Author: admin

ಮಧುಗರಿ: ತಾಲೂಕು ಕುಂಚಿಟಿಗರ ಸಂಘದ ವತಿಯಿಂದ ಕುಂಚಿಟಿಗರ ಸಂಘದ ನೂತನ ಭವನದ ಉದ್ಘಾಟನೆ ಮತ್ತು ದಾನಿಗಳಿಗೆ ಸನ್ಮಾನ ಸಮಾರಂಭ ಇದೇ ತಿಂಗಳು ಅಕ್ಟೋಬರ್ 31 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷರಾದ ರಾಜಶೇಖರ್ ಉಪಾಧ್ಯಕ್ಷರಾದ ಜಗದೀಶ್‌ ಕಾರ್ಯದರ್ಶಿ ಉಮೇಶ್‌ ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಎಲೆ ರಾಂಪುರದ ಕುಂಚಿಟಿಗ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ವಹಿಸಲಿದ್ದು ಅಧ್ಯಕ್ಷತೆಯನ್ನು ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷ ಪಿ.ಎನ್.ರಾಜಶೇಖರ್ ವಹಿಸಲಿದ್ದಾರೆ. ನೂತನ ಭವನದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕರಾದ ಎಂ.ವಿ.ವೀರಭದ್ರಯ್ಯ, ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಸುರೇಶ್ ಗೌಡ, ಅತಿಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಕಾವೇರಿ ನಿಗಮದ ಕೆ.ಜಯಪ್ರಕಾಶ್, ವಿಶೇಷ ಆಹ್ವಾನಿತರಾಗಿ ನಿವೃತ್ತ ಚುನಾವಣಾ ಆಯುಕ್ತ ಸಿ.ಚಿಕ್ಕಣ್ಣ, ಮುಖ್ಯ ಅತಿಥಿಗಳಾಗಿ ಪುರಸಭಾ ಅಧ್ಯಕ್ಷರಾದ ಲಾಲಪೇಟೆ ಮಂಜುನಾಥ್ ಕೌಶಲ್ಯ ಅಭಿವೃದ್ಧಿಗೆ ನಿಗಮದ ಮಾಜಿ…

Read More

ವರದಿ: ಹಾದನೂರು ಚಂದ್ರ ಸರಗೂರು:  ಆಕರ್ಷಕ ಮೈಕಟ್ಟು ಹೊಂದಿರುವ ಹೋರಿಗಳು ಹಾಗೂ ಒಂದೇ ತರನಾಗಿ ಕಾಣುವ ಜೋಡೆತ್ತುಗಳು ಎತ್ತಿನಗಾಡಿಗೆ ಎರಡು ಟ್ರಾಕ್ಟರ್ ಇಂಜಿನ್ ಕಟ್ಟಿಕೊಂಡು ಎಳೆದುಕೊಂಡು ನಾಗಾಲೋಟದಲ್ಲಿ ಓಡುತ್ತಿದ್ದ ಮೈನವಿರೇಳಿಸುವ ದೃಶ್ಯ ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬಂದಿತ್ತು. ತಾಲೂಕಿನ ಹಾದನೂರು ಗ್ರಾಮದಲ್ಲಿ  ದೀಪಾವಳಿ ಹಬ್ಬದ ಪ್ರಯುಕ್ತ 3ನೇ ವರ್ಷದ ಜೋಡಿ ಎತ್ತಿನಗಾಡಿಗೆ ಎರಡು ಟ್ರಾಕ್ಟರ್ ಇಂಜಿನ್ ಕಟ್ಟಿಕೊಂಡು ಎಳೆಯುವ ಸ್ಪರ್ಧೆಯನ್ನು ಹಾದನೂರು ಜೈ ಭೀಮ್ ಅಂಬೇಡ್ಕರ್ ಹುಡುಗರ ಬಳಗವತಿಯಿಂದ ಆಯೋಜಿಸಿದ್ದು ನಂತರ ಗ್ರಾಮದ ಯಜಮಾನರು ಹಾಗೂ ಮುಖಂಡರು ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಸೇರಿಕೊಂಡು ಜೋಡಿ ಎತ್ತಿನಗಾಡಿಗೆ ಸ್ಪರ್ಧೆಗೆ ಚಾಲನೆ  ನೀಡಿದರು. ಮೈದಾನದಲ್ಲಿ ತಾ ಮುಂದು, ನಾ ಮುಂದು ಎಂದು ಜೋಡಿ ಎತ್ತಿನ ಗಾಡಿಗಳ ಮೇಲೆ ನಿಂತು ಹಗ್ಗವನ್ನು ಕೈಯಲ್ಲಿ ಹಿಡಿದು ಎತ್ತುಗಳಿಗೆ ಪಟ, ಪಟನೆ ಚಾವಟಿಯಲ್ಲಿ ಬಾರಿಸುತ್ತ ಗೆಲುವಿಗಾಗಿ ಹರಸಾಹಸ ಪಡುತ್ತಿದ್ದರೆ, ಮೈದಾನದ ಸುತ್ತಲೂ ನೆರೆದ ಬೆಂಬಲಿಗರು ಹಾಗೂ ಪ್ರೇಕ್ಷಕರು ಸಿಳ್ಳೆ, ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು. ಕ್ಷ ಣದಲ್ಲಿಯೇ ಮತ್ತೊಂದು…

Read More

ಹುಳಿಯಾರು: ನೀವೆಲ್ಲಾ ಮನೆಯಲ್ಲಿ ಬೆಚ್ಚಗೆ ಇದ್ದು, ರೈತರನ್ನು ಮನೆಮಠ ಬಿಟ್ಟು ಅಹೋರಾತ್ರಿ ಧರಣಿ ಕೂರುವಂತೆ ಮಾಡಿದ್ದೀರಲ್ಲಾ, ಇದೇ ಏನು ರೈತರಿಗೆ ನೀವು ಕೊಡುವ ಗೌರವ? ರೈತರೇನು ಮಹಾ ಕೇಳಬಾರದನ್ನು ಕೇಳಿದ್ದಾರೆ ಹೇಳಿ, ಸಂತೆಗೆ ಜಾಗ ಕೊಡಿ, ನೀರು, ಶೌಚಾಲಯ ಕೊಡಿ ಎಂದು ಕೇಳಿದ್ದಾರೆ. ಅಷ್ಟೆ, ಇಷ್ಟನ್ನೂ ಕೊಡದೆ ಮಳೆಗಾಲ, ಸಿಡಿಲುಗುಡುಗಿನ ಮಧ್ಯೆ ಕಾಲ ಕಳೆಯುವಂತೆ ಮಾಡಿದ್ದೀರಲ್ಲಾ, ಅವರ ಶಾಪ ನಿಮಗೆ ತಟ್ಟದೆ ಇರದು. ಮೊದಲು ಎಚ್ಚೆತ್ತುಕೊಂಡು ಅವರ ಕೆಲಸ ಮಾಡಿ ಕೊಡಿ ಎಂದು ಸಾಮಾಜಿಕ ಹೋರಾಟಗಾರ ಸಬ್ಬೇನಹಳ್ಳಿ ಶ್ರೀನಿವಾಸ್ ಎಚ್ಚರಿಸಿದರು. ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಹೊಸಹಳ್ಳಿ ಚಂದ್ರಣ್ಣ ಬಣದಿಂದ ಸಂತೆ ಮೈದಾನದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ 13 ನೇ ದಿನ ಪೂರೈಸಿದೆ. ಈ ದಿನ ಸಾಮಾಜಿಕ ಹೋರಾಟಗಾರ ಸಬ್ಬೇನಹಳ್ಳಿ ಶ್ರೀನಿವಾಸ್ ಧರಣಿಯಲ್ಲಿ ಕುಳಿತು ಬೆಂಬಲ ಸೂಚಿಸಿ ಮಾತನಾಡಿದರು. ಹುಳಿಯಾರಿನ ಉಪಮಾರುಕಟ್ಟೆಯಾದ ಚಿಕ್ಕನಾಯಕನಹಳ್ಳಿಯಲ್ಲೇ ಎಪಿಎಂಸಿಯಲ್ಲಿ ಸಂತೆ ನಡೆಯುತ್ತಿರುವಾಗ…

