Subscribe to Updates
Get the latest creative news from FooBar about art, design and business.
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
- ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
Author: admin
ತುಮಕೂರು: ಶ್ರೀ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ನಾಡೋಜ ಡಾ. ಗೊ.ರು. ಚನ್ನಬಸಪ್ಪನವರಿಗೆ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಹೆಚ್. ಶಿವರುದ್ರಯ್ಯ ತಿಳಿಸಿದ್ದಾರೆ. ಶ್ರೀ ಸಿದ್ಧಗಂಗಾಮಠದಲ್ಲಿ ಜ.21ರಂದು ನಡೆಯಲಿರುವ ಡಾ.ಶ್ರೀಶಿವಕುಮಾರ ಮಹಾಸ್ವಾಮೀಜಿಗಳ 6ನೇ ವರ್ಷದ ಪುಣ್ಯಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಸ್ಥಾಪಿಸಿದ್ದು 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ. 2017ರಿಂದ 2023ರವರೆಗಿನ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರ ವಿವರ:…
ತುಮಕೂರು: ವಿಶ್ವವಿದ್ಯಾನಿಲಯವು ಆಂಧ್ರ ಪ್ರದೇಶದ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ‘ವಿಜ್ಞಾನ್ ವಿಶ್ವವಿದ್ಯಾನಿಲಯ’ದೊಂದಿಗೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಿದೆ. ತುಮಕೂರು ವಿವಿಯ ಕುಲಸಚಿವೆ ನಾಹಿದಾಜಮ್ ಜಮ್ ಹಾಗೂ ವಿಜ್ಞಾನ್ ವಿವಿಯ ಕುಲಸಚಿವ ಪ್ರೊ.ನಾಗಭೂಷಣ್ ಈ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದ್ದು, ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜ್ಞಾನ್ ವಿವಿಯ ಡೀನ್ ಪ್ರೊ.ರಾಮಾರಾವ್, ಕೈಗಾರಿಕೋದ್ಯಮಿ ಡಾ.ಎಚ್.ಜಿ. ಚಂದ್ರಶೇಖರ್ ಉಪಸ್ಥಿತರಿದ್ದರು. ಈ ಒಡಂಬಡಿಕೆಯ ಪ್ರಕಾರ, ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದ ಅನೇಕ ಚಟುವಟಿಕೆಗಳನ್ನು ಪರಸ್ಪರ ಸಹಯೋಗದಲ್ಲಿ ನಡೆಸುವ ಉದ್ದೇಶ ಹೊಂದಲಾಗಿದೆ. ಬಹುಶಿಸ್ತಿನ ಶಿಕ್ಷಣ, ಸಂಶೋಧನೆ, ಪಠ್ಯಕ್ರಮ ವಿನ್ಯಾಸ ಮತ್ತು ಪರಿಷ್ಕರಣೆ, ಮೂಲ ಸೌಕರ್ಯಗಳನ್ನು ಒದಗಿಸುವುದು, ಜಂಟಿ ಪ್ರಕಟಣೆಗಳು, ಪೇಟೆಂಟ್ ಗಳು, ಯೋಜನೆಗಳನ್ನು ರೂಪಿಸಿವುದು, ಎರಡೂ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ಒದಗಿಸುವುದು, ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಮತ್ತು ಇಂಟರ್ನ್ಶಿಪ್‌ಗೆ ಮಾರ್ಗದರ್ಶನ ಹಾಗೂ ಸಹಕಾರ, ಸಂಶೋಧನಾಕಾರ್ಯಕ್ಕಾಗಿ ಪ್ರಯೋಗಾಲಯ ಸೌಲಭ್ಯ, ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಒಡಂಬಡಿಕೆಯ ಭಾಗವಾಗಿದೆ. ಹಾಗೆಯೇ, ರಾಷ್ಟ್ರೀಯ,…
ತುಮಕೂರು: 2025–26 ರಿಂದ 2029–30ನೇ ಸಾಲಿಗೆ ನಡೆದ ತಾಲ್ಲೂಕು ಕೃಷಿ ಸಮಾಜ ಮತ್ತು ಜಿಲ್ಲಾ ಕೃಷಿ ಸಮಾಜದ ಚುನಾವಣೆಯಲ್ಲಿ ಈ ಕೆಳಕಂಡ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ 5 ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹನುಮಂತರಾಜು ಹಾಗೂ ಸಹಾಯಕ ಚುನಾವಣಾಧಿಕಾರಿ ದೇವರಾಜು ತಿಳಿಸಿದ್ದಾರೆ. ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ನಂದಿಹಳ್ಳಿಯ ಎನ್.ಬಿ. ರಾಜಶೇಖರ್, ಉಪಾಧ್ಯಕ್ಷರಾಗಿ ಚಿಕ್ಕಕೊರಟಗೆರೆಯ ಕೆಂಪಹನುಮಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಜಿ. ಲಕ್ಷ್ಮೀನರಸೇಗೌಡ ಉರುಪ್ ಜಿ. ರಮೇಶ್, ಖಜಾಂಚಿಯಾಗಿ ಹೊಸೂರಿನ ಲಿಂಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರತಿನಿಧಿಯಾಗಿ ಚಿಕ್ಕಣ್ಣದೇವರಹಟ್ಟಿಯ ಸಿ. ಪಾಪಣ್ಣ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೊಳಲುಕುಂಟೆಯ ರಾಜಶೇಖರಯ್ಯ ಕೆ.ವಿ., ಊರ್ಡಿಗೆರೆ ಹೋಬಳಿ ಚಿಕ್ಕಹಳ್ಳಿಯ ವೀರಭದ್ರಯ್ಯ, ವಿದ್ಯಾನಗರದ ರಂಗಪ್ಪ ಕೆ., ಸೋರೆಕುಂಟೆಯ ಎಸ್.ಹೆಚ್. ರಮೇಶ್, ಐನಾಪುರದ ಎಸ್. ಬಸವರಾಜು, ಗಂಗಾ ನರ್ಸಿಂಗ್ ಹೋಂನ ಡಾ. ಹೆಚ್.ಬಿ.ಎಂ. ಹಿರೇಮಠ್, ಚೋಳೇನಹಳ್ಳಿಯ ನಾರಾಯಣಪ್ಪ,…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಾವಯವ ಮೇಳ–2025ನ್ನು ಆಯೋಜಿಸಲಾಗುತ್ತಿದ್ದು, ಮೇಳದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜನವರಿ 4ರಂದು ಬೆಳಿಗ್ಗೆ 6:30 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯ ಮುಂಭಾಗದಿMದ ಬಿ.ಹೆಚ್.ರಸ್ತೆ ಮೂಲಕ ಎಸ್.ಐ.ಟಿ, ಗಂಗೋತ್ರಿನಗರ ಹಾಗೂ ಎಸ್.ಎಸ್.ಪುರಂ ಮಾರ್ಗವಾಗಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದವರೆಗೆ ವಾಕಥಾನ್(ಕಾಲ್ನಡಿಗೆ) ಏರ್ಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ: ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಮಹಾನಗರ ಪಾಲಿಕೆ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಜಿಲ್ಲೆಯ ಮತ್ತು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 27 ರಿಂದ ಡಿಸೆಂಬರ್ 5ರವರೆಗೆ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯ ವರದಿಯನುಸಾರ ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯಗಳು ಕಂಡು ಬಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯನ್ನು ಅನೈರ್ಮಲ್ಯ ಶೌಚಾಲಯ ಮುಕ್ತ ಜಿಲ್ಲೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಕಟಣೆ ಹೊರಡಿಸಿದ್ದಾರೆ. ತುಮಕೂರು ಜಿಲ್ಲೆಯನ್ನು ಅನೈರ್ಮಲ್ಯ ಶೌಚಾಲಯ ಮುಕ್ತ ಜಿಲ್ಲೆ ಎಂದು ಘೋಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಲಿಖಿತವಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಕೂಸಿನ ಮನೆಗಳು ಮಾದರಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕೆಂದು ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಎಸ್.ಎಸ್. ಮಂಜುನಾಥ್ ಕರೆ ನೀಡಿದರು. ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ತಾಲ್ಲೂಕು ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಕೂಸಿನ ಮನೆಯ ಮಕ್ಕಳನ್ನು ಆರೈಕೆ ಮಾಡುವವರಿಗಾಗಿ ಹಮ್ಮಿಕೊಂಡಿದ್ದ 2ನೇ ಹಂತದ ಏಳು ದಿನಗಳ ಕಾಲ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಕೂಸಿನ ಮನೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಮಕ್ಕಳ ಬೌದ್ದಿಕತೆಯನ್ನು ವೃದ್ಧಿಸುವುದರೊಂದಿಗೆ ಆರೋಗ್ಯ ಕಾಪಾಡುವುದು ಆರೈಕೆದಾರರ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕೂಸಿನ ಮನೆ ತರಬೇತಿದಾರರಾದ ರೇಣುಕಾ ಹಾಗೂ ರೇಖಾ, SIRD ಸಂಸ್ಥೆಯ ಸಿಬ್ಬಂದಿ ಆಯೇಷ, ತಾಲ್ಲೂಕು ಪಂಚಾಯತಿ ಐ.ಇ.ಸಿ. ಸಂಯೋಜಕರು, ಮಹಿಳಾ ಕೇರ್ ಟೇಕರ್ಸ್ ಸೇರಿದಂತೆ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರಕಾರದಿಂದ ನೀಡುವ ಸೌಲಭ್ಯ ಹಾಗೂ ಕಾನೂನು ಸೇವೆಗಳ ಬಗ್ಗೆ ದಲಿತ ಕಾಲೋನಿಗಳಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಪ.ಜಾತಿ ಮತ್ತು ಪ.ಪಂಗಡದವರಿಗೆ ನೀಡಲಾಗುತ್ತಿರುವ ಸವಲತ್ತುಗಳ ಬಗೆಗಿನ ಮಾಹಿತಿ ಕೊರತೆಯಿಂದ ಅನೇಕರು ಸೌಲಭ್ಯ ವಂಚಿತರಾಗುತ್ತಿದ್ದು, ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಾರ್ಮಿಕ ನೀತಿಗೆ ವಿರೋಧವಾಗಿ ಕೆಲವು ಕೈಗಾರಿಕೆಗಳಲ್ಲಿ ಸಮಯ ಮೀರಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಸಮಿತಿ ಸದಸ್ಯರು ಆರೋಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕೈಗಾರಿಕೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚನೆ ನೀಡಿದರು. ಪ.ಜಾತಿ ಮತ್ತು ಪ.ಪಂಗಡದವರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಲಾದ ಕೊಳವೆ ಬಾವಿಗಳಲ್ಲಿ ನೀರು ಸಿಗದೆ ಹೋದರೂ ಪೈಪ್‌ಗಳು,…
ವಾಷಿಂಗ್ಟನ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಸುನೀತಾ ವಿಲಿಯಮ್ಸ್ ಮಾರ್ಚ್ ಅಥವಾ ಎಪ್ರಿಲ್ ತಿಂಗಳಿನಲ್ಲಿ ಭೂಮಿಗೆ ಮರಳುವ ನಿರೀಕ್ಷೆಯಿದೆಯಂತೆ. ಸುನೀತಾ ಕಳೆದ ಜುಲೈನಲ್ಲೇ ಮರಳಬೇಕಿತ್ತು. ಆದರೆ, ಅವರ ಸ್ಟಾರ್‌ಲೈನರ್ ಅಂತರಿಕ್ಷ ನೌಕೆಯಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಅವರು ಮತ್ತು ಸಹ ಗಗನಯಾನಿ ಬುಚ್ ವಿಲ್ಮೋರ್ ಐಎಸ್‌ಎಸ್‌ನಲ್ಲೇ ಉಳಿದುಕೊಂಡಿದ್ದಾರೆ. ಸದ್ಯ ಇಬ್ಬರನ್ನೂ ಕರೆತರಲು ಬದಲಿ ವ್ಯವಸ್ಥೆ ರೂಪಿಸಲಾಗಿದೆ. ನೂತನ ಯೋಜನೆಯಡಿ ನಾಸಾ ತನ್ನ ಗಗನಯಾನಿಗಳನ್ನು ಭೂಮಿಗೆ ಕರೆತರಲು ಮತ್ತೊಂದು ಖಾಸಗಿ ಬಾಹ್ಯಾಕಾಶ ಸಂಸ್ಥೆ, ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ‘ಸ್ಪೇಸ್ ಎಕ್ಸ್’ ಜತೆ ಒಪ್ಪಂದ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್‌ಎಸ್) ಸಿಲುಕಿಕೊಂಡಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ರನ್ನು ‘ಕ್ರ್ಯೂ ಡ್ರಾಗನ್’ ಅಂತರಿಕ್ಷ ನೌಕೆ ಭೂಮಿಗೆ ಹೊತ್ತು ತರಲಿದೆ. ಈ ನೌಕೆ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ಸಂಸ್ಥೆಗೆ ಸೇರಿದೆ. ಗರಿಷ್ಠ 7 ಮಂದಿ ಗಗನಯಾನಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಇದಕ್ಕಿದೆಯಂತೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…