Author: admin

ತುಮಕೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್‌ ಬಿಐ ಮತ್ತು ಇತರೆ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿಯನ್ನು ನೀಡಲಾಗುವುದು. ಆಸಕ್ತರು ಜನವರಿ 8ರೊಳಗಾಗಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821–2515944ನ್ನು ಸಂಪರ್ಕಿಸಬೇಕೆಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಮಧುಗಿರಿ ಡಿವೈಎಸ್ ಪಿ ರಾಸಲೀಲೆ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ರಾಮಚಂದ್ರಪ್ಪ‌ ನನ್ನು ನಿನ್ನೆ ರಾತ್ರಿ ಬಂಧಿಸಿದ ಮಧುಗಿರಿ ಪೊಲೀಸರು ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದರು. ರಾಮಚಂದ್ರಪ್ಪ ನನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಮಧುಗಿರಿ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು. ಮಧುಗಿರಿ ಪೊಲೀಸ್ ಠಾಣೆಯಲ್ಲಿಯೇ ರಾತ್ರಿಯಿಡಿ ಕುಳಿತಿದ್ದ ರಾಮಚಂದ್ರಪ್ಪ. ಸಂತ್ರಸ್ತ ಮಹಿಳೆಯಿಂದ ದೂರು ಪಡೆದ ಮಧುಗಿರಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ನಂತರ ಡಿವೈಎಸ್ ಪಿಯನ್ನ ಬಂಧಿಸಿ ಕೆಲಸಮಯ  ಮಧುಗಿರಿ ಪೊಲೀಸ್ ಠಾಣೆಯಲ್ಲಿ ಕೂರಿಸಿ ವಿಚಾರಣೆ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಕೊರಟಗೆರೆ: ಮಿನಿ ಲಾಲ್‌ ಬಾಗ್‌ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು  ಕುರಿಗಳಂತೆ ಟಾಟಾ ಎಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದು, ಈ ವೇಳೆ ವಾಹನ ಪಲ್ಟಿಯಾದ ಪರಿಣಾಮ  15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ. ಚಿಂಪುಗಾನಹಳ್ಳಿ ಸರಕಾರಿ ಪ್ರಾಥಮಿಕ ಪಾಠಶಾಲೆಯಿಂದ ದೊಡ್ಡಸಾಗ್ಗೆರೆ ಬಳಿಯ ಮಿನಿ ಲಾಲ್‌ ಬಾಗ್ ವೀಕ್ಷಣೆಗೆ  ಶಾಲಾ ಆಡಳಿತ ಮಕ್ಕಳನ್ನು ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ.  ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ವಾಹನ ಮಗುಚಿ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಕ್ಕಳು ರಸ್ತೆಗೆಸೆಯಲ್ಪಟ್ಟಿದ್ದು, ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿಗಳು ನರಳಾಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕೋಳಾಲ ಪಿಎಸೈ ಯೋಗೀಶ್ ಮಕ್ಕಳನ್ನು ತಾವೇ ಎತ್ತಿ ತಮ್ಮ ಕಾರಿನಲ್ಲೇ ದೊಡ್ಡ ಸಾಗ್ಗೆರೆ ಹಾಗೂ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಈ ಘಟನೆಯಲ್ಲಿ ಶಿಕ್ಷಣ ಇಲಾಖೆ…

Read More

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ(ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ)ಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶಾತಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗದವರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಇತರೆ ಹಿಂದುಳಿದ ವರ್ಗಕ್ಕೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು–572102 ಅಥವಾ ದೂ.ವಾ. ಸಂಖ್ಯೆ: 0816–2273724ನ್ನು ಸಂಪರ್ಕಿಸಬೇಕೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು : ತೋಟಗಾರಿಕೆ ಇಲಾಖೆಯು ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ಅಡಿಕೆ ಸುಲಿಯುವ ಯಂತ್ರ, ದೋಟಿ, ಬ್ರಷ್ ಕಟರ್, ಟಿಲ್ಲರ್, ಪವರ್ ವೀಡರ್, ಸ್ಪ್ರೇಯರ್, ರೋಟೋವೇಟರ್, ಡಿಗ್ಗರ್ ಹಾಗೂ ಇತರೆ ಯಂತ್ರಗಳನ್ನು (ಗರಿಷ್ಟ 1.25 ಲಕ್ಷ ರೂ. ಅಥವಾ 5 ಯಂತ್ರೋಪಕರಣಗಳಿಗೆ ಮಾತ್ರ) ಖರೀದಿಸಲು ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಹಾಗೂ ಉದ್ದಿಮೆದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಪ್ರಮಾಣಪತ್ರ (ಪ.ಜಾತಿ ಮತ್ತು ಪ.ಪಂಗಡ ರೈತರಿಗೆ), ಜಂಟಿ ಖಾತೆ ಇದ್ದಲ್ಲಿ ಒಪ್ಪಿಗೆ ಪ್ರಮಾಣ ಪತ್ರ, ಖಾತೆದಾರರು ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ ಸೇರಿದಂತೆ ಮತ್ತಿತರೆ ದಾಖಲಾತಿಗಳನ್ನು ಲಗತ್ತಿಸಿ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತುಮಕೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ– 9686503500, ಗುಬ್ಬಿ–9535781963, ಶಿರಾ–9844042356, ಕುಣಿಗಲ್–9606570210,…

