Subscribe to Updates
Get the latest creative news from FooBar about art, design and business.
- ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
- ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
- ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಸಂಕಲ್ಪ ಯಾತ್ರೆ
- ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
- ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
- ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
- ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
- ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
Author: admin
ತುಮಕೂರು: ನಿರುದ್ಯೋಗಿ ಯುವಕರಿಗೆ ತುಮಕೂರಿನ ಹೆಸರಾಂತ ಕಂಪನಿಯಲ್ಲಿ ಕೆಲಸ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗೊಲನ ಎಂಟರ್ ಪ್ರೈಸಸ್ ಸಂಸ್ಥೆಯ ಮೂಲಕ ಗುತ್ತಿಗೆ ಆಧಾರದಲ್ಲಿ ಉದ್ಯೋಗಾವಕಾಶಗಳು ಲಭ್ಯವಿದೆ. ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು: SSLC ಮಾರ್ಕ್ಸ್ ಕಾರ್ಡ್ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಪಾಸ್ ಪೋರ್ಟ್ ಸೈಜ್ ಫೋಟೋ ಕೆಲಸದ ಸ್ಥಳ: ತುಮಕೂರು –- ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ ವಿಶೇಷ ಮಾಹಿತಿ: ತುಮಕೂರಿನ ವಿವಿಧ ಹೆಸರಾಂತ ಕೈಗಾರಿಕಾ ಘಟಕಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳು ಲಭ್ಯ. ಆಸಕ್ತ ಅಭ್ಯರ್ಥಿಗಳು 9741717700 ಅಥವಾ 9986316494 ಅಥವಾ 9743103968 ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ವಾರ್ಡ್ ನಂಬರ್ ಒಂದಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಕಳಪೆ ಕಾಮಗಾರಿಯಿಂದ ಆಗಿರುವ ರಸ್ತೆ ಗುಂಡಿ ಮತ್ತು ಚರಂಡಿಗಳನ್ನು ಸರಿಪಡಿಸಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ ವಾರ್ಡ್ ನಂಬರ್ ಒಂದು ಮತ್ತು ಪ್ರಗತಿಪರ ಚಿಂತಕರು ನಾಗರಿಕರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಪಕ್ಷದ ಮುಖಂಡರು, ವಾರ್ಡ್ ನಂ. 1 ನಗರಸಭೆಯಾಗುವುದಕ್ಕೂ ಮುಂಚೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿತ್ತು, ಆಗ ಈ ನಮ್ಮ ವಾರ್ಡ್ ಪಕ್ಕ ಹಳ್ಳಿಯ ವಾತಾವರಣದಲ್ಲಿ ಇತ್ತು. ಈ ಭಾಗದ ಹೊನ್ನೇನಹಳ್ಳಿ ಗ್ರಾಮದಲ್ಲಿ ಹುಟ್ಟಿದ ನಮ್ಮ ಹೆಣ್ಣು ಮಗಳು ಕನ್ನಡ ಚಿತ್ರರಂಗದ ಖ್ಯಾತ ಚಿತ್ರ ನಟಿ ಮಂಜುಳ ಹುಟ್ಟಿದ ಊರು, ಮಂಜುಳರವರು ನಮ್ಮ ತುಮಕೂರು ಕನ್ನಡ ಚಿತ್ರರಂಗದ ಹಲವು ನಟರೊಂದಿಗೆ ನಟಿಸಿರುವ ಜಿಲ್ಲೆಯವರು ಅದರಲ್ಲೂ ತುಮಕೂರು ನಗರದ ವಾರ್ಡ್ ನಂ. 1ಕ್ಕೆ ಸೇರಿದವರು ಎಂಬ ಹೆಮ್ಮೆ, ಇಡೀ ದೇಶದಲ್ಲೇ ಹೆಸರುವಾಸಿ ಇಂತಹ ನಟಿಯ ನೆನಪು ಅಜರಾಮರವಾಗಿ ಉಳಿಯುವಂತೆ ಮಾಡುವುದು ತುಮಕೂರು ನಗರ ಸಭೆ / ಮಹಾನಗರಪಾಲಿಕೆಯ ಜವಾಬ್ದಾರಿಯಾಗಿದೆ…
ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ, ತೋವಿನಕೆರೆ, ಕೋಳಾಲ ಹೋಬಳಿ ವ್ಯಾಪ್ತಿಯ ಗಡಿ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಹಲವು ರಸ್ತೆಗಳು ತೀವ್ರ ಹದಗೆಟ್ಟಿವೆ. ಹೊಳವನಹಳ್ಳಿ– ಬೊಮ್ಮಲದೇವಿಪುರ ಸಂಪರ್ಕ ರಸ್ತೆ ಮತ್ತು ಅಕ್ಕಾಜಿಹಳ್ಳಿಯಿಂದ ಬೈರೇನಹಳ್ಳಿ ಸಂಪರ್ಕಿಸುವ ರಸ್ತೆ ಅಲ್ಲಲ್ಲಿ ಸಂಪೂರ್ಣ ಹಾಳಾಗಿದೆ. ಇದು ತಾಲ್ಲೂಕಿನ ಗಡಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯಾಗಿದ್ದು, ಅಭಿವೃದ್ಧಿ ಕಾಣದ ಈ ಭಾಗದ ಜನರು ನಿತ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತೋವಿನಕೆರೆ–ಚಿಕ್ಕತೊಟ್ಟುಕೆರೆ ಸಂಪರ್ಕಿಸುವ ರಸ್ತೆಯ ಕುಚ್ಚಂಗಿ ಗೇಟ್ ಬಳಿ ರೈಲ್ವೆ ಕಾಮಗಾರಿ ಸ್ಥಗಿತಗೊಂಡಿರುವ ಸ್ಥಳದಲ್ಲಿ ರಸ್ತೆ ತೀವ್ರ ಹಾಳಾಗಿದೆ. ಮೊಣಕಾಲು ಉದ್ದದ ಗುಂಡಿಗಳು ಬಿದ್ದು ನೀರು ತುಂಬಿಕೊಂಡು ಕೆರೆಯಂತಾಗಿರುವ ರಸ್ತೆಯಲ್ಲಿ ಜನ ಮತ್ತು ವಾಹನಗಳ ಓಡಾಟಕ್ಕೆ ತೀವ್ರ ಅಡಚಣೆಯಾಗಿದೆ. ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು, ಮಳೆ ಬಂದಾಗ ಈ ಪ್ರದೇಶಗಳಲ್ಲಿ ನೀರು ನಿಲ್ಲುವುದರಿಂದ ರಸ್ತೆ ಮುಚ್ಚಿಹೋಗುತ್ತದೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಮತ್ತು ಇತರ ವಾಹನ ಚಾಲಕರು ಅಪಘಾತಗಳಿಗೆ ಗುರಿಯಾಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಎರಡೂ ಕಡೆಗಳಲ್ಲೂ ಅನೇಕ ಅಪಘಾತ ನಡೆದಿದ್ದು,…
ಸರಗೂರು: ಪಂಚದಾಸೋಹಗಳ ಮೂಲಕ ಸಮಾಜದ ಅಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ಸುತ್ತೂರು ಮಹಾಸಂಸ್ಥಾನ ಮಠದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ ಎಂದು ಡಾ.ರಾಜೇಂದ್ರ ಮಹಾಸ್ವಾಮಿಗಳ ಭಕ್ತ ಬಳಗ ಗೌರವಾಧ್ಯಕ್ಷ ಹಾಗೂ ನಿಕಟಪೂರ್ವ ಅಧ್ಯಕ್ಷ ದಡದಹಳ್ಳಿ ಡಿ.ಜಿ.ಶಿವರಾಜು ಹೇಳಿದರು. ಪಟ್ಟಣದ ಜೆಎಸ್ ಎಸ್ ಶಿವರಾತ್ರಿ ಶಿವಾನುಭವ ಮಂಗಳ ಮಂಟಪದಲ್ಲಿ ಮುಂಭಾಗದಲ್ಲಿ ಗುರುವಾರ ದಂದು ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವ ಅ.26ರಂದು ಕಾರ್ಯಕ್ರಮ ನಡೆಯಲಿದ್ದು, ಪ್ರಚಾರ ಕಾರ್ಯಕ್ರಮದ ರಥಕ್ಕೆ ಚಾಲನೆ ನೀಡಿ ಮಾತನಾಡಿದರು. ಇಡೀ ವಿಶ್ವಕ್ಕೆ ಜ್ಞಾನ ಬೆಳಕು ನೀಡಿದ ಸುತ್ತೂರು ಗುರುಪರಂಪರೆ ಸೇವೆ ಕೊಡುಗೆ ಅವರು ನೀಡಿರುವ ತತ್ವ ಸಿದ್ಧಾಂತಗಳನ್ನು ಸರ್ವಕಾಲಕ್ಕೂ ಪ್ರಸ್ತುತವಾಗಿದೆ. ಇಂತಹ ಮಹನೀಯರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಅರ್ಥ ಪೂರ್ಣವಾಗಿ ಆಚರಣೆ ಮಾಡುವ ಮೂಲಕ ಅವರ ಕೃಪೆಗೆ ಪಾತ್ರರಾಗೋಣ ಎಂದು ತಿಳಿಸಿದರು. ಇಂದು ಮತ್ತು ನಾಳೆ ಸರಗೂರು ತಾಲೂಕಿನ ಎಲ್ಲಾ ಗ್ರಾಮಗಳಿಗೆ ಹೋಗಿ ಪ್ರಚಾರಕ್ಕೆ ಮಾಡಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬರುತ್ತಾರೆ ಎಂದರು. ಮೈಸೂರು–ಚಾಮರಾಜನಗರ…
ಬೆಂಗಳೂರು: ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ನಲ್ಲಿ ಬಹಳಷ್ಟು ನಾಯಕರು ಸಮರ್ಥರಿದ್ದಾರೆ. ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಲು ಎಲ್ಲರಿಗೂ ಆಸೆ ಇರುತ್ತದೆ. ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ನಮಲ್ಲಿ ಡಿ.ಕೆ.ಶಿವಕುಮಾರ್, ಪರಮೇಶ್ವರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಕೃಷ್ಣಭೈರೇಗೌಡ ಸೇರಿದಂತೆ ಎಲ್ಲರೂ ಸಮರ್ಥರಿದ್ದಾರೆ. ಬಿಜೆಪಿಯಂತೆ ನಮ್ಮಲ್ಲಿ ನಾಯಕತ್ವದ ಕೊರತೆಯಿಲ್ಲ ಎಂದರು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸದ್ಯಕ್ಕೆ ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ಸ್ವಯಂ ಘೋಷಣೆ ಮಾಡಿ ತಾವು ಮುಖ್ಯಮಂತ್ರಿ ಎಂದು ಹೇಳಿಕೊಂಡರೆ ಆಗುವುದಿಲ್ಲ, ಜನರ ಅಭಿಪ್ರಾಯ ಇರಬೇಕು, ಶಾಸಕರು ಬೆಂಬಲ ನೀಡಬೇಕು. ಆ ಬಳಿಕ ಹೈಕಮಾಂಡ್ ಪರಿಶೀಲಿಸಿ, ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು. ನಮ್ಮ ಹಂತದಲ್ಲಿ ಇಂತಹ ವಿಚಾರಗಳು ಚರ್ಚೆಯಾಗುವುದು ಅನಗತ್ಯ. ಖಾತೆ ಬದಲಾವಣೆ ಬಗ್ಗೆಯೂ ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಹಾಗೆ ಇಂತಹದೇ ಖಾತೆ ಬೇಕು ಎಂದು ಕೇಳಲು ಸಾಧ್ಯವಿಲ್ಲ. ಹೈಕಮಾಂಡ್ ಹಾಗೂ ಮುಖ್ಯಮಂತ್ರಿಯವರು ಈ ವಿಚಾರವಾಗಿ ಅಂತಿಮ ನಿರ್ಧಾರ…
ಬೆಂಗಳೂರು: ಇನ್ನು ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸಚಿವ ವಿ.ಸೋಮಣ್ಣ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿರುವ ಸಚಿವ ವಿ.ಸೋಮಣ್ಣ, ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿ ಪಡಿಸಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೆರವು ಕೊಡಬೇಕು ಎಂದರು. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲುಗಳ ಸಮರ್ಪಕ ನಿರ್ವಹಣೆ ಮಾಡಬೇಕಿದೆ. ಚೆನ್ನಮ್ಮನ ಜೀವನ ಮತ್ತು ಯಶೋಗಾಥೆಯನ್ನು ಎಲ್ಲ ಭಾಷೆಯಲ್ಲಿ ಪುಸ್ತಕ ಹೊರ ತರಬೇಕಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕಿತ್ತೂರು ಸಂಸ್ಥಾನದ ಸ್ವಾಭಿಮಾನ ಮತ್ತು ಕನ್ನಡ ನಾಡಿನ ಹೆಮ್ಮೆಯ ಸಂಕೇತವಾದ ಕಿತ್ತೂರು ರಾಣಿ ಚೆನ್ನಮ್ಮನವರು…
ಬೆಂಗಳೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ರಹಸ್ಯ ಕಾರ್ಯಾಚರಣೆ ನಡೆಸಿ ಭ್ರೂಣಹತ್ಯೆ ಜಾಲವೊಂದನ್ನು ಪತ್ತೆ ಹಚ್ಚಿದ್ದು, 7 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಪಿ.ಸಿ ಕುಮಾರಸ್ವಾಮಿ, ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್ ಹಾಗೂ ಕೆಪಿಎಂಇಎ ಉಪ ನಿರ್ದೇಶಕ ಡಾ.ದೊರೆ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. ಮೋಹನ್ ಮತ್ತು ದೊರೆ ಅವರು ಸಮಾಜ ಕಲ್ಯಾಣಾ ಇಲಾಖೆ ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಡಾ. ಬೆಟ್ಟಸ್ವಾಮಿ ಅವರೊಂದಿಗೆ ಖಚಿತ ಮಾಹಿತಿಯ ಮೇರೆಗೆ ಲಿಂಗಪತ್ತೆ ಹಾಗೂ ಭ್ರೂಣಹತ್ಯೆಗಾಗಿ ತೆರಳುತ್ತಿದ್ದ ಪುಟ್ಟಸಿದ್ದಮ ಎಂಬ ಮಹಿಳೆಯನ್ನು ಹಿಂಬಾಲಿಸಿದ್ದಾರೆ. ಆಕೆಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದು, ಮತ್ತೆ ಹೆಣ್ಣು ಮಗುವೇ ಜನಿಸಿದರೆ ಕೌಟುಂಬಿಕ ಸಮಸ್ಯೆಗಳಾಗಬಹುದು ಎಂಬ ಕಾರಣಕ್ಕೆ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಗೆ ಮುಂದಾಗಿದ್ದರು ಎನ್ನಲಾಗಿದೆ. ಸ್ವಾಮಿ ಎಂಬುವರು ಮಧ್ಯವರ್ತಿಯಾಗಿ ಕೆಲಸ ನಿರ್ವಹಿಸಿದ್ದು, ಮಹಿಳೆಯನ್ನು ಒಪ್ಪಿಸಿ ಹಣ ಪಡೆದು,…
ಹಾಸನ: ವರ್ಷಕ್ಕೊಮೆ ದರ್ಶನ ಕರುಣಿಸುವ ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು 14 ದಿನ ದರ್ಶನ ನೀಡಿದ್ದು, ಇಂದು ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ದೇಗುಲವನ್ನು ಬಂದ್ ಮಾಡಲಾಯಿತು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಭಕ್ತರು ಆಗಮಿಸಿ, ಮಳೆಯ ನಡುವೆಯೂ ತಾಯಿಯನ್ನು ಕಣ್ತುಂಬಿ ಕೊಂಡಿದ್ದಾರೆ. ಇದುವರೆಗೂ 26 ಲಕ್ಷಕ್ಕೂ ಹೆಚ್ಚು ಮಂದಿ ದೇವಿ ದರ್ಶನ ಪಡೆದಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ. ವರ್ಷಕ್ಕೊಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಅ.10ರಿಂದ ಒಟ್ಟು 26ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಪರಮೇಶ್ವರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಸೈದ್ಧಾಂತಿಕವಾಗಿ ಸತೀಶ್ ಜಾರಕಿಹೊಳಿ ಹೆಸರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ. ಸತೀಶ್ ಜಾರಕಿಹೊಳಿಯವರು ಹಿಂದೆ ಅಹಿಂದ ಚಳುವಳಿಯಲ್ಲಿದ್ದರು. ಅವರಿಗೆ ಆ ಬದ್ಧತೆ ಇದೆ ಎಂದು ಹೇಳಿರಬಹುದು. ಸಿಎಂ ಹುದ್ದೆಯನ್ನು ದೃಷ್ಟಿಯಲ್ಲಿ ಇಟ್ಕೊಂಡು ಅವರು ಹೇಳಿಲ್ಲ ಎಂದು ಹೇಳಿದರು. ಇದೇ ವೇಳೆ ಸಿಎಂ ರೇಸ್ ನಲ್ಲಿ ತಮ್ಮ ಹೆಸರಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ಸಂದರ್ಭ ಬಂದಾಗ ಸಿಎಲ್ಪಿ ಸಭೆ ಕರೆಯುತ್ತಾರೆ. ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್ ಗೆ ವರದಿ ಕೊಟ್ಟು ನಂತರ ಘೋಷಣೆ ಆಗುತ್ತದೆ. ಇದು ಪದ್ಧತಿ. ಇದನ್ನು ಶಾರ್ಟ್ ಕಟ್ ಹೇಗೆ ಮಾಡುತ್ತಾರೆ ಹೇಳಿ ಎಂದು ಪ್ರಶ್ನಿಸಿದರು. ಇದೇ ವೇಳೆ ನಾನು, ಸತೀಶ್, ಮಹಾದೇವಪ್ಪ ಕಾಫಿಗೆ ಸೇರಿದ್ದೆವು ಅಷ್ಟೇ ಎಂದು…
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಉಚಿತವಾಗಿ ದೇಶಿ ಕೋಳಿ ಮರಿಗಳನ್ನು ವಿತರಿಸಲು ಜಿಲ್ಲೆಯ ಗುಬ್ಬಿ ಹಾಗೂ ಪಾವಗಡ ತಾಲ್ಲೂಕಿನ ಗ್ರಾಮೀಣ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರು, ಸ್ವ–ಸಹಾಯ ಸಂಘದ ಮಹಿಳಾ ಸದಸ್ಯರು, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರು ಹಾಗೂ ಕುಕ್ಕುಟ ಸಹಕಾರ ಸಂಘಗಳ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರಿಗೆ ಉಚಿತವಾಗಿ 5 ವಾರದ ತಲಾ 20 ದೇಶಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಅರ್ಜಿಯನ್ನು ಗುಬ್ಬಿ ಹಾಗೂ ಪಾವಗಡ ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಬಿಪಿಎಲ್ ಕಾರ್ಡ್, ಭಾವಚಿತ್ರ ಸಹಿತ ಗುರುತಿನ ಚೀಟಿ/ಆಧಾರ್ ಕಾರ್ಡ್ ಪ್ರತಿ ಹಾಗೂ ಸಾಮಾನ್ಯ ಫಲಾನುಭವಿ ಹೊರತುಪಡಿಸಿ ಮೀಸಲಾತಿ ಬಯಸುವವರು ಜಾತಿ ಪ್ರಮಾಣ ಪತ್ರದ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಲಗತ್ತಿಸಿ ಆಯಾ ತಾಲ್ಲೂಕಿನ ಪಶು ವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕೆಂದು ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ…