Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ತುಮಕೂರು: ಶಿಕ್ಷಣ ಕಲಿಕೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆಡಿಟೋರಿಯಂನಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ 2024–25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲಿಕೆಗೆ ಬಡವ, ಶ್ರೀಮಂತ ಎಂಬ ಭೇದ–ಭಾವ ಇರುವುದಿಲ್ಲ. ದೇವರು ಎಲ್ಲರಿಗೂ ಒಂದೇ ರೀತಿಯಾದ ಬುದ್ಧಿಶಕ್ತಿಯನ್ನು ಕೊಟ್ಟಿರುತ್ತಾನೆ. ಆ ಬುದ್ಧಿಶಕ್ತಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬೇಕು ಎಂದು ಕರೆ ನೀಡಿದರು. ಉತ್ತಮ ಶಿಕ್ಷಣ ಪಡೆಯಲು ಲಭ್ಯವಿರುವ ಉತ್ತಮ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು. ಅಂಕ, ಪದವಿ ಮನುಷ್ಯನ ವ್ಯಕ್ತಿತ್ವದ ಮಾನದಂಡವಲ್ಲ. ವಿದ್ಯಾರ್ಥಿಗಳು ಶಿಕ್ಷಣದ…
ಬೀದರ್ : ಮೇಲ್ಜಾತಿ ಬಾಲಕಿಯನ್ನು ಪ್ರೀತಿ ಮಾಡಿದ್ದಕ್ಕಾಗಿ ದಲಿತ ಯುವಕನಿಗೆ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನಪ್ಪಿದ ಘಟನೆ ಔರಾದ್ ತಾಲ್ಲೂಕಿನ ಠಾಣಾ ಕುಶನೂರ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.ಭೇಡಕುಂದಾ ಗ್ರಾಮದ ನಿವಾಸಿ ಸುಮಿತ್ (19) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ರಕ್ಷಾಳ್ ಗ್ರಾಮದ ಬಾಲಕಿಯನ್ನು ಸುಮಿತ್ ಪ್ರೀತಿಸುತಿದ್ದ. “ರವಿವಾರದಂದು ನಮ್ಮ ಮನೆ ಕಡೆಗೆ ಬಾ” ಎಂದು ಸುಮಿತ್ ನನ್ನು ಹುಡುಗಿ ಕರೆದಿದ್ದಳು. ಹುಡುಗಿಯನ್ನು ಭೇಟಿ ಮಾಡಲು ಹೋದ ಸುಮಿತ್ ನನ್ನು ಹುಡುಗಿಯ ಅಪ್ಪ, ಅಣ್ಣ ಮತ್ತು ಸಂಬಂಧಿಕರು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಸುಮಿತ್ ಮನೆಯಿಂದ ಹೊರಗಡೆ ಹೋದ ನಂತರ ಬಾಲಕಿಯ ಅಣ್ಣ ಮತ್ತು ಆತನ ಗೆಳೆಯರು ಸೇರಿಕೊಂಡು ಮತ್ತೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಸುಮಿತ್ ನ ಮನೆಗೆ ಕರೆ ಮಾಡಿ ಆತನನ್ನು ಕರೆದೊಯ್ಯಲು ಹೇಳಿದ್ದಾರೆ ಎಂದು ಮೃತ ಯುವಕನ ಸಂಬಂಧಿಕರು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ, ಭೂಮಾಪನ ಇಲಾಖೆ ಹಾಗೂ ಸಬ್ ರಿಜಿಸ್ಟ್ರಾರ್ ಕಚೇರಿಯ ಎ ಮತ್ತು ಬಿ ವರ್ಗದ ಕಡತಗಳ ಎಲ್ಲಾ ದಾಖಲೆಗಳನ್ನು ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಮಾಡಿ ಆ ಎಲ್ಲಾ ದಾಖಲೆಗಳು ಆನ್ ಲೈನ್ ಮೂಲಕ ಎಲ್ಲಾ ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಾಗಿಸುವ ರಾಜ್ಯ ಸರ್ಕಾರದ “ಭೂಸುರಕ್ಷಾ ಯೋಜನೆ”ಗೆ ಇಂದು ಗುಡಿಬಂಡೆ ತಾಲ್ಲೂಕಿನ ಮೂಲಕ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ನಗರದಲ್ಲಿ ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಕಳೆದ ಮಾರ್ಚ್ 2024 ರಲ್ಲಿ ರಾಜ್ಯ ಕಂದಾಯ ಇಲಾಖೆ ತಾಲ್ಲೂಕು ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ ಹಾಗೂ ಭೂಮಾಪನ ಇಲಾಖೆಯ ಸುಮಾರು 150 ವರ್ಷಗಳ ಎಲ್ಲಾ ದಾಖಲೆಗಳನ್ನು ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಮಾಡಿ ಶಾಶ್ವತವಾಗಿ ಭದ್ರ ಮಾಡುವ ಹಾಗೂ ಆ ಎಲ್ಲಾ ದಾಖಲೆಗಳು ಆನ್ ಲೈನ್ ನಲ್ಲಿ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ತುಮಕೂರು ಜಿಲ್ಲೆಯ ನಗರ ಹಾಗೂ ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್ ಸೈಟ್ www.ksoumysuru.ac.in ಅಥವಾ https://ksouportal.com/reg_sc/StudyCentreRegistration.aspx ನಲ್ಲಿ ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು *ಡೀನ್ (ಅಧ್ಯಯನ ಕೇಂದ್ರ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025ರ ಜನವರಿ 18. ಮುಂದುವರಿದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಪ್ರವೇಶಾತಿಯನ್ನು ಕಲಿಕಾರ್ಥಿ…
ತುಮಕೂರು: ಬೆವಿಕಂ ಗ್ರಾಮೀಣ ಉಪವಿಭಾಗ–1ರ ಬೆಳ್ಳಾವಿ ಉಪಸ್ಥಾವರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 9ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಬೆಳ್ಳಾವಿ ಟೌನ್, ಸುಗುಣ, ದೊಡ್ಡವೀರನಹಳ್ಳಿ, ಸಿಂಗೀಪುರ, ದೊಡ್ಡೇರಿ, ಕಾಗ್ಗೆರೆ, ಅಸಲಿಪುರ, ಮಶಣಾಪುರ, ಹರಿವಣಪುರ, ನಾಗಾರ್ಜುನಹಳ್ಳಿ, ಚನ್ನೇನಹಳ್ಳಿ, ಕರಲುಪಾಳ್ಯ, ಚಿಕ್ಕಬೆಳ್ಳಾವಿ, ಮಾವಿನಕುಂಟೆ, ತಿಮ್ಮಲಾಪುರ, ಬಾಣಾವರ, ಲಕ್ಕನಹಳ್ಳಿ, ಅಪ್ಪಿನಾಯಕನಹಳ್ಳಿ, ಬ್ಯಾಲ, ಟಿ.ಗೊಲ್ಲಹಳ್ಳಿ ಹಾಗೂ ಬೆಳ್ಳಾವಿ ಗ್ರಾಮ ಪಂಚಾಯತಿಗೆ ಬರುವ ಇತರೆ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ತೆಂಗಿನ ಮರ ಹತ್ತುವ ಕೆಲಸದಲ್ಲಿ ತೊಡಗಿಕೊಂಡಿರುವವರು ಕೇರಾ ಸುರಕ್ಷಾ ವಿಮಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದು ತಿಪಟೂರು ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮನವಿ ಮಾಡಿದ್ದಾರೆ. ಕೇರಾ ಸುರಕ್ಷಾ ವಿಮಾ ಯೋಜನೆಯು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದ್ದು, ವಾರ್ಷಿಕ ವಿಮಾ ಕಂತಿನ ಹಣ 956 ರೂ. ಹಾಗೂ ರೈತರ ವಂತಿಕೆ ಹಣ 239 ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ 7ಲಕ್ಷ ರೂ.ವರೆಗಿನ ವಿಮೆ ಮತ್ತು 2 ಲಕ್ಷ ರೂ.ಗಳವರೆಗೆ ಆಸ್ಪತ್ರೆ ಚಿಕಿತ್ಸೆ ವೆಚ್ಚ ಒಳಗೊಂಡಿರುತ್ತದೆ. ಕೇರಾ ಸುರಕ್ಷಾ ವಿಮಾ ಯೋಜನೆಗೆ 18 ರಿಂದ 65 ವರ್ಷದೊಳಗಿನ ತೆಂಗಿನ ಮರ ಹತ್ತುವವರು/ತೆಂಗಿನಕಾಯಿ ಕೀಳುವವರು/ನೀರಾ ತಂತ್ರಜ್ಞರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ತಿಪಟೂರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ. ಈಗಾಗ್ಲೆ ಈ ಬಗ್ಗೆ ಸನ್ಮಾನ್ಯ ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಹೇಳಿದಂತೆ ಗೊಂದಲ ಆಗೋದು ಬೇಡ. ಅದನ್ನ ಮುಂದೂಡಬೇಕು ಅಂತ ಹೇಳಿದೆ, ಅದ್ಕೆ ಮುಂದೂಡಿದ್ದೇವೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಬೇಜಾರ್ ಆಗೋಕ್ಕೆ ಅವ್ರ ಆಸ್ತಿನಾ ಏನಾದ್ರೂ ಬರೆಸಿಕೊಂಡಿದ್ದೀರಾ. ಪ್ರೀ ಯೂನಿರ್ವಸಿಗಳಲ್ಲಿ ಎಸ್ಪಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್, ಸೀಟು ಸಿಗ್ತಿಲ್ಲ. ಇಂತಹ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡಲು ಮಿಟಿಂಗ್ ಕರೆದರೆ, ನೀವು ಮಾಡ್ಬೇಡಿ ಅಂದ್ರೆ ಎಂದು ಹೇಳಿದರು. ಇವರೆಲ್ಲಾ ಎಸ್ಸಿ ಎಸ್ಟಿಗಳ ವಿರೋಧಿಗಳಾ? ಇವೆಲ್ಲಾ ಬಹಳಷ್ಟು ದಿನ ನಡೆಯೋದಿಲ್ಲ. ಹಾಸ್ಟೆಲ್ ಸೀಟ್ ಸಿಗಲ್ಲ, ಸಣ್ಣಪುಟ್ಟ ಸಾಲ ಮಾಡಿ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಸೀಟು ತಗೊಂಡವನಿಗೆ ಸ್ಕಾಲರ್ಶಿಪ್ ಇಲ್ಲ. ಇದು ಎಸ್.ಸಿ — ಎಸ್ಟಿ ಮಕ್ಕಳ ಜ್ವಲಂತ ಸಮಸ್ಯೆ. ಇಂತಹ ಹತ್ತು ಹಲವಾರು ಸಮಸ್ಯೆಗಳಿವೆ. ಇಂತಹವುಗಳ ಬಗ್ಗ ಚರ್ಚೆ ಮಾಡಲು ಮೀಟಿಂಗ್…
ಬೆಂಗಳೂರು: 6 ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ! ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. ಇದರಿಂದ ಪೊಲೀಸರ ಆತಸ್ಥೈರ್ಯ ಏನಾಗಬೇಡ?, ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯನಗರದ ನಿವಾಸಿ ಸೋಮಶೇಖರ್ ಅಲಿಯಾಸ್ ಜಿಮ್ ಸೋಮನ ವಿರುದ್ಧ ಕೇಸ್ ದಾಖಲಾಗಿದೆ. ಸದ್ಯ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್ವೊಂದಕ್ಕೆ ಕರೆದೊಯ್ದು ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 26 ವರ್ಷದ ಯುವತಿ ದೂರು ನೀಡಿದ್ದಾರೆ. ಸಂತ್ರಸ್ತೆಗೆ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ಸೋಮಶೇಖರ್ ಬಳಿ 6 ಲಕ್ಷ ಆರ್ಥಿಕ ಸಹಾಯ ಕೇಳಿದ್ದಳು. 2024ರ ಅಕ್ಟೋಬರ್ ನಲ್ಲಿ ಸಂತ್ರಸ್ತೆ ಪಿ.ಜಿ ಬಳಿ ತೆರಳಿದ್ದ ಸೋಮಶೇಖರ್, ಹಣ ಕೊಡುವುದಾಗಿ ಆಕೆಯನ್ನು ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ಇರುವ ತಮ್ಮ ಫ್ಲ್ಯಾಟ್ ವೊಂದಕ್ಕೆ ಕರೆದೊಯ್ದಿದ್ದರು. ಅಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಮೈಸೂರು: ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಇಬ್ಬರು ಕೈದಿಗಳು ಸಾವನ್ನಪ್ಪಿರುವ ಘಟನೆ ಮೈಸೂರಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕೈದಿ ಅಸ್ವಸ್ಥಗೊಂಡಿದ್ದಾನೆ. ಮೈಸೂರಿನ ಮಾದೇಶ್ ಮತ್ತು ಚಾಮರಾಜನಗರದ ನಾಗರಾಜ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊಸ ವರ್ಷದ ಮುನ್ನಾದಿನದಂದು ಎಸೆನ್ಸ್ ಸೇವಿಸಿ ಅಸ್ವಸ್ಥರಾಗಿದ್ದರು. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ವರ್ಷದ ಹಿನ್ನಲೆ ಕೇಕ್ ತಯಾರಿಸಲು ಸಾಮಗ್ರಿಗಳನ್ನು ತಂದಿರಸಲಾಗಿತ್ತು. ಇದರಲ್ಲಿ ಕೇಕ್ ಗೆ ಬಳಸುವ ಎಸೆನ್ಸ್ ತರಲಾಗಿತ್ತು. ಆದರೆ ಈ ಮೂವರು ಕಿಕ್ ಗಾಗಿ ಯಾರಿಗೂ ಹೇಳದೆ ಈ ಎಸೆನ್ಸ್ ಕುಡಿದಿದ್ದರು. ಈ ಘಟನೆ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx