Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ರಾಯಚೂರು: ರಾಯಚೂರ ಜಿಲ್ಲೆಯ ಪ್ರವಾಸದಲ್ಲಿದ್ದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಬೋಸರಾಜು ಅವರು ಜನವರಿ 6ರಂದು ಜಿಲ್ಲಾಧಿಕಾರಿಗಳಾದ ನಿತೀಶ ಕೆ, ಸಹಾಯಕ ಆಯುಕ್ತರಾದ ಗಜಾನನ ಬಾಳೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ 700 ವರ್ಷಗಳ ರಾಯಚೂರಿನ ಐತಿಹಾಸಿಕ ಮಾವಿನ ಕೆರೆಯ ಅಭಿವೃದ್ಧಿ ಕಾಮಗಾರಿಯ ಪರಿವೀಕ್ಷಣೆ ನಡೆಸಿದರು. ಸಚಿವರು ಇದೆ ವೇಳೆ, ಜಿಲ್ಲಾಧಿಕಾರಿಗಳು ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು. ನಗರದ ನಾಗರಿಕರಿಗೆ ವಾಯುವಿಹಾರ ಜೊತೆಗೆ ಪ್ರೇಕ್ಷಣೀಯ ಸ್ಥಳವಾಗಿ ಈ ಕೆರೆ ಪ್ರದೇಶವು ಮಾರ್ಪಾಡಾಗುತ್ತಿರುವುದು ಸಂತಸದ ಸಂಗತಿ ಎಂದರು. ಸ್ವಚ್ಚ ಮತ್ತು ಸುಂದರ ನಗರ ಹಾಗೂ ಅಂತರ್ಜಲ ವೃದ್ಧಿಗಾಗಿ ರಾಯಚೂರಿನ ಹೃದಯ ಭಾಗದಲ್ಲಿರುವ ಐತಿಹಾಸಿಕ ಮಾವಿನ ಕೆರೆ ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ಐತಿಹಾಸಿಕ ಮಾವಿನ ಕೆರೆ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಾವಿನ ಕೆರೆ ಸಮಗ್ರ ಅಭಿವೃದ್ಧಿಗೆ ಎಲ್ಲರು ಕೈಜೋಡಿಸಿ ಸಹಕರಿಸಬೇಕು ಎಂದು ಸಚಿವರು ರಾಯಚೂರ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ…
ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ(1 ರಿಂದ 8ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ರಾಜ್ಯ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳು ಜಾಲತಾಣ https://ssp.karnataka.gov.in ಮೂಲಕ ಜನವರಿ 15ರೊಳಗಾಗಿ ಅರ್ಜಿ ಸಲ್ಲಿಸಿ, ನಂತರ ಸಲ್ಲಿಸಿದ ಅರ್ಜಿ ಪ್ರತಿಯನ್ನು ಸಂಬಂಧಿಸಿದ ಶಾಲೆಗಳಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಅಥವಾ ನಗರದ ಉಪ್ಪಾರ ಹಳ್ಳಿ ಇಂದಿರಾ ಕಾಲೇಜು ಮುಂಭಾಗ ಮೌಲಾನಾ ಆಜಾದ್ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮ್ಮದ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಜನವರಿ 8ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಿದ್ದ “ಸಾರ್ವಜನಿಕ ಕುಂದು ಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಲಕ್ಷ್ಮೀನಾರಾಯಣ ಎ.ವಿ. ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಹ್ಯೂಮನ್ ಮೆಟಾನ್ಯುಮೋ ವೈರಸ್ (HMPV) ಬಗ್ಗೆ ಆತಂಕ ಬೇಡ, ಸಹಜ ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ರಾಜಧಾನಿ ಬೆಂಗಳೂರಿನಲ್ಲಿ 2 ಎಚ್ ಎಂಪಿವಿ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ಬಳಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳು, 3 ತಿಂಗಳ ಇಬ್ಬರು ಮಕ್ಕಳಲ್ಲಿ ಕಾಯಿಲೆ ದೃಢಪಟ್ಟಿದೆ. ಸದ್ಯ ಇಬ್ಬರ ಆರೋಗ್ಯ ಸುಧಾರಿಸಿದೆ. ಆತಂಕ ಪಡುವ ಸ್ಥಿತಿ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ. ಎಚ್‌ಎಂಪಿವಿ ಈಗಾಗಲೇ ಹಳೇಯ ವೈರಸ್ ಆಗಿದೆ. 2001 ರಲ್ಲೆ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ಕೊರೊನಾದಷ್ಟು, ಮಾಧ್ಯಮಗಳಲ್ಲಿ ತೋರಿಸುತ್ತಿರುವಷ್ಟು ಸೀರಿಯಸ್ ಅಲ್ಲ. ಸೋಂಕಿತ ಮಕ್ಕಳಿಗೆ ಏನು ಆಗಿಲ್ಲ. ಚೀನಾದಲ್ಲಿ ಹರಡಿರುವ ವೈರಸ್ ತಳಿಗೂ, ಬೆಂಗಳೂರಿನಲ್ಲಿ ಹರಡಿರುವ ತಳಿಯೂ ಸಂಬಂಧ ಇಲ್ಲ ಎನಿಸುತ್ತಿದೆ. ಈ ಬಗ್ಗೆ ಪತ್ತೆಗೆ ಅಗತ್ಯ ಕ್ರಮ…
ಬೆಂಗಳೂರು: ಕಾಂಗ್ರೆಸ್ ನದು ಶೇ.100ರಷ್ಟು ಕಮೀಷನ್ ಸರ್ಕಾರ ಎಂದು ಮಾಜಿ ಸಚಿವ, ಶಾಸಕ ಅಶ್ವಥ್ ನಾರಾಯಣ ಗಂಭೀರ ಆರೋಪ ಮಾಡಿದ್ದಾರೆ. ಈಗಿನದು 60% ಕಮೀಷನ್ ಸರ್ಕಾರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ಅಶ್ವಥ್ ನಾರಾಯಣ ಈ ಗಂಭೀರ ಆರೋಪ ಮಾಡಿದರು. ಎಚ್.ಡಿ.ಕುಮಾರಸ್ವಾಮಿ ಅವರು ಸುಖಾಸುಮನೆ ಸರ್ಕಾರದ ವಿರುದ್ಧ ಆರೋಪ ಮಾಡಿಲ್ಲ. ಹಿಟ್ ಅಂಡ್ ರನ್ ಮಾಡಿಲ್ಲ. ಎಲ್ಲಾ ಇಲಾಖೆಗಳಲ್ಲೂ ವ್ಯವಸ್ಥಿತವಾಗಿ ಕಮಿಷನ್ ನಡೆಯುತ್ತಲೇ ಇದೆ. ಇದರಲ್ಲಿ ಸುಳ್ಳೇನಿಲ್ಲ. ವಿಧಾನಸೌಧದ ಕಂಬಗಳು ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿವೆ. ಇದಕ್ಕಿಂತ ಬೇರೆ ಸಾಕ್ಷಿ ಏನು ಬೇಕಾಗಿದೆ ಎಂದು ಪ್ರಶ್ನಿಸಿದರು. ಈ ಸರ್ಕಾರ ಆರಂಭದಿಂದಲೂ ಹಗರಣಗಳ ಮೇಲೆ ಹಗರಣ ನಡೆಸುತ್ತಿದೆ. ಬರೀ ಭ್ರಷ್ಟಾಚಾರ ಆಪಾದನೆಯಲ್ಲ. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ವಾಲೀಕಿ ನಿಗಮದಲ್ಲಿ 100% ಭ್ರಷ್ಟಾಚಾರ ಅವರೇ ಒಪ್ಪಿಕೊಂಡಿದ್ದಾರೆ. ಚಂದ್ರಶೇಖರ್ ಆತ್ಮಹತ್ಯೆಯಿಂದ ಈ ಪ್ರಕರಣ ಹೊರಗೆ ಬಂತು ಎಂದು ಹೇಳಿದರು. ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಎಸ್ ಐ ಪೋಸ್ಟ್ ಗೆ…
ಕಳೆದ ವರ್ಷ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದ್ದ ತಮಿಳಿನ ಅಮರನ್ ಸಿನಿಮಾ 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಸೂಪರ್ ಹಿಟ್ ಆಗಿತ್ತು. ಬಳಿಕ ಒಟಿಟಿಗೂ ಎಂಟ್ರಿಕೊಟ್ಟು ಅಲ್ಲೂ ಹೆಚ್ಚು ಜನರಿಂದ ವೀಕ್ಷಣೆ ಪಡೆದುಕೊಂಡಿತ್ತು. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಇದೀಗ ಕಿರುತೆರೆಗೆ ಬರಲಿದೆ. ಚಿತ್ರಮಂದಿರಗಳಲ್ಲಿ ಹಾಗೂ ಒಟಿಟಿಯಲ್ಲಿ ಸಿನಿಮಾ ವೀಕ್ಷಣೆ ಮಾಡಲು ಸಾಧ್ಯವಾಗದವರು ಇದೀಗ ಮನೆಯಲ್ಲೇ ಟಿವಿಯಲ್ಲಿ ನೋಡಬಹುದಾಗಿದೆ. ಕನ್ನಡದಲ್ಲಿ ಈ ಸಿನಿಮಾದ ಸ್ಯಾಟಲೈಟ್ ಹಕ್ಕನ್ನು ಸ್ಟಾರ್ ಸುವರ್ಣ ಪಡೆದುಕೊಂಡಿದೆ. ಇದೇ ಜನವರಿ 14ರಂದು ಸಂಜೆ 5:30ಕ್ಕೆ ಈ ಸಿನಿಮಾ ಪ್ರದರ್ಶನಗೊಳ್ಳಲಿದೆ. ಈ ಸಿನಿಮಾವನ್ನು ಕಮಲ್ ಹಾಸನ್ ತಮ್ಮ ರಾಜ್ ಕಮಲ್ ಇಂಟರ್ ನ್ಯಾಷನಲ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ನಾಯಕ ನಟರಾಗಿ ಶಿವ ಕಾರ್ತಿಕೇಯನ್, ನಾಯಕಿಯಾಗಿ ಸಾಯಿ ಪಲ್ಲವಿ ನಟಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಚಾಣಕ್ಯನ ನೀತಿಗಳು(Chanakyana niti )ಬಹಳ ಖ್ಯಾತಿ ಪಡೆದದ್ದಾಗಿವೆ. ಚಾಣಕ್ಯನ ಕೆಲವೊಂದು ನೀತಿಗಳು ಮಹಿಳೆಯರ ವಿರುದ್ಧ ಇರುವಂತೆ ಕಂಡರೂ ಸಾಕಷ್ಟು ನೀತಿಗಳು ಸಮಾಜದಲ್ಲಿ ಜನಪ್ರಿಯವಾಗಿದೆ. ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ 3 ವ್ಯಕ್ತಿಗಳಿಂದ ದೂರವಿರಬೇಕು ಎಂದು ಚಾಣಕ್ಯ ಹೇಳುತ್ತಾನೆ. ಆ ವ್ಯಕ್ತಿಗಳಿಂದ ದೂರವಿದ್ದರೆ ಸಂಬಂಧ ಉತ್ತಮವಾಗಿರುತ್ತದೆಯಂತೆ. ಸ್ವಾರ್ಥಿ ಬಂಧು, ಸ್ನೇಹಿತರಿಂದ ದೂರವಿರಿ: ನಿಮ್ಮ ಸ್ನೇಹಿತರು, ಸಂಬಂಧಿಕರು ಸ್ವಾರ್ಥಿಗಳಾಗಿದ್ದರೆ, ಅವರಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾನೆ. ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರು ನಿಮಗೆ ಸಲಹೆ ನೀಡುವವರು, ಮಾರ್ಗದರ್ಶನ ನೀಡುವವರಾಗಿರಬೇಕು. ಆದರೆ ಸ್ನೇಹಿತರು, ಸಂಬಂಧಿಕರು ನಿಮ್ಮ ಬೆಳವಣಿಗೆ ಸಹಿಸದವರು, ನಿಮ್ಮನ್ನು ದಾರಿ ತಪ್ಪಿಸಲು ಯತ್ನಿಸುತ್ತಾರೆ ಎಂದಾದರೆ, ಅವರಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾರೆ. ಜಗಳವಾಡುವ ಪತ್ನಿಯೊಂದಿಗೆ ಹೀಗೆ ಇರಿ: ಜಗಳವಾಡುವ ಹೆಂಡತಿಯಿಂದ ನೀವು ದೂರವಿರಬೇಕು ಎಂದು ಚಾಣಕ್ಯ ಹೇಳುತ್ತಾನೆ. ಚಾಣಕ್ಯನ ಪ್ರಕಾರ ಜಗಳವಾಡುವ ಹೆಂಡತಿ ನಿಮ್ಮನ್ನು ಸಂತೋಷದಿಂದ ಇಡಲಾರಳು. ಆಕೆ ನಿಮ್ಮ ಜೀವನದಲ್ಲಿ ಅಡೆತಡೆ ಮಾತ್ರ ತರಬಹುದು. ಆಕೆಯನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು ಎಂದು ಪುರುಷರಿಗೆ…
ತಿಪಟೂರು: ತಾಲೂಕಿನ ಕರಡಿ ಕೃಷಿ ಪತಿನ ಸಹಕಾರ ಸಂಘದ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಕೆ.ಆರ್. ದೇವರಾಜು ಬಣವು ಅಭೂತಪೂರ್ವವಾಗಿ ಗೆಲುವು ಸಾಧಿಸಿದೆ. ಗೆಲುವಿನ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಕೆ.ಆರ್.ದೇವರಾಜು ತಾಲೂಕು ಮಟ್ಟದ ಹಲವಾರು ರಾಜಕಾರಣಿಗಳು ನಮ್ಮ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಕೊಂಡು ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಹೊರಿಸಿದರು. ಕೂಡ ನಮ್ಮ ಭಾಗದ ರೈತರು ನಮ್ಮ ತಂಡದ ಮೇಲೆ ಹಾಗೂ ನನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ನನಗೆ ಮತ್ತೊಮ್ಮೆ ಆಶೀರ್ವಾದಿಸಿರುವುದಕ್ಕಾಗಿ ನಾನು ನಮ್ಮ ರೈತ ಬಾಂಧವರಿಗೆ ಕೃತಜ್ಞನಾಗಿರುತ್ತೇನೆ ಎಂದು ಹಾಗೂ ಇನ್ನೂ ಉತ್ತಮ ಸೇವೆ ಸಲ್ಲಿಸುವುದಾಗಿ ತಿಳಿಸಿದರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಕೆ.ಆರ್.ದೇವರಾಜು 295, ಉಪ್ಪಿನ ಹಳ್ಳಿ ಜಯಣ್ಣ 246, ದೊಡ್ಡ ಲಿಂಗಯ್ಯ 245, ಶಿವಮೂರ್ತಿ 243, ಶೇಷಣ್ಣ 228, ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಮೃತಶ್ರೀ 281, ಭಾರತ 248, ಪರಿಶಿಷ್ಟ ಜಾತಿ ಮೀಸಲಿನಿಂದ ಮಲ್ಲೇಶಯ 263, ಪರಿಶಿಷ್ಟ ಪಂಗಡದಿಂದ ಕೃಷ್ಣೆಯ 267,…
