Author: admin

ಕಲಬುರಗಿ/ಬೀದರ್: ಸಚಿನ್ ಪಾಂಚಾಳ ಪ್ರಕರಣದ ತನಿಖೆ ವಿಳಂಬದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಸಹೋದರಿ ಸುರೇಖಾ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಐಡಿ, ಸಿಬಿಐ ಸೇರಿದಂತೆ ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ. ನಮ್ಮ ತಮ್ಮನ ಸಾವಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು. ನನ್ನ ಸಹೋದರ ಸಾವಿನಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ. ನನ್ನ ಸಹೋದರ ಮರಣ ಪತ್ರದಲ್ಲಿ ಯಾರ್ ಯಾರ ಹೆಸರುಗಳನ್ನು ಬರೆದಿದ್ದಾನೋ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ನಿರ್ಲಕ್ಷ್ಯ ತೋರಿದ ಪೊಲೀಸ್ ಮೇಲಧಿಕಾರಿಗಳ ಮೇಲೆಯೂ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಬೇಡಿಕೆ ಎಂದರು. ನನ್ನ ಕುಟುಂಬ ದುಃಖದಲ್ಲಿದೆ, ಆದರೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ, ಈ ವ್ಯವಸ್ಥೆಯಲ್ಲಿ ಸಾಮಾನ್ಯ ಜನರಿಗೆ…

