Subscribe to Updates
Get the latest creative news from FooBar about art, design and business.
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
- ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
Author: admin
ಸಾಕಷ್ಟು ಜನರು ಚಳಿಗಾಲದಲ್ಲಿ ಸ್ನಾನ ಮಾಡುವುದನ್ನು ಕಡಿಮೆ ಮಾಡುತ್ತಾರೆ. ಚಳಿಗಾಲದಲ್ಲಿ ಹೆಚ್ಚು ಬೆವರುವುದಿಲ್ಲ. ಹಾಗಾಗಿ ಸ್ನಾನ ಮಾಡದೇ ಇರುವವರ ಸಂಖ್ಯೆ ಹೆಚ್ಚು. ಆದರೆ ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೆ? ಎನ್ನುವುದನ್ನು ತಿಳಿಯೋಣ ಬನ್ನಿ… ತಜ್ಞರ ಪ್ರಕಾರ ಚಳಿಗಾಲದಲ್ಲಿ ನಿಯಮಿತವಾಗಿ ಸ್ನಾನ ಮಾಡುವುದು ಆರೋಗ್ಯದ ದೃಷ್ಟಿಯಲ್ಲಿ ಒಳ್ಳೆಯದಂತೆ. ನಮ್ಮ ದೇಹದ ವೈಯಕ್ತಿಕ ನೈರ್ಮಲ್ಯ ಕಾಪಾಡಲು ನಿಯಮಿತ ಸ್ನಾನ ಅತ್ಯಗತ್ಯವಾಗಿದೆ. ಚಳಿಗಾಲದಲ್ಲಿ ಬೆವರು ಬಿಡುವುದು ಕಡಿಮೆಯಾದರೂ ನಿಮ್ಮ ದೇಹವು ತೈಲವನ್ನು ಉತ್ಪಾದಿಸುತ್ತದೆ. ಸತ್ತ ಚರ್ಮದ ಕೋಶಗಳನ್ನು ಹೊರ ಹಾಕುತ್ತದೆ ಮತ್ತು ಬ್ಯಾಕ್ಟೀರಿಯಾವನ್ನು ಸಂಗ್ರಿಹಿಸುತಂತೆ. ನಿಯಮಿಯ ಸ್ನಾನವು ಕಶ್ಮಲಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಇದರಿಂದ ಸೋಂಕು, ದೇಹದ ವಾಸನೆ, ನೈರ್ಮಲ್ಯ ಸಂಬಂಧಿಕ ಸಮಸ್ಯೆಗಳಿಂದ ನೀವು ಪಾರಾಗಬಹುದು. ಚಳಿಗಾಲದಲ್ಲಿ ಬೆಚ್ಚಗಿನ ನೀರಿನ ಸ್ನಾನ ಮಹತ್ವದ್ದಾಗಿದೆ. ಇದು ದೇಹದ ರಕ್ತ ಪರಿಚಲನೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ನಿಮ್ಮ ದೇಹವು ಶೀತಗಳು ಮತ್ತು ಜ್ವರದಂತಹ ಸಾಮಾನ್ಯ ಚಳಿಗಾಲದ ಕಾಯಿಲೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹೋರಾಡಲು ಸಹಾಯ ಮಾಡುತ್ತದೆ. ಬೆಚ್ಚಗಿನ…
ಬೆಂಗಳೂರು: ವಕ್ಫ್ ಕಾನೂನು ರದ್ದಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಕ್ಫ್ ವಿರುದ್ಧ ನಿರಂತರ ಹೋರಾಟ ನಡೆಯಲಿದೆ. 2ನೇ ಹಂತದ ಹೋರಾಟದ ಬಗ್ಗೆ ನಾಳೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ನಮ್ಮ ಹೋರಾಟಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇವೆ. ನಮ್ಮದು ಜನಪರ ಆಂದೋಲನ ಎಂದು ಇದೇ ವೇಳೆ ಅವರು ಹೇಳಿದರು. ವಕ್ಫ್ ಆಸ್ತಿ ಎಂದು ಅವರು 3 ಪಾಕಿಸ್ತಾನ ಮಾಡುವ ಅಷ್ಟು ಜಾಗವನ್ನು ಕ್ರೈಮ್ ಮಾಡುತ್ತಿದ್ದಾರೆ. ನಮ್ಮ ಹೋರಾಟದಿಂದಲೇ ವಕ್ಫ್ ಆಂದೋಲನ ಇಡೀ ದೇಶದಲ್ಲಿ ಆಗ್ತಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಸರ್ಕಾರಿ ಫ್ರೌಢಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಪ್ರೌಢಶಾಲೆಯಲ್ಲಿ ನಡೆದಿದೆ. ಇನ್ನೂ ಅಡುಗೆ ಸಹಾಯಕಿ ಉಮಾದೇವಿ (52) ಗೆ ಗಂಭೀರ ಗಾಯವಾಗಿದ್ದು ಜಯಮ್ಮ (55) ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೊಸವರ್ಷದ ಹಿನ್ನೆಲೆ ಮಕ್ಕಳಿಗೆ ಪಲಾವ್ ಮತ್ತು ಪಾಯಸ ಮಾಡಲು ಹೋಗಿ ನಿನ್ನೆ ಮಧ್ಯಾಹ್ನದ ಬಿಸಿಯೂಟ ತಯಾರಿಸುವಾಗ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಅಡುಗೆ ಸಹಾಯಕಿ ಉಮಾದೇವಿಗೆ ಮಧುಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 30% ದೇಹಕ್ಕೆ ಗಾಯವಾಗಿದ್ದು, ಗುಣಮಟ್ಟದ ಕುಕ್ಕರ್ ಕೊಡದೆ ಇರುವುದೇ ಘಟನೆಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ನ್ಯೂ ಓರ್ಲಿಯನ್ಸ್: ನ್ಯೂ ಓರ್ಲಿಯನ್ಸ್ ನ ಹೊಸ ವರ್ಷದ ಸಂಭ್ರಮಾಚರಣೆಯ ಗುಂಪಿನ ಮೇಲೆ ಹರಿಸಿ 15 ಮಂದಿಯನ್ನು ಕೊಂದು ಹಾಕಿರುವ ಘಟನೆ ನಗರದ ಪ್ರಸಿದ್ಧ ಫ್ರೆಂಚ್ ಕ್ವಾರ್ಟರ್ನಲ್ಲಿ ಮುಂಜಾನೆ ನಡೆದಿದೆ. ಇಸ್ಲಾಮಿಕ್ ಸ್ಟೇಟ್ ಗುಂಪಿನ ಧ್ವಜವನ್ನು ಹೊಂದಿದ್ದ ಟ್ರಕ್ನಲ್ಲಿ ಬಂದವನು ಈ ಕೃತ್ಯ ಎಸಗಿದ್ದಾನೆ. ಈ ದಾಳಿಯನ್ನು ಭಯೋತ್ಪಾದಕ ಕೃತ್ಯವೆಂದು, ಇದು ಏಕಾಂಗಿ ದಾಳಿಯಲ್ಲ ಇದರ ಜೊತೆ ಇನ್ನು ಹಲವರು ಇದ್ದಾರೆ ಎಂದು ಎಫ್ ಬಿಐ ಹೇಳಿದೆ. ದೃಶ್ಯದಲ್ಲಿ ಮೂರು ಪುರುಷರು ಮತ್ತು ಮಹಿಳೆಯೊಬ್ಬರು ಸಾಧನಗಳನ್ನು ಇರಿಸುತ್ತಿರುವುದನ್ನು ತೋರಿಸಿದೆ. ಆದರೆ ಫೆಡರಲ್ ಅಧಿಕಾರಿಗಳು ತಕ್ಷಣ ಆ ವಿವರವನ್ನು ದೃಢಪಡಿಸಲಿಲ್ಲ ಮತ್ತು ವೀಡಿಯೊದಲ್ಲಿರುವವರು ಯಾರು ಎಂಬುದು ಸ್ಪಷ್ಟವಾಗಿಲ್ಲ ಎಂದಿದೆ. ಬೌರ್ಬನ್ ಸ್ಟ್ರೀಟ್ನಲ್ಲಿ ನಡೆದ ಈ ಭೀಕರ ಹತ್ಯಾಕಾಂಡದಲ್ಲಿ 15 ಜನರು ಮೃತಪಟ್ಟಿದ್ದು ಜೊತೆಗೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜೀವ ಉಳಿಸಿಕೊಲ್ಲಲು ನೈಟ್ ಕ್ಲಬ್ಗಳು ಮತ್ತು ರೆಸ್ಟೋರೆಂಟ್ ಗಳ ಒಳಗೆ ಜನರು ಓಡಿಹೋದರು. ಕೆಲವೇ ಕ್ಷಣದಲ್ಲಿ ಸಂಭ್ರಮದ ವಾತಾವರಣ ಅಲೋಲ ಕಲ್ಲೂಲ…
ಧಾರವಾಡ: 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆ, ಟ್ರಸ್ಟ್, ಕಂಪನಿ, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಇತರ ಆಸ್ತಕರು ನಿಗಧಿತ ಅರ್ಜಿ ನಮೂನೆಗಳಲ್ಲಿ ಏಪ್ರೀಲ್ 30, 2025 ರೊಳಗಾಗಿ https://pue.karnataka.gov.in/ ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಬೇಕು. ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದು. ಮೇ 1, 2025 ರ ನಂತರ ಸಲ್ಲಿಸಿದ ಪ್ರಸ್ತಾವನೆಗಳನ್ನು 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದಿಲ್ಲಾ. ಇಂತಹ ಪ್ರಸ್ತಾವನೆಗಳನ್ನು ಪರಿಶೀಲಿಸಿ ನಿಯಾಮಾನುಸಾರ ಇದ್ದಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪರಿಗಣಿಸಲಾಗುವುದು. https://dpuepragathi.karnataka.gov.in/newcollege2025 ಲಿಂಕ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಒಂದು ಪ್ರತಿಯನ್ನು ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಎದುರು, ಕಾಲೇಜು ರಸ್ತೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕೆಂದು ಶಾಲಾ…
ಹಾಸನ: ಹೇಮಾವತಿ ನಾಲೆಗೆ ಹಾರಿ ಇಂಜಿನಿಯರ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲೂಕಿನ ಗೊರೂರುಶೆಟ್ಟಿಹಳ್ಳಿ ಬಳಿಯ ಹೇಮಾವತಿ ನಾಲೆಯಲ್ಲಿ ನಡೆದಿದೆ. ಪ್ರಮೋದ್ (35) ಆತ್ಮಹತ್ಯೆಗೆ ಶರಣಾದ ಇಂಜಿನಿಯರ್ ಆಗಿದ್ದು, ಇವರು ಮೂಲತಃ ನಗರದ ಇಂದಿರಾನಗರದ ನಿವಾಸಿಯಾಗಿದ್ದಾರೆ. ಕಳೆದ ಡಿ.29 ರ ಸಂಜೆ ಮನೆಯಲ್ಲಿಯೇ ಫೋನ್ ಬಿಟ್ಟು ಹೊರಗಡೆ ತೆರಳಿದ್ದು, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಅದರಿಂದ ಆತಂಕಗೊಂಡ ಪೋಷಕರು ಸ್ನೇಹಿತರ ಹಾಗೂ ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಕೂಡ ಆತ ಪತ್ತೆಯಾಗದ ಕಾರಣ ಕೆ.ಆರ್.ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೇಮಾವತಿ ನದಿಯ ಸೇತುವೆಯ ಬಳಿ ಟಿವಿಎಸ್ ಜ್ಯುಪಿಟರ್ ನಿಂತಿದ್ದು, ಅದರಲ್ಲಿ ಬ್ಯಾಂಕಿನ ಪಾಸ್ ಬುಕ್ ಗಳು ಪತ್ತೆಯಾಗಿವೆ. ಸ್ಥಳೀಯರು ಪಾಸ್ ಬುಕ್ ನಲ್ಲಿ ವಿಳಾಸ ಮತ್ತು ಫೋನ್ ನಂಬರನ್ನು ಪರಿಶೀಲಿಸಿ ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಹುಡುಕಾಟ ನಡೆಸಿದ್ದು, ಸೋಮವಾರ ಬೆಳಿಗ್ಗೆ…
ಹೈದರಾಬಾದ್: ಐಪಿಎಸ್ ಅಧಿಕಾರಿಯಾಗುವ ಕನಸು ನನಸಾಗಿಸಲು, ಕ್ರಿಕೆಟ್ ಆಟಗಾರ ಕಾರ್ತಿಕ್ ಮಧಿರಾ ತನ್ನ ವೃತ್ತಿಯನ್ನೇ ತೊರೆದ ಘಟನೆ ಇದೀಗ ಯುವ ಜನತೆಗೆ ಸ್ಪೂರ್ತಿಯಾಗಿದೆ. ಮೂಲತಃ ತೆಲಂಗಾಣದ ಹೈದರಾಬಾದ್ ನ ಕಾರ್ತಿಕ್ ಮಧಿರಾ, ಅಂಡರ್–13, ಅಂಡರ್–15, ಅಂಡರ್–17, ಮತ್ತು ಅಂಡರ್–19 ಹಂತಗಳಲ್ಲಿ ಹಾಗೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕ್ರಿಕೆಟ್ ಆಟಗಾರರಾಗಿದ್ದರು. ಅವರು ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ಗಳಿಸುತ್ತಾರೆ. ಕಾರ್ತಿಕ್ ಅವರು ತಮ್ಮ ವೈಯಕ್ತಿಕ ಕಾರಣಗಳಿಂದ ಹಾಗೂ ಗಾಯದಿಂದಾಗಿ ತಮ್ಮ ಕ್ರಿಕೆಟ್ ಅನ್ನು ತೊರೆಯುತ್ತಾರೆ. ಯುಪಿಎಸ್ ಸಿ ಬರೆದು ಐಪಿಎಸ್ ಅಧಿಕಾರಿಯಾಗುವ ಆಕಾಂಕ್ಷೆಯನ್ನು ಹೊಂದಿದ್ದ ಅವರು ಈ ವೇಳೆ ಅವರು ಡೆಲಾಯ್ಟ್ನಲ್ಲಿ 6 ತಿಂಗಳ ಕಾಲ ಕೆಲಸ ಮಾಡುತ್ತಾರೆ. ನಂತರ ತಮ್ಮ ವೃತ್ತಿಯನ್ನು ತೊರೆದು ಯುಪಿಎಸ್ ಸಿ ಪರೀಕ್ಷೆಗೆ ತಯಾರಿಯನ್ನು ನಡೆಸುತ್ತಾರೆ. ಇದೀಗ ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಅವರು ತಮ್ಮ ಕನಸ್ಸನ್ನು ನನಸು ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ನವದೆಹಲಿ: ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ತಂಡಕ್ಕೆ ಕಡಿವಾಣ ಹಾಕಲು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಈ ವೇಳೆ ಇತ್ತೀಚೆಗೆ ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹದ ಬಗ್ಗೆ ಅವರಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕಳೆದೊಂದು ವರ್ಷದ ಪಕ್ಷ ಸಂಘಟನೆ, ಹೋರಾಟ ಕುರಿತು ರಿಪೋರ್ಟ್ ಸಲ್ಲಿಸಿದ್ದಾರೆ. ತಮ್ಮ ಒಂದು ವರ್ಷದ ಸಾಧನೆಯ ವರದಿ ಕೊಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಯತ್ನಾಳ್ ತಂಡದ 2ನೇ ಹಂತದ ವಕ್ಫ್ ಹೋರಾಟ ವಿಚಾರವನ್ನು ಅವರು ಹೈಕಮಾಂಡ್ ಗಮನಕ್ಕೆ ತಂದರು. ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಜೊತೆಗೆ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಬಿಜೆಪಿಯ ಹೋರಾಟ, ಕಲಬುರ್ಗಿ ಪ್ರತಿಭಟನೆ, ಬಾಣಂತಿಯರ…
