Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ತುಮಕೂರು: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತಾಧಿಕಾರಿ(ವಿ.ಎ.)ಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟವಾಗಿರುವ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪರಿಷ್ಕೃತ ಆಯ್ಕೆ ಪಟ್ಟಿಯನ್ವಯ 1:3 ಅನುಪಾತದಲ್ಲಿ ಜನವರಿ 6ರಂದು ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಬಹು ಉಪಯೋಗಿ ಸಭಾಂಗಣದಲ್ಲಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶನಿವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ತಾತ್ಕಾಲಿಕ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ದಾಖಲಾತಿ ಪರಿಶೀಲನೆಗೆ ಹಾಜರಾಗುವಂತೆ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ಕಳುಹಿಸಲಾಗಿದೆ. ದಾಖಲಾತಿ ಪರಿಶೀಲನಾ ಕಾರ್ಯವು ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ. ದಾಖಲಾತಿಗಳ ಪರಿಶೀಲನೆಗಾಗಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನೊಳಗೊಂಡ 7 ತಂಡಗಳನ್ನು ರಚಿಸಲಾಗಿದೆ. ಸಾಮಾನ್ಯ ಅಭ್ಯರ್ಥಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಂಗವಿಕಲ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಅಧಿಕಾರಿಗಳ ತಂಡ ಪ್ರತ್ಯೇಕವಾಗಿ ಪರಿಶೀಲಿಸಲಿದೆ…
ತುಮಕೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಜಿಲ್ಲೆಯ ಎಲ್ಲಾ 2627 ಮತಗಟ್ಟೆ, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದೆಂದು ತುಮಕೂರು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಶಿವಕುಮಾರ್ ಕೆ.ಬಿ. ತಿಳಿಸಿದರು. ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ರ ಸಂಬಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯನ್ನು ceo.karnataka.gov.in ಮತ್ತು tumkur.nic.in ವೆಬ್ ಸೈಟ್‌ಗಳಲ್ಲಿಯೂ ಪ್ರಚುರಪಡಿಸಲಾಗುವುದು ಎಂದು ತಿಳಿಸಿದರು. ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷ, 11,65,030 ಮಹಿಳೆ ಹಾಗೂ 88 ಇತರೆ ಸೇರಿ ಒಟ್ಟು 23,05,502 ಮತದಾರರಿದ್ದಾರೆ. ರಾಜ್ಯದ ಜೆಂಡರ್ ರೇಷಿಯೋ 1001 ಇದ್ದು, ಜಿಲ್ಲೆಯ ಜೆಂಡರ್ ರೇಷಿಯೋ 1022 ಇರುವುದನ್ನು ಗಮನಿಸಿದ ಅವರು, ಜಿಲ್ಲೆಯ ಶಿರಾ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿಕೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಂಡರ್ ರೇಷಿಯೋ ರಾಜ್ಯದ…
ತುಮಕೂರು : ಜಿಲ್ಲೆಯ ಪಾವಗಡ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜನವರಿ 8ರಂದು ಬೆಳಿಗ್ಗೆ 11 ಗಂಟೆಗೆ “ಸಾರ್ವಜನಿಕ ಕುಂದು ಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಲಕ್ಷ್ಮೀನಾರಾಯಣ ಎ.ವಿ. ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಾವಯವ ಮೇಳ–2025ರ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ‘ಸಿರಿಧಾನ್ಯ ನಡಿಗೆ’ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ತುಮಕೂರು ವಿಶ್ವವಿದ್ಯಾನಿಲಯದ ಮುಂಭಾಗದಲ್ಲಿ ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ದೇಶದಲ್ಲಿ ಹಸಿರು ಕ್ರಾಂತಿ ನಂತರ ಸಿರಿಧಾನ್ಯ ಬಳಕೆ ಮತ್ತು ಬೆಳೆಯುವುದು ಕಡಿಮೆಯಾಗಿದೆ. ನಮ್ಮ ಹಿರಿಯರು ಹೆಚ್ಚು ಸಿರಿಧಾನ್ಯವನ್ನು ಬಳಕೆ ಮಾಡುತ್ತಿದ್ದುದರಿಂದ ಉತ್ತಮ ಆರೋಗ್ಯವನ್ನು ಹೊಂದಿದ್ದರು. ಸಿರಿಧಾನ್ಯದಲ್ಲಿ ಅಧಿಕ ನಾರಿನಂಶ ಇರುವುದರಿಂದ ಆರೋಗ್ಯದಾಯಕ. ಆರೋಗ್ಯದ ಹಿತದೃಷ್ಟಿಯಿಂದ ಸಿರಿಧಾನ್ಯವನ್ನು ಹೆಚ್ಚು ಹೆಚ್ಚು ಬಳಸಿ ಆರೋಗ್ಯವಂತರಾಗಬೇಕು ಎಂದು ಅವರು ಹೇಳಿದರು. ನೀರಿನ ಸಮಸ್ಯೆ ಇರುವ ಪ್ರದೇಶದಲ್ಲಿಯೂ ಸಿರಿಧಾನ್ಯವನ್ನು ಬೆಳೆಯಬಹುದು. ಹಾಗಾಗಿ ರೈತರು ಮಳೆಯಾಶ್ರಿತ ಪ್ರದೇಶದಲ್ಲಿ ಸಿರಿಧಾನ್ಯವನ್ನು ಬೆಳೆಯಲು ಮುಂದಾಗಬೇಕು ಎಂದು ಅವರು ಕರೆ ನೀಡಿದರು. ವಿಶ್ವದಾದ್ಯಂತ ಸಿರಿಧಾನ್ಯ ಬಳಕೆ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹಿಸುವ ಸಲುವಾಗಿ…
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸೌಲಭ್ಯ ನೀಡಲು ಅರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು 2024–25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ವ್ಯಾಸಂಗ ಮಾಡುತ್ತಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದವರು ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಲು ಜನವರಿ 15 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖಾ ಜಾಲತಾಣ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ವತಿಯಿಂದ ಜಿಲ್ಲೆಯ ವಿಕಲಚೇತನ ಫಲಾನುಭವಿಗಳಿಗೆ ಜನವರಿ 1 ರಿಂದ ರಿಯಾಯಿತಿ ದರದಲ್ಲಿ ಬಸ್‌ಪಾಸುಗಳನ್ನು ವಿತರಣೆ ಮಾಡುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ. ಹೊಸದಾಗಿ ಬಸ್ ಪಾಸ್ ಪಡೆಯುವ ಫಲಾನುಭವಿಗಳು ಕೆಎಸ್ ಆರ್ ಟಿಸಿ ವಿಭಾಗೀಯ ಕಚೇರಿ ಸಂಚಾರಿ ಶಾಖೆಯಲ್ಲಿ ಪಡೆಯಬಹುದಾಗಿದೆ ಹಾಗೂ 2024ನೇ ಸಾಲಿನಲ್ಲಿ ಪಡೆದಿರುವ ಪಾಸುಗಳ ನವೀಕರಣ ಕಾರ್ಯವು ಆಯಾ ತಾಲ್ಲೂಕು ಮಟ್ಟದ ಘಟಕಗಳಲ್ಲಿ ನವೀಕರಣ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 2024ರವರೆಗೆ ಮಾನ್ಯ ಮಾಡಿರುವ ಪಾಸುಗಳನ್ನು 2025ರ ಫೆಬ್ರವರಿ 28ರವರೆಗೆ ಮಾನ್ಯತೆಗೆ ಅವಕಾಶವನ್ನು ನೀಡಿದ್ದು, ನೂತನ ಪಾಸುಗಳಿಗೆ ಕಾಲಮಿತಿ ಇರುವುದಿಲ್ಲ. ಅರ್ಹ ಫಲಾನುಭವಿಗಳು ವಿಕಲಚೇತನ ರಿಯಾಯಿತಿ ಬಸ್‌ಪಾಸುಗಳನ್ನು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ಮೂಲಕ ಅರ್ಜಿ ಸಲ್ಲಿಸಿ ಪಾಸುಗಳನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜನವರಿ 26ರಂದು ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜನವರಿ 26ರ ಗಣರಾಜ್ಯೋತ್ಸವದಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಧ್ವಜಾರೋಹಣ ನೆರವೇರಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಗೆ ಸೂಚಿಸಿದರು. ಗಣರಾಜ್ಯೋತ್ಸವವನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳನ್ನೊಳಗೊಂಡ ಸ್ವಾಗತ, ಪೆರೇಡ್, ಕ್ರೀಡಾಂಗಣ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಕಾರ್ಯೋನ್ಮುಖರಾಗಲು ನಿರ್ದೇಶನ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಎನ್ ಸಿಸಿ, ಅಗ್ನಿಶಾಮಕ, ಪೊಲೀಸ್ ಇಲಾಖೆ, ಗೃಹರಕ್ಷಕದಳದವರಿಂದ ಆಕರ್ಷಕ ಕವಾಯತು ಏರ್ಪಡಿಸಬೇಕು. ಕವಾಯತಿಗಾಗಿ ಜನವರಿ 22 ರಿಂದ 24ರವರೆಗೆ ತಾಲೀಮು…
ಗುಬ್ಬಿ: ರೈಲ್ವೆ ಪೊಲೀಸ್ ಸೇರಿದಂತೆ ಮತ್ತೊಬ್ಬ ಊರಿನ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಲಿನ ಗಾಡಿಯಲ್ಲಿ ಕೇಳಿಬರುತ್ತಿದ್ದ ಅಂಬೇಡ್ಕರ್ ಅವರ ಜೈ ಭೀಮ್ ಹಾಡು ಕೇಳಿ ಆಕ್ರೋಶಗೊಂಡು ವಾಹನ ತಡೆದು ಈ ಹಾಡು ಹಾಕದಂತೆ ವಾಹನದಲ್ಲಿದ್ದ ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮರ್ಮಾಂಗಕ್ಕೆ ಗಂಭೀರವಾಗಿ ಹೊಡೆದು ಜೊತೆಗೆ ಜಾತಿ ನಿಂದನೆ ಮಾಡಿರುವ ಘಟನೆಯ ಬಗೆಗಿನ ಆರೋಪ ತಾಲೂಕಿನ ಕಸಬಾ ಹೋಬಳಿಯ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕಸಬಾ ಹೋಬಳಿ ಮುದ್ದನಹಳ್ಳಿ ಗ್ರಾಮದ ಗೊಲ್ಲ ಸಮುದಾಯದ ರೈಲ್ವೆ ಇಲಾಖೆ ಪೊಲೀಸ್ ಅಧಿಕಾರಿ ಚಂದ್ರಶೇಖರ್ ಮತ್ತು ಮತ್ತೊಬ್ಬ ವ್ಯಕ್ತಿ ನರಸಿಂಹರಾಜು ಎಂಬಾವರು ಜಾತಿ ನಿಂದನೆ ಮಾಡಿ ದಲಿತ ಯುವಕನ ಮರ್ಮಾಂಗಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವ ವ್ಯಕ್ತಿಗಳು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದ್ದು, ಹಲ್ಲೆಗೊಳಗಾದ 19 ವರ್ಷದ ದೀಪು ಎಂಬಾತ ತುಮಕೂರು ಗ್ರಾಮಾಂತರದ ಸಿರಿವರ ಗ್ರಾಮದ ದಲಿತ ಸಮುದಾಯದ ಯುವಕ ಎನ್ನಲಾಗಿದ್ದು, ಈತ ಸೇರಿದಂತೆ ಮತ್ತೊಬ್ಬ ನರಸಿಂಹ ಮೂರ್ತಿ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…
