Author: admin

ಆಂಧ್ರಪ್ರದೇಶ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಟೋಕನ್ ಗಳ ವಿತರಣೆಯ ಸಮಯದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಆರು ಜನ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ. ತಿರುಪತಿಯ ವಿಷ್ಣು ನಿವಾಸದಲ್ಲಿ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಗಳ ವಿತರಣೆಯ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಭಕ್ತರು ಸಾವನ್ನಪ್ಪಿದ್ದಾರೆ. ಶುಕ್ರವಾರದಿಂದ ಪ್ರಾರಂಭವಾಗಿ 10 ದಿನಗಳ ಅವಧಿಗೆ ಭಕ್ತರಿಗೆ ವಿಶೇಷ ‘ದರ್ಶನ’ಟಿಕೆಟ್ ಗಳಿಗಾಗಿ ದೇಶಾದ್ಯಂತ ಸಾವಿರಾರು ಮಂದಿ ಭಕ್ತರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ರುಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾಲ್ತುಳಿತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮಂಡ್ಯ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ ಬಂಧಿತ ಶಿಕ್ಷಕನಾಗಿದ್ದಾನೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ನವೆಂಬರ್ 23 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿತ್ತು. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಆರೋಪಿಯು 25 ವರ್ಷ ವಯಸ್ಸಿನವನಾಗಿದ್ದು, ಆತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಅಪಹರಣ ಮತ್ತು ಅತ್ಯಾಚಾರದ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಕೊರೆಯುವ ಚಳಿಯಲ್ಲೂ ಆಶಾ ಕಾರ್ಯಕರ್ತೆಯರು ಮುಷ್ಕರವನ್ನು ಮುಂದುವರಿಸಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಮುಷ್ಕರ ಮುಂದುವರಿದಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಅವರು, ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು. ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಚಟುವಟಿಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುತ್ತದೆ. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9,500 ರೂ.ಪಾವತಿ ಮಾಡಲಾಗುತ್ತಿದೆ. ಇದನ್ನು ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸರ್ಕಾರ ಸಿದ್ಧವಿದೆ. ಆದರೆ, ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ…

Read More

ಬಾಹ್ಯಾಕಾಶದಲ್ಲಿ ತಂಗಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ಮಲಿಯಮ್ಸ್ ಹಾಗೂ ಬುಚ್ ವಿಲೋರ್ ಅವರು ಮಾರ್ಚ್ ತಿಂಗಳಲ್ಲಿ ವಾಪಸ್ಸಾಗಲಿದ್ದಾರೆ ಎಂದು ಹೇಳಲಾಗಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಿಂಗಳುಗಳ ಕಾಲ ಸಿಲುಕಿರುವ ಈ ಇಬ್ಬರು ಗಗನಯಾತ್ರಿಗಳು ತಮ್ಮ ಬಳಿ ಸಾಕಷ್ಟು ಆಹಾರವಿದೆ, ಲಾಂಡ್ರಿ ಬಿಕ್ಕಟ್ಟನ್ನು ಎದುರಿಸುತ್ತಿಲ್ಲ ನಾವು ಇಲ್ಲಿ ಅರಾಮಗಿದ್ದೇವೆ ಎಂದು ತಿಳಿಸಿದ್ದಾರೆ. ಕಳೆದ ಜೂನ್ನಲ್ಲಿ ಬೋಯಿಂಗ್ ನ ಸ್ಟಾರ್ ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶ ನಿಲ್ದಾಣದಲ್ಲಿ ತಂಗಿರುವ ಅವರು ಕಕ್ಷೆಯ ಪ್ರಯೋಗಾಲಯದಲ್ಲಿ ಕೇವಲ ಎಂಟು ದಿನಗಳನ್ನು ಕಳೆಯಬೇಕಾಗಿತ್ತು. ಆದರೆ ಸ್ಟಾರ್ ಲೈನರ್ ನ ಪೊಪಲ್ಷನ್ ಸಿಸ್ಟಮ್ ನೊಂದಿಗಿನ ಸಮಸ್ಯೆಗಳಿಂದಾಗಿ ಅವರು ಇನ್ನು ಅಲ್ಲೆ ನೆಲೆಸಿದ್ದು, ಈಗ ಮಾರ್ಚ್ ಅಂತ್ಯದಲ್ಲಿ ಹಿಂದಿರುಗುವ ಬಾಹ್ಯಾಕಾಶ ನೌಕೆಯನ್ನು ಸಿದ್ದಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ್:  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ, ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಸಮಿತಿ ಗುರುವಾರ ಕರೆ ನೀಡಿದ್ದರು. ಈ  ಬೀದರ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಬೀದರ್ ತಾಲ್ಲೂಕು ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಗರ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ನೌಶಾದ್ ಬಸವೇಶ್ವರ ವೃತ್ತದ ಬಳಿ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:    ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ತುಮುಲ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ.  10 ತಾಲ್ಲೂಕು ಸೇರಿದ್ದಂತೆ 10 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ತೀವ್ರ ಕುತೂಹಲ ಕೆರಳಿಸಿದ್ದ ತುಮುಲ್ ಎಲೆಕ್ಷನ್ ಗೆ   ನವೆಂಬರ್ 10 ರಂದು ಮತದಾನ ನಡೆದಿತ್ತು. ಚುನಾವಣೆಯಲ್ಲಿ  21ಅಭ್ಯರ್ಥಿಗಳು ಸ್ಪರ್ಧಿಸಿದ್ದರು.  1,119 ಮತಗಳ ಪೈಕಿ 1,188 ಮತಗಳು ಚಲಾವಣೆ ಗೊಂಡಿದ್ದವು. ಫಲಿತಾಂಶದ ವಿವರ: ಚಿಕ್ಕನಾಯಕನಹಳ್ಳಿಯಲ್ಲಿ ಮಾಧುಸ್ವಾಮಿ ಬೆಂಬಲಿಗ ಅಭ್ಯರ್ಥಿಗೆ ಭರ್ಜರಿ ಜಯಗಳಿಸಿದ್ದಾರೆ. 82 ಮತ ಪಡೆದು ಬುಳ್ಳೇನಹಳ್ಳಿ ಪ್ರಕಾಶ್ ಜಯಗಳಿಸಿದ್ದಾರೆ. ಗುಬ್ಬಿ ಕ್ಷೇತ್ರದಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಪತ್ನಿ ಭಾರತಿ ಶ್ರೀನಿವಾಸ್ ಜಯಗಳಿಸಿದ್ದಾರೆ. 68 ಮತಗಳನ್ನ ಪಡೆದು ಭಾರತೀ ಶ್ರೀನಿವಾಸ್ ಗೆಲುವು ದಾಖಲಿಸಿದ್ದಾರೆ. ತಿಪಟೂರಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಕೆ.ಪ್ರಕಾಶ್ ಜಯಗಳಿಸಿದ್ದಾರೆ. ತುಮಕೂರು ತಾಲೂಕಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಂಜೇಗೌಡ ಜಯಗಳಿಸಿದ್ದಾರೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿ . ಸಿದ್ದಗಂಗಯ್ಯ ಗೆಲುವು ದಾಖಲಿಸಿದ್ದಾರೆ. ತುರುವೇಕೆರೆ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಮಹಾಲಿಂಗಯ್ಯ ಭರ್ಜರಿ ಗೆಲುವು. ಮಧುಗಿರಿಯಲ್ಲಿ ಕೊನೆಗೂ ಕೆ.…

Read More

ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ.  ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ. ಅನ್ಯಾಯ–ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ  ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ. ಶರಣಾಗಿರುವ ನಕ್ಸಲರು . ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ…