Read More

ಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು 70 ವರ್ಷದ ಚಂದ್ರಶೇಖರ್​​​ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ​ಗೆ ರವಾನಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಿ ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ, ಹಿಂದಿನಿಂದ ಹೋರಿ ತಿವಿದು ಘಟನೆ ನಡೆದಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಪ್ರತಿವರ್ಷ ದೀಪಾವಳಿಯಂದು ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಸಮಿತಿ ಬಲಿಪಾಡ್ಯಮಿಯಂದು ದನ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸುತ್ತದೆ. ಈ ಸ್ಪರ್ಧೆಯಲ್ಲಿ ಯಾವುದೇ ಬಹುಮಾನ ಇರುವುದಿಲ್ಲ. ಸ್ಪರ್ಧೆ ನಡೆದ ನಂತರ ಬೇರೆ ಕಡೆ ಸ್ಪರ್ಧೆಗಳಲ್ಲಿ ಹೋರಿಗಳಿಗೆ ಬಹುಮಾನ ನೀಡಲಾಗುತ್ತದೆ. ಬುಧವಾರ ಮಧ್ಯಾಹ್ನ ಈ ಸ್ಪರ್ಧೆ ನಡೆಯಿತು. ಹಾವೇರಿ ನಗರ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ರೈತರು ತಮ್ಮ ನೆಚ್ಚಿನ ಹೋರಿಗಳನ್ನು ಸ್ಪರ್ಧೆಗೆ ಕರೆತಂದಿದ್ದರು. ನಮ್ಮತುಮಕೂರಿನ ಕ್ಷಣ…

Read More

ಆನೇಕಲ್: ಲಿವಿಂಗ್​ ಟುಗೆದರ್​ ನಲ್ಲಿದ್ದ ಒಡಿಶಾ ಮೂಲದ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಒಡಿಶಾ ಮೂಲದ ಸೀಮಾ ನಾಯಕ್(25) ಮತ್ತು ರಾಕೇಶ್(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ. ಕೂಡಲೇ ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ರಾಕೇಶ್ ಕುಡಿದು ಬಂದು ಹಣಕ್ಕಾಗಿ ಪದೇ ಪದೇ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಭಾನುವಾರ ಸಹ ಹಣಕ್ಕಾಗಿ ಸೀಮಾ ಜೊತೆ ಜಗಳ ಮಾಡಿದ್ದು, ಹಣ ನೀಡಲ್ಲ ಎಂದು ಸೀಮಾ ಮಲಗಿದ್ದಳು. ಬೆಳಿಗ್ಗೆ ಎದ್ದು ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಆತನಿಗೆ ಇನ್ನೂ ಜೀವ ಇರಬಹುದು ಎಂಬ ನಂಬಿಕೆಯಿಂದ ರಾಕೇಶ್​ ಉಳಿಸಿಕೊಳ್ಳಲು ಒಂದಿಷ್ಟು ಪ್ರಯತ್ನಗಳನ್ನು ಸೀಮಾ ಮಾಡಿದ್ದಾರೆ. ಆದರೆ ಆತ ಮೃತಪಟ್ಟಿರೋದು ದೃಢವಾಗುತ್ತಿದ್ದಂತೆ…

Read More

ಬೆಂಗಳೂರು: ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಮಾಡಲಾಗುವ ಅನುದಾನ ಹಂಚಿಕೆಯಲ್ಲಿ ಬಿಜೆಪಿ ಶಾಸಕರ ವಿರುದ್ಧ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್‌ಪೇಟೆ ವಾರ್ಡ್‌ ನಲ್ಲಿ 58.44 ಕೋಟಿ ರೂ.ಗಳ ವೈಟ್ ಟಾಪಿಂಗ್ ಮತ್ತು ರಸ್ತೆ ಅಭಿವೃದ್ಧಿ ಯೋಜನೆಯ ಕಾಮಗಾರಿಗೆ ಚಾಲನೆ ನೀಡಿದ ನಂತರ ಮುಖ್ಯಮಂತ್ರಿಗಳು ಮಾತನಾಡಿದರು. ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು. ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ…

