Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿದ್ದು, ಬಣಗಳ ನಡುವಿನ ಸಭೆಗಳು ನಡೆಯುತ್ತಿರುವುದರ ನಡುವೆಯೇ ಇದೀಗ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಯಾಪಿಟಲ್ ಹೋಟೆಲ್ ನಲ್ಲಿ ಮಾಜಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ವಿಜಯೇಂದ್ರ ಔತಣಕೂಟ ಏರ್ಪಡಿಸಿದ್ದು, ಸಭೆಗೆ ಕಡ್ಡಾಯವಾಗಿ ಆಗಮಿಸುವಂತೆ ಸೂಚನೆ ನೀಡಿದ್ದಾರೆ. ಮೇಲ್ನೋಟಕ್ಕೆ ಇದು ಪಕ್ಷ ಸಂಘಟನೆಯ ಸಭೆಯಂತೆ ಕಂಡು ಬಂದಿದೆ. ಆದರೂ ಬಿಜೆಪಿಯೊಳಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ.ಪಿ.ಹರೀಶ್, ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್, ಅಣ್ಣಾ ಸಾಹೇಬ್ ಜೊಲ್ಲೆ ಮತ್ತಿತರರು ನಡೆಸುತ್ತಿರುವ ಪ್ರತ್ಯೇಕ ಸಭೆಗೆ ಪರ್ಯಾಯವಾಗಿ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ವಿಜಯೇಂದ್ರ ಬಣದವರು ಇದೊಂದು ಮುಂದುವರೆದ ಸಭೆಯಷ್ಟೆ. ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ, ಬಿಬಿಎಂಪಿ ಸೇರಿದಂತೆ ಪಕ್ಷ ಸಂಘಟನೆ ಕುರಿತಾಗಿ ಚರ್ಚಿಸಲು ಸಭೆ ಕರೆಯಲಾಗಿದೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ…
ಛತ್ತೀಸ್ ಗಢ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಸುಕಾ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಹೇಳಿಕೆ ನೀಡಿರುವ ರಾಜ್ಯ ಉಪಮುಖ್ಯಮಂತ್ರಿ ವಿಜಯ್ ಶರ್ಮಾ, ಸುಕಾದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದರು. ಇಲ್ಲಿಯವರೆಗೆ, ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ರಾಯ್ ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಕಳೆದ ಜ.6 ರಂದು ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಎಂಟು ಭದ್ರತಾ ಸಿಬ್ಬಂದಿ ಮತ್ತು ವಾಹನ ಚಾಲಕ ಸಾವನ್ನಪ್ಪಿದ ಘಟನೆಯನ್ನು ಉಲ್ಲೇಖಿಸಿ,ಅವರು ನಕ್ಸಲರು ಮಾಡಿದ ಕೃತ್ಯದ ನಂತರ ಭದ್ರತಾ ಪಡೆಗಳಲ್ಲಿ ಭಾರಿ ಕೋಪವಿದೆ ಎಂದು ಹೇಳಿದರು. ನಿಗದಿತ ಸಮಯದೊಳಗೆ ನಕ್ಸಲ್ ಬೆದರಿಕೆಯನ್ನು ನಿರ್ಮೂಲನೆ ಮಾಡಲಾಗುವುದು ಎಂದು ನಾನು ಪುನರುಚ್ಚರಿಸುತ್ತೇನೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತಿರುಪತಿ: ತಿರುಪತಿಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಘಟನೆಯಲ್ಲಿ ಒಟ್ಟು 40 ಮಂದಿ ಭಕ್ತರು ಗಾಯಗೊಂಡಿದ್ದು, ಗಂಭೀರವಾಗಿರುವವರನ್ನು ಹೆಲಿಕಾಫ್ಟರ್ ಮೂಲಕ ಹೈದ್ರಾಬಾದ್ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. . ಗಾಯಾಳುಗಳಿಗೆ ಉಚಿತವಾಗಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ. ಕಾಲ್ತುಳಿತದಲ್ಲಿ ಸಾವನ್ನಪ್ಪಿದ 7 ಮಂದಿಯಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯ ನಿರ್ಮಲಾ (50) ಸೇರಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ಟಿಟಿಡಿ ನಿರಾಕರಿಸಿದೆ. ಮೃತರು ವಿಶಾಖಪಟ್ಟಣದ ರಜನಿ(47), ಲಾವಣ್ಯ(40), ಶಾಂತಿ, ತಮಿಳುನಾಡಿನ ಸೇಲಂನ ಮಲ್ಲಿಕಾ (49), ನರಸೀಪಟ್ಟಣದ ನಾಯ್ಡುಬಾಬು (59) ಎಂದು ಗುರುತಿಸಲಾಗಿದೆ. ಈ ನಡುವೆ ಮೃತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯ ರಿಗೆ ಚುನಾವಣೆಗೂ ಮುನ್ನ ಸುಳ್ಳು ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲೂ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಸರ್ಕಾರ ಕಂಡೂ ಕಾಣದಂತೆ ಕುರುಡಾಗಿದೆ, ಕೇಳಿದರೂ ಕೇಳಿಸದಂತೆ ಕಿವುಡಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ ತಂದು ನಿಲ್ಲಿಸಿ ಮಜಾ ನೋಡುತ್ತಿದೆ . ಇದೇ ವಿಷಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ .ವಿಜಯೇಂದ್ರ ಅವರು, ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದಿರುವ 25 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎರಡನೇ ದಿನವೂ ಕೊರೆವ ಚಳಿಯಲ್ಲಿಯೇ ರಾತ್ರಿ ಕಳೆದು ಮುಷ್ಕರ…
ಕೊರಟಗೆರೆ: ತುಮುಲ್ ಎಲೆಕ್ಷನ್ ರಿಸಲ್ಟ್ ಪ್ರಕಟಗೊಂಡಿದ್ದು, ಎನ್ ಡಿ ಎ ಪಕ್ಷದ ಅಭ್ಯರ್ಥಿ ಮಾಸ್ಟರ್ ಸಿದ್ದಗಂಗಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. 78 ಮತಗಳನ್ನು ಪಡೆದು ಎನ್ ಡಿ ಎ ಪಕ್ಷದ ಅಭ್ಯರ್ಥಿ ಸಿದ್ದಗಂಗಯ್ಯ ಭರ್ಜರಿ ಗೆಲುವು ದಾಖಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಮಾಜಿ ತುಮಲ್ ನಿರ್ದೇಶಕ ಈಶ್ವರಯ್ಯ 38 ಮತ ಪಡೆದು ಸೋಲನುಭವಿಸಿದ್ದಾರೆ. ಗೆಲುವಿನ ಬಳಿಕ ಮಾತನಾಡಿದ ಸಿದ್ದಗಂಗಯ್ಯ, ಇದು ನನ್ನ ಗೆಲುವಲ್ಲ, ತಾಲೂಕಿನ ಪ್ರತಿಯೊಬ್ಬ ರೈತರ ಗೆಲುವು ಎಂದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ದರ್ಶನ್ ಮಾತನಾಡಿ, ರಾಜ್ಯ ಸರ್ಕಾರದ ಶೂನ್ಯ ಸಾಧನೆಗೆ ತುಮುಲ್ ಚುನಾವಣೆ ಉದಾಹರಣೆ, ಮುಂದೆ ಬರುವ ಜಿಲ್ಲಾ ಪಂಚಾಯತ್ ತಾಲೂಕು ಚುನಾವಣೆಯಲ್ಲಿ ಇದೇ ಉತ್ತರ ಸಿಗಲಿದೆ ಎಂದರು. ಪಟ್ಟಣದ ಎಸ್ ಎಸ್ ಆರ್ ವೃತ್ತದಲ್ಲಿ ಎನ್ ಡಿ ಎ ಪಕ್ಷದ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ ನಡೆಯಿತು. ಎಸ್ ಎಸ್ ಆರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಗ್ಯಾರಘಟ್ಟ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಶುದ್ದ ಜಲ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲಿಗೆ ಗ್ಯಾರಘಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಊರಿನ ಮುಖಂಡರು ಹಾಗೂ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕರ್ತರಿಂದ ಗ್ರಾಮದ ಬೀದಿ,ಬೀದಿಗಳಲ್ಲಿ ಶುದ್ದಜಲದ ಜಾಥಾವನ್ನು ನಡೆಸಿ ಗ್ರಾಮಸ್ಥರಿಗೆ ಶುದ್ದ ಕುಡಿಯುವ ನೀರಿನ ಬಗ್ಗೆ ಅರಿವು ಮೂಡಿಸಲಾಯಿತು. ನಂತರ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಇಲಾಖೆಯ ಅಧಿಕಾರಿಯಾದ ಶ್ರೀನಿವಾಸ್, ನಮ್ಮ ದೇಶದ ಸುಮಾರು ಗ್ರಾಮಗಳಲ್ಲಿ ಶುದ್ದ ನೀರಿನ ಬಗ್ಗೆ ಅರಿವಿಲ್ಲದೆ ಮೂಢನಂಬಿಕೆಗಳಿಂದ ಶುದ್ದೀಕರಿಸದ ಕೆರೆ ಕಟ್ಟೆ ಹಾಗೂ ಪ್ಲೋರೈಡ್ ಯುಕ್ತ ನೀರನ್ನು ಕುಡಿದು ಕಾಲಾರ, ಅತಿಸಾರ ಹಾಗೂ ಮಾರಾಣಾಂತಿಕ ವಿವಿಧ ಬಗೆಯ ಜ್ವರಗಳಿಗೆ ತುತ್ತಾಗಿ ಜನರು ತಮ್ಮ ಜೀವವನ್ನು ಚೆಲ್ಲುತ್ತಿದ್ದಾರೆ. ಆದ್ದರಿಂದ ದಯವಿಟ್ಟು ಸರ್ಕಾರದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಗ್ರಾಮ ಮಟ್ಟದಲ್ಲಿ ತೆರೆದಿದ್ದು, ಸದರಿ ಘಟಕಗಳಿಂದ ಶುದ್ದೀಕರಿಸಿದ…
ರಚನೆ: ವೇಣುಗೋಪಾಲ್ ಹಿಂದಿನ ಸ್ಪರ್ಧೆಯಲ್ಲಿ ಮುಖಭಂಗವಾಗಿದ್ದ ಮೊಲಕ್ಕೆ ಕಿಚ್ಚು ತನ್ನ ಮನದಲ್ಲಿ ಇನ್ನೂ ಆರಿರಲಿಲ್ಲ, ರಾತ್ರಿ ನಿದ್ರೆ ಬಾರುತ್ತಿರಲಿಲ್ಲ, ಇಡೀ ಜಗತ್ತೇ ಆಮೆಯ ಓಟವನ್ನು ಶ್ಲಾಘಿಸಿ ನನ್ನ ನನ್ನ ಬೇಜವಾಬ್ದಾರಿ ಮತ್ತು ಅತಿ ಆತ್ಮ ವಿಶ್ವಾಸವನ್ನು ವಿಡಂಬಿಸಿ ತೆಗಳಿತ್ತು. ಇನ್ನು ಇವನ್ನೆಲ್ಲಾ ನನ್ನಿಂದ ನೋಡಿ ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಈಗ ಹೋಗಿ ಆಮೆಯನ್ನು ಮತ್ತೊಮ್ಮೆ ನನ್ನ ಜೊತೆ ಓಟದ ಸ್ಪರ್ಧೆಗೆ ಕರೆಯುತ್ತೇನೆ, ಬರಲಿಲ್ಲವೆಂದರೆ ಅದರ ಮಾನ ಮರ್ಯಾದೆಗಳನ್ನು ಜಗದ ಮುಂದೆ ಇವ ಅಸಮರ್ಥನೆಂದು ತೆಗಳುತ್ತೇನೆ, ಒಂದು ವೇಳೆ ಬಂದರೆ ಒಂದೇ ಬಾರಿ ಓಡಿ ಆಮೆಯನ್ನು ಸೋಲಿಸುತ್ತೇನೆ. ನಾನು ಇನ್ನು ಸೋಲಬಾರದೂ ಗೆಲ್ಲಲೇಬೇಕು ಎಂದೆಲ್ಲಾ ಯೋಚಿಸಿಕೊಂಡು ಕಾಡಿನ ಒಂದು ಪೊದೆಯಿಂದ ಆಚೆ ಬಂದು ಒಂದು ಎತ್ತರದ ಕಲ್ಲು ಬಂಡೆಯ ಮೇಲೆ ನಿಂತು ಜೋರಾಗಿ ಕೂಗಿ ಹೇಳಿತು. ಹೇ ವನ ವಾನನರರೇ ಇಲ್ಲಿ ಕೇಳಿ.., ಎನ್ನುತ್ತಲೇ ಎಲ್ಲ ಪ್ರಾಣಿಗಳು ಮೊಲದ ಜೋರಾದ ಕೂಗಿಗೆ ಆಚೆ ಬಂದವು, ನಂತರ ಎಲ್ಲವನ್ನೂ ಉದ್ದೇಶಿಸಿ ಇಲ್ಲಿಯವರೆಗೂ ಮೊಲವೇ ಆಮೆಯ…
1996ರಲ್ಲಿ ಗುಡಿಸಲಿನಿಂದ ಪ್ರಾರಂಭವಾದ ಶಾಲೆಯಿಂದ ಪಾಠವನ್ನು ಕಲಿತ ವಿದ್ಯಾರ್ಥಿಗಳು ಈ ದಿನ ಶಿಕ್ಷಣ ಇಲಾಖೆ, ಪತ್ರಿಕೋದ್ಯಮ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಇಂಜಿನಿಯರಿಂಗ್ ಮತ್ತು ವಿವಿಧ ಕ್ಷೇತ್ರಗಳಲ್ಲ್ಲಿ ಕೆಲಸ ನಿರ್ವಹಿಸುತ್ತಿರುವುದು ಈ ಶಾಲೆಯ ಉತ್ತಮ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ. ಬಾಚೇನಹಳ್ಳಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿ, ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಭದ್ರ ಭವಿಷ್ಯಕ್ಕೆ ಸುಭದ್ರ ಬುನಾದಿ ಹಾಕುವಲ್ಲಿ ಶಿಕ್ಷಕರ ಪಾತ್ರ ಅತಿಮುಖ್ಯವಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಹಂತದಲ್ಲಿ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ಶಿಕ್ಷಕರ ಪಾತ್ರ ಅನನ್ಯವಾಗಿದೆ. ಭವಿಷ್ಯ ರೂಪಿಸುವ ಶಿಕ್ಷಕರನ್ನು ನೆನಪಿಸಿಕೊಂಡು ಗೌರವಿಸುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಆದ್ಯ ಕರ್ತವ್ಯವಾಗಿದೆ ಎಂದರು. ಗುರು–ಶಿಷ್ಯರ ಸಂಬಂಧ ಕಟ್ಟಿಕೊಡುವ ಪ್ರತಿಯೊಬ್ಬ ಗುರುವೂ, ತನ್ನ ಶಿಷ್ಯತನಗಿಂತ ಪಾಂಡಿತ್ಯಪೂರ್ಣ ವಿದ್ಯಾಂಸರಾಗಬೇಕೆಂದು ಬಯಸುತ್ತಾರೆ. ಈ ನಿಟ್ಟಿನಲ್ಲಿ ಈ ಗುರುವಂದನಾ ಕಾರ್ಯಕ್ರಮವು ಅತ್ಯಂತ ಔಚಿತ್ಯಪೂರ್ಣವಾಗಿದೆ. ಗುರು–ಶಿಷ್ಯರ ಸಂಬಂಧವನ್ನು ಗಟ್ಟಿಗೊಳಿಸುವ ಈ ಕಾರ್ಯಕ್ರಮ ಯುವ ಪೀಳಿಗೆಗೂ ಸ್ಪೂರ್ತಿದಾಯಕವಾಗಲಿದೆ ಎಂದು ಶಾಲೆಯ…
ಕೊರಟಗೆರೆ: ಪಾವಗಡದಲ್ಲಿ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ಕೊರಟಗೆರೆಯಲ್ಲಿ ಕೊರಟಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಗಡಿನಾಡು ಪತ್ರಿಕೆ ಮತ್ತು ಗಡಿನಾಡು ನ್ಯೂಸ್ ಸಂಪಾದಕರ ಮೇಲೆ ನಡೆದ ಹಲ್ಲೆ ಖಂಡಿಸಿ ತಹಶೀಲ್ದಾರ್ ಮಂಜುನಾಥ್ ಕೆ ಮೂಲಕ ಸರ್ಕಾರಕ್ಕೆ ಪತ್ರಕರ್ತರು ಮನವಿ ಸಲ್ಲಿಸಿದರು. ಪಾವಗಡದಲ್ಲಿ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪರವರ ಮೇಲೆ ಮಹಿಳೆಯರು ಮಾರಕ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ ರಿಯಲ್ ಎಸ್ಟೇಟ್ ದಂಧೆಕೋರ ನಾರಾಯಣ ರೆಡ್ಡಿ ಮತ್ತು 3 ಜನ ಮಹಿಳೆಯರನ್ನು ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಪತ್ರಕರ್ತರ ಸಂರಕ್ಷಣಾ ಕಾಯಿದೆ ಜಾರಿಗೆ ತರುವಂತೆ ಒತ್ತಾಯಿಸಿದ ಕೊರಟಗೆರೆ ಪತ್ರಕರ್ತರು, ಹಲ್ಲೆಗೊಳಗಾದ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪ ರವರ ಕುಟುಂಬಕ್ಕೆ ಸೂಕ್ತ ಭದ್ರತೆ ಮತ್ತು ಪರಿಹಾರ ನೀಡಬೇಕೆಂದು ಮನವಿ ಮಾಡಿದರು. ಕೊರಟಗೆರೆ ಕೆಯುಡಬ್ಲ್ಯೂ ಜೆ ಅಧ್ಯಕ್ಷರಾದ ಪುರುಷೋತ್ತಮ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಇದೇ ಸಂದರ್ಭದಲ್ಲಿ ಕೊರಟಗೆರೆ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಸೇರಿದಂತೆ ಸಂಘದ…
ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆಯೊಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಬಳ್ಳಾರಿ ಮೂಲದ ನಿರ್ಮಲಾ (50) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ,ಗುರುವಾರ ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್ ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ಯೋಜಿಸಿತ್ತು. ಆದರೆ, ಟೋಕನ್ ಗಳಿಗಾಗಿ ಬುಧವಾರ ಸಂಜೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಈ ನಡುವೆ ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಹೊರಗೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…