ಬೆಂಗಳೂರು: ಪಬ್ ಗೆ ಹೋಗಿದ್ದ ಮಹಿಳೆಯೊಬ್ಬರಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಅನುಚಿತವಾಗಿ ವರ್ತಿಸಿದ ಯುವಕನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಮಹಿಳೆ ಮಾರತ್ತಹಳ್ಳಿಯ ಪಬ್ ಗೆ ತೆರಳಿದ್ದರು. ಈ ವೇಳೆ ಪಾನಮತ್ತನಾಗಿದ್ದ ಯುವಕ, ಮದ್ಯ ಸೇವಿಸುವಂತೆ ಒತ್ತಾಯಿಸಿ, ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಮಂಗಳವಾರ ರಾತ್ರಿ ಮಹಿಳೆ ಗೆಳೆಯನೊಂದಿಗೆ ಪಬ್ ಗೆ ಭೇಟಿ ನೀಡಿದ್ದರು. ಯುವಕ ಅನುಚಿತವಾಗಿ ವರ್ತಿಸಿದ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳಕ್ಕೆ ಬಂದ ಬೌನ್ಸರ್ ಗಳು ಯುವಕನನ್ನು ಪಬ್ ನಿಂದ ಹೊರ ಕಳುಹಿಸಿದ್ದಾರೆ. ಆದರೆ ಪಬ್ ನಿಂದ ಆತನನ್ನು ಹೊರಗೆ ಕಳುಹಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಪಬ್ನಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದು, ತನಿಖೆ ಆರಂಭಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು:ಮತ, ಧರ್ಮ, ಮೌಢ್ಯಗಳ ಅಂಧಶ್ರದ್ಧೆಯನ್ನು ತೊರೆದು ವಿಜ್ಞಾನ ಮತ್ತುಅಧ್ಯಾತ್ಮದ ಮೊರೆ ಹೋದಾಗ ‘ನಮಗೂ–ಲೋಕಕ್ಕೂ ಕಲ್ಯಾಣವಾಗಲಿದೆ’ ಎಂದುಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕುವೆಂಪು ಅಧ್ಯಯನ ಪೀಠ ಬುಧವಾರ ಆಯೋಜಿಸಿದ್ದ ಕುವೆಂಪು: ಮಾತು ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಆತ್ಮಶ್ರೀಗಾಗಿ ವಿಜ್ಞಾನ ಮತಿಗಳಾಗಿ’ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಉತ್ತಮ ಆರೋಗ್ಯದ, ಭಾವನೆಗಳ, ಬುದ್ಧಿಯ ಬೆಸುಗೆಯಲ್ಲಿ ‘ತಾನು ಯಾರು?’ ಎಂಬುದನ್ನುಅರಿತು ಆತ್ಮದ ಅರಿವು–ಆತ್ಮಶ್ರೀ ಸಾಧಿಸಬೇಕು. ಉತ್ತಮ ಆಲೋಚನೆಗಳನ್ನು, ಭಾವನೆಗಳನ್ನು ಅನುಭವಿಸಬೇಕು. ಅಧ್ಯಯನಶೀಲತೆ, ಏಕಾಗ್ರತೆ, ಸಂಯಮದ ಆತ್ಮಾನುಸಂಧಾನದಲ್ಲಿ ತಪಸ್ವಿಗಳಾಗಬೇಕು ಎಂದು ತಿಳಿಸಿದರು. ಆತ್ಮದಸಾರ್ವಭೌಮತ್ವವನ್ನು ಸಾಧಿಸಿದರೆ ಬದುಕು ಗಟ್ಟಿಗೊಳ್ಳುತ್ತದೆ. ಇದರಿಂದ ಆತ್ಮಹತ್ಯೆಗಳ, ಮನಸ್ತಾಪಗಳ ಸಂಖ್ಯೆಕ್ಷೀಣಿಸಲಿದೆ. ‘ನಾನು ಯಾರು?’ಎಂಬ ಆತ್ಮಾವಲೋಕನವಾದರೆ ಪ್ರತ್ಯೇಕತೆಯ ಭಾವ ಕಳಚಿ ಏಕತೆಯ ಬೆಸುಗೆ ಚಿಗುರಿ ಸಮಾನತೆ ಸ್ಪುಟಿಸಲಿದೆ. ವೇದೋಪನಿಷತ್ತುಗಳ ಆಂತರಿಕ ಮಿತಿತೊರೆದು ವೈಜ್ಞಾನಿಕ ಮನೋಭಾವದಿಂದ ಎಲ್ಲವನ್ನೂ ಸ್ವೀಕರಿಸಿದರೆ ಪಕ್ಷಪಾತವಿರದ, ವಸ್ತುನಿಷ್ಠತೆಯ ಪ್ರಾಯೋಗಿಕ ಪುರಾವೆಗೆ ಸಾಕ್ಷಿಯಾಗುತ್ತೇವೆ ಎಂದರು. ನಮ್ಮ ಶಕ್ತಿ ದೌರ್ಬಲ್ಯಗಳನ್ನು ತಿಳಿಯಲು, ತಿಳುವಳಿಕೆಯನ್ನು ಪರಿಷ್ಕರಿಸಲು ವಿಜ್ಞಾನದ ನಿರಂತರ ಕಲಿಕೆ ಅಗತ್ಯವಾಗಿದೆ.…