Read More

ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ವಿತರಿಸಿದರು. ಸಚಿವರು ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿ ಸಲಕರಣೆಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಕಸಬಾ ಪಂಚಾಯಿತಿ ಆವರಣದಲ್ಲಿ ಆಗಮಿಸಿದ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಫೆ. 15, 16ರಂದು ಮೈಸೂರಿನಲ್ಲಿ ನಡೆಯಲಿರುವ ನನ್ನ ಮದುವೆಗೆ ಬಂದು ಆಶೀರ್ವಾದಿಸುವಂತೆ ಖ್ಯಾತ ನಟ ಡಾಲಿ ಧನಂಜಯ್ ಇಂದು ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಗಳಿಗೆ ಮದುವೆಯ ಆಹ್ವಾನ ಪತ್ರಿಕೆ ನೀಡಿ ಭಿನ್ನವಿಸಿಕೊಂಡರು,. ಈ ಸಂದರ್ಭದಲ್ಲಿ ಶ್ರೀ ತಿಪ್ಪೇಸ್ವಾಮಿ ವೀರೇಶ್ ಹಾಲನೂರು, ಕಿರುತೆರೆ ನಟ ದಯಾನಂದ ಸಾಗರ್, ಮನು, ಗಂಡಸಿ ಸದಾನಂದ ಸ್ವಾಮಿ, ಶಶಿ ಹುಲಿಕುಂಟೆ ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ಹೋದ ಬಳಿಕ ಸಾಕಷ್ಟು ಏರುಪೇರುಗಳನ್ನು ಕಂಡಿದ್ದಾರೆ. ಬಿಗ್ ಬಾಸ್ ಗೆ ಎಂಟ್ರಿ ನೀಡಿದ್ದ ವರ್ತೂರ್ ಸಂತೋಷ್ ಅವರಿಗೆ ವಿವಾಹವಾಗಿರುವ ವಿಚಾರ ಬಳಿಕ ಬೆಳಕಿಗೆ ಬಂದಿತ್ತು. ತುಕಾಲಿ ಸಂತೋಷ್ ಜೊತೆಗೆ ಸ್ನೇಹಕ್ಕೆ ಹೆಸರಾಗಿದ್ದ ವರ್ತೂರ್ ಸಂತೋಷ್ ಬಳಿಕ ತನಿಷಾ ಬೆಂಕಿ ವಿಚಾರದಲ್ಲಿ ಸಾಕಷ್ಟು ಸದ್ದು ಮಾಡಿದ್ದರು. ತನಿಷಾ ಹಾಗೂ ಸಂತೋಷ್ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು. ಆದರೆ ತನಿಷಾ ಮತ್ತು ನಾನು ಒಳ್ಳೆಯ ಸ್ನೇಹಿತರು ಎಂದು ವರ್ತೂರು ಸಂತೋಷ್ ಹೇಳಿದ್ದರು. ಇದೀಗ ವರ್ತೂರು ಸಂತೋಷ್ ಅವರೇ ಒಂದು ಸುದ್ದಿ ನೀಡಿದ್ದು, ಹೊಸ ಜೀವನ ಶುರು ಮಾಡಬೇಕು, ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದೇನೆ ಎಂದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ವರ್ತೂರು ಸಂತೋಷ್ ನಾನು ಡಿಪ್ರೇಷನ್ನಲ್ಲಿ ಇದ್ದಾಗ ಕಮ್ಬ್ಯಾಕ್ ಮಾಡೋಕೆ ಅವಳೇ ಕಾರಣ. ನನ್ನ ಜೀವನದ ಏರುಪೇರುಗಳನ್ನ ಅವಳು ನೋಡಿದ್ದಾಳೆ. ಜೊತೆಗಿದ್ದಾಳೆ. ನನ್ನ ಅಮ್ಮನ ನಂತರ ನಾನು ತುಂಬಾ ಪ್ರೀತಿಸೋ ಜೀವ ಅವಳು. ಇಬ್ಬರಿಗೂ ಮದುವೆಗೆ ಒಪ್ಪಿಗೆ…

Read More

ಬೀಜಿಂಗ್ : 5 ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ಸಂಕಷ್ಟಕ್ಕೆ ದೂಡಿದ್ದ ಪ್ರಳಯಾಂತಕ ಕೊವಿಡ್ 19 ಚೀನಾದಲ್ಲಿ ಹುಟ್ಟಿಕೊಂಡಿತ್ತು. ಇದೀಗ ಮತ್ತೊಂದು ವೈರಸ್ ಎಚ್ಎಂಪಿವಿ ಅಂದರೆ ಹ್ಯೂಮನ್ ಮೆಟಾನ್ಯುಮೊವೈರಸ್ ಚೈನಾದಲ್ಲಿ ತಾಂಡವವಾಡುತ್ತಿದ್ದು, ವಿಶ್ವಾದ್ಯಂತ ಹರಡುವ ಭೀತಿ ಸೃಷ್ಟಿಯಾಗಿದೆ. ಕೊರೊನಾ ಮಾದರಿಯ ಲಕ್ಷಣಗಳನ್ನೇ ಈ ವೈರಸ್ ಕೂಡಾ ಹೊಂದಿದ್ದು, ಪ್ರಮುಖವಾಗಿ ಮಕ್ಕಳಿಗೆ ಮತ್ತು ರೋಗ ನಿರೋಧಕ ಶಕ್ತಿ ಕಮ್ಮಿ ಇರುವವರಿಗೆ ವೇಗವಾಗಿ ಹರಡುತ್ತದೆ. ಈ ಹೊಸ ವೈರಸ್ ಅನ್ನು ಎದುರಿಸಲು ತೆಗೆದುಕೊಳ್ಳಬೇಕಾದ ವೈದ್ಯಕೀಯ ಕ್ರಮಗಳ ಬಗ್ಗೆ ಚೀನಾ ಸರ್ಕಾರ, ತನ್ನ ಆರೋಗ್ಯ ಇಲಾಖೆಗೆ ಸೂಚಿಸಿದೆ ಎಂದು ವರದಿಯಾಗಿದೆ. ಚೀನಾದಲ್ಲಿ ಈ ಹೊಸ ವೈರಸ್ ಹರಡಲು ಆರಂಭಿಸುತ್ತಿದ್ದಂತೆಯೇ, ಅಕ್ಕಪಕ್ಕದ ಕೆಲವು ರಾಷ್ಟ್ರಗಳು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮತ್ತು ಪ್ರತ್ಯೇಕ ಪ್ರೊಟೋಕಾಲ್ ಘೋಷಿಸಲು ಮುಂದಾಗಿದೆ. ಚೀನಾದ ಉತ್ತರ ಭಾಗದಲ್ಲಿ 15ವರ್ಷಕ್ಕಿಂತ ಕಮ್ಮಿ ವಯಸ್ಸಿನ ಮಕ್ಕಳ ಮೇಲೆ ಈ ವೈರಸಿನ ಅಟ್ಯಾಕ್ ಹೆಚ್ಚಾಗುತ್ತಿದೆ. ಇನ್ನೂ, ವೈರಸ್ ಹಾವಳಿ ಹೆಚ್ಚಾಗುತ್ತಿರುವುದು, ಆಸ್ಪತ್ರೆ ತುಂಬಿ ತುಳುಕುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ…

Read More

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ( ನಿಮ್ಹಾನ್ಸ್) ಬೆಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಹಾಗೂ ನಿಮ್ಹಾನ್ಸ್ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ, ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ಧಿ ಸಚಿವರು ಹಾಗೂ ನಿಮ್ಹಾನ್ಸ್ ಉಪಾಧ್ಯಕ್ಷರಾದ ಡಾ.ಶರಣ್ ಪ್ರಕಾಶ್.ಆರ್ ಪಾಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪಿ.ಸಿ.ಮೋಹನ್, ಸಿ.ಎನ್ ಮಂಜುನಾಥ್, ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More