನಾಟಕ ಒನ್, ತುಮಕೂರು ಒನ್ ಮತ್ತು ಸಿ.ಎಸ್.ಸಿ ಕೇಂದ್ರಗಳಲ್ಲಿ ಸೇವಾ ಸಿಂಧು https://suvidha.karnataka.gov.in ತಂತ್ರಾಂಶದಡಿ ಆನ್ ಲೈನ್ ಮೂಲಕ ಜನವರಿ 21ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವಿಕಲಚೇತನರ ಸಹಾಯವಾಣಿ ಕೇಂದ್ರದ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ಜನವರಿ 13 ಮತ್ತು 14ರಂದು ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ “ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಾಗಾರ”ವನ್ನು ಆಯೋಜಿಸಲಾಗಿದೆ. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸುವರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಸ್ತುಪ್ರದರ್ಶನ ಉದ್ಘಾಟಿಸುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಿರಿಧಾನ್ಯಗಳ ರಾಶಿ ಉದ್ಘಾಟಿಸುವರು. ಮರುದಿನ ಜನವರಿ 14ರಂದು ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು. ಸಾರ್ವಜನಿಕರು ಸಿರಿಧಾನ್ಯ ಹಬ್ಬದಲ್ಲಿ ಪಾಲ್ಗೊಂಡು ಉತ್ಪನ್ನಗಳನ್ನು ಖರೀದಿಸಿ ಉಪಯೋಗಿಸುವುದರ ಮೂಲಕ…
ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 20ರವರೆಗೆ ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ಹಾಗೂ ಕಲಿಕಾ ಮತ್ತು ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಎಜುಕೇಷನ್‌ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ/ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಕೋರ್ಸಿಗೆ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿದ್ದು, ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಪೋಷಕರ ವಾರ್ಷಿಕ ಗರಿಷ್ಟ ವರಮಾನ 6ಲಕ್ಷ ರೂ.ಗಳಿಗೆ ಮೀರಿರಬಾರದು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿದ ಜಾತಿ…
ತುಮಕೂರು: ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ತುಮಕೂರು ನಗರ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನ ಮುಖ್ಯ. ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಚಾಲನೆ ಮಾಡಿದರೆ ಅಪರಾಧ. ಕಾನೂನು ಮೀರಿ ವಾಹನ ಚಾಲನೆ ಮಾಡಿದ ಅಪ್ರಾಪ್ತ ವಯಸ್ಸಿನ ಮಕ್ಕಳ ಪೋಷಕರು ನ್ಯಾಯಾಲಯಕ್ಕೆ ದಂಡ ಕಟ್ಟಬೇಕು. ಚಾಲನಾ ಪರವಾನಗಿ ಹೊಂದಿದ ಹಾಗೂ 18 ವರ್ಷ ತುಂಬಿದವರು ಮಾತ್ರ ವಾಹನ ಚಲಾಯಿಸಬಹುದು. ವೇಗವಾಗಿ ವಾಹನ ಚಾಲನೆ, ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದು…
ತುಮಕೂರು: ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್ ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2 ಮತ್ತು 3ನೇ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹಗಳು ನಡೆಯುವಾಗ ಅಧಿಕಾರಿಗಳ ಗಮನಕ್ಕೆ ಯಾಕೆ ಬಂದಿಲ್ಲ? ಇಂತಹ ಪ್ರಕರಣಗಳು ಮರುಕಳಿಸಬಾರದು. ಕರ್ತವ್ಯ ನಿರ್ಲಕ್ಷತೆ ತೋರುವ ಯಾವುದೇ ಸಿಬ್ಬಂದಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಬಾಲ್ಯ ವಿವಾಹಗಳನ್ನು ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ಕೂಡಲೇ ತಾಲ್ಲೂಕುವಾರು ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು. ಬಾಲ್ಯ ವಿವಾಹಗಳು ನಡೆಯದಂತೆ ತಡೆಯಲು ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು…
ತುಮಕೂರು: ಅನುದಾನ ದುರ್ಬಳಕೆ ಆರೋಪದ ಮೇಲೆ ಜಿಲ್ಲೆಯ ಮಧುಗಿರಿ ಟೌನ್ ಕೆ.ಆರ್.ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುಪಮಾ ಹೆಚ್.ಎಸ್. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ. ಪಿಎಂಶ್ರೀ ಅನುದಾನ ದುರ್ಬಳಕೆಯಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ 2024ರ ಡಿಸೆಂಬರ್ 18 ಮತ್ತು 19ರಂದು ನಡೆಸಲಾದ ತಪಾಸಣೆ ವೇಳೆ ಅನುಪಮಾ ಅವರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಿವಿಲ್ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957ರ ನಿಯಮ 10(1)(ಎ)ರನ್ವಯ ಇಲಾಖಾ ವಿಚಾರಣೆ ಹಾಗೂ ಸೂಕ್ತ ಶಿಸ್ತುಕ್ರಮ ಕಾಯ್ದಿರಿಸಿ ಅಮಾನತ್ತುಗೊಳಿಸಲಾಗಿದೆ. ಅಮಾನತ್ತಿನ ಅವಧಿಯಲ್ಲಿ ಕೆಸಿಎಸ್ ಆರ್ ನಿಯಮ 98(ಎ) ಮತ್ತು ಸರ್ಕಾರದ ಆದೇಶ ದಿನಾಂಕ: 10—8–1987ರ ಮೇರೆಗೆ ಅನುಪಮಾ ಅವರಿಗೆ ಜೀವನಾಧಾರ ಭತ್ಯೆ ಪಾವತಿಸಲು ಮಂಜೂರಾತಿ ನೀಡಲಾಗಿದೆ. ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದೆಂದು…
ತುಮಕೂರು: ನಗರ ಉಪ ವಿಭಾಗ–2ರ ಸರಸ್ವತಿಪುರಂ ಶಾಖಾ ವ್ಯಾಪ್ತಿಯಲ್ಲಿ 100ಕೆವಿ ಟಿಸಿಯನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜನವರಿ 11ರಂದು ಬೆಳಿಗ್ಗೆ 11 ರಿಂದ ಸಂಜೆ 4:30 ಗಂಟೆಯವರೆಗೆ ಯಾದವನಗರ, ರಿಂಗ್ ರಸ್ತೆ, ಮರಳೂರು ಜನತಾ ಕಾಲೋನಿ, ಸರಸ್ವತಿಪುರಂನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊಹಬೂಬ್ ಷರೀಫ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೈಸೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 10 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಧಾನ ಸಭೆ ಯಶಸ್ವಿಯಾಗಿದ್ದು ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ವಹಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ತಿಂಗಳಿಗೆ 15 ಸಾವಿರ ಗೌರವ ಧನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರ ಕೂಡಲೇ 12 ಸಾವಿರ ಗೌರವ ಧನ ನಿಗದಿ ಪಡಿಸಿ ಬಳಿಕ ಹಂತ ಹಂತವಾಗಿ ಮೂರು ಸಾವಿರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx