Author: admin

ತುಮಕೂರು: ಜಿಲ್ಲೆ ತಿಪಟೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಹಾಲ್ಕುರಿಕೆ ರಸ್ತೆ ರಾಷ್ಟ್ರೀಯ ಹೆದ್ದಾರಿ 206 ರ ಚತುಷ್ಪತ ರಸ್ತೆಗೆ ಸಂಪರ್ಕಿಸುವ 2 ಕಿಲೋ ಮೀಟರ್ ಚತುಷ್ಪಥ ನಗರ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ತಿಪಟೂರು ಶಾಸಕ ಕೆ.ಷಡಕ್ಷರಿ ಗುದ್ದಲಿಪೂಜೆ ನೆರವೇರಿಸಿದರು. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಕೆ.ಷಡಕ್ಷರಿ ಸರ್ಕಾರ ಎಸ್ ಎಸ್ ಟಿಪಿ ಯೋಜನೆ ಅಡಿ 20 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾಗಿದ್ದು,ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಹಾಲ್ಕುರಿಕೆ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 8 ಕೋಟಿ ವೆಚ್ಚದ ನಗರ ಸಂಪರ್ಕ ಚತುಷ್ಪಥ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು. ಹಾಲ್ಕುರಿಕೆ ರಸ್ತೆ ರಾಜ್ಯ ಹೆದ್ದಾರಿಯಾಗಿರುವ ಕಾರಣ ರಾಜ್ಯಹೆದ್ದಾರಿ ನಿಯಮಗಳಂತೆ ಕಾಮಗಾರಿ ನಡೆಸಲಾಗುತ್ತದೆ. ಹಾಲ್ಕುರಿಕೆ ರಸ್ತೆ ನಗರದಿಂದ ಹೆದ್ದಾರಿಗೆ ಸಂಪರ್ಕಿಸುವ ರಸ್ತೆಯಾಗಿರುವ ಕಾರಣ, ಅಪಘಾತಗಳು, ಹೆಚ್ಚಾದ ಹಿನ್ನೆಲೆ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದರು.…

Read More

ಬೆಂಗಳೂರಿನಲ್ಲಿ ಕಳೆದೊಂದು ವಾರಗಳಿಂದ ಚಳಿಗೆ ಜನ ಗಡಗಡ ನಡುಗಿದ್ದಾರೆ. ಚಳಿಯ ಜೊತೆಗೆ ಇಬ್ಬನಿಯ ಪ್ರಮಾಣ ಕೂಡ ಹೆಚ್ಚಾಗಿದ್ದು, ಹೀಗಾಗಿ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡುತ್ತಿದ್ದಾರೆ. ಉತ್ತರ ಭಾರತದಿಮದ ಶೀತಗಾಳಿ ಬೀಸುತ್ತಿರುವ ಪರಿಣಾಮ ನಗರದಲ್ಲಿ ತಾಪಮಾನ ಮತ್ತಷ್ಟು ತಗ್ಗುವ ಮುನ್ಸೂಚನೆ ಇದೆ. ಜನವರಿ ತಿಂಗಳಲ್ಲಿ ಕನಿಷ್ಠ ತಾಪಮಾನ 15.8 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮುಂದಿನ ವಾರ ಕನಿಷ್ಠ ತಾಪಮಾನ 10 ರಿಂದ 12 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗುವ ಮುನ್ಸೂಚನೆ ಕೂಡ ಇರುವುದರಿಂದ ಬೆಂಗಳೂರಿನಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಗಾಲ ತುಸು ಹೆಚ್ಚಿರಲಿದ್ದು, ಮಳೆ ಜಾಸ್ತಿ ಬಿದ್ದ ಕಾರಣ ಕೆರೆ, ನದಿ, ಅಣೆಕಟ್ಟುಗಳು ತುಂಬಿರುವುದು ಕೂಡ ವಾತಾವರಣದ ಚಳಿ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಚೀನಾದಲ್ಲಿ ಆತಂಕ ಸೃಷ್ಟಿಸಿರುವ ವೈರಸ್ ಹ್ಯೂಮನ್ ಮೆಟಾನ್ಯೂಮೊ ವೈರಸ್( HMPV) ಬೆಂಗಳೂರಿನಲ್ಲಿ ಮಗುವಿನಲ್ಲಿ ಪತ್ತೆಯಾಗಿದೆ. ನಗರದ ಖಾಸಗಿ ಆಸ್ಪತ್ರೆಗೆ 8 ತಿಂಗಳ ಮಗುವನ್ನು ಜ್ವರದ ಹಿನ್ನೆಲೆ ದಾಖಲಿಸಲಾಗಿತ್ತು. ಪರೀಕ್ಷೆ ಮಾಡಿಸಿದ ವೇಳೆ HMPV ಪತ್ತೆಯಾಗಿದೆ. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ ಎಂದು ಅವರು ತಿಳಿಸಿದ್ದಾರೆ. ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ. ಚುನಾವಣೆಯಲ್ಲಿ ಗೆದ್ದರೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯ ಕೆನ್ನೆಯಂತೆ ನಯವಾದ ರಸ್ತೆಗಳನ್ನು ಮಾಡುತ್ತೇವೆ ಎಂದು ರಮೇಶ್ ಬಿಧುರಿ ಹೇಳಿಕೆ ನೀಡಿದ್ದು, ಇದರ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದ್ಯ ರಮೇಶ್ ಬಿಧುರಿ ನೀಡಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಭಾರೀ ಚರ್ಚೆಗೀಡಾಗಿದೆ. ಬಿಧುರಿ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇಟ್​,  ಇದು ನಾಚಿಕೆಗೇಡು” ಮತ್ತು ಬಿಜೆಪಿ ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪ್​ ಸಂಸದ ಸಂಜಯ್ ಸಿಂಗ್ ಕೂಡ ರಮೇಶ್ ಬಿಧುರಿಯವರ ಹೇಳಿಕೆಯನ್ನು ಖಂಡಿಸಿದ್ದಾರೆ. ಎಕ್ಸ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿಯ ನಾಯಕತ್ವದಲ್ಲಿ ದೆಹಲಿಯ ಮಹಿಳೆಯರು ಸುರಕ್ಷಿತವಾಗಿರಬಹುದೇ ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು:   ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿ ಅಭಿಲೇಖಾಲಯದಲ್ಲಿರುವ ಹಳೆಯ ದಾಖಲೆಗಳನ್ನು ಸೂಕ್ಷ್ಮವಾಗಿ ಗಣಕೀಕರಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂಪ್ಯೂಟರ್ ಆಪರೇಟರ್‌ ಗಳಿಗೆ ಕರೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್‌ಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯು ಭೂಸುರಕ್ಷಾ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಹೊಸ ತಂತ್ರಾಂಶದಡಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿರುವ ಕಂದಾಯ ದಾಖಲೆಗಳನ್ನು ಗಣಕೀಕರಣಗೊಳಿಸುವ ಉದ್ದೇಶದಿಂದ ಕಂಪ್ಯೂಟರ್ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ತರಬೇತಿಯಲ್ಲಿ ನೀಡಿದ ಸಲಹೆ ಸೂಚನೆಗಳನ್ವಯ ಆಪರೇಟರ್‌ಗಳು ಕಂದಾಯ ದಾಖಲೆಗಳನ್ನು ಗಣಕೀಕರಣಗೊಳಿಸಬೇಕು. ದಾಖಲೆಗಳನ್ನು ಸ್ಕ್ಯಾನ್ ಮಾಡಿ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡಬೇಕು ಎಂದು ತಿಳಿಸಿದರು. ಮೊದಲಿಗೆ ಎ ವರ್ಗದ ಕಡತ/ ವಹಿಗಳ ಗಣಕೀಕರಣ ಮಾಡಬೇಕು. ನಂತರದಲ್ಲಿ ಬಿ ವರ್ಗದ ಕಡತ/ವಹಿಗಳನ್ನು ಗಣಕೀಕರಣ ಮಾಡಬೇಕು. ಅಭಿಲೇಖಾಲಯದಲ್ಲಿ ಸುಮಾರು 150 ವರ್ಷಕ್ಕೂ ಹಳೆಯದಾದ ದಾಖಲೆಗಳಿರುತ್ತವೆ. ಇಂತಹ ದಾಖಲೆಗಳನ್ನು ಸಂರಕ್ಷಿಸಲು ಈ ಗಣಕೀಕರಣ ಕಾರ್ಯ ಕೈಗೊಳ್ಳಲಾಗಿದೆ. ಕಂಪ್ಯೂಟರ್ ಆಪರೇಟರ್‌ ಗಳು ಹಳೆಯ ದಾಖಲೆಗಳನ್ನು ಸ್ಕ್ಯಾನ್ ಮಾಡುವಾಗ ದಾಖಲೆಗಳು ಹಾಳಾಗದಂತೆ ಬಹುಸೂಕ್ಷ್ಮತೆಯಿಂದ…

Read More

ಶಿವಮೊಗ್ಗ: ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಇಂದು ಸಂಜೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ನಾ.ಡಿಸೋಜ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು:  ಭಾರತೀಯ  ಜೈನ್ ಮಿಲನ ಎಂಟರ ಜಿನ ಭಜನಾ ಸೀಸನ್–8 ರ ಫೈನಲ್ ಅಂಗವಾಗಿ ನೃತ್ಯ ಪ್ರದರ್ಶನ ದೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಭಾರತೀಯ ಜೈನ್ ಮಿಲನ್  ರಾಷ್ಟ್ರೀಯ ಕಾರ್ಯಧ್ಯಕ್ಷರಾಧಾ ಧರ್ಮಸ್ಥಳ ಸುರೇಂದ್ರ ಕುಮಾರ್   ಕಾರ್ಯಕ್ರಮ ಉದ್ಘಾಟಿಸಿದರು . ಭಾರತೀಯ ಜೈನ್  ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಬೆಂಗಳೂರು  ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಹಾಗೂ ಶ್ರದ್ಧಾ ಅಮಿತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು . ಈ ಸಂದರ್ಭದಲ್ಲಿ ಬೆಂಗಳೂರು ಜೈನ  ಅಸೋಸಿಯೇಷನನ ನಿರ್ದೇಶಕರುಗಳು, ಜೈನ ಸಮಾಜದ ಮುಖಂಡರುಗಳು, ವಿವಿಧ ಜಿಲ್ಲಾ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ,ವಿವಿಧ ಮಹಿಳಾ ಸಂಘಟನೆಗಳು ಮುಖ್ಯಸ್ಥರುಗಳು, ಪದಾಧಿಕಾರಿಗಳು ಸೇರಿದಂತೆ ಶ್ರಾವಕ– ಶ್ರಾವಕಿಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸ್ವಯಂ ಭೂ ಸ್ತೋತ್ರ ಪಠಣ ಮಾಡಲಾಯಿತು.  ಟಿ.ವಿ. ನಿರೂಪಕಿ ನಮಿತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.  ಇದೇ ಸಂದರ್ಭದಲ್ಲಿ ತೀರ್ಪುಗಾರರು ಹಾಗೂ ಸಂಗೀತ ವಾಚಕರನ್ನ ಶಾಲುಹೊದಿಸಿ ಸನ್ಮಾನಿಸಲಾಯಿತು . ಸ್ವಯಂ ಭೂಸ್ತೋತ್ರದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.   ಸೋನಿ ವರ್ಮ…

Read More

ಬೆಂಗಳೂರು:  ಭಾರತೀಯ ಸಂಸ್ಕೃತಿ ಸಂಸ್ಕಾರದ ಮೂಲಬೇರಾಗಿರುವ ಜಿನ ಭಜನೆಯಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಿದ್ದು ಇದನ್ನು ಉಳಿಸಿ ಬೆಳೆಸ ಬೇಕೆಂದು ಭಾರತೀಯ  ಜೈನ್ ಮಿಲನ್ನ ರಾಷ್ಟ್ರೀಯ ಕಾರ್ಯ ಅಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ಕರೆ ನೀಡಿದರು. ಅವರಿಂದು ಭಾರತೀಯ ಜೈನ್ ಮಿಲನ್ ಒಲೆಯ 8ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಕಳೆದ 8 ವರ್ಷಗಳಿಂದ ಅನಿತಾ ಹಾಗೂ ಸಂಗಡಿಗರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಸಿ ಯಶಸ್ವಿಯಾಗಿದೆ, ಇದೊಂದು ಉತ್ಸವದಂತಿದ್ದು ಮುಂದಿನ ಸಮಾರಂಭ ಸಿದ್ಧತೆಗೆ ಆರು ತಿಂಗಳು ಮುಂಚೆ ತಯಾರಿ ಮಾಡಬೇಕಿದೆ. ಈ ಕಾರ್ಯಕ್ರಮ ಸಮಾಜದಲ್ಲಿ ಒಗ್ಗಟ್ಟು ಮೂಡಿಸಿದೆ ಎಂದ ಅವರು, ಈ ಭಜನೆಯತೀರ್ಪು ಒಂದು ಸವಾಲಾಗಿದೆ ಎಂದರು. ಚಲನಚಿತ್ರ ನಟಿ ಶೃತಿ ಮಾತನಾಡಿ, ನಮ್ಮದು ಮನೋರಂಜನೆಗೆ ಒತ್ತು ಕೊಡುವ ಕಾರ್ಯಕ್ರಮಕ್ಕೆ ಆದ್ಯತೆ ನೀಡುವ , ಪರಂಪರೆ , ಭಜನಾ  ಕಾರ್ಯಕ್ರಮಕ್ಕೆ ಜನ ಬೆಂಬಲವಿದೆ, ಇದರ ಕಲ್ಪನೆ ಅಮೋಘವಾದದ್ದು, ಸಂಗೀತ ನಮ್ಮ ಮನೆತನದ ಬದುಕು ಕಟ್ಟಿಕೊಳ್ಳಲು ಕಾರಣವಾಯಿತು ಎಂದ ಅವರು, ಭಜನೆ  ಕಾರ್ಯಕ್ರಮಕ್ಕೆ ಕಳೆದ…

Read More

ಬೆಂಗಳೂರು: ಜಿನ ಭಜನೆ ಇದೊಂದು ಪುರಾತನವಾದ ಸಂಸ್ಕೃತಿಯಾಗಿದ್ದು,  ಈ ಪರಂಪರೆಯನ್ನು ಉಳಿಸಿ ,ಬೆಳೆಸಿ, ಮುಂದಿನ ಪೀಳಿಗೆಗೆ ಕೊಂಡಯುವ ಕೆಲಸವಾಗಿದೆ ಎಂದು ಭಾರತೀಯ ಜೈನ ಮಿಲನ್ ರಾಷ್ಟ್ರೀಯ ಮಹಿಳಾ ಘಟಕದ  ಉಪಾಧ್ಯಕ್ಷರು ಹಾಗೂ ಬೆಂಗಳೂರು  ತ್ಯಾಗಿ ಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ತಿಳಿಸಿದರು. ಅವರಿಂದು ಭಾರತೀಯ  ಜೈನ್ ಮಿಲನ ವಲಯ–೮ ರ ಜಿನ ಭಜನಾ ಸೀಸನ್–8 ರ ಫೈನಲ್ ಅಂಗವಾಗಿ ನೃತ್ಯ ಪ್ರದರ್ಶನ ದೊಂದಿಗೆ ಮೆರವಣಿಗೆಗೆ  ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಡುತ್ತಾ,  ಜಿನ ಭಜನೆ ಇದೊಂದು ಪುರಾತನವಾದ  ಪರಂಪರೆ ಇದು ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ, ಇದು ಎಲ್ಲರ ಆಶೀರ್ವಾದದಿಂದ ಸ್ಪರ್ಧೆಯ ಸಂಸ್ಕೃತಿ ,ಸಂಸ್ಕಾರಗಳನ್ನು ಉಳಿಸಲು ಸಾಧ್ಯವಾಗಿದೆ ಇದಕ್ಕೆ ದಿಲೀಪ್ ಸುರಾನರವರ ಸೇವೆ ಹಾಗೂ ಕರ್ನಾಟಕ ಜೈನ ಅಸೋಸಿಯೇಷನ್ ಸಹಕಾರ ಸ್ಮರಿಸಿದರು. ಜಿನ ಭಜನೆ ವರ್ಷದಿಂದ ವರ್ಷಕ್ಕೆ ಸುಧಾರಣೆ ಕಾಣುತ್ತಿದೆ , ಅನುತೀರ್ಣರಾದವರನ್ನ ಪ್ರೋತ್ಸಾಹಿಸ ಲಾಗುತ್ತಿದೆ, ಸ್ವಯಂ ಭೂ ಸ್ತೋತ್ರ, 24  ತೀರ್ಥಂಕರರ ಸ್ತೋತ್ರ ದೇವರಿಗೆ ಅರ್ಪಿತವಾಗುತ್ತಿದೆ ಎಂದರು. ಈ ಹಿಂದೆ…

Read More

ಬೆಂಗಳೂರು :  ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು  ಇಂದು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು  ಆಯೋಜಿಸಲಾಗಿದ್ದ 22 ನೇ ಚಿತ್ರ ಸಂತೆ ಯನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ರಾಜ್ಯ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು  ಚಿತ್ರ ಕಲಾ ಪರಿಷತ್ತು ಮಾಡುತ್ತಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಚಿತ್ರಸಂತೆ ಆಯೋಜಿಸಿದ್ದ  ಎಲ್ಲಾ ಪದಾಧಿಕಾರಿಗಳನ್ನು  ಅಭಿನಂದಿಸಿದರು. ಚಿತ್ರಸಂತೆಯಲ್ಲಿ 22 ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ.ಜಗತ್ತಿನ ಯಾವ ಭಾಗದಲ್ಲಿಯೂ ಚಿತ್ರಸಂತೆ ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಟ ನಡೆಯುವುದು ಹೆಮ್ಮೆಯ ಸಂಗತಿ ಎಂದರು. ಕಲಾವಿದರಿಗೆ ವೇದಿಕೆ: ಅನೇಕ ಚಿತ್ರಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆಯನ್ನು ಪ್ರದರ್ಶಿಸಿ ಆಸಕ್ತರಿಗೆ…

Read More