Author: admin

ಬೆಂಗಳೂರು: ತಾಯಂದಿರ ಮರಣ ತಡೆಗೆ ಸರ್ಕಾರ ಶೀಘ್ರವೇ ಕೇಂದ್ರೀಕೃತ ಅಭಿಯಾನ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018–20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022–24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,182 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಇದುವರೆಗೆ 6,593 ಕೋಟಿ ರೂ.ವೆಚ್ಚ ಮಾಡಲಾಗಿದೆ. ನಿಧಿ ಬಳಕೆಯಲ್ಲಿ ಶೇ.58.96ರಷ್ಟು ಪ್ರಗತಿ ಸಾಧಿಸಲಾಗಿದೆ, ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ಮತ್ತು ಅರಿವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಹೆರಿಗೆ ಪ್ರಮಾಣ ಕಡಿಮೆ ಇರುವ ಆಸ್ಪತ್ರೆಗಳ ವೈದ್ಯರನ್ನು ಅಗತ್ಯ ಇರುವ ಕಡೆ ನಿಯೋಜಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಲಭ್ಯತೆ ಖಾತರಿಪಡಿಸಬೇಕು ಎಂದು ಸೂಚಿಸಿದರು. ಹೆಣ್ಣು ಭ್ರೂಣ…

Read More

ರಾಮನಗರ: ರಾಜ್ಯದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಮಂಗಳವಾರ ಬಿಡದಿಯ ವೇಸ್ಟ್ ಟು ಎನರ್ಜಿ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಡದಿಯ ವೇಸ್ಟ್ ಟು ಎನರ್ಜಿ ಘಟಕ ತಿಂಗಳ ಹಿಂದೆ ಪೂರ್ಣಗೊಂಡಿತ್ತು, ಅದನ್ನು ಸ್ವಾಧೀನಪಡಿಸಿಕೊಂಡಿರಲಿಲ್ಲ, ಅದನ್ನ ನೀವೆ ನಡೆಸಿ ಅದರ ಸಮಸ್ಯೆಗಳಿದ್ದರೆ ತಿಳಿಸಿ ಎಂದು ಘಟಕದವರಿಗೆ ಹೇಳಿದ್ದೆವು, ಅಷ್ಟರಲ್ಲಿ ದುರಾದೃಷ್ಟದಿಂದ ಈ ರೀತಿಯ ಅನಾಹುತ ಸಂಭವಿಸಿದೆ. ಕಾರ್ಮಿಕರಿಗೆ ಸುಟ್ಟಗಾಯಗಳಾಗಿವೆ. ಅವಘಡದ ವಿಚಾರಣೆಗಾಗಿ ಸಮಿತಿಯೊಂದನ್ನು ರಚಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಸದಿಂದ ವಿದ್ಯುತ್ ಉತ್ಪಾದನೆ ಮಾಡುವ ಉಷ್ಣವಿದ್ಯುತ್ ಸ್ಥಾವರದ ಬಾಯ್ಲರ್ ಅನ್ನು ತಾಂತ್ರಿಕ ಪರಿಣತರಿಲ್ಲದೇ ತೆರೆದ ಕಾರಣ ಬೆಂಕಿ ಹಾಗೂ ಬಿಸಿಬೂದಿ ಅಲ್ಲಿದ್ದ ಕಾರ್ಮಿಕರ ಮೇಲೆ ಏಕಾಏಕಿ ಚಿಮ್ಮಿದೆ ಇದರಿಂದಾಗಿ ಇಂತಹ ಅನಾಹುತ ಸಂಭವಿಸಿದೆ ಎಂದರು. ಇದರಿಂದ ಗಾಯಗೊಂಡಿರುವ ಕಾರ್ಮಿಕರಿಗೆ ಹೆಚ್ಚಿನ ಚಿಕಿತ್ಸೆ ನೀಡುವಂತೆ ಈಗಾಗಲೇ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಚಿಕಿತ್ಸೆಗೆ ಸರ್ಕಾರದಿಂದ ಹಣ ಪಾವತಿಸಲಾಗುವುದು. ಪರಿಹಾರ ವಿತರಣೆಗೆ ಹಾಗೂ ಮುಂದೆ ಇಂತಹ ಅನಾಹುತಗಳು…