ತುಮಕೂರು:ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್‌ಪ್ರದಾನ ಮಾಡಲಾಯಿತು. ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್ ಈ ವೇಳೆ ಉಪಸ್ಥಿತರಿದ್ದರು. ಸ್ವಾಮೀಜಿ ಅವರಿಗೆ ತುಮಕೂರು ವಿವಿಯ 17ನೇ ಘಟಿಕೋತ್ಸವದಲ್ಲಿಗೌರವ ಡಾಕ್ಟರೇಟ್‌ಘೋಷಣೆ ಮಾಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸ್ವಾಮೀಜಿ ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಗೌರವಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಚುನಾವಣೆಯಲ್ಲಿ ತಳ ಸಮುದಾಯದ ಮತಗಳನ್ನು ಪಡೆಯುವ ಪಕ್ಷಗಳು, ಚುನಾವಣೆಯ ನಂತರ ಆ ಸಮುದಾಯಗಳಿಗೆ ನೀಡಿದ ಭರವಸೆಗಳನ್ನು, ಹಿತವನ್ನು ಮರೆಯುತ್ತಾರೆ. ರಾಜಕೀಯ ಇಚ್ಛಾಶಕ್ತಿ ಹಾಗೂ ಅಸಂಘಟನೆಯ ಕೊರತೆಯಿಂದಾಗಿ ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ. ನೀತಿಯಿಂದ ಮನುಷ್ಯನ ವ್ಯಕ್ತಿತ್ವವನ್ನು ಅಳೆದಾಗ ಸಮ ಸಮಾಜ ರೂಪುಗೊಳ್ಳಲಿದೆ ಎಂದರು. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಪ್ರಸನ್ನಾನಂದ ಸ್ವಾಮೀಜಿ ಅವರು ಗದಗ ಜಿಲ್ಲೆಯ ಹಿರೇಮಣ್ಣೂರಿನವರು ಶಾಲಾ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಮನಸ್ಸು ಧಾರ್ಮಿಕತೆಯ ಕಡೆ ಸೆಳೆಯಲ್ಪಟ್ಟು ಸನ್ಯಾಸದ ಮೂಲಕ ಪಾರಮಾರ್ಥಿಕ…
ಶಿವನಿಗೆ ಸೋಮವಾರದ ವಿಶೇಷ ಪೂಜೆ ಅರ್ಪಿಸುವುದನ್ನು ನೀವು ಕೇಳಿರುತ್ತೀರಿ. ಆದರೆ, ಸೋಮವಾರವೇ ಯಾಕೆ ಶಿವನಿಗೆ ಪೂಜೆ ಸಲ್ಲಿಸುತ್ತಾರೆ ಅನ್ನೋದು ಸಾಕಷ್ಟು ಜನರಿಗೆ ತಿಳಿದೇ ಇಲ್ಲ. ಎಲ್ಲ ದಿನಗಳೂ ಭಕ್ತಿಗೆ, ಆರಾಧನೆಗೆ ಪವಿತ್ರವಾದುದ್ದೇ ಆದರೂ ಸೋಮವಾರದ ವಿಶೇಷ ಪೂಜೆ ಶಿವನಿಗೆ ಪ್ರಿಯವಾದದ್ದು ಎನ್ನುವುದನ್ನು ತಿಳಿಯೋಣ… ಸೋಮವಾರ ಶಿವನಿಗೆ ವಿಶೇಷ ಯಾಕಂದ್ರೆ, ಶಿವನ ಹೆಸರಿನಲ್ಲೇ ಆ ದಿನದ ಗುಟ್ಟು ಇದೆ. ಸೋಮ ಅಂದ್ರೆ ಚಂದ್ರ ಎಂದು ಅರ್ಥ. ಇನ್ನೊಂದು ಅರ್ಥ ಶಾಂತ ಎನ್ನುವ ಸ್ವಭಾವವನ್ನು ಸಂಕೇತಿಸುತ್ತದೆ. ಶಿವನನನ್ನು ಪಡೆಯಲು ಪಾರ್ವತಿಯು 16 ಸೋಮವಾರಗಳ ಕಠಿಣ ತಪಸ್ಸು ಮಾಡಿದಳಂತೆ. ಇದರಿಂದಾಗಿ ಶಿವನು ಪಾರ್ವತಿಯ ತಪಸ್ಸಿಗೆ ಮೆಚ್ಚಿ, ಆಕೆಯನ್ನು ಪತ್ನಿಯಾಗಿ ಸ್ವೀಕರಿಸಿದ್ದನಂತೆ ಎನ್ನುವುದು ಒಂದು ಕಥೆಯಾಗಿದೆ. ಅಂದಿನಿಂದ ಇಂದಿನ ವರೆಗೂ ಸೋಮವಾರದಂದು ಉಪವಾಸವನ್ನು ಆಚರಿಸಿದರೆ ಶಿವ ಒಲಿಯುತ್ತಾನೆ ಎನ್ನುವ ನಂಬಿಕೆ ಬೆಳೆದುಕೊಂಡು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…