Author: admin

ಬೆಂಗಳೂರು: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಅವರ ಮಾತಿನ ಸಮರ ಮುಂದುವರಿದಿದೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ  ಬಿಜೆಪಿ ರಾಜ್ಯಾಧ್ಯಕ್ಷ ಎಂಬ ಕಾರಣಕ್ಕೆ ಬಿ.ವೈ.ವಿಜಯೇಂದ್ರ ಅವರಿಗೆ ಗೌರವ ನೀಡಲಾಗುತ್ತದೆ. ಬಾಯಿಗೆ ಬಂದಂತೆ ಮಾತನಾಡಿದರೆ ಸಹಿಸಲಾಗುವುದಿಲ್ಲ. ನಾವು ಬೀದಿಗಿಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತದೆ ಎಚ್ಚರಿಕೆ ನೀಡಿದ್ದಾರೆ. ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸುಪಾರಿ ನೀಡಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆರೋಪಕ್ಕೆ ತಿರುಗೇಟು ನೀಡಿದ  ಪ್ರಿಯಾಂಕ್ ಖರ್ಗೆ, ಸಚಿನ್ ಪಾಂಚಾಳ್ ಕುಟುಂಬದ ಸದಸ್ಯರ ಮೇಲೆ ಬಿಜೆಪಿಯವರು ಒತ್ತಡ ಹೇರುತ್ತಿದ್ದಾರೆ. ಪ್ರಕರಣದ ದಿಕ್ಕು ತಪ್ಪಿಸುವ ಹುನ್ನಾರ ನಡೆಯುತ್ತಿದೆ. ಈಗಾಗಲೇ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಾಗುತ್ತಿದೆ. ಸ್ಥಳ ಮಹಜರು ನಡೆದಿದೆ. ಪಾರದರ್ಶಕ ತನಿಖೆ ನಡೆಯಲಿದೆ ಎಂದು ತಾವು ಸಚಿನ್ ಕುಟುಂಬದ ಸದಸ್ಯರಿಗೆ ಭರವಸೆ ನೀಡಿದ್ದೇನೆ ಎಂದರು. ಹೆಚ್ಚುವರಿ ಪ್ರಕರಣಗಳನ್ನು ನಮ್ಮ ತನಿಖೆಗೆ ವಹಿಸಬೇಡಿ ಎಂದು ಸಿಬಿಐ ರಾಜ್ಯಗಳಿಗೆ ಪತ್ರ ಬರೆದು…

Read More

ತುಮಕೂರು: ಜಿಲ್ಲೆಯ ಬುಗುಡನಹಳ್ಳಿ ಮತ್ತು ಹೆಬ್ಬಾಕ ಕೆರೆಗಳಿಗೆ ತ್ಯಾಜ್ಯ ಸುರಿಯುವ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ಕುರಿತಾಗಿ ಕಾನೂನು ಕ್ರಮಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಡಮರುಗ ಉಮೇಶ್ ಮಾಲಿನ್ಯ ನಿಯಂತ್ರಣ ಮಂಡಳಿ, ಮಹಾನಗರ ಪಾಲಿಕೆ, ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜನವರಿ 3ರ ಶುಕ್ರವಾರ, ಮಧ್ಯಾಹ್ನ ವಾಹನವೊಂದರಲ್ಲಿ ತ್ಯಾಜ್ಯ ತಂದು ಕೆರೆಗೆ ಸುರಿಯುತ್ತಿರುವ ಸಂದರ್ಭದಲ್ಲಿ ಚಿತ್ರೀಕರಿಸಿದ ವಿಡಿಯೋ ಸಾಕ್ಷಿಯೊಂದಿಗೆ, ತಕ್ಷಣದ ಕ್ರಮ ಕೈಗೊಳ್ಳುವಂತೆ ಉಮೇಶ್ ಮನವಿ ಮಾಡಿದ್ದಾರೆ. ತ್ಯಾಜ್ಯ ಸುರಿಯುವ ಪ್ರಕರಣಗಳು ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತಿದ್ದು, ಕುಡಿಯುವ ನೀರನ್ನು ಮಾಲಿನ್ಯಗೊಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ.100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕೆ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅವರಿಗೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿದ್ದ ಭೂಮಿಯನ್ನು ವಶಕ್ಕೆ ಪಡೆದು ಕೆ ಐ ಡಿ ಬಿ ಅವರು ಒದಗಿಸಬೇಕು. ನಾಗನಹಳ್ಳಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಭೂಮಿ ಪಡೆಯುವ ಕಾರ್ಯವನ್ನು ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಲ ಜೀವನ್ ಮಿಷನ್ ಯೋಜನೆಯು ಪ್ರತಿ ಮನೆಗೂ ಮೂಲಕ…

