Author: admin

ಹಾಸನ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ನಡೆದಿದ್ದು, ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ ಚಿಕ್ಕಮಗಳೂರಿನಿಂದ ಸುಬ್ರಮಣ್ಯಕ್ಕೆ ಡಾ.ಶೇಷಾದ್ರಿ ಅವರು ಪತ್ನಿಯೊಂದಿಗೆ ಕಿಯಾ ಕಾರಿನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ರಸ್ತೆಬದಿ ಕಾರು ನಿಲ್ಲಿಸಿ ದಂಪತಿ ಕೆಳಗಿಳಿದು ಪ್ರಾಣ ರಕ್ಷಿಸಿಕೊಂಡಿದ್ದಾರೆ. ನೋಡನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಇಡೀ ಕಾರಿಗೆ ವ್ಯಾಪಿಸಿದ ಬೆಂಕಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಂಜಾನೆಯಾದ್ದರಿಂದ ಅಷ್ಟಾಗಿ ದಾರಿಯಲ್ಲಿ ಯಾರೂ ಸಾಗುತ್ತಿರಲಿಲ್ಲ. ಹಾಗಾಗಿ ಸಹಾಯಕ್ಕೆ ಸ್ಥಳೀಯರು ಧಾವಿಸಿಲ್ಲ ಎನ್ನಲಾಗಿದೆ. ದಂಪತಿ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅರೆಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024–2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ಒಲವಿನ ಉಡುಗೊರೆ ಕೊಡಲೇನು ಸಹಿತ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿದ್ದ ಖ್ಯಾತ ಗಾಯಕ ಪಿ.ಜಯಚಂದ್ರನ್ (80) ನಿಧನರಾಗಿದ್ದಾರೆ. ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 16,000 ಕ್ಕೂ ಹೆಚ್ಚು ಹಾಡುಗಳಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಮಂದಾರ ಪುಷ್ಪವು ನೀನು, ಭೂಮಿ ತಾಯಾಣೆ ನೀ ಇಷ್ಟ ಕಣೆ, ಹಿಂದೂಸ್ತಾನವು ಎಂದೂ ಮರೆಯದ, ಕನ್ನಡ ನಾಡಿನ ಕರಾವಳಿ, ನನ್ನವರು ಯಾರೂ ಇಲ್ಲ.. ಯಾರಿಗೆ ಯಾರೂ ಇಲ್ಲ, ಕಾಲ ಮತ್ತೊಮ್ಮೆ ನಮಗಾಗಿ ಬಂತು ಹೀಗೆ ಹಲವಾರು ಕನ್ನಡದ ಸುಪ್ರಿಸಿದ್ಧ ಗೀತೆ ಪಿ.ಜಯಚಂದ್ರನ್ ಹಾಡಿ ಜನಪ್ರಿಯತೆ ಗಳಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಚಾಮರಾಜನಗರ: ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರಬೆಟ್ಟದ ಮುಖ್ಯ ರಸ್ತೆಯ ಅಭಿವೃದ್ಧಿಗೆ ಕೊನೆಗೂ ಸರ್ಕಾರ ಮನಸ್ಸು ಮಾಡಿದೆ. ವರ್ಷದಲ್ಲಿ 30 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ಕ್ಷೇತ್ರವಾದ ಮಲೆ ಮಹದೇಶ್ವರಬೆಟ್ಟದ ರಸ್ತೆ ಅವ್ಯವಸ್ಥೆಯಿಂದ ಕೂಡಿತ್ತು. ಈ ರಸ್ತೆ ಅವ್ಯವಸ್ಥೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ಫೆಬ್ರವರಿ 15ರಂದು ಮಹದೇಶ್ವರಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ನೆಪದಲ್ಲಾದರೂ ಈಗ ರಸ್ತೆಗೆ ದುರಸ್ತಿ ಭಾಗ್ಯ ದೊರಕಿದೆ. ಹನೂರಿನಿಂದ ಮಲೆ ಮಹದೇಶ್ವರಬೆಟ್ಟದವರೆಗಿನ 39.5 ಕಿ.ಮೀ. ಉದ್ದಕ್ಕೂ 51.5 ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ಡಾಂಬರೀಕರಣ ಆಗಲಿದೆ. ಈಗಾಗಲೇ 23 ಕಿ.ಮೀ. ರಸ್ತೆಗೆ ಡಾಂಬಾರು ಹಾಕುವ ಕಾಮಗಾರಿ ಭರದಿಂದ ಸಾಗಿದೆ.ಬೆಟ್ಟದ ರಸ್ತೆ ಸರಿಪಡಿಸಬೇಕಾದರೆ ಸಚಿವ ಸಂಪುಟ ಸಭೆಯೇ ನಡೆಯಬೇಕಾಯ್ತು ಎನ್ನುವ ಮಾತುಗಳು ಸದ್ಯ ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ ಆರು ನಕ್ಸಲೀಯರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಬಿಗಿ ಪೊಲೀಸ್ ಭದ್ರತೆಯೊಂದಿಗೆ ಜೈಲಿಗೆ ಶಿಫ್ಟ್ ಮಾಡಲಾಯಿತು. ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರಿಗೆ ಎನ್ಐಎ ವಿಶೇಷ ಕೋರ್ಟ್ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಚಿಕ್ಕಮಗಳೂರು ಡಿವೈಎಸ್ಪಿ ಬಾಲಾಜಿ ಸಿಂಗ್ ಅವರು ನಕ್ಸಲ್ ನಾಯಕರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್ ಐಎ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಗಂಗಾಧರ್ ಅವರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರು ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಹೀಗಾಗಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಯುವನಿಧಿ ಯೋಜನೆಯಡಿ ನೋಂದಣಿಗೊಂಡ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಯುವ ನಿಧಿ ಯೋಜನೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಇದರ ಅಡಿಯಲ್ಲಿ ಸರ್ಕಾರವು ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪಡೆದವರಿಗೆ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯಡಿಯಲ್ಲಿ 1,96,000 ಯುವಕರು ನೋಂದಾವಣಿ ಮಾಡಿಕೊಂಡಿದ್ದು, ಈವರೆಗೂ 1,61,883 ಯುವಕರಿಗೆ 216.38 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ ಬಜೆಟ್ ನಲ್ಲಿ ಇಲಾಖೆಗೆ ರೂ.1864 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ. 1235 ಕೋಟಿ ವೆಚ್ಚವಾಗಿದೆ. ರಾಜ್ಯದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ…