Read More

ಬೆಂಗಳೂರು: ಬಿಜೆಪಿ–ಜೆಡಿಎಸ್ ಪಕ್ಷಗಳ ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಅವರು, ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ–ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ. ಗ್ರೇಟರ್ ಬೆಂಗಳೂರು ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಮಾಡೋಣ ಹಾಗೂ ರಾಜ್ಯಕ್ಕೆ ಸಂಬಂಧಿಸಿ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದಾರೆ. ಈ ಸಂಬಂಧ 8–10 ದಿನಗಳಲ್ಲಿ ಕುಮಾರಸ್ವಾಮಿಯವರು ಹೆಸರುಗಳನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮಂಡ್ಯ: ಪತಿಯು ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಲೋಕೇಶ್ ಪತ್ನಿ ಶ್ವೇತಾ (36) ಕೊಲೆಯಾದ ಮಹಿಳೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಮಂಗಳವಾರ ತಡರಾತ್ರಿ ದಂಪತಿ ನಡುವೆ ಜಗಳ ಉಂಟಾಗಿ ಲೋಕೇಶ್ ತನ್ನ ಪತ್ನಿ ಶ್ವೇತಾಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನೆ ಹಿನ್ನೆಲೆಯಲ್ಲಿ ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ. ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಯತ್ನಿಸಿದ್ದಾರೆ. ಆದ್ರೆ, ಲಾರಿ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾರೆ. ಅಲ್ಲದೇ ಲಾರಿ ಚಾಲಕ ನೇರವಾಗಿ ಪೊಲೀಸರ ಮೇಲೆ ಹತ್ತಿಸಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪುತ್ತೂರು ಗ್ರಾಮೀಣ ಠಾಣೆಯ ಪಿಎಸ್ ಐ ಜಂಬುರಾಜ್ ಮಹಾಜನ್ ಅವರು ಗುಂಡು ಹಾರಿಸಿದ್ದು, ಆರೋಪಿಯಾದ ಅಬ್ದುಲ್ಲಾ ಕಾಲಿಗೆ ಗುಂಡು ತಗುಲಿದೆ.  ಗಾಯಗೊಂಡ ಅಬ್ದುಲ್ಲಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಪಿಯ ಸ್ಥಿತಿ ಸ್ಥಿರವಾಗಿದೆ. ಲಾರಿಯಲ್ಲಿ ಇದ್ದ ಮತ್ತೊಬ್ಬ ಆರೋಪಿ ಘಟನೆಯ ನಂತರ ಪರಾರಿಯಾಗಿದ್ದಾನೆ. ಪೊಲೀಸರು ಅವನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಗಾಯಗೊಂಡು ಮಿಂಟೋ ನೇತ್ರ ಆಸ್ಪತ್ರೆಗೆ ಸೋಮವಾರ 16 ಜನರು ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ 4 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಮೂವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ದೀಪಾವಳಿ ಹಬ್ಬದ ದಿನದ ರಾತ್ರಿ ಮತ್ತು ಮರುದಿನ ಆರು ಮಕ್ಕಳು, 10 ಮಂದಿ ವಯಸ್ಕರು ಸೇರಿದಂತೆ 16 ಪ್ರಕರಣಗಳಿಗೆ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದಾರೆ. ಕೆಲವರಿಗೆ ಹೊಲಿಗೆ ಹಾಕುವ ಅಗತ್ಯವಾಗಿತ್ತು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. 12 ವರ್ಷದ ಬಾಲಕನ ಕಣ್ಣಿನ ಕಾರ್ನಿಯ ಸಂಪೂರ್ಣವಾಗಿ ಹಾನಿಗೊಳಾಗಿದ್ದು, ಆಂತರಿಕ ರಕ್ತಸ್ರಾವವಾಗಿತ್ತು. ದೇವಾಲಯದ ಬಳಿ ನಡೆದು ಹೋಗುತ್ತಿದ್ದ 34 ವರ್ಷದ ವ್ಯಕ್ತಿಯ ಕಣ್ಣಿಗೆ ತೀವ್ರ ಗಾಯವಾಗಿದ್ದು, ಅವರನ್ನು ನಿಕಟ ವೀಕ್ಷಣೆಯಲ್ಲಿ ಇರಿಸಲಾಗಿದೆ. ಈ ಗಾಯಗಳಿಗೆ ಕಾರ್ನಿಯಲ್ ಹೊಲಿಗೆ ಮತ್ತು ಇತರ ವಿಧಾನಗಳ ಮೂಲಕ ಚಿಕಿತ್ಸೆ ನೀಡಬೇಕಾಗಿದೆ, ಆದರೆ ಇಷ್ಟೆಲ್ಲಾ ಮಾಡಿದ ನಂತರವೂ, ದೃಷ್ಟಿ ಮರಳಿ ಪಡೆಯುವ ಸಾಧ್ಯತೆಗಳು…

Read More