Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ತುಮಕೂರು: ಮಕ್ಕಳಲ್ಲಿರುವ ಪ್ರತಿಭೆಗಳು ಉತ್ತಮ ಭವಿಷ್ಯಕ್ಕೆ ಸಹಕಾರಿಯಾಗಲಿದ್ದು, ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಕೆಲಸವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ಆರ್.ಜಿ. ಪವಿತ್ರ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಬಾಲಭವನ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಜಿಲ್ಲಾ ಬಾಲಭವನದಲ್ಲಿ “ಅಂತರ್ ಶಾಲಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಿದ್ದ ಜನಪದ ನೃತ್ಯ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾಲ್ಲೂಕು ಮಟ್ಟದಲ್ಲಿ ಕಿರಿಯ/ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಿ ಪ್ರಥಮ ಬಹುಮಾನ ಗಳಿಸಿದ ಮಕ್ಕಳಿಗಾಗಿ ಇಂದು ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರಲ್ಲದೆ, ಮಕ್ಕಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಬೇಕು. ಕನ್ನಡ ನಾಡಿನ ಜನಪದ ಕಲೆಗಳನ್ನು ಉಳಿಸಬೇಕು. ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮಹಿಳಾ…
ತುಮಕೂರು: ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಲ್ಪತರು ನಗರಿ ತುಮಕೂರಿನ ಎಸ್ ಎಸ್ ಐ ಟಿ ಗ್ರೀನ್ ಕ್ಯಾಂಪಸ್ ಆವರಣದಲ್ಲಿ ಮೊದಲನೆ ಬಾರಿಗೆ 39ನೇಯ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಇದೇ ತಿಂಗಳ 18 ಮತ್ತು 19ರಂದು ಅದ್ದೂರಿಯಾಗಿ ನಡೆಸಲು ನಿಶ್ಚಯಗೊಳಿಸಿದ್ದು, ರಾಜ್ಯದಿಂದ ಬರುವ ಪತ್ರಕರ್ತರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಊಟ, ವಸತಿ, ಸಾರಿಗೆ, ಇತರೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಸ್ವಯಂ ಸೇವಾ ಸಮಿತಿಯು ನಗರದ ಪತ್ರಿಕಾ ಭವನದಲ್ಲಿ ಸಭೆ ನಡೆಸಿತು. ಸಮಿತಿಯ ಅಧ್ಯಕ್ಷರಾದ ಜಯನುಡಿ ಜಯಣ್ಣ ಅವರ ನೇತೃತ್ವದಲ್ಲಿ ನಡೆದ ಸಭೆಗೆ ಕಾ.ನಿ.ಪ. ಪ್ರಧಾನ ಕಾರ್ಯದರ್ಶಿ, ಟಿ ಇ ರಘುರಾಮ್ ಅವರು ಭಾಗಿಯಾಗಿ ಸಮ್ಮೇಳನ ಯಶಸ್ವಿಗೊಳಿಸಲು ಸ್ವಯಂ ಸೇವಾ ಸಮಿತಿಯ ಜವಾಬ್ದಾರಿಗಳ ಕುರಿತಾಗಿ ಸಲಹೆ ನೀಡಿದರು. ಸ್ವಯಂ ಸೇವಾ ಸಮಿತಿಯ ಅಧ್ಯಕ್ಷ ಜಯನುಡಿ ಜಯಣ್ಣ ಅವರು ಮಾತನಾಡಿ, ಮೊದಲ ಬಾರಿಗೆ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸ್ವಯಂ ಸೇವಾ ಸಮಿತಿ ಬದ್ಧವಾಗಿದೆ. ಸುಮಾರು…
ಕೊರಟಗೆರೆ: ಸ್ಮಶಾನಕ್ಕೆ ಹೋಗುವ ದಾರಿ ಮತ್ತು ಸರ್ಕಾರಿ ಹಳ್ಳ ಒತ್ತುವರಿ ಶೀಘ್ರವೇ ತೆರವು ಕಾರ್ಯಾಚರಣೆ ಕೈಗೊಳ್ಳಬೇಕೆಂದು ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬಡ ಮುದ್ದಯ್ಯನಪಾಳ್ಯ ಮಜರೇ ಬೋರಯ್ಯನ ಹಟ್ಟಿ ಗ್ರಾಮದ ಗ್ರಾಮಸ್ಥರು ತಹಶೀಲ್ದಾರ್ ಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮ ದಾಸರವೇ ನಂಬರ್ 19ರಲ್ಲಿ 20 ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಿದ್ದು, ಸ್ಮಶಾನ ಮತ್ತು ಸ್ಮಶಾನಕ್ಕೆ ಹೋಗುವ ರಸ್ತೆ ಒತ್ತುವರಿ ಆಗಿದ್ದು ಹಾಗೂ ಸರ್ಕಾರಿ ಹಳ್ಳದ ಜಾಗ ಒತ್ತುವರಿ ಆಗಿದ್ದು ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ ಎಂದು ಮನವಿ ಮಾಡಿದ್ದಾರೆ. ಗ್ರಾಮದ ಬಲಾಢ್ಯರು ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಮುಳ್ಳು ತಂತಿ ಹಾಕಿ ರೈತರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದರು. ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಮನವಿ ಸ್ವೀಕರಿಸಿ ತಕ್ಷಣವೇ ಕ್ರಮವಹಿಸುತ್ತೇನೆ ಎಂದು ತಿಳಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಹಾಡುಹಗಲೇ ಪತ್ರಿಕಾ ಸಂಪಾದಕ ರಾಮಾಂಜಿನಪ್ಪ ಅವರ ಮೇಲಿನ ದಾಳಿ ಖಂಡಿಸಿ, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಜಿ.ಕರುಣಾಕರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ಜಿಲ್ಲೆಯ ಪಾವಗಡದಲ್ಲಿ ನಡೆದಂತಹ ಘಟನೆಯೇ ಇದಕ್ಕೆ ತಾಜಾ ಉದಾಹರಣೆಯಾಗಿದೆ. ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು. ಪಾವಗಡ ಪಟ್ಟಣದಲ್ಲಿ ಸೋಮವಾರ ರಾಮಾಂಜಿನಪ್ಪ ಅವರ ಮೇಲೆ ಹಲ್ಲೆ ಮಾಡಿದವರನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.…
ಪಾವಗಡ: ಪತ್ರಕರ್ತ ರಾಮಾಂಜಿನಪ್ಪ ನವರ ಹಲ್ಲೆಯನ್ನು ಖಂಡಿಸಿ ಪಾವಗಡ ತಾಲೂಕಿನ ಪತ್ರಕರ್ತರ ಸಂಘಟನೆಗಳು, ದಲಿತಪರ ಸಂಘಟನೆಗಳು, ಶ್ರೀರಾಮಸೇನೆ, ತಾಲೂಕು ಕುರುಬ ಸಮಾಜ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಪಟ್ಟಣದ ಐ.ಬಿ.ಯಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ. ಪಟ್ಟಣದ ಶನಿಮಹಾತ್ಮ ದೇವಾಲದಬಳಿ ಮಾನವ ಸರಪಳಿ ನಿರ್ಮಿಸಿ, ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗುತ್ತ ಪಟ್ಟಣದ ಪೊಲೀಸ್ ಠಾಣೆ ಬಳಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು. ತಾಲೂಕು ಕಚೇರಿ ಮುಂದೆ ರಸ್ತೆ ತಡೆ ನಡೆಸಿದರು. ನಂತರ ಪಾವಗಡ ಪಟ್ಟಣ ಪೊಲೀಸ್ ಠಾಣೆಗೆ ತೆರಳಿದ ಪ್ರತಿಭಟನಾಕಾರರು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ನಂತರ ತಾಲೂಕು ಕಚೇರಿಗೆ ತೆರಳಿದ ಕುರುಬ ಸಮುದಾಯದ ಮುಖಂಡರು ಹಾಗೂ ಸದಸ್ಯರು ಆರೋಪಿ ನಾರಾಯಣ ರೆಡ್ಡಿ ಕುಟುಂಬವನ್ನು ತಾಲೂಕಿನಿಂದ ಗಡಿಪಾರು ಮಾಡಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.…
ತುಮಕೂರು: ಪಾವಗಡದಲ್ಲಿ ಪತ್ರಕರ್ತ ರಾಮಾಂಜೀನಪ್ಪ ಮೇಲೆ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ನಾರಾಯಣರೆಡ್ಡಿ, ರೂಪ, ಲಕ್ಷ್ಮೀದೇವಿ, ಆದಿಲಕ್ಷ್ಮಿ ಬಂಧಿತರಾಗಿದ್ದಾರೆ. ಆರೋಪಿತರನ್ನು ಪಾವಗಡ ಪಿ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ. ಮರಿಯಪ್ಪ, ಹಾಗೂ ಅಬ್ದುಲ್ ಖಾದರ್ ಮತ್ತು ಶೇಖರ್, ಡಿ.ವೈ.ಎಸ್.ಪಿ ಮಧುಗಿರಿ(ಪ್ರಭಾರ) ಇವರುಗಳ ಮಾರ್ಗದರ್ಶನದಲ್ಲಿ ಸುರೇಶ ಎಂ.ಆ ಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದಲ್ಲಿ ಗುರುನಾಥ್ ಪಿ.ಎಸ್.ಐ-2, ಸಿಬ್ಬಂದಿರವರುಗಳನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐ.ಪಿ.ಎಸ್ ರವರು ಶ್ಲಾಘಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಕರ್ನಾಟಕ ರಾಜ್ಯದಲ್ಲಿ ಹೂಮನ್ ಮೆಟಾನ್ಯೂಮೊವೈರಸ್ (HMPV) ಇತರ ಉಸಿರಾಟದ ವೈರಸ್ ಗಳಂತಯೇ ಚಳಿಗಾಲದಲ್ಲಿ ಶೀತ ಮತ್ತು ಜ್ವರ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಿಗೆ ಈ ರೋಗ ಲಕ್ಷಣಗಳು ಕಂಡುಬರುತ್ತದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಎರಡು HMPV ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, 