Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ 60 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೊದಲು 40 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದರು, ಈಗ 60 ಪರ್ಸೆಂಟ್ ಕಮಿಷನ್ ಇದೆ. ಮುಂದೆ 65 ಪರ್ಸೆಂಟ್ ಪಡೆಯಬೇಕೆಂದು ಮಂತ್ರಿಮಂಡದಲ್ಲಿ ಚರ್ಚೆ ಆಗುತ್ತಿದೆ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಕಾಂಗ್ರೆಸ್ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಯಾವ ದಾಖಲೆ ಕೊಟ್ಟಿದ್ದೀರಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, 60% ಕಮೀಶನ್! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ ಎಂದಿದ್ದಾರೆ. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು. ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ. ಕಮೀಷನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು…
ಕಠ್ಮಂಡು: ಟಿಬೆಟ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು 62 ಮಂದಿ ಗಾಯಗೊಂಡಿದ್ದಾರೆ. ಭೂಕಂಪವು ನೆರೆಯ ನೇಪಾಳದ ರಾಜಧಾನಿ ಕಠ್ಮಂಡು ಮತ್ತು ಭಾರತದ ಉತ್ತರ ಭಾಗಗಳಲ್ಲಿ ಭೂಕಂಪನದೊಂದಿಗೆ ಟಿಬೆಟ್ ನಲ್ಲಿ ಅನೇಕ ಕಟ್ಟಡಗಳ ಕುಸಿತಕ್ಕೆ ಕಾರಣವಾಯಿತು. ಚೀನಾ ಭೂಕಂಪ ನೆಟ್ವರ್ಕ್ ಸೆಂಟರ್ (ಸಿಇಎನ್ಸಿ) ಪ್ರಕಾರ, ನೇಪಾಳದ ಗಡಿಯ ಸಮೀಪ 7.1 ರ ತೀವ್ರತೆಯೊಂದಿಗೆ ಡಿಂಗ್ರಿ ಕೌಂಟಿಯಲ್ಲಿ ಬೆಳಿಗ್ಗೆ 6:35 ಕ್ಕೆ ಭೂಕಂಪ ಸಂಭವಿಸಿದೆ. ಬಿಹಾರದಲ್ಲಿಯೂ ಭೂಮಿ ಕಂಪಿಸಿದ ಅನುಭವ ಜನತೆಗೆ ಆಗಿದೆ. ಜನರು ತಮ್ಮ ಮನೆಗಳು ಮತ್ತು ಅಪಾರ್ಟ್ಮೆಂಟ್ಗಳ ಹೊರಗೆ ಓಡುತ್ತಿರುವ ದೃಶ್ಯ ಕಂಡುಬಂತು. ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತಿಪಟೂರು: ಕಲ್ಪತರು ವಿದ್ಯಾ ಸಂಸ್ಥೆ ವತಿಯಿಂದ ಜನವರಿ 9ರಂದು ಗುರುವಾರ ಕಲ್ಪತರು ಕಾಲೇಜು ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.,ಜಿ.ಸುಧಾಕರ್ ತಿಳಿಸಿದರು. ಕಲ್ಪತ ಕಲ್ಪತರು ತಾಂತ್ರಿಕ ಕಾಲೇಜ್ ಕಲ್ಪತರು ಪಿಯು ಕಾಲೇಜ್ ವತಿಯಿಂದ ಸುಮಾರು ಹೆಸರಾಂತ 75 ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ತಿಪಟೂರ್ ತಾಲೂಕುಹುಳಿಯಾರು ಅರಸೀಕೆರೆ ತುರುವೇಕೆರೆ ತಾಲೂಕಿಗೆ ಸೇರಿದ ನಿರುದ್ಯೋಗಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ಈ ಉದ್ಯೋಗ ಮೇಳದಲ್ಲಿ 3,000 ಜನ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಕೆಲವಾರು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುತ್ತಾರೆ. ಸಂದರ್ಶನಕ್ಕೆ ಬರುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ನಿರುದ್ಯೋದ್ಯೋಗಿಗಳಿಗೆ ಈ ಉದ್ಯೋಗವು ಮೇಳವು ನೆರವಾಗಲಿದೆ ಎಂದು ತಿಳಿಸಿದರು. ಈ ಉದ್ಯೋಗ ಮೇಳವನ್ನು ಶಾಸಕ ಕೆ.ಷಡಕ್ಷರಿ ಉದ್ಘಾಟಿಸುವರು, ಸಂಸ್ಥೆಯ ಅಧ್ಯಕ್ಷ ಕೆ.ಪಿ. ತಿಪ್ಪೆರುದ್ರಪ್ಪನವರು ಅಧ್ಯಕ್ಷತೆ ವಹಿಸುವರು, ಬದರಗಡ್ಡೆ ಉಪಸ್ಥಿತರಿರುವರು, ಸಂಸ್ಥೆಯ ಉಪಾಧ್ಯಕ್ಷರು ಬಾಗೇಪಲ್ಲಿ ನಟರಾಜ್, ಕಾರ್ಯದರ್ಶಿ ಸಂಗಮೇಶ್, ಪ್ರಾಂಶುಪಾಲ ಚಿತ್ತರಂಜನ್, ಪ್ಲೇಸ್ಮೆಂಟ್ ಅಧಿಕಾರಿ ಕಿರಣ್ ಇದ್ದರು.…