Read More

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸುತ್ತಿರುವ ಕ್ರೀಡಾ ಶಾಲೆ/ಕ್ರೀಡಾ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ಜನವರಿ 13 ರಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ. ಆಯ್ಕೆ ಪ್ರಕ್ರಿಯೆಯು ಜಿಲ್ಲೆಯ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಿಗದಿತ ದಿನಾಂಕದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಜನವರಿ 13ರಂದು ಕುಣಿಗಲ್ ತಾಲ್ಲೂಕು ಕ್ರೀಡಾಂಗಣ, ಜ.15ರಂದು ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣ, ಜ.16ರಂದು ಪಾವಗಡ ತಾಲ್ಲೂಕು ಕ್ರೀಡಾಂಗಣ, ಜ.17ರಂದು ಶಿರಾ ತಾಲ್ಲೂಕು ವಿವೇಕಾನಂದ ಕ್ರೀಡಾಂಗಣ, ಜ.18ರಂದು ಕೊರಟಗೆರೆ ತಾಲ್ಲೂಕು ಕ್ರೀಡಾಂಗಣ, ಜ.20ರಂದು ಚಿಕ್ಕನಾಯನಹಳ್ಳಿ ತಾಲ್ಲೂಕು ಕ್ರೀಡಾಂಗಣ, ಜ.21ರಂದು ತಿಪಟೂರು ತಾಲ್ಲೂಕು ಕಲ್ಪತರು ಕ್ರೀಡಾಂಗಣ, ಜ.27ರಂದು ಗುಬ್ಬಿ ಸರ್ಕಾರಿ ಪ್ರೌಢಶಾಲೆ ಮೈದಾನ, ಜ.28ರಂದು ತುರುವೇಕೆರೆ ತಾಲ್ಲೂಕು ಕ್ರೀಡಾಂಗಣ, ಜ.29ರಂದು ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ತಾಲ್ಲೂಕು ಮಟ್ಟದಲ್ಲಿ…

Read More

ತುಮಕೂರು: ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಮಹಿಳೆಯರ ಸುರಕ್ಷತೆ, ಶಿಕ್ಷಣ ಮತ್ತು ಮೊಬೈಲ್ ತಂತ್ರಜ್ಞಾನದಲ್ಲಿ ಸಾಧಿಸಿರುವ ಅಸಾಧಾರಣ ಸಾಧನೆಗಳನ್ನು ಇತ್ತೀಚಿನ ಬೆಂಗಳೂರಿನ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್(IIMB) ತನ್ನ ವರದಿಯಲ್ಲಿ ಪ್ರಮುಖವಾದ 3 ನವೀನ ವಿಧಾನಗಳ ಅಳವಡಿಕೆ ಕುರಿತು ದಾಖಲಿಸಿದೆ. ಅಭಿವೃದ್ಧಿ ಹೊಂದುತ್ತಿರುವ ನಗರಗಳಲ್ಲಿ ಅಳವಡಿಸಿಕೊಳ್ಳುತ್ತಿರುವ ನೂತನ ಉಪಕ್ರಮಗಳನ್ನು ದಾಖಲಿಸುವ ಮತ್ತು ಅವುಗಳ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ 2022ರಲ್ಲಿ ಪ್ರಾರಂಭಿಸಿರುವ ‘SAAR'(Smart Cities &Academic Research) ಸಂಶೋಧನಾ ಅಧ್ಯಯನದಲ್ಲಿ ಈ ಅಂಶಗಳನ್ನು ಗುರುತಿಸಲಾಗಿದೆ. ಮಹಿಳಾ ಸುರಕ್ಷತೆ: ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿನ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್(ICCC) ಮೂಲಕ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ 70 ಆಯಕಟ್ಟಿನ ಸ್ಥಳಗಳಲ್ಲಿ 400ಕ್ಕೂ ಹೆಚ್ಚು ಅಅಖಿಗಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೆ 24/7 ಮೇಲ್ವಿಚಾರಣೆ ಮತ್ತು ಘಟನೆಗಳಿಗೆ ತ್ವರಿತ ಪ್ರತಿಕ್ರಿಯೆ, ಸಾರ್ವಜನಿಕ ಪ್ರಕಟಣೆ ವ್ಯವಸ್ಥೆಗಳೊಂದಿಗೆ 41 ತುರ್ತು ಕರೆ ಬಾಕ್ಸ್ ಗಳ ಸ್ಥಾಪಿಸುವ ಮೂಲಕ ಮಹಿಳಾ ಸುರಕ್ಷತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಲಾಗಿದೆ.…

Read More

ತುಮಕೂರು: ಜಿಲ್ಲೆಯಲ್ಲಿರುವ ಜೇನುತುಪ್ಪ ಉತ್ಪಾದಕರು ಹಾಗೂ ಸಂಗ್ರಾಹಕರು ತೋಟಗಾರಿಕೆ ಇಲಾಖೆಯ ಝೇಂಕಾರ(Jhenkara) ಎಂಬ ಬ್ರ್ಯಾಂಡ್ ಹೆಸರು ಹಾಗೂ ಲೋಗೋ ಬಳಸಿಕೊಂಡು ಜೇನುತುಪ್ಪವನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕಿ ಶಾರದಮ್ಮ ತಿಳಿಸಿದ್ದಾರೆ. ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ‍್ಯಾಂಡ್ ಹೆಸರನ್ನು ಅಭಿವೃದ್ಧಿಪಡಿಸಿ TRADE MARK REGISTRY ಇಂದ ಅಧಿಕೃತವಾಗಿ ಅನುಮೋದನೆ ಪಡೆದಿದೆ. ತೋಟಗಾರಿಕೆ ಇಲಾಖೆಯು ಝೇಂಕಾರ್ ಬ್ರ‍್ಯಾಂಡ್ನ ಮಾಲಿಕತ್ವವನ್ನು ಹೊಂದಿದ್ದು, ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಹಾಗೂ ನಿಬಂಧನೆಗಳೊಂದಿಗೆ ಈ ಬ್ರ್ಯಾಂಡ್ ಹೆಸರು ಮತ್ತು ಲೋಗೋ ಬಳಸಿಕೊಂಡು ಜೇನುತುಪ್ಪ ಮಾರಾಟ ಮಾಡಲು ಅವಕಾಶವಿದೆ. ತೋಟಗಾರಿಕೆ ಇಲಾಖೆಯ ಮಾಲಿಕತ್ವದ ಈ ಜೇನುತುಪ್ಪ ಬ್ರ್ಯಾಂಡ್ ನಡಿ ಜೇನುತುಪ್ಪ ಮಾರಾಟ ಮಾಡಲಿಚ್ಛಿಸುವ ಜೇನುತುಪ್ಪ ಉತ್ಪಾದಕರು/ಸಂಗ್ರಾಹಕರು 2500 ರೂ.ಗಳ ನೋಂದಣಿ ಶುಲ್ಕವನ್ನು ಖಜಾನೆ-2ರ ಲೆಕ್ಕ ಶೀರ್ಷಿಕೆ(0401–00-800–2–01)ಯಡಿ ಪಾವತಿಸಿ ತೋಟಗಾರಿಕೆ ಉಪ ನಿರ್ದೇಶಕರಿಗೆ ಪಾವತಿಸಿದ ಚಲನ್ ನೀಡಿ…

Read More

ತುಮಕೂರು:  ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ:1.1.2025ರನ್ವಯ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ಹಾಗೂ ಮಹಾ ನಗರಪಾಲಿಕೆ ಕಚೇರಿಯಲ್ಲಿ ಪ್ರಚುರಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ತುಮಕೂರು ನಗರದ ಅರ್ಹ ಮತದಾರರು ಪ್ರಕಟಿತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಯಾಗಿರುವ ಬಗ್ಗೆ ನಿಗದಿತ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದು ಅಥವಾ ತಾವೇ ಸ್ವತಃ ಆನ್‌ಲೈನ್ ಮೂಲಕ ಗೂಗಲ್ ಪ್ಲೇ VHA- Voter Helpline App ಅನ್ನು ಡೌನ್‌ಲೋಡ್ ಮಾಡಿಕೊಂಡು ನೇರವಾಗಿ ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ನೋಂದಣಿಯಾಗದೇ ಇದ್ದಲ್ಲಿ ನಿಗಧಿತ ನಮೂನೆ-6ರಲ್ಲಿ, ಕೈಬಿಡತಕ್ಕ(Deletion) ಪ್ರಕರಣ ಇದ್ದಲ್ಲಿ ನಿಗಧಿತ ನಮೂನೆ–7 ಮತ್ತು ತಿದ್ದುಪಡಿ(Correction) ಅಗತ್ಯವಿದ್ದಲ್ಲಿ ನಮೂನೆ-8ರಲ್ಲಿ ಸಂಬಂಧಿಸಿದ ಬಿಎಲ್‌ ಓಗಳಿಗೆ ಮನವಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ…

Read More

ಪಾವಗಡ: ಪಾವಗಡ ಪಟ್ಟಣದಲ್ಲಿ ಕೆ.ಎಸ್‌.ಆರ್‌.ಟಿ.ಸಿ.  ಬಸ್ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮಧ್ಯಾಹ್ನ ಹಳೆ ಸಂತೆ ಮೈದಾನದವನು ಪರಿಶೀಲನೆ ನಡೆಸಲಾಯಿತು. ಈ ವೇಳೆ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪ, ಚಿತ್ರದುರ್ಗ ಜಿಲ್ಲಾ ನಿಯಂತ್ರಕ ಶ್ರೀನಿವಾಸ್, ತುಮಕೂರು ಜಿಲ್ಲಾ ಕೆಎಸ್‌ಆರ್‌ಟಿಸಿ ನಿಯಂತ್ರಕ ಚಂದ್ರಶೇಖರ್, ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದರು. ಪರಿಶೀಲನೆ ನಂತರ ಮಾತನಾಡಿದ ಮಾಜಿ ಸಚಿವ ವೆಂಕಟರಮಣಪ್ಪ,  ಹಲವಾರು ವರ್ಷಗಳಿಂದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಸೂಕ್ತ ಜಾಗವನ್ನು ಹುಡುಕಲಾಗುತ್ತಿತ್ತು. ಆದರೆ ಸ್ಥಳದ ಅಭಾವದಿಂದ ಪಾವಗಡ ಪಟ್ಟಣದ ಸಮೀಪದಲ್ಲಿ ಎಲ್ಲೂ ಜಾಗ ಸಿಕ್ಕಿರಲಿಲ್ಲ ಶಿರಾ ರಸ್ತೆಯ ಮಾರ್ಗದ ಹಳೆ ಸಂತೆ ಮೈದಾನವು ಈಗ ವ್ಯರ್ಥವಾಗಿದೆ ,ಈ ಸ್ಥಳವನ್ನು ಬಸ್ ನಿಲ್ದಾಣ ನಿರ್ಮಾಣಕ್ಕೆ ಆಯ್ಕೆ ಮಾಡಿದ್ದು, ಅತ್ಯುತ್ತಮ ಹೈಟೆಕ್ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಹಾಗೂ ಶನಿ ಮಹಾತ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸುಲಭ ಪ್ರಯಾಣದ…