1 ಪ್ರಕರಣವನ್ನು ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದ್ದು, ಇತರೆ ಪ್ರಕರಣಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು, ಎರಡು ಪ್ರಕರಣಗಳು ಸೌಮ್ಯ ಸ್ವಭಾವದವು ಮತ್ತು ಯಾವುದೇ ಅಂತರಾಷ್ಟ್ರೀಯ ಪ್ರಯಾಣದ ಇತಿಹಾಸವನ್ನು ಹೊಂದಿರುವುದಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇಲಾಖೆ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಸಾಮಾನ್ಯ ಶೀತ ILI ಮತ್ತು SARI ನಂತಹ ಚಾಲ್ತಿಯಲ್ಲಿರುವ ಉಸಿರಾಟದ ಸೋಂಕುಗಳ ಡೇಟಾವನ್ನು ವಿಶ್ಲೇಶಿಸಿದೆ, ಡಿಸೆಂಬರ್ 2024 ರಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಯಲ್ಲಿ ಯಾವುದೇ ಗಮರ್ನಾಹ ಏರಿಕೆ ಕಂಡುಬಂದಿರುವುದಿಲ್ಲ. ರೋಗಲಕ್ಷಣಗಳು : HMPV ಕೆಮ್ಮು ಜ್ವರ ಉಸಿರಾಟದ ತೊಂದರೆ ಸೇರಿದಂತೆ ಜ್ವರ ತರಹದ ರೋಗಲಕ್ಷಣಗಳು ಉಂಟುಮಾಡುತ್ತದೆ, ಹೆಚ್ಚು…
ಬೆಂಗಳೂರು: 2025ರ ಮಾರ್ಚ್ 1 ರಿಂದ 8ರ ವರೆಗೆ ₹9 ಕೋಟಿ ವೆಚ್ಚದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಥೀಮ್‌ನಡಿ ಆಯೋಜಿಸಲಾಗುತ್ತಿದೆ. ಈ ಬಾರಿ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು, 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್‌ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ. ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು, ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ವಿಮಾನದ ಇಂಜಿನ್ ಸ್ಥಗಿತಗೊಂಡ ಕಾರಣ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಏರ್ ಇಂಡಿಯಾ 2820 ವಿಮಾನವು ಸಂಜೆ 7 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು.ಬೆಂಗಳೂರಿನ ಸುತ್ತ ಸುತ್ತಿದ ನಂತರ ಒಂದು ಗಂಟೆಯ ನಂತರ ಹಿಂತಿರುಗಿತು ಎಂದು ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ಹೆಚ್ಚನ ತಾಂತ್ರಿಕ ವಿವರಗಳಿಲ್ಲ ಆದರೆ ವಿಮಾನವು ತುರ್ತು ಲ್ಯಾಂಡಿಂಗ್ ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಮತ್ತು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನಂತರ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ಮುಂದುವರೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಗ್ವಾಲಿಯರ್: 25 ವರ್ಷದ ವೈದ್ಯೆಯೊಬ್ಬಳ ಮೇಲೆ ಸಹೋದ್ಯೋಗಿಯೇ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಪರೀಕ್ಷೆಗೆ ಹಾಜರಾಗಬೇಕಿತ್ತು ಹಾಗಾಗಿ ವೈದ್ಯಕೀಯ ಕಾಲೇಜಿನ ಬಾಲಕಿಯರ ಹಾಸ್ಟೆಲ್ ನಲ್ಲಿ ತಂಗಿದ್ದರು ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಜಾಡೋನ್ ತಿಳಿಸಿದ್ದಾರೆ. ಆರೋಪಿ, ಸಂತ್ರಸ್ತೆಯೊಂದಿಗೆ ಅಧ್ಯಯನ ಮಾಡಿದ ವೈದ್ಯನಾಗಿದ್ದು,ಬಾಲಕರ ಹಳೆಯ ಹಾಸ್ಟೆಲ್ಗೆ ಭೇಟಿಯಾಗಲು ಅವಳನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದಾನೆ ನಂತರ ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆ ಕಂಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿ, ಕಾನೂನು ಕ್ರಮಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx