Author: admin

ಬೆಂಗಳೂರು: ಬಸ್ ಪ್ರಯಾಣ ದರ ಶೇ.15 ರಷ್ಟು ಏರಿಕೆಗೆ ಹಿಂದಿನ ಬಿಜೆಪಿ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ನಮ್ಮ ಮೇಲೆ ರೂ. 5,900 ಕೋಟಿ ಸಾಲವನ್ನು ಬಿಟ್ಟು ಹೋಗಿದ್ದಾರೆ ಎಂದು ಸಚಿವರು ಟಿಕೆಟ್ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೈನಂದಿನ ನಿರ್ವಹಣಾ ವೆಚ್ಚ ಮತ್ತು ವೇತನ ಹೆಚ್ಚಾಗಿರುವುದರಿಂದ ದರ ಏರಿಕೆ ಅಗತ್ಯವಾಗಿದೆ. ಪ್ರತಿದಿನ ಡೀಸೆಲ್ ದರ ರೂ. 9 ಕೋಟಿಯಿಂದ ರೂ. 13 ಕೋಟಿಯಾಗುತ್ತದೆ. ಅದೇ ರೀತಿ ವೇತನ ರೂ. 12 ಕೋಟಿಯಿಂದ 18 ಕೋಟಿಯಾಗುತ್ತದೆ. ಪ್ರತಿದಿನ ಸಾರಿಗೆ ನಿಗಮಗಳಿಗೆ ರೂ. 10 ಕೋಟಿಗೂ ಹೆಚ್ಚು ಹೊರೆಯಾಗುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ 2020ರಲ್ಲಿ ರೂ. 60 ಇದ್ದ ಡೀಸೆಲ್ ದರವನ್ನು ಈಗ 90 ರೂಪಾಯಿಗೆ ಹೆಚ್ಚಿಸಿದೆ. ಡೀಸೆಲ್ ದರವನ್ನು ಕಡಿಮೆ ಮಾಡಿ ನಂತರ ಬಿಜೆಪಿಯವರು ಟಿಕೆಟ್ ದರ ಏರಿಕೆ ಬಗ್ಗೆ ಮಾತನಾಡಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು…

Read More

ಪಾವಗಡ: ತಾಲೂಕಿನ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು 2,352 ಕೋಟಿ ರೂಪಾಯಿ ವೆಚ್ಚದ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಪಾವಗಡ ಶಾಸಕ ಎಚ್.ವಿ. ವೆಂಕಟೇಶ್ ತಿಳಿಸಿದ್ದಾರೆ. ಶುಕ್ರವಾರ ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಪರಿಪೂರ್ಣಗೊಳಿಸಿ ಬಡಜನರಿಗೆ 183 ಎಕರೆ ಜಮೀನನ್ನು ಗುರುತಿಸಿ ನಿವೇಶನ ವಿತರಣೆ ಮಾಡಲಾಗುವುದು ಎಂದರು. ತಾಲೂಕಿನಲ್ಲಿ ಬೈಪಾಸ್ ರಸ್ತೆ, ನಗರ ಅಭಿವೃದ್ಧಿ, ಹಾಗೂ ಐದು ಎಕರೆ ಜಮೀನು ಮಾರ್ಗಸೂಚಿ ಮೂಲಕ 500 ನಿವೇಶನಗಳ ಹಕ್ಕು ಪತ್ರ ವಿತರಣೆ ಕಾರ್ಯವನ್ನು ಮುಖ್ಯಮಂತ್ರಿಗಳ ಹಸ್ತದಿಂದ ನೆರವೇರಿಸಲಾಗುವುದು. ಅಲ್ಲದೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಿಥಿಲ ಕಟ್ಟಡವನ್ನು ಶೀತಲಗೊಳಿಸಿ ನೂತನ ಸಭಾಂಗಣ ನಿರ್ಮಾಣದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ನಗದು ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ರಾಮಕೃಷ್ಣಪ್ಪ,…