Read More

ತುಮಕೂರು: ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 9 ರಿಂದ 22ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಜನವರಿ 9ರಂದು ಸತ್ಯಮಂಗಲ, ಕೈಗಾರಿಕಾ ಪ್ರದೇಶ; ಜ.10 ಹಾಗೂ 15ರಂದು ಕೈಗಾರಿಕಾ ಪ್ರದೇಶ; ಜ.11ರಂದು ರಂಗಾಪುರ, ಲಿಂಗಾಪುರ, ಬಾಲಾಜಿ ಲೇಔಟ್, ಅಣ್ಣೇನಹಳ್ಳಿ, ತಿಮ್ಮಲಾಪುರ, ಕೋರಾ ಶಾಖೆ, ಹೆಬ್ಬಾಕಾ, ಊರುಕೆರೆ ಕರೇಕಲ್ಲು, ಕೆಎಐಡಿಬಿ ಕೈಗಾರಿಕಾ ಪ್ರದೇಶ ಹಾಗೂ ಕೈಗಾರಿಕಾ ಪ್ರದೇಶ; ಜ.12ರಂದು ಮಲ್ಲೇನಹಳ್ಳಿ, ಅರಕೆರೆ, ಅಜ್ಜಪ್ಪನಹಳ್ಳಿ, ಸ್ವಾಂದೇನಹಳ್ಳಿ, ಅಂತರಸನಹಳ್ಳಿ, ಸತ್ಯಸಾಯಿಲೇಔಟ್, ಸತ್ಯಮಂಗಲ, ಕೈಗಾರಿಕಾ ಪ್ರದೇಶ, ವಡ್ಡರಹಳ್ಳಿ, ನವಿಲಹಳ್ಳಿ ಕ್ರಾಸ್, ಮಾರುಕಟ್ಟೆ, ಮಹಾಲಕ್ಷಿö್ಮ ಲೇಔಟ್, ಸತ್ಯಮಂಗಲ; ಜ.17ರಂದು ವಡ್ಡರಹಳ್ಳಿ, ನವಿಲಹಳ್ಳಿ ಕ್ರಾಸ್, ಸತ್ಯಮಂಗಲ, ಕೈಗಾರಿಕಾ ಪ್ರದೇಶ; ಜ.18ರಂದು ಕೈಗಾರಿಕಾ ಪ್ರದೇಶ; ಜ.19ರಂದು ಕೆಎಐಡಿಬಿ ಕೈಗಾರಿಕಾ ಪ್ರದೇಶ ಹಾಗೂ ಕೈಗಾರಿಕಾ ಪ್ರದೇಶ; ಜ.20ರಂದು ಕೈಗಾರಿಕಾ ಪ್ರದೇಶ, ಮಾರುಕಟ್ಟೆ, ಮಹಾಲಕ್ಷ್ಮೀ ಲೇಔಟ್, ಜ.21ರಂದು ಕೈಗಾರಿಕಾ ಪ್ರದೇಶ; ಜ.22ರಂದು ವಡ್ಡರಹಳ್ಳಿ,…

Read More

ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್ ಟಿಆರ್ ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ಬುಧವಾರ ಸಚಿವ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿಯೇ ಭೇಟಿಯಾದ ಕುಮಾರಸ್ವಾಮಿ ಅವರು, ನನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ಸಚಿವರಲ್ಲಿ ಮನವಿ ಮಾಡಿದರು. ಕುಮಾರಸ್ವಾಮಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಗಡ್ಕರಿ ಅವರು, ಆದಷ್ಟು ಬೇಗ ಯೋಜನೆಯ ಪ್ರಸ್ತಾವನೆಯನ್ನು ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ (Public Private Partnership Appraisal Committee — PPPAC) ಮುಂದೆ ಮಂಡಿಸಿ ತ್ವರಿತವಾಗಿ ಅನುಷ್ಠಾನಗೊಳಿಸುವುಕ್ಕೆ ಸಹಕರಿಸುವುದಾಗಿ ಭರವಸೆ ನೀಡಿದರು. ಏನಿದು ಉಪನಗರ ವರ್ತುಲ ರಸ್ತೆ?: ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road–STRR) 2013ರಲ್ಲಿಯೇ ಚಾಲನೆ ಪಡೆದಿತ್ತು.…

Read More

ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 9ರಂದು ಬೆಳಿಗ್ಗೆ 10 ಗಂಟೆಯಿಂದ ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್ ನಲ್ಲಿ ‘ಉದ್ಯೋಗ ಮೇಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಟಿ.ಕೆ.ಕೆಂಪಯ್ಯ ತಿಳಿಸಿದ್ದಾರೆ. ಈ ಮೇಳದಲ್ಲಿ ಬೆಂಗಳೂರು ಹಾಗೂ ತುಮಕೂರಿನ ಪ್ರತಿಷ್ಠಿತ 75 ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ./ಪಿಯುಸಿ/ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ/ ಐಟಿಐ/ಬಿ.ಇ. ಪದವಿ ಪೂರ್ಣಗೊಳಿಸಿರುವ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9449471966, 9742980941, 9448989874, 8123503008ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ. ಉದ್ಯೋಗ ಮೇಳ ಉದ್ಘಾಟನೆ : ಉದ್ಯೋಗ ಮೇಳವನ್ನು ಜನವರಿ 9ರ ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಾಗುವುದು. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More