Read More

ಬಿಜಾಪುರ್: ಗುತ್ತಿಗೆದಾರನೊಬ್ಬನ ಭ್ರಷ್ಟಾಚಾರ ಬಯಲಿಗೆಳೆದಿದ್ದ ಪತ್ರಕರ್ತನ ಶವ, ಅದೇ ಗುತ್ತಿಗೆದಾರನಿಗೆ ಸೇರಿದ ಸ್ಥಳದ ಸೆಪ್ಟಿಕ್ ಟ್ಯಾಂಕ್ನಲ್ಲಿ ಪತ್ತೆಯಾಗಿರುವ ಘಟನೆ ಛತ್ತೀಸ್ಗಡದಲ್ಲಿ ನಡೆದಿದೆ. ಹವ್ಯಾಸಿ ಪತ್ರಕರ್ತ ಮುಕೇಶ್ ಚಂದ್ರಕಾರ್(28) ಹತ್ಯೆಗೀಡಾಗಿರುವ ಪತ್ರಕರ್ತನಾಗಿದ್ದಾನೆ. ಇವರ ಮೃತದೇಹ ಶುಕ್ರವಾರ ಸಂಜೆ ಬಿಜಾಪುರ್ ಜಿಲ್ಲೆಯ ಚಟ್ಟನಪರ ಬಸ್ತಿ ಎಂಬಲ್ಲಿ ಪತ್ತೆಯಾಗಿದೆ. ಗುತ್ತಿಗೆದಾರ ಸುರೇಶ್ ಚಂದ್ರಕಾರ್ ಎಂಬಾತನ ಅಕ್ರಮಗಳ ವಿರುದ್ಧ ತನಿಖಾ ವರದಿಗಳನ್ನು ಪ್ರಕಟಿಸಿದ್ದ ಮುಕೇಶ್, ಬಸ್ತಾರ್ ನಲ್ಲಿನ 120 ಕೋಟಿ ರೂ ಮೊತ್ತದ ರಸ್ತೆ ನಿರ್ಮಾಣ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿರುವುದನ್ನು ಬಯಲಿಗೆಳೆದಿದ್ದರು. ಈ ವರದಿ ಹಿನ್ನೆಲೆ ಗುತ್ತಿಗೆದಾರನ ವಿರುದ್ಧ ತನಿಖೆಗೆ ಸರ್ಕಾರದ ಮೇಲೆ ಒತ್ತಡ ಬಂದಿತ್ತು. ಇದರ ಬೆನ್ನಲ್ಲೇ ಜನವರಿ 1ರಂದು ಪತ್ರಕರ್ತ ಮುಖೇಶ್ ನಾಪತ್ತೆಯಾಗಿದ್ದರು. ಹೀಗಾಗಿ ಮುಕೇಶ್ ಅವರ ಅಣ್ಣ ಯುಕೇಶ್ ಚಂದ್ರಕಾರ್ ಅವರು ಪೊಲೀಸರಿಗೆ ಕಾಣೆ ದೂರು ಸಲ್ಲಿಸಿದ್ದರು. ಮಾತುಕತೆಗಾಗಿ ಚಟ್ಟನಪರದಲ್ಲಿನ ಸುರೇಶ್ನ ಸ್ಥಳಕ್ಕೆ ತೆರಳಿದ್ದ ಮುಕೇಶ್, ಅದೇ ಜಾಗದಲ್ಲಿನ ನೀರಿನ ಟ್ಯಾಂಕ್ ನಲ್ಲಿ ಜನವರಿ 3ರಂದು ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಕಾರ್ಯಾಚರಣೆ…

Read More

ಬೆಂಗಳೂರು:  ಭಾರತೀಯ ಜೈನ್ ಮಿಲನ್ ವಲಯ–8 ರ ಜಿನ ಭಜನಾ ಕಾರ್ಯಕ್ರಮದ ಸೆಮಿ ಫೈನಲ್ ಗೆ ಇಂದು  ಸ್ವಯಂ ಭೂ ಸ್ತೋತ್ರದ ನಾಟಕ ಪ್ರದರ್ಶನದ ಮೂಲಕ ಚಾಲನೆ ನೀಡಲಾಯಿತು. ಭಾರತೀಯ ಜೈನ್ ಮಿಲನ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಬೆಂಗಳೂರು  ತ್ಯಾಗಿಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಹಾಗೂ ಭಾರತೀಯ ಜೈನ್ ಮಿಲನ ರಾಷ್ಟ್ರೀಯ  ಕಾರ್ಯಾಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ಹಾಗೂ ಶ್ರದ್ಧಾ ಅಮಿತ್ ರವರ ನೇತೃತ್ವದಲ್ಲಿ ಸೆಮಿ ಫೈನಲ್ ಗೆ ಚಾಲನೆ ನೀಡಲಾಯಿತು. ಜೀವಿಯ ಪರಿಪೂರ್ಣತೆ ಮತ್ತು ಶುದ್ದಿ ,ಕಾಂಚಿಪುರಂ ಜಿನ ಕಂಚಿ ಯಾದ ಬಗ್ಗೆ ಈ ಪ್ರದರ್ಶನದಲ್ಲಿ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ  ಅನಂತಕುಮಾರಿ ಅವರು ಬರೆದ 51 ಜಿನ ಭಜನೆಗಳಿರುವ  ಪುಸ್ತಕವನ್ನು ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಬೆಂಗಳೂರು ತ್ಯಾಗಿ ಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಅವರು ಪುಸ್ತಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಡಾ. ಪ್ರೇಮಕುಮಾರಿ ತಿಮ್ಮಪ್ಪ, ಭಾರತೀಯ ಜೈನ್ ಮಿಲನ್ ನ…