Read More

ಭಾರತೀಯ ಜೈನ್ ಮಿಲನ್ ವಲಯ –8 ರ ಜಿನ ಭಜನಾ ಮಾಲಿಕೆ ಬೆಂಗಳೂರಿನಲ್ಲಿ ವೈಭವಯುತವಾಗಿ ನಡೆಯುವುದರ ಮೂಲಕ ಸಂಪನ್ನಗೊಂಡಿತು. ಭಾರತೀಯ  ಜೈನ್ ಮಿಲನ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಧರ್ಮಸ್ಥಳ ಸುರೇಂದ್ರ ಕುಮಾರ್ ಹಾಗೂ ಉಪಾಧ್ಯಕ್ಷರು ಹಾಗೂ ಬೆಂಗಳೂರು ತ್ಯಾಗಿ ಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ ಈ ಜೈನ ಭಜನೆ , ಎರಡು ದಿನಗಳ ಕಾಲ ಸೆಮಿ ಫೈನಲ್ ಹಾಗೂ ಫೈನಲ್ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು . ಕಾರ್ಯಕ್ರಮದಲ್ಲಿ ಭಾರತೀಯ ಜೈನ ಮಿಲನ್ ರಾಷ್ಟ್ರೀಯ ಕಾರ್ಯ ಅಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ಮಾತನಾಡಿ,  ಜಿನ ಭಜನೆ ಭಾರತೀಯ ಸಂಸ್ಕೃತಿ– ಸಂಸ್ಕಾರದ ಮೂಲಬೇರಾಗಿದ್ದು, ಇದನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ  ಕೊಂಡೊಯ್ಯಬೇಕಿದೆ  ಇದು  ಸಾಹಸಮಯ ಕೆಲಸವಾಗಿದ್ದು, ಇದಕ್ಕೆ  ಭರದ ಸಿದ್ಧತೆ ನಡೆಸುವುದು, ತೀರ್ಪು ನೀಡುವುದು ಕಷ್ಟದ ಕೆಲಸವೇ ಆಗಿದೆ ಎಂದರು. ಭಾರತೀಯ  ಜೈ ನ್ ಮಿಲನ್ ವಲಯ –8 ರ ರಾಷ್ಟ್ರೀಯ ಉಪಾಧ್ಯಕ್ಷರಾದ  ಅನಿತಾ ಸುರೇಂದ್ರ ಕುಮಾರ್ ಮಾತನಾಡಿ,…

Read More

ತುಮಕೂರು: ತುಮಕೂರು ತಾಲ್ಲೂಕು ಕೋರ ಗ್ರಾಮದ ಬಳಿಯಿರುವ ನಿರಾಶ್ರಿತರ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 75 ವರ್ಷದ ಮಂಜಣ್ಣ ಬಿನ್ ಶಿವಣ್ಣ ಎಂಬ ವಯೋವೃದ್ಧನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜನವರಿ 2ರಂದು ಬೆಳಿಗ್ಗೆ 6:30 ಗಂಟೆಗೆ ಮೃತಪಟ್ಟಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ. ಮೃತ ವ್ಯಕ್ತಿಯು 165 ಸೆಂ.ಮೀ. ಎತ್ತರ, ಎಣ್ಣೆಗೆಂಪು ಮೈಬಣ್ಣ, ತೆಳ್ಳನೆಯ ಶರೀರ ಹೊಂದಿದ್ದು, ಮೃತನ ಮೈಮೇಲೆ ನೀಲಿ–ಹಳದಿ ಮಿಶ್ರಿತ ಅರ್ಧ ತೋಳಿನ ಅಂಗಿ ಹಾಗೂ ಬಲ ಮೊಣಕೈಯಲ್ಲಿ ಹಾವಿನ ಚಿತ್ರವಿರುವ ಹಚ್ಚೆ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ವಾ.ಸಂ. 0816–2278000/2272340/ 2275301/ 2242006, ಮೊ.ಸಂ.9480802900–20—31–49ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು :  ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಜನವರಿ 8ರಂದು ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಸ್ಕೂಲ್‌ ನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More