ತುಮಕೂರು: ಬೈಕ್ ಸಮೇತ ಹೇಮಾವತಿ ನಾಲೆಗೆ ಬಿದ್ದ ಸವಾರ ಮೃತಪಟ್ಟಿರುವ ಘಟನೆ ಕುಂದೂರು ಬಳಿ ಹೇಮಾವತಿ ನಾಲೆಯಲ್ಲಿ ನಡೆದಿದೆ. ಅಜೀಬ್ ವುಲ್ಲಾ(33) ಖಾನ್ ಮೃತ ದುರ್ದೈವಿ. ಹೇಮಾವತಿ ನಾಲೆಯಿಂದ 28 ಕಿಲೋಮೀಟರ್ ದೂರದಲ್ಲಿ ಮೃತ ದೇಹ ಪತ್ತೆಯಾಗಿದೆ. ಕುಂದೂರು ಬಳಿ ಹೇಮಾವತಿ ನಾಲೆಗೆ ಬಿದ್ದ ಅಜೀಬ್ ವುಲ್ಲಾ ಖಾನ್ ತಿಪಟೂರು ತಾಲ್ಲೂಕು ಕೆ.ಬಿ.ಕ್ರಾಸ್ ನಿವಾಸಿಯಾಗಿದ್ದಾರೆ. ಜ.2ನೇ ತಾರೀಕು ಅಜೀಬ್ ವುಲ್ಲಾ ನಾಲೆಗೆ ಬಿದ್ದಿದ್ದಾರೆ. ಕುಂದೂರು ಬಳಿಯ ನಾಲೆಯಲ್ಲೆ ಬೈಕ್ ಪತ್ತೆಯಾಗಿದೆ. ಗುಬ್ಬಿ ತಾಲ್ಲೂಕಿನ ಸೋಮಲಾಪುರದ ಬಳಿ ಪತ್ತೆಯಾದ ಮೃತ ದೇಹ ಪತ್ತೆಯಾಗಿದೆ. ಮೃತ ದೇಹ ನಾಲೆಯಿಂದ ಹೊರ ತೆಗೆಯಲು ನಿನ್ನೆಯಿಂದ ಹರಸಾಹಸ ಪಡುವಂತಾಗಿದೆ. ನಿನ್ನೆಯೇ ಮೃತದೇಹ ನಾಲೆಯಲ್ಲಿ ಪತ್ತೆಯಾಗಿದೆ. ಮೃತ ದೇಹವನ್ನು ನಾಲೆಯಿಂದ ತೆಗೆಯಲು ಕುಟುಂಬಸ್ಥರು ಮನವಿ ಮಾಡಿದ್ದಾರೆ. ನಿನ್ನೆ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಕೆ.ಬಿ ಕ್ರಾಸ್ ಪೊಲೀಸರು ಭೇಟಿ ನೀಡಿದ್ದರು. ಆದರೆ, ಮೃತ ದೇಹ ಮೇಲೆ ತೆಗೆಯಲು ವಿಫಲವಾಗಿದ್ದಾರೆ. ಸೋಮಲಾಪುರದ ಬಳಿ ಆಳವಾಗಿರುವ ಹೇಮಾವತಿ ನಾಲೆಯಿಂದ ಮೃತದೇಹ ತೆಗೆಯುವುದು…
ಔರಾದ್: ತಾಲ್ಲೂಕಿನ ಮುಸ್ತಾಪುರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣವಾಗಿ ಕಳಪೆ ಮಟ್ಟದಿಂದ ಕೂಡಿದೆ, ಹೀಗಾಗಿ ಅಧಿಕಾರಿಗಳು ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಲಖನ ಲಾಧೇಕರ ಒತ್ತಾಯಿಸಿದ್ದಾರೆ. ಬಾವಿ ತೆಗೆದಿಲ್ಲ, ಟ್ಯಾಂಕರ್ ಕೂಡ ಕಟ್ಟಿಲ್ಲ ಇದಕ್ಕೆ ಸಂಬಂಧಪಟ್ಟ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಾದ A. E. E. ಹಾಗೂ ಗುತ್ತಿಗೆದಾರರು ಕೂಡಿ ಸರಕಾರದ ಖಜಾನೆ ಖಾಲಿ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಆದ ಕಾರಣ ಕಾಮಗಾರಿಯು ಪರಿಶೀಲನೆ ಮಾಡಿದ ನಂತರ ಅನುದಾನ ಬಿಡುಗಡೆ ಮಾಡಬೇಕು ಅಲ್ಲಿಯವರೆಗೆ ತಾವುಗಳು ಅನುದಾನವನ್ನು ತಡೆಹಿಡಿಯಬೇಕು ಎಂದು ದ್ವಿತೀಯ ದರ್ಜೆ ಸಹಾಯಕ ಸಾಯಿಕಿರಣ್ ಅವರಿಗೆ ಮನವಿ ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ಷ್ಮವಾಗಿ ತನಿಖೆ ನಡೆಸಿ ಅವರ ಮೇಲೆ ಸೂಕ್ಷ್ಮವಾಗಿ ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ — ವಿಭಾಗ ಔರಾದ್ (ಬಾ ) ಕಛೇರಿ ಮುಂದುಗಡೆ ಹೋರಾಟ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.…