Read More

ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದ ವಿವಾದ ಮುಂದುವರಿದಿದ್ದು,  ಇದೀಗ ಮೈಸೂರು ಮಹಾನಗರ ಪಾಲಿಕೆಯ (ಎಂಸಿಸಿ) ದಾಖಲೆಗಳಲ್ಲಿ ಕೆಆರ್‌ಎಸ್ ರಸ್ತೆಯನ್ನು ಪ್ರಿನ್ಸೆಸ್ ರೋಡ್ ಎಂದು ಹೆಸರಿಸಿಲ್ಲ ಎಂದು ಕಾಂಗ್ರೆಸ್ ನಿಯೋಗ ಹೇಳಿಕೊಂಡ ಬೆನ್ನಲ್ಲೇ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಕ್ಷಿ ಬಿಡುಗಡೆ ಮಾಡಿದ್ದಾರೆ. ಪ್ರಿನ್ಸೆಸ್‌ ರೋಡ್‌ ಇರುವ ಮ್ಯಾಪ್‌ ಹಾಗೂ ದಾಖಲೆಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗುರುವಾರ ಬಿಡುಗಡೆ ಮಾಡಿದ್ದಾರೆ. ಕೆಆರ್‌ಎಸ್‌ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖವಾಗಲಿ, ದಾಖಲೆಯಾಗಲಿ ಇಲ್ಲ ಎಂದು ನಗರಪಾಲಿಕೆ ಆಯುಕ್ತ ಅಸಾದ್‌ ಉರ್‌ ರೆಹಮಾನ್‌ ಶರೀಫ್‌ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಸಂಸದ ಯದುವೀರ್‌ ನಗರಪಾಲಿಕೆ ಕಚೇರಿಯಲ್ಲಿ ಆಯುಕ್ತರನ್ನು ಭೇಟಿ ಮಾಡಿ ಪ್ರಿನ್ಸೆಸ್‌ ರಸ್ತೆಗೆ ಸಂಬಂಧಿಸಿದ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಹೆಸರಿಡುವ ವಿಚಾರವನ್ನು ಪುನರ್‌ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು:  ಗೃಹ ಸಚಿವರ ಜಿಲ್ಲೆಯಲ್ಲೇ ಚಪಲಚನ್ನಿಗ ಡಿವೈಎಸ್ ಪಿಯೊಬ್ಬ  ದೂರು ಕೊಡಲು ಬಂದಿದ್ದ ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿರುವ ವಿಡಿಯೋವೊಂದು  ಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದು,  ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನೇ ಪುಸಲಾಯಿಸಿ ಡಿವೈಎಸ್ ಪಿ ರಾಸಲೀಲೆ ನಡೆಸಿರುವ ಘಟನೆ ನಡೆದಿದೆ. ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು, ಮಾತುಕತೆ ನಡೆಸಲು ಡಿವೈಎಸ್ ಪಿ ಕಚೇರಿಗೆ ಬಂದಿದ್ರು.  ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಶೌಚಾಲಯದ ಬಳಿ ಕರೆದುಕೊಂಡು ಹೋಗಿ ರಾಸಲೀಲೆ ನಡೆಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೆ ತಲೆಮರೆಸಿಕೊಂಡ ಡಿವೈಎಸ್ ಪಿ ರಾಮಚಂದ್ರಪ್ಪ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆ‌ಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ಸೋಮಣ್ಣ ಇಂದು ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿ ಮತ್ತು ಕಂದಿಕೆರೆ ಹೋಬಳಿಗಳಲ್ಲಿ 10 ಪಂಚಾಯಿತಿಗಳ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಬಡವನಹಳ್ಳಿ ಪಂಚಾಯಿತಿ ಆವರಣದಲ್ಲಿ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿದರು. ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಜಲಾಶಯಕ್ಕೆ ಮೀನು ಬಿಡುಗಡೆ ಕಾರ್ಯಕ್ರಮ ಹಾಗೂ ಕಂದಿಕೆರೆ ಪ್ರಾಥಮಿಕ ಆರೋಗ್ಯ ಘಟಕದ ಸಿಬ್ಬಂದಿಗಳ ವಸತಿ ಗೃಹ ಉದ್ಘಾಟನೆ ಮತ್ತು ಕಂದಿಕೆರೆ – ಚಿಕ್ಕಬಿದರೆ ರಸ್ತೆಗೆ ಕಸವೇಹಟ್ಟಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಸುರೇಶ್ ಬಾಬು ಮತ್ತು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಬೆಂಗಳೂರು: KSRTC ಮತ್ತು BMTC ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಚಿವ ಸಂಪುಟ ನಿರ್ಧರಿಸಿದ್ದು, ಜನವರಿ 5ರಿಂದ ಪರಿಷ್ಕೃತ ಟಿಕೆಟ್ ದರ ಅನ್ವಯವಾಗಲಿದೆ ಎಂದರು. ನಾಲ್ಕು ಸಾರಿಗೆ ನಿಗಮಗಳ ಟಿಕೆಟ್ ದರ ಪರಿಷ್ಕರಿಸಿದ್ದೇವೆ. ಟಿಕೆಟ್ ದರ ಶೇ.15ರಷ್ಟು ಹೆಚ್ಚಿಸಲು ಅನುಮೋದಿಸಲಾಗಿದೆ. ದರ ಹೆಚ್ಚಳದಿಂದ ನಿತ್ಯ 7.84 ಕೋಟಿ ರೂ. ಆದಾಯ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಯುರೋಪಿಯನ್ ದೇಶ ಸ್ವಿಟ್ಜರ್ಲೆಂಡ್ ನಲ್ಲಿ ಹೊಸ ವರ್ಷಕ್ಕೆ ಹೊಸ ಕಾನೂನು ಜಾರಿಯಾಗಿದ್ದು, ಈ ಕಾನೂನು ಇದೀಗ ವಿವಾದಕ್ಕೀಡಾಗಿದೆ. ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಮಾಡಲಾಗಿದ್ದು, ಒಂದು ವೇಳೆ ಬುರ್ಖಾ ಧರಿಸಿ ಸಿಕ್ಕಿಬಿದ್ದರೆ 1 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಈ ಕಾನೂನಿಗೆ ಮುಸ್ಲಿಮ್ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. 2021ರ ಮಾರ್ಚ್ ನಲ್ಲಿ ಸ್ವಿಸ್ ಸರ್ಕಾರವು ಬುರ್ಖಾವನ್ನು ಧರಿಸಬೇಕೆ ಅಥವಾ ಬೇಡವೇ ಎಂಬುದರ ಕುರಿತು ಮತದಾನವನ್ನು ನಡೆಸಿತು. ಇದರಲ್ಲಿ 52ರಷ್ಟು ಜನರು ಬುರ್ಖಾ ನಿಷೇಧ ಕಾನೂನಿನ ಪರವಾಗಿ ಮತ ಚಲಾಯಿಸಿದ್ದಾರೆ. 48ರಷ್ಟು ಜನರು ಕಾನೂನಿನ ವಿರುದ್ಧ ಮತ ಚಲಾಯಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಡೆದ ಮತದಾನ ಈಗ ಜಾರಿಯಾಗಿದೆ. ಸರ್ಕಾರ ಹೊರಡಿಸಿದ ಕಾನೂನಿನ ಅಡಿಯಲ್ಲಿ, ಬುರ್ಖಾ ನಿಷೇಧವು ವಿಮಾನಗಳಲ್ಲಿ ಅಥವಾ ರಾಜತಾಂತ್ರಿಕ ಮತ್ತು ಕಾನ್ಸುಲರ್ ಆವರಣದಲ್ಲಿ ಅನ್ವಯವಾಗುವುದಿಲ್ಲ ಎಂಬುದು ಗಮನಿಸಬೇಕಾದ ಅಂಶವಾಗಿದೆ. ಜನರು ಸ್ವಿಟ್ಜರ್ಲೆಂಡ್ನ ಪೂಜಾ ಸ್ಥಳಗಳಲ್ಲಿ ಅಥವಾ ಯಾವುದೇ ರೀತಿಯ ಜಾತ್ಯತೀತ ಸ್ಥಳಗಳಲ್ಲಿ ತಮ್ಮ ಮುಖಗಳನ್ನು ಮುಚ್ಚಿಕೊಳ್ಳಬಹುದು. ಈ…

Read More

ಬೆಂಗಳೂರು: ಮೆಟ್ರೋ ರೈಲಿನೊಳಗೆ ಮಹಿಳಾ ಟೆಕ್ಕಿಯೊಬ್ಬರ ಫೋಟೋ ತೆಗೆದು ಆಯುರ್ವೇದ ವೈದ್ಯನೊಬ್ಬ ಸಿಕ್ಕಿಬಿದ್ದ ಘಟನೆ ನಡೆದಿದೆ. ಡಿ.25ರಂದು ಮಹಿಳಾ ಟೆಕ್ಕಿಯೊಬ್ಬರು ಮೆಜೆಸ್ಟಿಕ್ ನಿಂದ ಜೆ.ಪಿ.ನಗರಕ್ಕೆ ಹೋಗಲು ಮೆಟ್ರೋ ಹತ್ತಿದ್ದಾರೆ. ಇವರ ಕಂಪಾರ್ಟ್ ಮೆಂಟ್ ನಲ್ಲಿದ್ದ ಆಯುರ್ವೇದ ವೈದ್ಯನೊಬ್ಬ ತನ್ನ ಮೊಬೈನಲ್ಲಿ ಟೆಕ್ಕಿಯ ಪೋಟೋ ಸೆರೆ ಹಿಡಿದಿದ್ದಾನೆ. ಇದು ಟೆಕ್ಕಿಯ ಗಮನಕ್ಕೆ ಬಂದಿದೆ. ಮೆಟ್ರೋ ರೈಲು ಜಯನಗರ ಮೆಟ್ರೋ ನಿಲ್ದಾಣಕ್ಕೆ ಬಂದಾಗ ಈ ವಿಷಯವನ್ನು ಸೆಕ್ಯೂರಿಟಿಗೆ ಹೇಳಿದ್ದಾರೆ. ಸೆಕ್ಯೂರಿಟಿ ಗಾರ್ಡ್ ತಕ್ಷಣ ಆ ವ್ಯಕ್ತಿಯನ್ನು ಹಿಡಿದುಕೊಂಡು ವಿಚಾರಿಸಿದಾಗ, ಆತ ಆಯುರ್ವೇದ ವೈದ್ಯ ಎಂಬುದು ಗೊತ್ತಾಗಿದೆ. ಅನುಮತಿ ಇಲ್ಲದೆ ಪೋಟೋ ತೆಗೆದಿದ್ದಾನೆಂದು ಮಹಿಳಾ ಟೆಕ್ಕಿ ಅವಲತ್ತುಕೊಂಡಿದ್ದಾರೆ. ಸುದ್ದಿ ತಿಳಿದು ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಆಯುರ್ವೇದ ವೈದ್ಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆತನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ ಟೆಕ್ಕಿಯ ಫೋಟೋ ಡಿಲೀಟ್ ಮಾಡಿಸಿ, ಎನ್ಸಿಆರ್ ದಾಖಲಿಸಿಕೊಂಡು, ಬುದ್ಧಿವಾದ ಹೇಳಿ ನಂತರ ಆತನನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ…

Read More

ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸೌಧದ ಕ್ಯಾಬಿನೆಟ್ ಹಾಲ್ ಮುಂಭಾಗ ಕಳೆದ ವರ್ಷ ಯುನೆಸ್ಕೋ ಪಟ್ಟಿಗೆ ಸೇರಿದ ಚೆನ್ನಕೇಶವ ದೇವಾಲಯ, ಸೋಮನಾಥಪುರ ಹಾಗೂ ವಿಷ್ಣುಮೂರ್ತಿ, ಗುಹಾಂತರ ದೇವಾಲಯ ಬಾದಾಮಿಯ ಛಾಯಾಚಿತ್ರಗಳನ್ನು ಗುರುವಾರ ಅನಾವರಣಗೊಳಿಸಿದರು. ವಿಧಾನಸೌಧದಲ್ಲಿ ವಿಜಯಪುರದ ಗೋಲಗುಮ್ಮಟ, ವೀರನಾರಾಯಣ ದೇವಾಲಯ, ಗದಗ, ಪಟ್ಟದಕಲ್ಲು, ಹಂಪಿ, ಮೈಸೂರು ದಸರಾ, ಮೈಸೂರು ಅರಮನೆಯ ದರ್ಬಾರ್ ಹಾಲ್, ಜೋಗಜಲಪಾತ, ಕಬಿನಿ,ಯಕ್ಷಗಾನ, ಕಂಬಳ ಮತ್ತು ಕರ್ನಾಟಕ ರಾಜ್ಯದ Geographical Indication (G I) ಉತ್ಪನ್ನಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದೆ. ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡಗಳ ಸೌಂದರ್ಯವನ್ನು ಹೆಚ್ಚಿಸಲು ಹಾಗೂ ನಮ್ಮ ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳು, ಶಿಲ್ಪಕಲೆ, ಪಾಕಶೈಲಿ ಮತ್ತು ಸಂಸ್ಕೃತಿಯನ್ನು ಪ್ರಚಾರಪಡಿಸುವ ಹಿತದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖಾ ವತಿಯಿಂದ ಛಾಯಾಚಿತ್ರಗಳನ್ನು ಅಳವಡಿಸಲಾಗುವುದು. ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಅನ್ವಯ ಪ್ರವಾಸಿ ತಾಣಗಳ…

Read More

ಧಾರವಾಡ: ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯ, ಜಲ ಸಂಪನ್ಮೂಲ ಇಲಾಖೆ ನೀತಿ ಆಯೋಗವು ಸದಸ್ಯರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಸಂಘ, ಸಂಸ್ಥೆಗಳು ಹಾಗೂ ಇಲಾಖೆಗಳ ಕಾರ್ಯದರ್ಶಿಗಳು, ಅಧ್ಯಕ್ಷರು, ನಿರ್ದೇಶಕರು ಮತ್ತು ವಿಷಯ ತಜ್ಞರನ್ನು ಒಳಗೊಂಡ ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆ ಕುರಿತು ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಿದೆ. ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಗೆ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ನಿರ್ದೇಶಕರಾದ ಡಾ. ರಾಜೇಂದ್ರ ಪೋದ್ದಾರ ಅವರನ್ನು ನೇಮಿಸಲಾಗಿದೆ. ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಯ ಅವಧಿ ಎರಡು ವರ್ಷಗಳದ್ದಾಗಿದೆ. ಸಮಿತಿಯು ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆ ಸಂಬಂಧಿಸಿದಂತೆ ವರದಿಯನ್ನು ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ. ಟಾಸ್ಕ್ ಫೋರ್ಸ್ ಸಮಿತಿಯ ಮುಖ್ಯ ಜವಾಬ್ದಾರಿ ದೇಶದ ನದಿ, ಕೊಳ್ಳಗಳ ಜಲ ಸಂಪನ್ಮೂಲ ಲಭ್ಯತೆ ಹಾಗೂ ಬಳಕೆಯನ್ನು ಅಧ್ಯಯನ, ಸಮಗ್ರ ಜಲ ಸಂಪನ್ಮೂಲ ನಿರ್ವಹಣೆಗಾಗಿ ನೀಲ ನಕ್ಷೆ ಸಿದ್ಧಪಡಿಸುವುದು, ಸಮರ್ಪಕ ಜಲ ನಿರ್ವಹಣೆಗೆ ನೀತಿ ನಿರೂಪಣೆ, ಜಲ…

Read More

ಬೆಳಗಾವಿ: ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ತಂದೆಯನ್ನು  ಆತನ ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿ ತುಂಡಾಗಿ ಕತ್ತರಿಸಿ ಪಕ್ಕದ ಜಮೀನಿಗೆ ಎಸೆದ ಭೀಕರ ಘಟನೆ ಚಿಕ್ಕೋಡಿ ತಾಲೂಕಿನ ಉಮ್ರಾಣಿ ಗ್ರಾಮದಲ್ಲಿ ನಡೆದಿದೆ. ಶ್ರೀಮಂತ ಇಟ್ನಾಳೆ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ.  ಹತ್ಯೆಯ ನಂತರ ಪೊಲೀಸರಿಗೆ ಹೆದರಿದ ಪತ್ನಿ ಸಾವಿತ್ರಿ  ಶವವನ್ನು ಕತ್ತರಿಸಿ ಚಿಕ್ಕ ಡ್ರಮ್ ನಲ್ಲಿ ತುಂಬಿ ಸಾಗಿಸಿ ಪಕ್ಕದ ಗದ್ದೆಗೆ ಎಸೆದಿದ್ದಳು. ಕೊಲೆ ಮಾಡಲು ಬಳಸಿದ್ದ ವಸ್ತು ತೊಳೆದು ತಗಡಿನ ಶೆಡ್ಡಿನಲ್ಲಿ ಬಿಸಾಡಿ ನಂತರ ಗಂಡನ ಮೊಬೈಲ್ ಫೋನನ್ನು ಕೂಡ ಸ್ವಿಚ್ ಆಫ್ ಮಾಡಿ,ಮಗಳಿಗೆ ನಡೆದ ವಿಚಾರವನ್ನು ಯಾರ ಬಳಿಯೂ ಹೇಳದಂತೆ ತಿಳಿಸಿದ್ದಾರೆ. ಮೃತ ಶ್ರೀಮಂತ ಇಟ್ನಾಳೆ ಪರ ಪುರುಷರ ಜೊತೆಗೆ ಮಲಗುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಈ ವಿಚಾರಕ್ಕೆ ಸದಾ ಜಗಳ ನಡೆಯುತ್ತಿತ್ತು. ಹಣ ಕೊಡು, ಬೈಕ್ ಕೊಡಿಸು ಎಂದು ಪೀಡಿಸುತ್ತಿದ್ದನಂತೆ. ಇದೆಲ್ಲವನ್ನೂ ಸಹಿಸಿದ್ದ ಪತ್ನಿ, ತನ್ನ ಮಗಳ ಮೇಲೆಯೇ ಬಲಾತ್ಕಾರಕ್ಕೆ ಯತ್ನಿಸಿದಾಗ ಸಹಿಸದೇ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ನಮ್ಮತುಮಕೂರಿನ ಕ್ಷಣ…

Read More