Read More

ಬೀದರ್: ಬೀದರ್ ಜಿಲ್ಲೆಯ 4 ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಮ್ಮ ಠಾಣಾ ವ್ಯಾಪ್ತಿಯಲ್ಲಿ 5 ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಜೂಜಾಟ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಮಟ್ಕಾ ಜೂಜಾಟದಲ್ಲಿ ತೊಡಗಿದವರ ಮೇಲೆ ದಾಳಿ ಮಾಡಿ ಮೊತ್ತ 4,480 ರೂಪಾಯಿಗಳನ್ನು ವಶ ಪಡಿಸಿಕೊಂಡು 6 ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆ ನಡೆಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 9ರಂದು ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್ ನಲ್ಲಿ ‘ಬೃಹತ್ ಉದ್ಯೋಗ ಮೇಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ ತುಮಕೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ, ಉದ್ಯೋಗ ಮೇಳದ ಪ್ರಯೋಜನವನ್ನು ಪಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2278488 / 2255652, ಮೊ.ಸಂ. 9071021143, 9513136642, 9035549147, 9900412819, 9972131971, 9448989874, 8123503008ನ್ನು ಸಂಪರ್ಕಿಸಬಹುದಾಗಿದೆ. ಮೇಳದಲ್ಲಿ ಎಂ.ಎಸ್ಸಿ ಕೆಮಿಸ್ಟ್ರಿ–4 ಹುದ್ದೆ; ಎಂ.ಕಾಂ. ಮತ್ತು ಎಂ.ಬಿ.ಎ-200; ಎಂ.ಫಾರ್ಮ–55; ಎಂ.ಎ.ಬಿಎಡ್./ ಎಂ.ಎಸ್.ಸಿ.ಬಿಎಡ್–15; ಬಿ.ಇ.(ಮೆಕ್ಯಾನಿಕಲ್, ಇಇಇ, ಸಿವಿಲ್, ಇಸಿಇ, ಸಿಎಸ್)-154; ಬಿ.ಎ., ಬಿ.ಕಾಂ. ಬಿ.ಎಸ್ಸಿ, ಬಿ.ಸಿ.ಎ., ಬಿ.ಬಿ.ಎಂ., ಬಿ.ಫಾರ್ಮ್–1140; ಡಿಪ್ಲೋಮಾ(ಮೆಕ್ಯಾನಿಕಲ್, ಇಇಇ, ಇಸಿಇ, ಸಿಎಸ್, ಟೂಲ್ ಅಂಡ್ ಡೈ ಮೇಕಿಂಗ್, ಐಟಿಐ(ಯಾವುದೇ ಟ್ರೇಡ್))–657; ಎಸ್.ಎಸ್.ಎಲ್.ಸಿ./ಪಿಯುಸಿ–1010 ಹುದ್ದೆ ಸೇರಿದಂತೆ ಸುಮಾರು 3535 ಹುದ್ದೆಗಳ ಭರ್ತಿ ಹಾಗೂ ದೈಹಿಕ ವಿಕಲಚೇತನರಿಗೆ…