Read More

ಕಾಂಚಿಪುರಂ: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಆದರೆ ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮಿಳುನಾಡಿನಲ್ಲಿ ಹೇಳಿಕೆ ನೀಡಿದ್ದಾರೆ. ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳ ಜೊತೆಗೆ  ಮಾತನಾಡಿದರು. 400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿ.ಕೆ.ಶಿವಕುಮಾರ್  ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು:  ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕೋರ್ಸ್ ಗೆ ಸೇರಲು ಹಿಂಜರಿಯಬಾರದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಕರೆ ನೀಡಿದರು. ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ 2 ದಿನಗಳ ಸಿಇಟಿ, ನೀಟ್ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಾಹಿತಿ ಕೊರತೆ ಕಾರಣದಿಂದಾಗಿ ಬಹುತೇಕ ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನದ ಕೋರ್ಸುಗಳಿಗೆ ಸೇರಲು ಹಿಂದೇಟು ಹಾಕುವಂತಾಗಿದೆ. ಇದನ್ನು ಹೋಗಲಾಡಿಸಲು ಜಿಲ್ಲೆಯಾದ್ಯಂತ ವಿಜ್ಞಾನ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು. ಗ್ರಾಮೀಣ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೀಳರಿಮೆ ಬೆಳೆಸಿಕೊಳ್ಳದೇ ಸಿಕ್ಕ ಶೈಕ್ಷಣಿಕ ಅವಕಾಶಗಳನ್ನು ಆತ್ಮವಿಶ್ವಾಸದಿಂದ ಬಳಸಿಕೊಂಡು ಯಶಸ್ಸು ಸಾಧಿಸಬೇಕು. ಅವಕಾಶ ಇದ್ದವರು ಉನ್ನತ ಶಿಕ್ಷಣ ಗಳಿಸುವುದು ಮುಖ್ಯವಲ್ಲ. ಬದಲಾಗಿ ಅವಕಾಶ ವಂಚಿತರು ಛಲದಿಂದ ಉನ್ನತ ಶಿಕ್ಷಣ ಗಳಿಸುವುದು ಮುಖ್ಯ ಎಂದರಲ್ಲದೆ, ಬರುವ ಫೆಬ್ರವರಿ ತಿಂಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ 10 ದಿನಗಳ…

Read More

ತುಮಕೂರು:  ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಸುಮಾರು 1,500 ಉದ್ಯೋಗಾರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಶ್ವವಿದ್ಯಾನಿಲಯ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ತುಮಕೂರು ವಿಶ್ವವಿದ್ಯಾನಿಲಯದ ಡಾ.ಪಿ.ಸದಾನಂದಮಯ್ಯ ಬ್ಲಾಕ್‌ ನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ–2025ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಜಿಲ್ಲೆಯ ಸುಮಾರು 1,500 ಉದ್ಯೋಗಾಕಾಂಕ್ಷಿಗಳಿಗೆ ಜನವರಿ 26ರಂದು ಜಿಲ್ಲಾ ಉಸ್ತುವಾರಿ ಸಚಿವರು ನೇಮಕಾತಿ ಆದೇಶ ನೀಡಲಿದ್ದಾರೆ ಎಂದು ತಿಳಿಸಿದರು. ಇತ್ತೀಚೆಗಷ್ಟೆ ಕಾರ್ಯ ನಿಮಿತ್ತ ಮಧುಗಿರಿ ತಾಲ್ಲೂಕಿನ ಗ್ರಾಮವೊಂದಕ್ಕೆ ಭೇಟಿ ನೀಡಿದಾಗ ಯುವಕರ ತಂಡವೊಂದು ಮೊಬೈಲ್ ವೀಕ್ಷಿಸುತ್ತಾ, ಕಾಲ ಕಳೆಯುತ್ತಿದ್ದುದನ್ನು ಕಂಡು ವಿಚಾರಿಸಿದಾಗ ಯುವಕರೆಲ್ಲರೂ ಪದವಿ ಹೊಂದಿರುವ ವಿಚಾರ ತಿಳಿದು ಬಂದಿತು. ಪದವೀಧರರಾಗಿದ್ದರೂ ನಿರುದ್ಯೋಗಿಗಳಾಗಿರುವುದನ್ನು ಮನಗಂಡು ಶಿಕ್ಷಣ ಪೂರ್ಣಗೊಳಿಸಿರುವ ಯುವಕರಿಗಾಗಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಿರುದ್ಯೋಗಿಗಳಿಗೆ…

Read More

ಬೀದರ್:  ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕರೆ ನೀಡಿದ ಬೀದರ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರಕಿತು ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯಿಂದ ಗುರುವಾರ ಕರೆ ನೀಡಿರುವ ಬೀದರ್ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದರು. ನಗರದಲ್ಲಿ ವಾಣಿಜ್ಯ ಚಟುವಟಿಕೆ ಸ್ಥಗಿತಗೊಂಡಿದ್ದವು. ಹೊಟೇಲ್ , ರೆಸ್ಟೋರೆಂಟ್, ಶಾಲೆ—ಕಾಲೇಜುಗಳು,  ಬ್ಯಾಂಕ್ ಗಳು ಬಾಗಿಲು ಮುಚ್ಚಿದ್ದವು. ಕೆಎಸ್ಆರ್ ಟಿಸಿ ಸಂಚಾರವೂ ಇರಲಿಲ್ಲ.  ಬೆಳಿಗ್ಗೆ  ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಗೆ ಬೆಂಬಲಿಸಿದರು. ನಗರದಲ್ಲಿ ಆಟೊ ದ್ವಿಚಕ್ರ ವಾಹನ ಕಾರು ಓಡಾಟ ವಿರಳವಾಗಿತ್ತು. ಬೆಳಿಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ ವಿವಿಧ ಸಂಘಟನೆಗಳ ಹೋರಾಟಗಾರರು ಬೈಕ್ ಗಳಿಗೆ ನೀಲಿ ಧ್ವಜ ಕಟ್ಟಿಕೊಂಡು ನಗರದಲ್ಲಿ ಪ್ರಮುಖ ರಸ್ತೆ‌ಗಳಲ್ಲಿ ರಾಲಿ ನಡೆಸಿ ಬಂದ್ ಗೆ ಬೆಂಬಲಿಸಲು ಕೋರಿದರು. ನೌಬಾದ್ ಬಸವೇಶ್ವರ ವೃತ್ತದಲ್ಲಿ ಅಮಿತ್ ಶಾ ಅವರ ಅಣುಕು ಶವಯಾತ್ರೆ ಮೆರವಣಿಗೆ ನಡೆಸಿ…

Read More