Read More

 ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಕಲಿತ — ಅವರ ತಂದೆ ಶಾಂತವೀರಯ್ಯ ನವರು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದ ಸರ್ಕಾರಿ ಶಾಲೆ..  130 ವರ್ಷಗಳ ಇತಿಹಾಸವುಳ್ಳ ಸರ್ಕಾರಿ ಶಾಲೆ — 31 ಲಕ್ಷ ರೂಗಳ ಅನುದಾನ ಬಳಕೆ ಮಾಡುವಲ್ಲಿ ವಾದ — ಪ್ರತಿವಾದ…? ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಸರ್ಕಾರಿ ಶಾಲೆ ನೂತನ ಕಟ್ಟಡ ಅನುದಾನ ಬಳಕೆ ವಿಚಾರದಲ್ಲಿ ಕನ್ನಡ ಶಾಲೆ ಹಾಗೂ ಉರ್ದು ಶಾಲೆ ಎಂಬ ವಾದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿ ಜಿಲ್ಲಾಧಿಕಾರಿ, ಡಿಡಿಪಿಐ, ತಹಶೀಲ್ದಾರ್ ಹಾಗೂ ಬಿಇ ಓ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕ ಓಲೈಕೆಗೆ ಮುಂದಾದ ಘಟನೆಯೊಂದು ಕೊರಟಗೆರೆ ತಾಲೂಕಿನಲ್ಲಿ ಜರುಗಿದೆ. ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಒಂದು ರೀತಿ ಗೊಂದಲದ ಗೂಡಾಗಿದ್ದು, ಶಾಲಾ ಕಟ್ಟಡ ನಿರ್ಮಾಣದ ಅನುದಾನ ಬಳಕೆಯಲ್ಲಿ ಕನ್ನಡ ಶಾಲೆ ಹಾಗೂ ಉರ್ದು ಶಾಲೆ ಎಂದು ಸಾರ್ವಜನಿಕರಲ್ಲಿ ವಿಭಿನ್ನ…

Read More

ತುಮಕೂರು: ಮಧುಗಿರಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 19 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿಗಳಲ್ಲಿ ಅಪೂರ್ಣಗೊಂಡಿರುವ ಅರ್ಜಿಗಳನ್ನು ಮತ್ತೊಮ್ಮೆ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಮಧುಗಿರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆನ್ ಲೈನ್ ಮುಖಾಂತರ ಸಹಾಯಕಿಯರ ಹುದ್ದೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 148 ಅರ್ಜಿಗಳು ಅಪೂರ್ಣಗೊಂಡಿರುತ್ತವೆ. ಅಪೂರ್ಣ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಮರು ಅರ್ಜಿ ಸಲ್ಲಿಸಲು ಜನವರಿ 5ರವರೆಗೂ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಮರು ಅರ್ಜಿಯನ್ನು ಜಾಲತಾಣ https://karnemakaone.kar.nic.in/abcd/  ಮೂಲಕ ಮತ್ತೊಮ್ಮೆ ಅಪ್ಲೋಡ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಮಧುಗಿರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ತಾಲ್ಲೂಕು ಪಂಚಾಯತಿ ಆವರಣ, ಶಿರಾಗೇಟ್, ಮಧುಗಿರಿ ಅಥವಾ ದೂರವಾಣಿ ಸಂಖ್ಯೆ 08137–200002ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: ಬೆಸ್ಕಾಂ ಶಿರಾ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಬ್ರಹ್ಮಸಂದ್ರ ಉಪಸ್ಥಾವರದಲ್ಲಿ ರಿಪೇರಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 4ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಚಿನ್ನೇನಹಳ್ಳಿ, ಸೀಬಿ, ತರೂರು, ಸೀಬಿ ಅಗ್ರಹಾರ ಹಾಗೂ ಯಲದಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಜಿ.ಹೆಚ್. ಗೋವಿಂದರಾಯ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 9ರಂದು ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್‌ನಲ್ಲಿ ‘ಬೃಹತ್ ಉದ್ಯೋಗ ಮೇಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಉದ್ಯೋಗ ಮೇಳದಲ್ಲಿ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶ, ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರಿನ ಹೊರವಲಯದ ದಾಬಸ್ ಪೇಟೆ ಕೈಗಾರಿಕಾ ಪ್ರದೇಶ ಮತ್ತು ಬೆಂಗಳೂರಿನ ಸುಮಾರು 60ಕ್ಕೂ ಹೆಚ್ಚಿನ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಸುಮಾರು 2000ಕ್ಕೂ ಅಧಿಕ ಉದ್ಯೋಗವಕಾಶಗಳು ಲಭ್ಯವಿರುತ್ತವೆ. ಸದರಿ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಯಾವುದೇ ಪದವಿ, ಐಟಿಐ ಮತ್ತು ಡಿಪ್ಲೊಮೋ ಪಾಸಾದ, 18 ರಿಂದ 40 ವರ್ಷದೊಳಗಿನ ಪುರುಷ/ ಮಹಿಳಾ/ಅಂಗವಿಕಲ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗಮೇಳದ ಪ್ರಯೋಜನವನ್ನು ಪಡೆಯಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಶ್ರವಣಬೆಳಗೊಳ: ಸಾವಿರಾರು ವರ್ಷಗಳ ಹಿಂದೆ ಸಾಮ್ರಾಟ್ ಚಂದ್ರಗುಪ್ತ ಮೌರ್ಯ ಮತ್ತು ಆಚಾರ್ಯ ಭದ್ರಬಾಹು ಮುನಿಗಳ ಆಗಮನದಿಂದಾಗಿ ಶ್ರವಣಬೆಳಗೊಳದ ಚಂದ್ರಗಿರಿ ವಿಂಧ್ಯಗಿರಿ ಬೆಟ್ಟಗಳ ಪ್ರಶಾಂತ ಪ್ರದೇಶವು ತ್ಯಾಗಿಗಳ ಶ್ರಾವಕರ ಸಲ್ಲೇಖನ ಸಮಾಧಿ ಮರಣಕ್ಕೆ ಪ್ರಸಿದ್ಧಿಯಾಗಿತ್ತು ಎಂದು ಜೈನ ಮಠದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬುಧವಾರ ಹೇಳಿದರು. ಹೋಬಳಿಯ ಸುಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಣೇನಹಳ್ಳಿಯಲ್ಲಿ ರಾಜ್ಯ ಪುರಾತತ್ವ ಇಲಾಖೆ ಮತ್ತು ಕ್ಷೇತ್ರದ ಎಸ್ ಡಿ ಜೆ ಎಂ ಐ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ನೂತನ ವೃಷಭನಾಥ ಜಿನ ಬಸದಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಉತ್ತರದಿಂದ ಶ್ರವಣಬೆಳಗೊಳಕ್ಕೆ 12 ಸಾವಿರ ಮುನಿಗಳು ಆಗಮಿಸಿದ್ದಾಗ ಸಾಣೇನಹಳ್ಳಿ ಜಿನನಾಥಪುರ ಮತ್ತು ಹಳೇ ಬೆಳಗೊಳದ ಗ್ರಾಮಗಳು ತ್ಯಾಗಿಗಳ ಆಹಾರಕ್ಕಾಗಿ ಜೈನ ಶ್ರಾವಕರೊಂದಿಗೆ ಸಮೃದ್ಧಗೊಂಡಿದ್ದವು ಎಂದು ಹೇಳಿದರು. ಈ ಪ್ರಾಚೀನ ಜಿನ ಬಸದಿಯನ್ನು ಹೊಯ್ಸಳರ ಸೇನಾಧಿಪತಿ ಗಂಗರಾಜರ ಅತ್ತಿಗೆ ಜಕ್ಕವ್ವೆಯು ಆಚಾರ್ಯ ಶುಭಚಂದ್ರರ ಮಾರ್ಗದರ್ಶನದಲ್ಲಿ ಕ್ರಿ.ಶ.1120 ನೇ ಇಸವಿಯಲ್ಲಿ ನಿರ್ಮಾಣ…

Read More

ತುಮಕೂರು: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಕೋರಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ(ಸಂಪರ್ಕ ಸಂಖ್ಯೆ: 080–22107705), ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ, ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ)ನಲ್ಲಿಯೂ ಕೂಡ ಶೇ.50ರಷ್ಟು ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ,…

Read More

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 6ರವರೆಗೆ ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ಹಾಗೂ ಕಲಿಕಾ ಮತ್ತು ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಎಜುಕೇಷನ್ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ/ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಕೋರ್ಸಿಗೆ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿದ್ದು, ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಪೋಷಕರ ವಾರ್ಷಿಕ ಗರಿಷ್ಟ ವರಮಾನ 6 ಲಕ್ಷ ರೂ.ಗಳಿಗೆ ಮೀರಿರಬಾರದು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ…

Read More

ತುಮಕೂರು : ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು 11 ವರ್ಷದ ಬಾಲಕಿ ಒಬ್ಬಳು ನೆರವೇರಿಸಿರುವ ಘಟನೆ ತುಮಕೂರು ತಾಲ್ಲೂಕು ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 6ನೇ ತರಗತಿ ಓದುತ್ತಿರುವ 11ನೇ ವರ್ಷದ ಮೋನಿಷ ಎಂಬ ಹೆಣ್ಣು ಮಗುವೊಂದು ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಿ ಮಾದರಿಯಾಗಿದ್ದಾಳೆ. ಕಳೆದ ಎರಡು ದಿನಗಳ ಹಿಂದೆ ತನ್ನ ತಂದೆಯಯಾದ ಕೆಂಪರಾಜು (48 ವರ್ಷ) ಕ್ಯಾನ್ಸರ್ ಖಾಯಿಲೆಯಿಂದ  ಸಾವನ್ನಪ್ಪಿದ್ದರು. ಮೂಲತಃ ಆಟೋಚಾಲಕರಾಗಿದ್ದ ತನ್ನ ತಂದೆ ಬಡತನದಿಂದಲೇ ಜೀವನ ನಡೆಸುತ್ತಿದ್ದರು, ಆತನಿಗೆ ಇಬ್ಬರೂ ಸಹ ಹೆಣ್ಣು ಮಕ್ಕಳಿದ್ದು ಹಿರಿಯ ಮಗಳಾದ ಮೋನಿಷ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಿ ಗ್ರಾಮಸ್ಥರ ಹುಬ್ಬೇರಿಸುವಂತೆ ಮಾಡಿದ್ದಾಳೆ. ಈಕೆಯ ಕಾರ್ಯಕ್ಕೆ ಗ್ರಾಮಸ್ಥರು ಸಹ ಬೆಂಬಲಿಸಿದ್ದು, ಹಲವಾರು ಜನರಿಗೆ ಮಾದರಿಯಾಗಿದ್ದಾಳೆ. ಇನ್ನು ಈ ಕುಟುಂಬದ ಪೋಷಣೆಯನ್ನು ಮಗುವಿನ ಸಂಬಂಧಿಕರು ನೋಡಿಕೊಳ್ಳಲು ಮುಂದಾಗಿದ್ದಾರೆ. ಹೆಣ್ಣು ಬರೀ ಆರತಿಗೆ ಮಾತ್ರವೇ ಸೀಮಿತವಾಗಿರದೇ ಕೀರ್ತಿಯನ್ನು ತಂದುಕೊಡಲು ಸಹ ಯಾವುದೇ ಕಾರಣಕ್ಕೂ ಹಿಂದೆ ಬೀಳುವುದಿಲ್ಲ ಎನ್ನುವುದಕ್ಕೆ ಮೋನಿಷ ಸಾಕ್ಷಿಯಾಗಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More