Subscribe to Updates
Get the latest creative news from FooBar about art, design and business.
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
- ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
Author: admin
ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳು ಬೇಗನೆ ಒಣಗಿಹೋಗುವುದು ಮತ್ತು ರಸ ಕಮ್ಮಿಯಾಗುವುದು ಸಾಮಾನ್ಯ ಸಮಸ್ಯೆ. ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿ ಹಾಗೂ ರಸಭರಿತವಾಗಿ ಇಡಲು ಸಹಾಯ ಮಾಡುವ 8 ಸರಳ ಸಲಹೆಗಳು ಇಲ್ಲಿವೆ. ತಣ್ಣೀರಿನಲ್ಲಿ ಹಾಕಿಡುವುದು: ಲಿಂಬೆಹಣ್ಣುಗಳನ್ನು ಫ್ರಿಡ್ಜ್‌ನಲ್ಲಿ ಹಾಗೆಯೇ ಇಟ್ಟರೆ ಒಣ ಹವೆಯಿಂದಾಗಿ ಅವುಗಳ ಸಿಪ್ಪೆ ಗಟ್ಟಿಯಾಗುತ್ತದೆ. ಅದರ ಬದಲು, ಒಂದು ಪಾತ್ರೆ ಅಥವಾ ಡಬ್ಬದಲ್ಲಿ ತಣ್ಣೀರನ್ನು ತುಂಬಿಸಿ, ಅದರಲ್ಲಿ ಲಿಂಬೆಹಣ್ಣುಗಳನ್ನು ಮುಳುಗಿಸಿ ಫ್ರಿಡ್ಜ್‌ನಲ್ಲಿಟ್ಟರೆ ಅವು ದೀರ್ಘಕಾಲದವರೆಗೆ ಮೃದು ಹಾಗೂ ರಸಭರಿತವಾಗಿರುತ್ತವೆ. ವಾರಕ್ಕೊಮ್ಮೆ ಈ ನೀರನ್ನು ಬದಲಾಯಿಸಬೇಕು. ಇತರ ಹಣ್ಣು–ತರಕಾರಿಗಳಿಂದ ದೂರವಿಡಿ: ಈರುಳ್ಳಿ, ಬಾಳೆಹಣ್ಣು ಮತ್ತು ಟೊಮೆಟೊಗಳ ಪಕ್ಕದಲ್ಲಿ ಲಿಂಬೆಹಣ್ಣನ್ನು ಇಡಬೇಡಿ. ಇವುಗಳಿಂದ ಬಿಡುಗಡೆಯಾಗುವ ನೈಸರ್ಗಿಕ ಅನಿಲಗಳು ಲಿಂಬೆಹಣ್ಣುಗಳು ಬೇಗನೆ ಹಣ್ಣಾಗುವಂತೆ ಮಾಡಿ, ರಸ ಒಣಗಲು ಕಾರಣವಾಗುತ್ತವೆ. ಗಾಳಿಯಾಡದ ಡಬ್ಬಗಳ ಬಳಕೆ: ಫ್ರಿಡ್ಜ್ ನ ಮುಕ್ತ ಟ್ರೇಗಳಲ್ಲಿ ಲಿಂಬೆಹಣ್ಣುಗಳನ್ನು ಇಡುವುದರಿಂದ ಅವು ಬೇಗನೆ ಒಣಗುತ್ತವೆ. ಆದ್ದರಿಂದ ಇವುಗಳನ್ನು ಏರ್ ಟೈಟ್ (ಗಾಳಿಯಾಡದ) ಡಬ್ಬಿಗಳಲ್ಲಿ ಅಥವಾ ಜಿಪ್–ಲಾಕ್ ಬ್ಯಾಗ್‌ಗಳಲ್ಲಿ ಸಂಗ್ರಹಿಸಿಡುವುದು ಉತ್ತಮ. ಹೆಚ್ಚಿನ ತೇವಾಂಶದಿಂದ…
ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ ರಂಟವಳು ಗ್ರಾ.ಪಂ ಗೆ ಸೇರಿದ ಪುಲಮಘಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ಕರುನಾಡು ಸೇನೆ ಹಾಗೂ ಬೆಂಗಳೂರಿನ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಆಚರಿಸಿದ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ಮೇಳ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆತ್ತು ಹೊತ್ತು ಸಾಕಿ ಸಲಹಿ ಏನೆ ಕಷ್ಟಗಳು ಬಂದರೂ ಸಹ ಎದೆ ಗುಂದದೆ, ಬಡತನ ವಿರಲಿ ಶ್ರೀಮಂತಿಕೆ ಇರಲಿ, ನನ್ನ ಮಕ್ಕಳು ಎಲ್ಲ ರಂತೆ ಜಗತ್ತಿನಲ್ಲಿ ಉತ್ತಮ ನಾಗರಿಕನಾಗಿ ಬಾಳಲಿ ಎಂಬ ಕನಸನ್ನು ಹೊತ್ತು ನಮ್ಮೆಲ್ಲರ ನ್ನು ಸಾಕುತ್ತಾರೆ. ಅಮ್ಮನ ಕನಸನ್ನು ನನಸು ಮಾಡುವುದು ಮಕ್ಕಳಾದ ನಮ್ಮ ಮೇಲಿದೆ ಎಂದರು. ತಾಯಿಗೆ ಮಾತೃದೇವೋಭವ ಎಂದು ದೇವರ ಸ್ಥಾನವನ್ನು ನೀಡಲಾಗಿದೆ ಅವರು ಮುಪ್ಪಾದಾಗ ನಮ್ಮನ್ನು ಹೇಗೆ ಸಾಕಿ ಬೆಳೆಸಿದಳೋ ಅದೇ ರೀತಿ ನಾವು ಅವರನ್ನು ಸಾಕಿದಾಗ ಮಾತ್ರ ಅವರ ಋಣ…
ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ ವಿಶೇಷ ಗ್ರಾಮ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಅಪೂರ್ವ ಸಿ. ಅನಂತರಾಮು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಬಾಲಕಿಯರಿಗೆ ಉತ್ತಮ ಶಿಕ್ಷಣದೊಂದಿಗೆ ಸುರಕ್ಷಿತ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ವಸತಿ ನಿಲಯ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ವಸತಿ ನಿಲಯ ಆರಂಭಕ್ಕೆ ಅಗತ್ಯ ಮೂಲಸೌಕರ್ಯ, ವಿದ್ಯಾರ್ಥಿನಿಯರ ದಾಖಲಾತಿ, ಶಿಕ್ಷಣ ಸೌಲಭ್ಯಗಳು ಹಾಗೂ ಇಲಾಖಾತ್ಮಕ ಸಹಕಾರ ಕುರಿತು ಚರ್ಚೆ ನಡೆಯಿತು. ಗ್ರಾಮಸ್ಥರು ಹಾಗೂ ಪೋಷಕರು ಸಹ ಯೋಜನೆಗೆ ಸ್ವಾಗತ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಯಮುನಾ, ಸಹಾಯಕ ನಿರ್ದೇಶಕರು (ಗ್ರಾ.ಉ) ಮಧು ಸೂದನ್, ತಾ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಫೈಯರ್ ಬೇಗಮ್, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ…
ತುಮಕೂರು: ಜಿಲ್ಲೆಯಲ್ಲಿ ಮೇ 28 ರಂದು ಮುಸ್ಲಿಮರು ಆಚರಿಸಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಚೋದನೆ ನೀಡುವ ಬ್ಯಾನರ್, ಬಂಟಿಂಗ್ಸ್ ಸೇರಿದಂತೆ ಇತರೆ ಜಾಹೀರಾತು ಫಲಕಗಳನ್ನು ಅಳವಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಎಚ್ಚರಿಕೆ ನೀಡಿದರು. ತುಮಕೂರು ನಗರದ ಕುಂಚಿಟಿಗ ಸಮುದಾಯ ಭವನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೋಮವಾರ ನಡೆದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಡಿಯೋಗಳ ಸತ್ಯಾಸತ್ಯತೆ ತಿಳಿಯದೇ ಯುವಕರು ಕಾನೂನು ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ಬಕ್ರೀದ್ ಹಬ್ಬದ ಮುನ್ನ ಜಾನುವಾರು ಸಾಗಣೆ ಮಾಡುವವರು ಪಶು ಇಲಾಖೆ ವತಿಯಿಂದ ಅಗತ್ಯ ಪರವಾನಗಿ ಪಡೆಯಬೇಕು. ಕಾನೂನುಬಾಹಿರವಾಗಿ ಗೋವುಗಳನ್ನು ಸಾಗಣೆ ಮಾಡುವುದು ನಿಷಿದ್ಧವಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಕುರುಬಾನಿ ಸಂದರ್ಭದಲ್ಲಿ ಮಾಂಸ ಹಂಚುವ ವಿಚಾರದಲ್ಲಿ ಯಾವುದೇ ಗದ್ದಲ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಒಂದು…
ಕೊರಟಗೆರೆ: ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ನೂತನ ಕಾರ್ಮಿಕ ಕಛೇರಿ ಉದ್ಘಾಟನೆ ಹಾಗೂ ಹಿರಿಯ ಕಟ್ಟಡ ಕಾರ್ಮಿಕರ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಕಾಂತ್ ಮಾತನಾಡಿ, “ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಂಡರೆ ಶೈಕ್ಷಣಿಕ ನೆರವು, ಮದುವೆ ಸಹಾಯಧನ, ವೈದ್ಯಕೀಯ ಸೌಲಭ್ಯ, ಪಿಂಚಣಿ, ಅಪಘಾತ ಪರಿಹಾರ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ. ಅಸಂಘಟಿತ ಕಾರ್ಮಿಕರು ಕಡ್ಡಾಯವಾಗಿ ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು” ಎಂದು ತಿಳಿಸಿದರು. ಕಾರ್ಮಿಕರಿಗೆ ಸ್ಥಳೀಯವಾಗಿಯೇ ಸೌಲಭ್ಯ ದೊರೆಯಲಿ ಎಂಬ ಉದ್ದೇಶದಿಂದ ತೆರೆಯಲಾದ ನೂತನ ಕಛೇರಿಯನ್ನು ಗಣ್ಯರು ಉದ್ಘಾಟಿಸಿದರು. ಇದರಿಂದ ನೋಂದಣಿ ಹಾಗೂ ಸೌಲಭ್ಯ ಪಡೆಯಲು ಕಾರ್ಮಿಕರು ಜಿಲ್ಲಾ ಕೇಂದ್ರಕ್ಕೆ ಅಲೆಯುವುದು ತಪ್ಪಲಿದೆ ಎಂದು ಕಾರ್ಮಿಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಆನಂದ್ ಕುಮಾರ್…
ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು 59 ವರ್ಷದ ಚಂದ್ರಯ್ಯ ಎಂದು ಗುರುತಿಸಲಾಗಿದ್ದು, ಈತ ನಿವೃತ್ತಿಯ ಅಂಚಿನಲ್ಲಿದ್ದ ಎಂದು ತಿಳಿದುಬಂದಿದೆ. ಆರೋಪಿಗೆ ಸದ್ಯ ಶನಿವಾರದಂದು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕಿಯು ಸದ್ಯ ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದು, ಆಕೆಗೆ ಮುಖ್ಯೋಪಾಧ್ಯಾಯನಿಂದಲೇ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಶ್ರೀರಾಂಪುರ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ — POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ. ಮುಖ್ಯೋಪಾಧ್ಯಾಯ ಚಂದ್ರಯ್ಯ ಕಳೆದ ಸುಮಾರು ಒಂದು ವರ್ಷದಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎನ್ನಲಾಗಿದೆ. “ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ವೈದ್ಯಕೀಯ-ಕಾನೂನು ಕ್ರಮಗಳು (Medical–legal procedures)…
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತಾದ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದಿಢೀರ್ ಬುಲಾವ್ ಬಂದಿದೆ. ನಾಳೆ (ಮೇ 26) ದೆಹಲಿಯಲ್ಲಿ ನಡೆಯಲಿರುವ ಪ್ರಮುಖ ಸಭೆಗೆ ಹೈಕಮಾಂಡ್ ತಮ್ಮನ್ನು ಆಹ್ವಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಖುದ್ದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ನನ್ನನ್ನು ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಸಭೆ ನಿಗದಿಯಾಗಿದೆ. ಆದರೆ ಸಭೆಯ ಅಜೆಂಡಾ (ವಿಷಯ) ಏನೆಂಬುದು ನನಗೆ ತಿಳಿದಿಲ್ಲ. ನಿನ್ನೆ ರಾತ್ರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರೆ ಮಾಡಿ ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ಮಾಹಿತಿ ನೀಡಿದರು. ಹಾಗಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ. ಮೇ 20ರಂದು ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. 2023ರ…
ಗದಗ: ಕಂಪ್ಯೂಟರ್ ಕ್ಲಾಸ್ ಗೆ ಹೋಗಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ, ಅಪಹರಿಸಿ ಮತ್ತೊಮ್ಮೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆಯೊಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ 17 ವರ್ಷ 5 ತಿಂಗಳ ಅಪ್ರಾಪ್ತೆಯಾಗಿದ್ದಾಳೆ. ಅಲ್ಲಾಭಕ್ಷಿ ಕೊಪ್ಪದ ಎಂಬಾತನೇ ಈ ಕೃತ್ಯ ಎಸಗಿದ ಪ್ರಮುಖ ಆರೋಪಿಯಾಗಿದ್ದಾನೆ. ಎರಡು ದಿನಗಳ ಹಿಂದೆ ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಶೇಷವೆಂದರೆ, ಸಂತ್ರಸ್ತೆಯ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ವರ್ಷ ಅಂದರೆ 2025 ರಲ್ಲಿ ಇದೇ ಬಾಲಕಿಯ ಕುಟುಂಬಸ್ಥರು ಈ ಆರೋಪಿ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಪ್ರಕರಣದಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಜೈಲು ಸೇರಿದ್ದ ಅಲ್ಲಾಭಕ್ಷಿ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ತನ್ನನ್ನು ಜೈಲಿಗೆ ಕಳುಹಿಸಿದ ಸೇಡನ್ನು ತೀರಿಸಿಕೊಳ್ಳಲು ಹೊಂಚು ಹಾಕುತ್ತಿದ್ದ ಆತ, ಮತ್ತೊಮ್ಮೆ ಅದೇ ಸಂತ್ರಸ್ತೆಯನ್ನು ಗುರಿಯಾಗಿಸಿಕೊಂಡು ಈ ಹೀನ ಕೃತ್ಯ ಎಸಗಿದ್ದಾನೆ. ಮೇ 23…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಕಡಲತೀರ ಹಾಗೂ ತಟ್ಟಿಹಕ್ಕಲು (ವೆಂಕಟಾಪುರ) ನದಿಯ ಬಳಿ ಸಂಭವಿಸಿದ ಭೀಕರ ಜಲ ದುರಂತದಲ್ಲಿ ಕಪ್ಪೆಚಿಪ್ಪು (Mussels) ಸಂಗ್ರಹಿಸಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಿನ್ನೆ (ಮೇ 24) ನಡೆದ ಈ ಅವಘಡದಲ್ಲಿ 10 ಜನರ ಮೃತದೇಹಗಳು ಪತ್ತೆಯಾಗಿದ್ದವು. ಆದರೆ ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಎಂಬುವವರ ಪತ್ತೆಗಾಗಿ ಇಂದು ಎನ್ ಡಿಆರ್ ಎಫ್ (NDRF) ಮತ್ತು ಈಶ್ವರ ಮಲ್ಪೆ ಅವರ ತಂಡ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅವರ ಮೃತದೇಹವೂ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 11ಕ್ಕೇರಿದೆ. ನೀರಿನ ಅಬ್ಬರಕ್ಕೆ 11 ಮಂದಿ ಜಲಸಮಾಧಿಯಾಗಿದ್ದರೆ, ಇಬ್ಬರು ಮಹಿಳೆಯರನ್ನು ರಕ್ಷಿಸುವಲ್ಲಿ ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೃತರ ಪೈಕಿ ಮಾಸ್ತಮ್ಮ ನಾಯ್ಕ್ ಎಂಬುವವರು ನೀರಿನಲ್ಲಿ ಕಪ್ಪೆಚಿಪ್ಪು ಹೆಕ್ಕುತ್ತಿದ್ದಾಗ ಮುಳುಗುತ್ತಿರುವುದನ್ನು ಕಂಡ ಅವರ ಮಗ ಉಮೇಶ್ ನಾಯ್ಕ್, ತಾಯಿಯನ್ನು ರಕ್ಷಿಸಲು ಬಂಡೆಯ ಮೇಲಿಂದ ನೀರಿಗೆ ಹಾರಿದ್ದಾರೆ. ಆದರೆ, ತಾಯಿಯನ್ನು…
ಧಾರವಾಡ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ದುರುಳನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡದ ಬಡಾವಣೆಯೊಂದರಲ್ಲಿ ಬೆಳಕಿಗೆ ಬಂದಿದೆ. 9ನೇ ತರಗತಿಯಲ್ಲಿ ಓದುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದುರುಳ ಖಾಜಾಸಾಬ್ ಪಠಾಣ್ ಎಂಬಾತನ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಖಾಜಾಸಾಬ್ ಪಠಾಣ್, ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ. ಅಲ್ಲಿ ಆಕೆಗೆ ತಾನು ಪ್ರೀತಿಸುವುದಾಗಿ ಹೇಳಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಅನುಮಾನಗೊಂಡ ಸ್ಥಳೀಯರು ಆರೋಪಿ ಖಾಜಾಸಾಬ್ ನನ್ನು ಹಿಡಿದು ತರಾಟೆಗೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದಾಗ, ಅದರಲ್ಲಿ ಅಪ್ರಾಪ್ತ ಬಾಲಕಿಯ ಜೊತೆಗಿದ್ದ ಕೆಲವು ಆಕ್ಷೇಪಾರ್ಹ ಹಾಗೂ ಖಾಸಗಿ ಫೋಟೋಗಳು ಪತ್ತೆಯಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸದ್ಯ ವಿದ್ಯಾಗಿರಿ ಠಾಣೆ ಪೊಲೀಸರು ಆರೋಪಿ ಖಾಜಾಸಾಬ್ ವಿರುದ್ಧ ಪೋಕ್ಸೋ…