ತುಮಕೂರು: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಗುಡ್ಡೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟವರನ್ನು ಮಹಮದ್ ಆಸೀಫ್ (12), ಮಮ್ತಾಝ್ (38), ಶಾಖೀರ್ ಹುಸೇನ್ (48) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತಿದ್ದ ಮೂವರಿಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ, ಇದರ ಪರಿಣಾಮ ಸ್ಥಳದಲ್ಲಿಯೇ ಮೂವರು ಅಸುನೀಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧುಗಿರಿ ತಾಲೂಕಿನ ಕೊರಟಗೆರೆ ರಸ್ತೆ ಓಬಳಾಪುರ ಗೇಟ್ ಬಳಿ ಘಟನೆ ಸಂಭವಿಸಿದೆ. ಮೃತಪಟ್ಟ ಮೂವರು ಕೂಡ ಮಧುಗಿರಿ ತಾಲೂಕಿನವರೆಂದು ಈಗಾಗಲೇ ಪತ್ತೆ ಹೆಚ್ಚಲಾಗಿದೆ. ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನ ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿರುವ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ನಡೆದಿದೆ. ಹಲವಾರು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಚಿರತೆಯನ್ನ ಸಾರ್ವಜನಿಕರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ತಿಪಟೂರು ತಾಲ್ಲೋಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬುವವರ ತೋಟದಲ್ಲಿ ಬೀಡುಬಿಟ್ಟಿದ ಸುಮಾರು 4ರಿಂದ 5 ವರ್ಷ ಪ್ರಾಯದ ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆ ಬಲೆಬೀಸಿತ್ತು. ಆದರೆ ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನ ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಚಿರತೆ ಹಿಡಿದ್ದು, ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ತುಮಕೂರು ಉಪ ಅರಣ್ಯಸಂರಕ್ಷಣಾಧಿಕಾರಿ ಅನುಪಮ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭರತ್…
ಪಾವಗಡ: ಪತ್ರಕರ್ತನ ಮೇಲೆ ಮೂವರು ಮಹಿಳೆಯರು ಸೇರಿಕೊಂಡು ಸಾರ್ವಜನಿಕ ಸ್ಥಳದಲ್ಲೇ ಚಪ್ಪಲಿಯಲ್ಲಿ ಮಾರಕ ದಾಳಿ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 16ರಂದು ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಕುರಿತು ವರದಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣದ ಹೃದಯ ಭಾಗದ ಟೋಲ್ ಗೇಟ್ ಬಳಿ ನಾರಾಯಣ ರೆಡ್ಡಿ ಕುಟುಂಬದ ಮಹಿಳಾ ಸದಸ್ಯರು ಮೂರು ಜನ ಸೇರಿ ಪತ್ರಕರ್ತ ರಾಮಾಂಜಿನಪ್ಪನವರ ಮೇಲೆ ಅಂಬೇಡ್ಕರ್ ವೃತ್ತದಲ್ಲಿ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪತ್ರಕರ್ತನ ಮೇಲಿನ ದಾಳಿ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಈ ಹಲ್ಲೆಗೆ ಪತ್ರಕರ್ತರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಪತ್ರಕರ್ತರಿಗೆ ರಕ್ಷಣೆ ನೀಡುವಂತೆ ಪತ್ರಕರ್ತರು ಒತ್ತಾಯಿಸಿದ್ದಾರೆ. ಈ ಘಟನೆ ಮಾಧ್ಯಮ ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ಋತುಸ್ರಾವದ ಸಮಯದಲ್ಲಿಸ್ಯಾನಿಟರಿ ಪ್ಯಾಡ್ ಕೊಳ್ಳಲು ಹಣವಿಲ್ಲದೆ ಹುಲ್ಲು, ಇಟ್ಟಿಗೆ, ಹಳೆಬಟ್ಟೆ, ಬೂದಿ ಹಾಗೂ ಇನ್ನಿತರ ಅನೈರ್ಮಲ್ಯ ವಸ್ತುಗಳನ್ನು ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಬಳಸುತ್ತಿದ್ದಾರೆ. ಇದರಿಂದ ಕ್ಯಾನ್ಸರ್, ಗರ್ಭಕೋಶದ ಸಮಸ್ಯೆಯುಂಟಾಗಿ ಬದುಕನ್ನು ನಾಶಮಾಡಿಕೊಳ್ಳುತ್ತಿದ್ದಾರೆ ಎಂದು ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ಆತಂಕ ವ್ಯಕ್ತಪಡಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗವು ಸಾವಿತ್ರಿಬಾಯಿ ಫುಲೆ ಹಾಗೂ ಕುವೆಂಪು ಜನ್ಮದಿನಾಚರಣೆಯ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಮಾಲೆಕಾರ್ಯಕ್ರಮದಲ್ಲಿ ಮಾತನಾಡಿದರು. ಋತುಚಕ್ರದ ಕುರಿತು ಗ್ರಾಮೀಣ ಭಾಗದ ಹೆಣ್ಣುಮಕ್ಕಳಲ್ಲಿ ಅರಿವಿನ ಕೊರತೆಯಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟರಿ ಪ್ಯಾಡ್ ದೊರಕುವಂತಾಗಬೇಕು. ಮುಟ್ಟಿನ ಕುರಿತು ಅರಿವು ಮೂಡಿಸುವ ಕಾರ್ಯಕೈಗೊಳ್ಳಬೇಕು. ಜಿಡಿಪಿಯ ಶೇ.50 ಪಾಲನ್ನು ಹೊಂದಿರುವ ಸಂಸಾರ ನಿಭಾಯಿಸುವ ಗೃಹಿಣಿಯರಿಗೆ ಸೂಕ್ತ ಸಂಭಾವನೆ ಕೊಡುವ ಮನಸ್ಥಿತಿಯ ಸಮಾಜ ನಿರ್ಮಾಣವಾಗಬೇಕು. ಇದರಿಂದ ಮಹಿಳಾ ಸಬಲೀಕರಣವಾಗಲಿದೆ ಎಂದರು. ಮಿತಿಮೀರಿದ ಸ್ತ್ರೀವಾದದಿಂದ ಅದರ ಸಾಧಕ—ಬಾಧಕಗಳ ಕುರಿತು ಚಿಂತನೆ ನಡೆಸುವ ಕಾಲದಲ್ಲಿದ್ದೇವೆ. ಸಾವಿತ್ರಿಬಾಯಿ ಫುಲೆ ಅವರ ಧೈರ್ಯ ಹಾಗೂ ಕುವೆಂಪು ಅವರ ಸಮಾನತೆ ಸಾರುವ…
ಬೀದರ್: ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗೀತ್ವದಲ್ಲಿ 15 ಸಾವಿರ ಮನೆಗಳು ಮಂಜೂರಾಗಿದ್ದು, ಯಾರಿಗೆ ಮನೆ ಮತ್ತು ನಿವೇಶನವಿಲ್ಲ ಅಂತಹವರಿಗೆ ಮನೆಗಳನ್ನು ಮಂಜೂರು ಮಾಡಲಾಗುವುದು ಎಂದು ಬೀದರ ಸಂಸದರಾದ ಸಾಗರ ಈಶ್ವರ ಖಂಡ್ರೆ ತಿಳಿಸಿದರು. ಇಂದು ಸೋಮವಾರ ಭಾಲ್ಕಿಯ ಸಂಸದರ ಕಚೇರಿ ಆವರಣದಲ್ಲಿ ಭಾಲ್ಕಿ ತಾಲ್ಲೂಕಿನ ಗ್ರಾಮೀಣ ಭಾಗದ 665 ಜನರಿಗೆ 2024–25ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಪಿ.ಎಂ.ಎ.ವಾಯ್ (ಜಿ) ಅಡಿಯಲ್ಲಿ ಮಂಜೂರಿಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಮಾಡಿ ಮಾತನಾಡಿದರು. ಸಾಮಾನ್ಯ ಜನರಿಗೆ ಮೊದಲನೆ ಕಂತಿನಲ್ಲಿ 30 ಸಾವಿರ ರೂ, ಎರಡನೇ ಕಂತಿನದಲ್ಲಿ 60 ಸಾವಿರ ರೂ, ಮೂರನೇ ಕಂತಿನಲ್ಲಿ 30 ಸಾವಿರ ರೂ. ಒಟ್ಟು 1,20,000 ರೂ. ಹಣ ಸಂಬಂಧಿಸಿದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮೊದಲನೇ ಕಂತಿನಲ್ಲಿ 43,750…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ವಿವಿಧ ಟ್ರೇಡ್ ಗಳಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಹೆಚ್.ಎ.ಎಲ್. ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮೇಕರ್, ಸಿಎನ್ಸಿ ಪ್ರೋಗ್ರಾಮರ್ ಕಂ ಆಪರೇಟರ್, ಮೆಕ್ಯಾನಿಕ್ ರೆಫ್ರಿಜಿರೇಷನ್ ಅಂಡ್ ಏರ್ ಕಂಡೀಷನಿಂಗ್ ಟ್ರೇಡ್ ನಲ್ಲಿ ಐ.ಟಿ.ಐ. ಪಾಸಾದ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಭಾವಚಿತ್ರ, ಎಸ್.ಎಸ್ಎಲ್.ಸಿ., ಐ.ಟಿ.ಐ. ಅಂಕ ಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಮೀಸಲಾತಿ ಪ್ರಮಾಣ ಪತ್ರ SC/ST/OBC/PH ಅನ್ನು ಲಗತ್ತಿಸಿ ಜನವರಿ 22ರೊಳಗಾಗಿ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮುನ್ನ www.apprenticeship.gov.in ನಲ್ಲಿ ಕಡ್ಡಾಯವಾಗಿ ಅಪ್ರೆಂಟಿಸ್ ನೋಂದಣಿ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ: 0816–2278488ನ್ನು ಸಂಪರ್ಕಿಸಬೇಕೆಂದು…