Read More

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ(ದಿನಾಂಕ: 10.01.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಹೆಚ್.ಡಿ. ಪ್ರಾರಂಭಿಸಿರಬೇಕು) ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ–1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್–ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 20 ಕಡೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತುಮಕೂರು ಅಥವಾ ಇಲಾಖಾ ವೆಬ್ ಸೈಟ್ https://bcwd.karnataka.gov.in ಅಥವಾ ದೂ.ವಾ.ಸಂ. 080–8050770004/ 0816–2955528ನ್ನು ಸಂಪರ್ಕಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ನವದೆಹಲಿ: ಚೀನಾದಲ್ಲಿ ಆತಂಕ ಸೃಷ್ಟಿಸಿರುವ ಹ್ಯೂಮನ್‌ ಮೆಟಾನ್ಯೂಮೊವೈರಸ್‌ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯ ತಿಳಿಸಿದೆ. ಹ್ಯೂಮನ್‌ ಮೆಟಾನ್ಯೂಮೊವೈರಸ್  ಇತರೆ ವೈರಸ್‌ ಗಳಂತೆ ಜನರಿಂದ ಜನರಿಗೆ ಹರಡಲಿದೆ. ಸಾಮಾನ್ಯವಾಗಿ ಶೀತ ಉಂಟು ಮಾಡಲಿದೆ. ಸಣ್ಣಮಟ್ಟದ ಉಸಿರಾಟದ ಸಮಸ್ಯೆ ತರಬಹುದು ಅಷ್ಟೆ. ಜೀವ ಹಾನಿ ಮಾಡುವಷ್ಟು ಅಪಾಯಕಾರಿಯಲ್ಲ. ಸದ್ಯಕ್ಕೆ ಭಾರತದಲ್ಲಿ ಎಚ್‌ಎಂಪಿವಿ ವೈರಸ್‌ ಸೋಂಕಿನ ಪ್ರಕರಣಗಳು ಕಂಡು ಬಂದಿಲ್ಲ. ಭಯಪಡುವ ಅಗತ್ಯವಿಲ್ಲ ಎಂದು ನಿರ್ದೇಶನಾಲಯದ ಮುಖ್ಯಸ್ಥ ಡಾ.ಅತುಲ್‌ ಗೋಯಲ್‌ ಹೇಳಿದ್ದಾರೆ. ಚೀನಾದಲ್ಲಿ ಪತ್ತೆಯಾಗಿರುವ ವೈರಸ್‌, ಭಾರತದ ಮಟ್ಟಿಗೆ ತೀರ ಗಂಭೀರವಾದ ಪರಿಣಾಮ ಬೀರಲ್ಲ. ಸಾಮಾನ್ಯ ವೈರಸ್‌ ಗಳಂತೆ ಜ್ವರದಂತಹ ರೋಗ ಲಕ್ಷಣ ಉಂಟು ಮಾಡಬಹುದಾಗಿದೆ. ವಯೋವೃದ್ಧರು ಹಾಗೂ ಒಂದು ವರ್ಷದೊಳಗಿನ ಮಕ್ಕಳಲ್ಲಿಹೆಚ್ಚು ಕಂಡು ಬರುವ ಸಾಧ್ಯತೆಗಳಿವೆ ಎಂದು ಗೋಯಲ್‌ ಎಚ್ಚರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ ಗೆ  ಹಲವಾರು ಜಾಗತಿಕ ನಾಯಕರು ಉಡುಗೊರೆ ನೀಡಿದ್ದಾರೆ. ಈ ಪೈಕಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ  ಉಡುಗೊರೆ ಅತ್ಯಂತ ದುಬಾರಿ ಉಡುಗೊರೆಯಾಗಿ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿ 17 ಲಕ್ಷ ರೂಪಾಯಿ ಮೌಲ್ಯದ ವಜ್ರವನ್ನು ಉಡುಗೊರೆಯಾಗಿ ನೀಡಿದ್ದರು. ಇದರ ಬೆಲೆ ಇದೀಗ ಬಹಿರಂಗಗೊಂಡಿದೆ. ಅಮೆರಿಕದ ಕಾನೂನಿನ ಪ್ರಕಾರ, 41 ಸಾವಿರ ರೂಪಾಯಿಗಿಂತ ಹೆಚ್ಚಿನ ಉಡುಗೊರೆ ಪಡೆದರೆ ಅದರ ಮೌಲ್ಯವನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿದೆ, ಹೀಗಾಗಿ ಇದೀಗ ಪ್ರಧಾನಿ ನೀಡಿದ ಉಡುಗೊರೆಯ ಬೆಲೆ ತಿಳಿದು ಬಂದಿದೆ. ಅಮೆರಿಕದ ಅಧ್ಯಕ್ಷ  ಹಾಗೂ ಅವರ ಪತ್ನಿಗೆ ವಿದೇಶಿ ನಾಯಕರು ನೀಡುವ ಉಡುಗೊರೆಗಳನ್ನು ಸಂಗ್ರಹಾಲಯಗಳಲ್ಲಿ ಇಡಲಾಗುತ್ತದೆ. ಪ್ರಧಾನಿ ಮೋದಿ ನೀಡಿದ್ದ 7.5 ಕ್ಯಾರೆಟ್ ನ ವಜ್ರವನ್ನು ವೈಟ್ ಹೌಸ್ ನ ಈಸ್ಟ್ ವಿಂಗ್ ನಲ್ಲಿ ಉಳಿಸಿಕೊಳ್ಳಲಾಗಿದೆಯಂತೆ. ಈ ದುಬಾರಿ ಉಡುಗೊರೆಗಳನ್ನು ರಾಷ್ಟ್ರೀಯ ಸಂಗ್ರಹಾಗಾರದಲ್ಲಿ ಇಡಲಾಗುತ್ತದೆ. ಅಥವಾ ಪ್ರದರ್ಶನಕ್ಕಿಡಲಾಗುತ್ತದೆ. ಒಂದು ವೇಳೆ ಉಡುಗೊರೆ ಪಡೆದವರು…

Read More